ಭೀಕರ ರಸ್ತೆ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಉದ್ಯಮಿ ಪ್ರಜ್ವಲ್ ನಿಧನ

ಸುದ್ದಿಗಳು News

Posted by vidyamaana on 2024-06-29 08:45:20 | Last Updated by Vidyamaana on 2024-06-29 08:45:20

Share: | | | | |


ಭೀಕರ ರಸ್ತೆ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಉದ್ಯಮಿ ಪ್ರಜ್ವಲ್ ನಿಧನ

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.

ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು

 Share: | | | | |


ಕಾಡಿದ ಒಂಟಿತನ; 62ರ ಹರೆಯದ ತಂದೆಗೆ 60ರ ಸಂಗಾತಿ ಹುಡುಕಿ ಮದುವೆ ಮಾಡಿಸಿದ ಮಕ್ಕಳು

Posted by Vidyamaana on 2023-10-25 15:12:29 |

Share: | | | | |


ಕಾಡಿದ ಒಂಟಿತನ; 62ರ ಹರೆಯದ ತಂದೆಗೆ 60ರ ಸಂಗಾತಿ ಹುಡುಕಿ ಮದುವೆ ಮಾಡಿಸಿದ ಮಕ್ಕಳು

ಕೊಚ್ಚಿ: ಪತ್ನಿಯ ನಿಧನದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ತಂದೆಗೆ 62 ರ ವಯಸ್ಸಿನಲ್ಲಿ ಮಕ್ಕಳೇ ಸೇರಿಕೊಂಡು ಮತ್ತೊಂದು ಮದುವೆ ಮಾಡಿಸಿದ್ದಾರೆ.

ಕೇರಳದ ಪೊಟ್ಟನ್‌ಮಲಾ ಮೂಲದ ರಾಧಾಕೃಷ್ಣನ್‌ ತಮ್ಮ ಪತ್ನಿಯನ್ನು ಕಳೆದ ಒಂದು ವರ್ಷದಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಪತ್ನಿ ಇಲ್ಲದೆ ಇದ್ದರೂ ತನ್ನ ಮೂವರು ಮಕ್ಕಳೊಂದಿಗೆ ಖುಷಿ ಆಗಿದ್ದ‌ ರಾಧಾಕೃಷ್ಣನ್‌ ಅವರಿಗೆ ಒಂಟಿತನ ಕಾಡುತ್ತಿತ್ತು.


ಮಕ್ಕಳು ಕೂಡ ಬೇರೆ ಬೇರೆ ಸ್ಥಳಗಳಲ್ಲಿ ವಾಸಿಸುತ್ತಿದ್ದರು. ತಂದೆಯ ಒಂಟಿತನದ ಮೌನವನ್ನು ಗಮನಿಸಿದ ಮಕ್ಕಳಾದ ರಶ್ಮಿ ಮತ್ತು ರಂಜು ಅವರು ತಂದೆಗೆ 62 ವಯಸ್ಸಿನಲ್ಲಿ ಸಂಗಾತಿಯನ್ನು ಹುಡಕಲು ಮುಂದಾಗಿದ್ದಾರೆ. ಈ ವಿಚಾರದಲ್ಲಿ ತಂದೆಯ ಮನವೊಲಿಸಿದ ಮಕ್ಕಳು ಸಂಗಾತಿಯನ್ನು ಹುಡುಕಿದ್ದಾರೆ.


ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಹೊಂದಿಕೆಯಾಗುವ ಸಂಗಾತಿಯನ್ನು ಮಕ್ಕಳು ಹುಡುಕಿದ್ದಾರೆ. ಅದರಂತೆ ಅಡೂರಿನ ಮಲ್ಲಿಕಾ ಕುಮಾರಿ (60) ಅವರನ್ನು ಆಯ್ದುಕೊಂಡು ಮಕ್ಕಳೇ ಮುಂದೆ ನಿಂತು ಎರಂಕಾವು ಭಗವತಿ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ್ದಾರೆ.ಮಲ್ಲಿಕಾ ಕುಮಾರಿ ಅವರ ಪತಿ 5 ವರ್ಷಗಳ ಹಿಂದೆ ನಿಧನರಾಗಿದ್ದು, ಅವರಿಗೆ ಮಕ್ಕಳಾಗಿರಲಿಲ್ಲ. ಕುಟಂಬದವರ ಮುಂದೆ ಅದ್ಧೂರಿಯಾಗಿಯೇ ತನ್ನ ತಂದೆಯ ವಿವಾಹವನ್ನು ಮಕ್ಕಳು ಮಾಡಿಸಿದ್ದಾರೆ.

ಮಂಗಳೂರು ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

Posted by Vidyamaana on 2023-04-07 15:44:26 |

Share: | | | | |


ಮಂಗಳೂರು ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಮಂಗಳೂರು: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮುಸ್ಲಿಂ ಧರ್ಮಕ್ಕೆ ಸೇರಿದ ಕೇರಳದ ಮಣಪ್ಪುರಂ ಮೂಲದ ಯುವತಿ ಫಿದಾ ಫಾತಿಮ ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ.  ಕಾಸರಗೋಡು ಸಂಘ ಪರಿವಾರದ ಕಾರ್ಯಕರ್ತರ ಸಹಾಯದಿಂದ ವಿವಾಹ ನೆರವೇರಿದೆ.

ಇನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಧರ್ಮಅಡ್ಡವಾಗಿತ್ತು. ಇದೀಗ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಮದುವೆಗೂ ಮುನ್ನ ಮುಸ್ಲಿಂ ಯುವತಿ ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾಳೆ ಎನ್ನಲಾಗಿದೆ.

ನಾಳೆ 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ ಸಿದ್ದರಾಮಯ್ಯ

Posted by Vidyamaana on 2023-08-29 16:09:05 |

Share: | | | | |


ನಾಳೆ 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದ್ದು, 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ.ನಾಳೆ ಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.


ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲೆಂದು ಹರಕೆ ಕಟ್ಟಿಕೊಂಡಿದ್ದರು. ಇಂದು ಚಾಮುಂಡಿ ದೇವಿಗೆ ಹರಕೆ ಒಪ್ಪಿಸಿದರು. ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ. ಕನಕಾಂಬರ, ಮಲ್ಲಿಗೆ, ಗುಲಾಬಿ ಸೇರಿ ವಿವಿಧ ಬಗೆಯ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು.ಅಲ್ಲದೇ ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆ ನಡೆದಿದೆ.

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಗ್ಯಾಸ್ ಸೋರಿಕೆ ವಾಹನಗಳ ಸಂಚಾರ ಬಂದ್ ಬದಲಿ ಮಾರ್ಗ ಮೂಲಕ ತೆರಳಲು ಸೂಚನೆ

Posted by Vidyamaana on 2024-03-13 12:04:14 |

Share: | | | | |


ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಗ್ಯಾಸ್ ಸೋರಿಕೆ ವಾಹನಗಳ ಸಂಚಾರ ಬಂದ್  ಬದಲಿ ಮಾರ್ಗ  ಮೂಲಕ ತೆರಳಲು ಸೂಚನೆ

ಸಕಲೇಶಪುರ: ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ..

ಮಾರ್ಗಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ನೂರಾರು ವಾಹನಗಳು ನಿಂತಲ್ಲೆ ನಿಂತಿವೆ.

ಬೆಂಗಳೂರು-ಹಾಸನ-ಮಂಗಳೂರು:

ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಹೋಗಿದ್ದು ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಬೇಕಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ.ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ ಆತ್ಮಹತ್ಯೆ

Posted by Vidyamaana on 2023-04-29 23:17:39 |

Share: | | | | |


ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್  ಆತ್ಮಹತ್ಯೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಭಾರತದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾಕ್ಕೆ ಹೀನಾಯ ಸೋಲು

Posted by Vidyamaana on 2023-11-05 21:58:35 |

Share: | | | | |


ಭಾರತದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾಕ್ಕೆ ಹೀನಾಯ ಸೋಲು

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ ತಂಡವು ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಯ ಎದುರು ಮಂಕಾಗಿ ಹೀನಾಯ ಸೋಲು ಕಂಡಿತು. ಗೆಲುವಿನೊಂದಿಗೆ ಭಾರತ ಅಗ್ರ ಸ್ಥಾನಿಯಾಗಿ ಸೆಮಿ ಫೈನಲ್ ಪ್ರವೇಶಿಸಲಿದೆ.



327 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾದ ಘಟಾನುಘಟಿ ಬ್ಯಾಟ್ಸ್ ಮ್ಯಾನ್ ಗಳು ಇಂದು ಭಾರತದ ಬೌಲಿಂಗ್ ದಾಳಿಗೆ ಸಿಲುಗಿ ಪತರು ಗುಟ್ಟಿ ಹೋದರು. 27.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟಾಗುವ ಮೂಲಕ ಭಾರತ 243 ರನ್‌ಗಳ ಅತ್ಯಮೋಘ ಸ್ಮರಣೀಯ ಜಯ ಸಾಧಿಸಿತು.


ಭಾರತದ ಪರ ವೇಗಿ ಸಿರಾಜ್ ಅವರು ಅದ್ಬುತ ಫಾರ್ಮ್ ನಲ್ಲಿದ್ದ ಡಿ’ಕಾಕ್ ಅವರನ್ನು ಬೌಲ್ಡ್ ಮಾಡುವ ಮೂಲಕ ಮೊದಲ ಆಘಾತ ನೀಡಿದರು. ಆಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ತಲೆ ಎತ್ತಲು ಸಾಧ್ಯವಾಗಲಿಲ್ಲ.


ಭಾರತದ ಪರ ಬಿಗಿ ದಾಳಿ ನಡೆಸಿದ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರು. ಶಮಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರು ವಿರಾಟ್ ಕೊಹ್ಲಿ ಅವರು ಜನ್ಮದಿನದ ಸಂಭ್ರಮದಲ್ಲಿ ಅಮೋಘ ಶತಕ ಸಿಡಿಸಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿದರು. ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿ ಭರ್ಜರಿ ಮೊತ್ತವನ್ನು ದಕ್ಷಿಣ ಆಫ್ರಿಕಾ ತಂಡದ ಎದುರಿಗಿಟ್ಟಿದೆ. ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ 62 ರನ್ ಜತೆಯಾಟವಾಡಿ ವೇಗದ ಆರಂಭ ಒದಗಿಸಿಕೊಟ್ಟರು. ಶರ್ಮ 24 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಗಿಲ್ 23 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು.



ಆ ಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ119 ಎಸೆತಗಳಲ್ಲಿ 100 ರನ್ ಗಳಿಸಿ ಸಂಭ್ರಮಿಸಿದರು. ಕೊಹ್ಲಿ ಅವರಿಗೆ ಉತ್ತಮ ಜತೆಯಾಟದ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 77 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ಗಳಿಸಿದ್ದ ವೇಳೆ ಔಟಾದರು.


ಕೊಹ್ಲಿ121 ಎಸೆತಗಳಲ್ಲಿ 101 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊಹ್ಲಿ ಆಕರ್ಷಕ 10 ಬೌಂಡರಿಗಳನ್ನು ಬಾರಿಸಿದ್ದರು. ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಗಳಿಸಿ ಔಟಾಗದೆ ಉಳಿದರು.


ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್ ಗಳಲ್ಲಿ 49 ಶತಕ ಬಾರಿಸಿದ್ದು,ವಿರಾಟ್ ಕೊಹ್ಲಿ ಅವರು 277 ಇನ್ನಿಂಗ್ಸ್ ಗಳಲ್ಲಿ 49 ನೇ ಶತಕ ದಾಖಲಿಸಿ ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದ್ದಾರೆ.


8 ರಲ್ಲಿ 8 ಪಂದ್ಯಗಳನ್ನು ಗೆದ್ದಿರುವ ರೋಹಿತ್ ಶರ್ಮ ಬಳಗ ಸೆಮಿ ಫೈನಲ್ ಗೂ ಮುನ್ನ ನೆದರ್ ಲ್ಯಾಂಡ್ಸ್ ವಿರುದ್ಧ ಪಂದ್ಯವನ್ನು ಆಡಲಿದೆ. ದಕ್ಷಿಣ ಆಫ್ರಿಕಾ ತಂಡ ಅಫ್ಘಾನ್ ಎದುರು ಪಂದ್ಯ ಆಡಲಿದೆ



Leave a Comment: