ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ಬನ್ನೂರು ತಡೆಗೋಡೆ ಜರಿದು ಹಾನಿಗೀಡಾದ ಮನೆಗೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಭೇಟಿ ಶಾಸಕರಿಂದ ಸರಕಾರದ ಪರಿಹಾರದ ಭರವಸೆ

Posted by Vidyamaana on 2024-06-27 16:42:16 |

Share: | | | | |


ಬನ್ನೂರು ತಡೆಗೋಡೆ ಜರಿದು ಹಾನಿಗೀಡಾದ ಮನೆಗೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಭೇಟಿ ಶಾಸಕರಿಂದ ಸರಕಾರದ ಪರಿಹಾರದ ಭರವಸೆ

ಪುತ್ತೂರು : ನಗರ ಸಭಾ ವ್ಯಾಪ್ತಿಯ ಬನ್ನೂರು ಜೈನರಗುರಿ ಎಂಬಲ್ಲಿ ಕಳೆದ ರಾತ್ರಿ ಧಾರಾಕಾರವಾಗಿ ಸುರಿದ ಮಳೆಗೆ ಪಕ್ಕದ ಮನೆಯವರು ಕಟ್ಟಿದ ಕಳ್ಳಿನ ತಡೆಗೋಡೆ ಮಜೀದ್ ಎಂಬವರ ಮನೆಗೆ ಜರಿದು ಬಿದ್ದಿದ್ದು ಸಣ್ಣ ಮಗುವಿಗೆ ಗಾಯವಾಗಿದ್ದು ಉಳಿದವರು ಅದ್ರಷ್ಟವಷಾತ್ ಪ್ರಾಣಹಾನಿಯಾಗದೆ ,ದೊಡ್ಡ ಅನಾಹುತದಿಂದ ಪಾರಾಗಿರುತ್ತಾರೆ

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

Posted by Vidyamaana on 2023-07-05 12:04:29 |

Share: | | | | |


ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಕೆಲಸದಿಂದ ಅಮಾನತು ಗೊಳಿಸಿ ಪ್ರಧಾನ ಮುಖ್ಯವಾರಣ್ಯ ಸಾಮರಕ್ಷಣಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಕಲಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಕಲ್ಮಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು ಆದರೆ ಇಲಾಖೆ ಕಾನುನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್ ಅವರ ಮೇಲಿತ್ತು.ಈ ಹಿನ್ನಲೆಯಲ್ಲಿ ಇಲಾಖಾ ತನಿಖೆ ನಡೆಸಲಾಗಿತ್ತು.ಇದೀಗ ತ್ಯಾಗರಾಜ್ ಅವರನ್ನು ಅಮಾನತು ಗೊಳಿಸಿ ಆದೆಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ವಿವಾದಗಳಿಗೆ ಕಾರಣವಾಗಿದ್ದ ಕಲಂಜದ ಅಕ್ರಮ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ತಲೆದಂಡವಾಗಿದೆ.

ಲಕ್ಷಾಂತರ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ಅರಣ್ಯ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹಾಗೂ ಇತರರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆಗಲೇ ಇಲಾಖಾ ತನಿಖೆ ಆರಂಭವಾಗಿತ್ತು. ಆದರೆ ಅಧ ಮುಂದುವರಿದ ಭಾಗವಾಗಿ ದಾಳಿ ನಡೆಸಿದ್ದ ಸಂದ್ಯಾ ಅವರನ್ನು ಬೀದರಿಗೆ ವರಗಗಾವಣೆ ಮಾಡಿ ಆದೇಶಬಂದ ಹಿನ್ನಲೆಯಲ್ಲಿ ಭಾರೀ ರಾಜಕೀಯ ವಿವಾದಗಳು ಸೃಷ್ಟಿಯಾಗಿದ್ದವು. ಅಲ್ಲದೆ ತನಿಖೆ ನಡೆಸಿದ ಹಿರಿಯ ಅಧಿಕಾರಿಗಳು ಕೆಳ ಹಂತದ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.

ತ್ಯಾಗರಾಜ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇದೀಗ ತ್ಯಾಗರಾಜ್ ಅವರ ವಿರುದ್ಧ ಇದೇ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ

ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

Posted by Vidyamaana on 2024-02-27 16:39:06 |

Share: | | | | |


ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

ನವದೆಹಲಿ: ಮದುವೆಯಾಗಿ ಮೂರೂ ತಿಂಗಳಿಗೆ ಪತಿ ಪತ್ನಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯ ಗಾಜಿಯಾಬಾದ್‌ನಲ್ಲಿ ಸಂಭವಿಸಿದೆ.


ಮದುವೆಯಾಗಿ ಮೂರೇ ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾಳೆ.


ಏನಿದು ಘಟನೆ:

ಗಾಜಿಯಾಬಾದ್ ನ ಅಭಿಷೇಕ್ ಅಹ್ಲುವಾಲಿಯಾ ಜೊತೆ ಅಂಜಲಿ ಕಳೆದ ವರ್ಷ ನವೆಂಬರ್ ನಲ್ಲಿ ಮದುವೆಯಾಗಿದ್ದರು ಇಬ್ಬರೂ ಜೊತೆಯಾಗಿ ತಿರುಗಾಟ ನಡೆಸಿದ್ದಾರೆ ಅದರಂತೆ ನಿನ್ನೆ (ಸೋಮವಾರ) ದೆಹಲಿಯಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ ಈ ವೇಳೆ ಇದ್ದಕಿದ್ದಂತೆ ಅಭಿಷೇಕ್ ಗೆ ಹೃದಯಾಘತವಾಗಿದೆ ಆ ಕೂಡಲೇ ಅಲ್ಲಿದ್ದ ಜನರು ಸೇರಿ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಗಾಬರಿಯಾದ ಪತ್ನಿ ಅಂಜಲಿ ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಗೆ ಪತಿಗೆ ಹೃದಯಾಘಾತವಾದ ವಿಚಾರವನ್ನು ತಿಳಿಸಿದ್ದಾಳೆ.

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸಂಜೆ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರು ಅಭಿಷೇಕ್ ಮೃತದೇಹವನ್ನು ಗಾಜಿಯಾಬಾದ್ ನಲ್ಲಿರುವ ಫ್ಲಾಟ್ ಗೆ ತಂದಿದ್ದಾರೆ ಈ ವೇಳೆ ಮೃತ ಅಭಿಷೇಕ್ ಜೊತೆಗೆ ಇದ್ದ ಅಂಜಲಿ ಇದ್ದಕಿದ್ದಂತೆ ಎದ್ದು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾಳೆ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಇಂದು( ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.

ಮಂಗಳೂರು: SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Posted by Vidyamaana on 2023-05-05 08:31:45 |

Share: | | | | |


ಮಂಗಳೂರು:  SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.

ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ  ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು

ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

Posted by Vidyamaana on 2023-09-22 21:34:50 |

Share: | | | | |


ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿವೆ. 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆಗೆ ಇಳಿದಿದ್ದ.

ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಕೈಗೊಂಡಿದ್ದಾರೆ

ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

Posted by Vidyamaana on 2023-12-28 14:29:54 |

Share: | | | | |


ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: