ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

Posted by Vidyamaana on 2023-05-29 17:34:44 |

Share: | | | | |


ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ಮಾನಕ ಜ್ಯುವೆಲ್ಸಿನ ನೂತನ ಶೋರೂಂನ 2ನೇ ಮಳಿಗೆ ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಇದೇ ಸಂದರ್ಭ ಸಂಸ್ಥೆಯ ಮಾಲಕರಾದ ಸಿದ್ಧನಾಥ್ ಅವರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹೊದಿಸಿ, ಶ್ರೀ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಫೊಟೋ ನೀಡಿ ಗೌರವಿಸಿದರು.

ಅಡ್ಯಾರಿನಲ್ಲಿ ಕಾಂಗ್ರೆಸ್ ಸಮಾವೇಶ ; ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ ವ್ಯವಸ್ಥೆ

Posted by Vidyamaana on 2024-02-17 02:34:00 |

Share: | | | | |


ಅಡ್ಯಾರಿನಲ್ಲಿ ಕಾಂಗ್ರೆಸ್ ಸಮಾವೇಶ ; ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ ವ್ಯವಸ್ಥೆ

ಮಂಗಳೂರು, ಫೆ.16: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಗ್ಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಬಸ್, ಲಾರಿ ಇನ್ನಿತರ ಘನ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.


ಉಡುಪಿ, ಮಂಗಳೂರು ಕಡೆಯಿಂದ ಬಿಸಿ ರೋಡ್ ಕಡೆಗೆ ತೆರಳುವ ಘನ ವಾಹನಗಳು ನಂತೂರು- ಪಂಪ್ವೆಲ್- ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ಮೂಲಕ ಸಂಚರಿಸುವುದು. ಅದೇ ರೀತಿ ಬೆಂಗಳೂರು- ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಗಮಿಸುವ ಘನ ವಾಹನಗಳು ಮೆಲ್ಕಾರ್- ಮುಡಿಪು- ತೊಕ್ಕೊಟ್ಟು- ಪಂಪ್ವೆಲ್ ಮೂಲಕ ತೆರಳುವುದು, ಈ ತಾತ್ಕಾಲಿಕ ಸಂಚಾರ ಬದಲಾವಣೆ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.ವಾಹನ ಪಾರ್ಕಿಂಗ್ ವಿವರ


ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.


ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ

Posted by Vidyamaana on 2024-05-29 06:03:09 |

Share: | | | | |


ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ

ಪುತ್ತೂರು: ಈ ಬಾರಿಯ ಎಂಎಲ್ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪದವೀಧಶರ ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.

ಮಂಗಳೂರು: ಜೂ.22-23 ರಂದು ಲುಲು ಸಮೂಹ ಸಂಸ್ಥೆಯಿಂದ ನೇಮಕಾತಿ ಸಂದರ್ಶನ.

Posted by Vidyamaana on 2023-06-21 14:34:12 |

Share: | | | | |


ಮಂಗಳೂರು: ಜೂ.22-23 ರಂದು ಲುಲು ಸಮೂಹ ಸಂಸ್ಥೆಯಿಂದ ನೇಮಕಾತಿ ಸಂದರ್ಶನ.

ಮಂಗಳೂರು: ಏಷ್ಯಾದ ಅತಿದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ಜೂನ್ 22 ಮತ್ತು 23 ರಂದು ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಮಂಗಳೂರಿನಲ್ಲಿ ಏರ್ಪಡಿಸಿದೆ.


ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕ ವಿಲ್ಸನ್ ಫೆರ್ನಾಂಡಿಸ್ ಮಾಹಿತಿ ನೀಡಿದರು.

ಯುಎಇ, ಕತರ್, ಬಹರೈನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.


ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ ಪಿಯುಸಿ ಆಗಿದೆ. ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.


ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ದಿರ್ಹಮ್‌ಗಳಿಂದ 1400 ದಿರ್ಹಮ್‌ ತನಕ ಮತ್ತು 200 ದಿರ್ಹಮ್‌ ಆಹಾರ ಭತ್ತೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿವೆ ಎಂದರು.

ಈ ಸಂದರ್ಭ ಸಂಸ್ಥೆ ನಿರ್ದೇಶಕಿ ಲೀನಾ ಫೆರ್ನಾಂಡಿಸ್, ಡೈರೆಕ್ಟರ್‌ ಅಪರೇಶನ್ಸ್ ಥೋಮಸ್ ಆಳ್ವ ಉಪಸ್ಥಿತರಿದ್ದರು.

ಸಂದರ್ಶನ ಕಚೇರಿ ವಿಳಾಸ: ಫೆರ್ನಾಂಡಿಸ್‌ ಗ್ರೂಪ್, ಮೆಟ್ರೋ ಪ್ಲಾಝಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟ್ ಎದುರುಗಡೆ, ವೆಲೆನ್ಸಿಯಾ, ಮಂಗಳೂರು 575 002.

ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

Posted by Vidyamaana on 2023-09-17 04:30:01 |

Share: | | | | |


ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ  ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಶನಿವಾರ ಅಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. 


ಬಂಧಿತ ಆರೋಪಿಯನ್ನು ಸುಳ್ಯ ಕಸಬಾ ಗ್ರಾಮದ ನಿವಾಸಿ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂದು ಹೆಸರಿಸಲಾಗಿದೆ. ಕಲಂದರ್ ಶಾ ಶನಿವಾರ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ತನ್ನ ಕೆಎ21 ಬಿ7248 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ವಿಟ್ಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 


ಕಾರ್ಯಾಚರಣೆ ವೇಳೆ ಅಟೋ ರಿಕ್ಷಾ ಸಹಿತ ರಿಕ್ಷಾದಲ್ಲಿದ್ದ 1.35 ಲಕ್ಷ ರೂಪಾಯಿ ಮೌಲ್ಯದ 6.110 ಕೆ ಜಿ ತೂಕದ ಗಾಂಜಾ, ಮೊಬೈಲ್ ಫೋನ್, 900 ರೂಪಾಯಿ ನಗದು ಹಾಗೂ ರಿಕ್ಷಾ ಚಾಲಕನ ಚಾಲನಾ ಪರವಾನಗಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,96,900/- ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 162/2023 ಕಲಂ 8(ಸಿ),20(ಬಿ) (3) (ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

Posted by Vidyamaana on 2023-09-22 21:09:47 |

Share: | | | | |


ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ಸೋಣಂದೂರಿನಲ್ಲಿ ನಡೆದಿದೆ.


ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್‌ ಮೃತಪಟ್ಟವರು.


ಪ್ರಶಾಂತ್‌ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.


ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



Leave a Comment: