ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಭೂಗತ ಪಾತಕಿ ರವಿಪೂಜಾರಿ ಕಲಿ ಯೋಗೇಶ್ ಸಹಚರನಾಗಿದ್ದ ಅಲಿ ಮುನ್ನಾ ಬಂಧನ

Posted by Vidyamaana on 2023-10-23 21:00:36 |

Share: | | | | |


ಭೂಗತ ಪಾತಕಿ ರವಿಪೂಜಾರಿ ಕಲಿ ಯೋಗೇಶ್ ಸಹಚರನಾಗಿದ್ದ ಅಲಿ ಮುನ್ನಾ ಬಂಧನ

ಉಳ್ಳಾಲ, ಅ.23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ. 


ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿವೆ. 


2010 ಮತ್ತು 2013ರಲ್ಲಿ  ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, 

ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ನಲ್ಲಿ ಈತ ನಡೆಸಿದ ಶೂಟೌಟ್ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.


ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನಾ ಮತ್ತು ಮನೀಷ್ ಕಂಟ್ರೋಲ್ ಮಾಡುತ್ತಿದ್ದರು. ಕರಾವಳಿಯ ಭೂಗತ ವ್ಯವಹಾರವನ್ನು ಅಲಿ ಮುನ್ನಾನೇ ನಿರ್ವಹಿಸುತ್ತಿದ್ದ. ಕಾರ್ಕಳದ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್ ಕೊಲೆಯಾದ ನಂತರ ಅಲಿ ಮುನ್ನಾ ಕಂಗಾಲಾಗಿ ಮುಂಬೈ, ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಆನಂತರವೂ ಹಫ್ತಾ ವಸೂಲಿಯಲ್ಲಿ ತೊಡಗಿಸಿದ್ದ ಅಲಿ ಮುನ್ನಾನನ್ನು ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

Posted by Vidyamaana on 2024-06-12 08:17:46 |

Share: | | | | |


ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು‌ ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ ಸೇವಾ ಕೆಲಸದಲ್ಲೂ ತನನ್ನು ತೊಡಗಿಸಿಕೊಂಡಿರುವ ಪ್ರಕಾಶ್ ಅವರ ನಿಧನದಿಂದ ಅತ್ಯಂತ ದು:ಖಿತರಾಗಿರುವ ಶಾಸಕರು ತನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇವತ್ತಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

Posted by Vidyamaana on 2024-03-11 23:19:42 |

Share: | | | | |


ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.


ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.

ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

Posted by Vidyamaana on 2023-07-23 11:28:48 |

Share: | | | | |


ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಜು 23 ರಂದು ನಡೆಯಿತು.

   ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು   ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಉದ್ಘಾಟಿಸಿದರು. ಪುತ್ತೂರು ನಗರ ಸಭಾ ಸದಸ್ಯೆ ಕೆ. ಫಾತಿಮತ್ ಝೂರಾ ಮನೆಯ ಯಜಮಾನಿ ಜಮೀಲಾ ಅವರಿಗೆ ಕೀ ಹಸ್ತಾಂತರಿಸಿದರು.


 ಮನೆಯ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್, ಕಾರ್ಯದರ್ಶಿ ಮುಸ್ತಫ, ಮುಸ್ಲಿಂ ಯೂಥ್ ಫೆಡರೇಷನ್ ಅಧ್ಯಕ್ಷ ಅಝರ್ ಬನ್ನೂರು ಹಾಗೂ ಸ್ಥಳೀಯ ಸಂಸ್ಥೆಗಳಾದ ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಪರವಾಗಿ ಗೌರವ ಅಧ್ಯಕ್ಷ ರಫೀಕ್ ಬಾಂಬೆ , ಸುಲ್ತಾನ್ ಗೈಸ್ ಪರವಾಗಿ ಹನೀಫ್ , ವಾರ್ಡ್ ಸಂಖ್ಯೆ 05 ಬೂತ್ ಸಮಿತಿ ಪರವಾಗಿ ರಸೀಕ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. 


  ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸದಸ್ಯರಾದ ಪಿಬಿಕೆ ಮುಹಮ್ಮದ್, ಬದ್ರಿಯಾ ಜುಮಾ ಮಸ್ಜಿದ್ ಬನ್ನೂರು ಕಾರ್ಯದರ್ಶಿ ಅಶ್ರಫ್ ಹಾರಾಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಗೌರವ ಅಧ್ಯಕ್ಷ ರಫೀಕ್ ಬಾಂಬೆ, ಅಧ್ಯಕ್ಷ ಅಝರ್, ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪುತ್ತೂರು ಅಧ್ಯಕ್ಷ ಬಾತೀಶ ಬಡಕ್ಕೂಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಕಾರ್ಯದರ್ಶಿ ಸೈಫುದ್ದೀನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಫಾಝ್ ಬನ್ನೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

Posted by Vidyamaana on 2023-07-08 16:19:45 |

Share: | | | | |


ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

ಬಂಟ್ವಾಳ : ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಈಗಾಗಲೇ ಸರಕಾರದಿಂದ 6.20 ಲಕ್ಷ ರೂಪಾಯಿ ಮೊತ್ತವನ್ನು ಪರಿಹಾರ ಹಾಗೂ ಮನೆ ದುರಸ್ತಿಗಾಗ  ಸರಕಾರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ಗಾಯಾಳು ಯುವತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಯವರ ವರದಿ ನೀಡಿದ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು.

ಶನಿವಾರ ಸಂಜೆ ನಂದಾವರ-ಗುಂಪುಮನೆ ಎಂಬಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಮಾತನಾಡಿದ ಅವರು ಗುಡ್ಡ ಕುಸಿತ ಉಂಟಾಗಿ ಮಹಿಳೆ ಮೃತಪಟ್ಟ ಘಟನೆ ಅತ್ಯಂತ ವಿಷಾದನೀಯ ವಾಗಿದ್ದು, ಮುಂದಕ್ಕೆ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು. ಈ ಬಗ್ಗೆ ಸ್ಥಳೀಯ ಮಟ್ಟದ ಅಧಿಕಾರಿಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ಹಾಗೂ ಪ್ರಾಕೃತಿಕ ವಿಕೋಪದಂತಹ ಸಂದರ್ಭದಲ್ಲಿ ಜನರ ಬೇಡಿಕೆ, ಕರೆಗಳನ್ನು ನಿರ್ಲಕ್ಷಿಸದೆ ಅಧಿಕಾರಿಗಳು ತಕ್ಷಣ ಸ್ಪಂದಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ನಂದಾವರ ಪರಿಸರದಲ್ಲಿ ಉಂಟಾಗಿರುವ ಅನಾಹುತಕ್ಕೆ ಕಾರಣ ಕಂಡುಕೊಂಡು ಮುಂದಕ್ಕೆ ಇಂತಹ ಘಟನೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮವನ್ನು ಕೈಗೊಳ್ಳುವಂತೆ ಇದೇ ವೇಳೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು. ಎನ್ ಡಿ ಆರ್ ಎಫ್ ಅಥವಾ ಎಸ್ ಡಿ ಆರ್ ಎಫ್ ಯೋಜನೆಗಳಲ್ಲಿ ಒಂದು ವೇಳೆ ಇಂತಹ ದೊಡ್ಡ ಕೆಲಸಕ್ಕೆ ಅವಕಾಶ ಇಲ್ಲದಿದ್ದಲ್ಲಿ ಯಾವುದೇ ಯೋಜನೆಯಡಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಜನರ ಪ್ರಾಣ, ಸೊತ್ತು ಹಾನಿಯಾಗದಂತೆ ಶಾಶ್ವತ ಪರಿಹಾರವನ್ನು ತಕ್ಷಣ ಕೈಗೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ಇದೇ ವೇಳೆ ಸ್ಥಳೀಯ ನಿವಾಸಿ ಜಲಜಾ ನಾಯಕ್ ಅವರು ತನ್ನ ಮನೆ ತೀರಾ ಶಿಥಿಲಗೊಂಡು ವಾಸಿಸಲು ಅಸಾಧ್ಯ ಎಂದು ಸಚಿವರಲ್ಲಿ ಮನವಿ ಮಾಡಿದರು. ಮನೆ ಪರಿಶೀಲನೆ ನಡೆಸಿದ್ದ ಉಸ್ತುವಾರಿ ಸಚಿವರು ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.


   ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ, ಬೇಬಿಕುಂದರ್,  ಮಹಮ್ಮದ್ ನಂದಾವರ, ಯೂಸುಫ್ ಕರಂದಾಡಿ, ಸಮದ್ ಕೈಕಂಬ, ಇಬ್ರಾಹಿಂ ನವಾಜ್ ಬಡಕಬೈಲು, ಆರಿಫ್ ನಂದಾವರ, ಶಾಫಿ ನಂದಾವರ, ಮುಸ್ತಾಕ್, ರಮ್ಸಾದ್ ಮೋನು, ಶರೀಫ್ ನಂದಾವರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಹಶಿಲ್ದಾರ್ ಎಸ್.ವಿ.ಕೂಡಲಗಿ,  ಡಿ.ವೈ.ಎಸ್.ಪಿ‌. ಪ್ರಥಾಪ್ ಥೋರಾಟ್, ಇನ್ಸ್ಪೆಕ್ಟರ್ ವಿವೇಕಾನಂದ, ಪಿ.ಡಿ.ಒ. ಲಕ್ಷಣ್, ಮತ್ತಿತರರು ಉಪಸ್ಥಿತರಿದ್ದರು

ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Posted by Vidyamaana on 2024-04-02 15:13:55 |

Share: | | | | |


ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಅವರ ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಪದ್ಮನಾಭ ಸಾಮಂತ್ ಅವರ ತಾಯಿ, ತನ್ನ ಮಗನ ದಾರುಣ ಸ್ಥಿತಿಯನ್ನು ಪದ್ಮರಾಜ್ ಅವರಿಗೆ ತಿಳಿಸಿ ಕಣ್ಣೀರಾದರು. 



Leave a Comment: