ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted by Vidyamaana on 2023-06-27 07:44:29 |

Share: | | | | |


ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೈರೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಬೊಹ್ರಾ ಸಮುದಾಯದಿಂದ ಪುನಃಸ್ಥಾಪಿಸಲಾದ ಕೈರೋದಲ್ಲಿರುವ ಈಜಿಪ್ಟ್​ನ 11ನೇ ಶತಮಾನದ ಐತಿಹಾಸಿಕ ಅಲ್​-ಹಕೀಮ್​​ ಮಸೀದಿಗೆ ಭೇಟಿ ನೀಡಿದ್ದಾರೆ.ಅಮೆರಿಕದಿಂದ ನೇರವಾಗಿ ಈಜಿಪ್ಟ್‌ಗೆ 2 ದಿನ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಾವಿರ ವರ್ಷ ಹಳೆಯದಾದ ಅಲ್‌-ಹಕೀಮ್‌ ಮಸೀದಿಗೆ ಭೇಟಿ ನೀಡಿದರು. ಈ ಕುರಿತಾದ ಕೆಲವು ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿವೆಸಾವಿರಾರು ವರ್ಷಗಳಷ್ಟು ಹಳೆಯದಾದ ಅಲ್​​-ಹಕೀಮ್​​​ ಕೈರೋದಲ್ಲಿನ ನಾಲ್ಕನೇ ಅತ್ಯಂತ ಹಳೆಯ ಮಸೀದಿಯಾಗಿದೆ. ಮಸೀದಿಯು 13,560 ಚದರ ಮೀಟರ್‌ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ, ಸಾಂಪ್ರದಾಯಿಕ ಕೇಂದ್ರ ಪ್ರಾಂಗಣವು 5,000 ಚದರ ಮೀಟರ್‌ಗಳನ್ನು ಆಕ್ರಮಿಸಿಕೊಂಡಿದೆಈಜಿಪ್ಟ್‌ಗೆ ಅವರ ರಾಜ್ಯ ಭೇಟಿಯ ಎರಡನೇ ದಿನದಂದು, ಮೋದಿಯವರಿಗೆ ಮಸೀದಿಯ ಸುತ್ತಲೂ ತೋರಿಸಲಾಯಿತು. 1012 ರಲ್ಲಿ ನಿರ್ಮಿಸಲಾದ ಮಸೀದಿಯ ಗೋಡೆಗಳು ಮತ್ತು ದ್ವಾರಗಳ ಮೇಲಿನ ಕೆತ್ತನೆ ನೋಡಿ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದರುಭಾರತದಲ್ಲಿ ನೆಲೆಸಿರುವ ಬೋಹ್ರಾ ಸಮುದಾಯವು ಫಾತಿಮಿಡ್‌ಗಳಿಂದ ಹುಟ್ಟಿಕೊಂಡಿದೆ. ಅವರು 1970ರಿಂದ ಮಸೀದಿಯನ್ನು ನವೀಕರಿಸಿದರು ಮತ್ತು ಅಂದಿನಿಂದ ಅದನ್ನು ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಗುಜರಾತ್‌ನಲ್ಲಿರುವ ಬೊಹ್ರಾ ಸಮುದಾಯದೊಂದಿಗೆ ಪ್ರಧಾನಿಯವರು ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ಬೊಹ್ರಾ ಸಮುದಾಯದ ಪ್ರಮುಖ ಧಾರ್ಮಿಕ ಕ್ಷೇತ್ರಕ್ಕೆ ಮತ್ತೊಮ್ಮೆ ಭೇಟಿ ನೀಡುವ ಸಂದರ್ಭವಾಗಿದೆ ಎಂದು ಈಜಿಪ್ಟ್‌ನಲ್ಲಿರುವ ಭಾರತದ ರಾಯಭಾರಿ ಅಜಿತ್ ಗುಪ್ತೆ ಹೇಳಿದ್ದಾರೆ.  ಐತಿಹಾಸಿಕ ಮಸೀದಿಗೆ 16 ನೇ ಫಾತಿಮಿದ್ ಖಲೀಫ್ ಅಲ್-ಹಕೀಮ್ ಬೈ-ಅಮ್ರ್ ಅಲ್ಲಾ ಅವರ ಹೆಸರನ್ನು ಇಡಲಾಗಿದೆ ಮತ್ತು ದಾವೂದಿ ಬೊಹ್ರಾ ಸಮುದಾಯಕ್ಕೆ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ.

ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

Posted by Vidyamaana on 2023-05-10 06:10:12 |

Share: | | | | |


ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಮತ ಚಲಾಯಿಸಿದರು.ಕುಂತೂರಿನಲ್ಲಿರುವ ಮತದಾನ ಕೇಂದ್ರದಲ್ಲಿ ಅವರು ಮತ ಚಲಾಯಿಸಿದರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

Posted by Vidyamaana on 2023-04-25 16:26:51 |

Share: | | | | |


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು.

ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

Posted by Vidyamaana on 2023-05-13 02:57:54 |

Share: | | | | |


ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ,


ಬಳಿಕ ನಡೆದ ಮತ ಎಣಿಕೆಯ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡರೆ, ನಂತರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.


ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿ ಅಶೋಕ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.

ನ್ಯಾಷನಲ್ ಬ್ಯಾಂಕ್ ಗಳಿಗ ಆಯ್ತು – ಈಗ ಸಹಕಾರಿ ಬ್ಯಾಂಕ್ ಗಳಿಗೂ ದೋಖಾ..!?

Posted by Vidyamaana on 2023-09-25 12:32:36 |

Share: | | | | |


ನ್ಯಾಷನಲ್ ಬ್ಯಾಂಕ್ ಗಳಿಗ ಆಯ್ತು – ಈಗ ಸಹಕಾರಿ ಬ್ಯಾಂಕ್ ಗಳಿಗೂ ದೋಖಾ..!?

ಬೆಂಗಳೂರು : ದೇಶದ ವಿವಿಧ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಸಾಲ ಪಡೆದಂತ ಅನೇಕರು ದೇಶದಿಂದಲೇ ಪರಾರಿಯಾಗಿದ್ದಾರೆ. ಈಗ ರಾಜ್ಯದ ವಿವಿಧ ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿದ್ದಂತ 2,888 ಮಂದಿ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ.ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್(DCC) ಸೇರಿದಂತೆ ವಿವಿಧ ಸಹಕಾರಿ ಬ್ಯಾಂಕ್ ಗಳಿಂದ 1,404 ಕೋಟಿ ಸಾಲವನ್ನು ಪಡೆದಿದ್ದಂತ 2,888 ಮಂದಿ ಸಾಲ ತೀರಿಸಲು ಆಗದೇ ನಾಪತ್ತೆಯಾಗಿರೋ ಶಾಕಿಂಗ್ ವಿಚಾರ ಬಯಲಾಗಿದೆ.ಇನ್ನೂ ಹೀಗೆ 1,404 ಕೋಟಿ ಸಾಲ ಪಡೆದು ನಾಪತ್ತೆಯಾಗಿರುವಂತ 2,888 ಮಂದಿಯಲ್ಲಿ ಬೆಂಗಳೂರಿನ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಸಹಕಾರಿ ಬ್ಯಾಂಕಿನದ್ದೇ ಸಿಂಹಪಾಲು ಆಗಿದೆ. ಈ ಹಿನ್ನಲೆಯಲ್ಲಿ ಈ ಬ್ಯಾಂಕ್ ಎವರ್ ಗ್ರೀನ್ ಕ್ರೆಡಿಟ್ ಎಂಬುದಾಗಿ ಹಾಗೂ 1,400 ಕೋಟಿ ರೂ.ಸಾಲವನ್ನು ಅನುತ್ಪಾದಕ ಆಸ್ತಿನಷ್ಟವೆಂದೂ ಘೋಷಿಸಿದೆ.


ರಾಜ್ಯದ ಇತರೆ ಸಹಕಾರಿ ಬ್ಯಾಂಕ್ ಗಳಲ್ಲಿ 25 ರಿಂದ 30 ವರ್ಷಗಳಿಂದ ಸಾಲಗಾರರು, ತಾವು ಪಡೆದಿರುವ ಸಾಲ ಪಾವತಿಸದಿರುವ ಪರಿಣಾಮ ಅಸಲುಗಿಂತ ಬಡ್ಡಿಯೇ ಜಾಸ್ತಿಯಾಗಿದೆ. ಕೆಲವರು ತಪ್ಪು ವಿಳಾಸ ಕೊಟ್ಟು ಸಾಲ ಪಡೆದಿದ್ದರೇ, ಕೆಲವರು ಸಾಲ ಪಡೆದು ಅಸಲು, ಬಡ್ಡಿ ಕಟ್ಟದೇ ನಾಪತ್ತೆಯಾಗಿದ್ದಾರೆ.ಅಂದಹಾಗೇ ಬೆಂಗಳೂರಲ್ಲಿ 2,485 ಮಂದಿಯಿಂದ 1,406 ಕೋಟಿ ರೂ, ಮೈಸೂರಲ್ಲಿ 132 ಸಾಲಗಾರರಿಂದ 57 ಲಕ್ಷ, ಬೆಳಗಾವಿ 15 ಮಂದಿಯಿಂದ 41 ಲಕ್ಷ ರೂ ಸೇರಿದಂತೆ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಗಳಲ್ಲಿ ಒಟ್ಟು 2,632 ಮಂದಿ ಪಟ್ಟಣ ಸಹಕಾರ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದಾರೆ. ಇವರಲ್ಲಿ ಒಟ್ಟಾರೆ 2,888 ಮಂದಿ ಸಾಲವನ್ನು ತೀರಿಸಲಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

Posted by Vidyamaana on 2023-02-11 04:31:42 |

Share: | | | | |


ಅಡ್ಯಾರ್ ಬಳಿ ಬೈಕ್ ಅಪಘಾತ : ವಿಟ್ಲ ಮೂಲದ ಕಾರ್ತಿಕ್ ಮೃತ್ಯು.!

ವಿಟ್ಲ: ಬೈಕ್ ಅಪಘಾತ ಸಂಭವಿಸಿ ವಿಟ್ಲ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾನಿ ಮತ್ತು ಸುಧಾಮಣಿ ದಂಪತಿಗಳ ಪುತ್ರ ಕಾರ್ತಿಕ್ ಮಣಿಯಾನಿ (24) ಎಂದು ಗುರುತಿಸಲಾಗಿದೆ.

ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತರು ತಂದೆ, ತಾಯಿ, ಓರ್ವ ಸಹೋದರ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ



Leave a Comment: