ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

Posted by Vidyamaana on 2023-08-28 06:45:53 |

Share: | | | | |


ಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಪುತ್ತೂರು: ಮನೆಯಿಂದ 1ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುನ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಚಿಕ್ಕಮುನ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಕಾರ್ಮಿನ್ ಮಿರಾಂದಾ ಅವರುಆ. 24ರಂದು ಸಂಜೆ 7 ಗಂಟೆಗೆ ಮನೆಯ ಹಿಂದಿನ ಜಾಗದ ವರ್ಕ್ ಏರಿಯಾದಲ್ಲಿ ಇಟ್ಟಿದ್ದ ಆರು ಗೋಣಿಚೀಲ ಅಡಿಕೆ ಮತ್ತು ಬೆಡ್ ರೂಮ್‌ನ ಕಪಾಟಿನಲ್ಲಿ ಇಟ್ಟಿದ್ದ 10 ಸಾವಿರ ರೂ. ಹಣ ಕಳವಾಗಿದೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ

ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

Posted by Vidyamaana on 2023-12-01 12:44:28 |

Share: | | | | |


ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.


ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

Posted by Vidyamaana on 2023-11-20 18:51:17 |

Share: | | | | |


ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

ಅಹಮದಾಬಾದ್‌, ನ.20: ಆಸ್ಟ್ರೇಲಿಯ 6ನೇ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ


ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ


ವೈರಲ್​ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್‌ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್​ ಪಂದ್ಯಕ್ಕೂ ಮುನ್ನ ಮಾರ್ಷ್​ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್​ಗೆ 450 ರನ್​ ಬಾರಿಸುತ್ತದೆ, ಭಾರತ 65 ರನ್​ಗೆ ಆಲೌಟ್​ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್​ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ 15ರನ್​ಗೆ ಔಟಾಗಿದ್ದರು.


ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.


ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಬಿಜೆಪಿ ಟಿಕೆಟ್ ಹಂಚಿಕೆ ಅಸಮಾಧಾನ, ಪಟ್ಟಿ ಪ್ರಕಟಕ್ಕೂ ಮುನ್ನವೇ ಬೆಂಗಳೂರಿಗೆ ಹೊರಟ ಬಿಎಸ್‌ವೈ!

Posted by Vidyamaana on 2023-04-10 16:01:11 |

Share: | | | | |


ಬಿಜೆಪಿ ಟಿಕೆಟ್ ಹಂಚಿಕೆ ಅಸಮಾಧಾನ, ಪಟ್ಟಿ ಪ್ರಕಟಕ್ಕೂ ಮುನ್ನವೇ ಬೆಂಗಳೂರಿಗೆ ಹೊರಟ ಬಿಎಸ್‌ವೈ!

ನವದೆಹಲಿ (ಏ.10): ಟಿಕೆಟ್ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ನಡೆಯುತ್ತಿರುವ ವರಿಷ್ಟರ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೇಸರಗೊಂಡಿದ್ದಾರೆ. ಹೀಗಾಗಿ ಪಟ್ಟಿ ಪ್ರಕಟಕ್ಕೂ ಮುನ್ನವೇ ದೆಹಲಿಯಿಂದ ಬಿಎಸ್‌ವೈ ಬೆಂಗಳೂರಿಗೆ ಹೊರಟಿದ್ದಾರೆ.ಸಂಜೆ 5:15 ವಿಮಾನದಲ್ಲಿ ಬೆಂಗಳೂರಿಗೆ ಹೊರಟಿದ್ದಾರೆ. ಹೈಕಮಾಂಡ್ ಗೆ ನಾನು ಹೇಳುವುದೆಲ್ಲಾ ಮುಗಿದಿದೆ ಹಾಗಾಗಿ ಹೊರಡುವೆ ಎಂದು ಆಪ್ತರ ಬಳಿ ಬಿಎಸ್ ವೈ ಹೇಳಿಕೊಂಡಿದ್ದಾರೆ. ತಮ್ಮ ಮನೆಯಿಂದ ಹೊರಡುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾರಿನ ತನಕ ಬಂದು ಬಿಟ್ಟು ಹೋಗಿದ್ದಾರೆ. ನಡ್ಡಾ ಮನೆಗೆ ಬಂದು ಕೇವಲ 10 ನಿಮಿಷದಲ್ಲೇ ಯಡಿಯೂರಪ್ಪ ತೆರಳಿದ್ದಾರೆ.ಸಿಎಂ ಹೋದ ಬಳಿಕ ನಡ್ಡಾ ಮನೆಗೆ ಬಂದ ಬಿಎಸ್ ವೈ

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ಕರ್ನಾಟಕ ನಾಯಕರ ಪ್ರತ್ಯೇಕ ಸಭೆಗಳಲ್ಲಿ ಬಿಎಸ್ ಯಡಿಯೂರಪ್ಪ ಭಾಗಿಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಪ್ರತ್ಯೇಕ ಸಭೆಯೇ ಈ ಬೇಸರಕ್ಕೆ ಕಾರಣ ಎನ್ನಲಾಗಿದೆ. ನಿನ್ನೆ ಸಭೆಯ ಬಳಿಕ ಬಿಎಸ್ ವೈ ಬೇಸರದಿಂದ ಹೊರ ಹೋಗಿದ್ದರು. ಹೀಗಾಗಿ ಇಂದಿನ ಸಭೆಗೆ ಸಿಎಂ ಬೊಮ್ಮಾಯಿ ಹೋದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸಕ್ಕೆ ಬಿಎಸ್ ವೈ ಬಂದಿದ್ದರು. 

ಯಡಿಯೂರಪ್ಪ ಬೇಸರಗೊಂಡಿದ್ದರು ಎಂಬ ಚರ್ಚೆಯ ನಡುವೆಯೇ ಜೆಪಿ ನಡ್ಡಾ ಮನೆಯಿಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತೆರಳುವಾಗ ಗೇಟಿನವರೆಗೂ ಬಂದು ಜೆಪಿ ನಡ್ಡಾ ಬಿಟ್ಟು ಹೋದರು. ನಡ್ಡಾ ಮನೆಗೆ ಬಂದು ಕೇವಲ 10 ನಿಮೀಷದಲ್ಲೇ ಯಡಿಯೂರಪ್ಪ ತೆರಳಿದರು.ಇನ್ನು ಬಿಜೆಪಿ ಸಭೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ನಿನ್ನೆ ಎಲ್ಲಾ ಕ್ಷೇತ್ರದ ಬಗ್ಗೆ ಆಗಿತ್ತು. ಆದರೆ ಕೆಲವೊಂದು ಕ್ಷೇತ್ರದ ಬಗ್ಗೆ ಗೊಂದಲವಾಗಿತ್ತು. ಅದರ ಬಗ್ಗೆ ಅಧ್ಯಕ್ಷರು ವಿವರ ಕೇಳಿದ್ರು ಹಾಗಾಗಿ ವಿವರ ನೀಡಿ ಬಂದಿದ್ದೇನೆ. ಇಂದು ರಾತ್ರಿ ಅಥವಾ ನಾಳೆ ಟಿಕೆಟ್ ಹಂಚಿಕೆ ಲಿಸ್ಟ್ ಬಿಡುಗಡೆಯಾಗಲಿದೆ. ನಾನು ಕೊಟ್ಟಿರೋ ಎಲ್ಲಾ ಅಭಿಪ್ರಾಯಗಳನ್ನು ನಾಯಕರು ಕೇಳಿದ್ದಾರೆ ಎಂದರು.

ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

Posted by Vidyamaana on 2024-06-14 15:13:14 |

Share: | | | | |


ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದದಿಂದ ಇದ್ದಾರೆ. ಹೊರಗಿನವರು ಇಲ್ಲಿ ಬಂದು ವಾತಾವರಣ ಕೆಡಿಸಬೇಡಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿ ವಾಸ್ತವದಲ್ಲಿ ಏನಾಗಿದೆ ಎಂಬುದು ಸ್ಥಳದಲ್ಲಿ ಇದ್ದವರಿಗೆ, ಸ್ಥಳೀಯರಿಗೆ ಮಾತ್ರ ಗೊತ್ತಿದೆ. ಮೂರನೇ ವ್ಯಕ್ತಿಗಳಾಗಿ ನಾವು ನಿರ್ಣಯಕ್ಕೆ ಬರುವುದು ಸರಿಯಲ್ಲ. ಈ ರೀತಿ ಮಾಡಿದರೆ ಚುನಾವಣೆಯಲ್ಲಿ ಮತ ಸಿಗುತ್ತದೆ ಎಂಬ ಭ್ರಮೆ ಬೇಡ. ಈ ರೀತಿ ಮಾಡುವುದರಿಂದ ಒಂದು ವೋಟ್ ಕೂಡ ಸಿಗುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟವರು ಈಗ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು

ನಾಳೆ 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ ಸಿದ್ದರಾಮಯ್ಯ

Posted by Vidyamaana on 2023-08-29 16:09:05 |

Share: | | | | |


ನಾಳೆ 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದ್ದು, 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ.ನಾಳೆ ಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.


ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲೆಂದು ಹರಕೆ ಕಟ್ಟಿಕೊಂಡಿದ್ದರು. ಇಂದು ಚಾಮುಂಡಿ ದೇವಿಗೆ ಹರಕೆ ಒಪ್ಪಿಸಿದರು. ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ. ಕನಕಾಂಬರ, ಮಲ್ಲಿಗೆ, ಗುಲಾಬಿ ಸೇರಿ ವಿವಿಧ ಬಗೆಯ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು.ಅಲ್ಲದೇ ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆ ನಡೆದಿದೆ.



Leave a Comment: