ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಸುದ್ದಿಗಳು News

Posted by vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.

ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

 Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

Posted by Vidyamaana on 2024-03-10 12:54:02 |

Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

ಚಿಕ್ಕಮಗಳೂರು: ಬಿ.ಎಸ್‌. ಯಡಿಯೂರಪ್ಪ ಬಿಜೆಪಿಯಲ್ಲಿದ್ದರೂ ಎಂದಿಗೂ ಯಾವುದೇ ಧರ್ಮವನ್ನು ದ್ವೇಷಿಸಲಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಉರ್ದು ಅದಬ್, ರಾಜ್ಯ ಅಂಜುಮನ್ ತಾರಕಿ ಉರ್ದು ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಉರ್ದು ಸಮ್ಮೇಳನ ಹಾಗೂ ಗಜಲ್-ಕವಾಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕಾರಿಪುರದಲ್ಲಿ ಯಡಿಯೂರಪ್ಪ ಅನಭಿಶಕ್ತ ದೊರೆ ಇದ್ದಂತೆ. ಯಾವ ವ್ಯಕ್ತಿ ತನ್ನ ಧರ್ಮದೊಂದಿಗೆ ಇತರೆ ಧರ್ಮವನ್ನು ಪ್ರೀತಿಸುತ್ತಾನೆಯೋ ಆ ವ್ಯಕ್ತಿಯನ್ನು ಎಲ್ಲರೂ ಗೌರವಿಸುತ್ತಾರೆ ಎಂದರು.

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು

Posted by Vidyamaana on 2023-07-20 08:03:04 |

Share: | | | | |


ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.


ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.

ಜಾರ್ಖಂಡ್ ಮೂಲದವರಾದ ಫಿರೋಝ್

ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ

ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ

ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ

ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ

ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ

ಲಿವಿಂಗ್ ಟುಗೆದರ್ ಕಿತಾಪತಿ : ಜಾವಿದ್ ನನ್ನುಕೊಂದ ರೇಣುಕಾ

Posted by Vidyamaana on 2023-09-07 13:26:08 |

Share: | | | | |


ಲಿವಿಂಗ್ ಟುಗೆದರ್ ಕಿತಾಪತಿ : ಜಾವಿದ್ ನನ್ನುಕೊಂದ ರೇಣುಕಾ

ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್ ನಲ್ಲಿದ್ದ ಯುವಕನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ರೇಣುಕಾ (34) ಎಂದು ಗುರುತಿಸಲಾಗಿದೆ. ಯುವತಿ ಕೇರಳ ಮೂಲದ ಜಾವಿದ್ (24) ಎಂಬಾತನ ಜೊತೆ ಆಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದಳು. ಇಬ್ಬರೂ ಪರಸ್ಪರ ಸಂಶಯದಿಂದ ಆಗಾಗ ಜಗಳವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಸಹ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕಾಗಿ ಆತನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆ. 20ರಂದು ಪುತ್ತಿಲ ಪರಿವಾರದಿಂದ ಸಮಾಗಮ

Posted by Vidyamaana on 2023-08-19 13:25:39 |

Share: | | | | |


ಆ. 20ರಂದು ಪುತ್ತಿಲ ಪರಿವಾರದಿಂದ ಸಮಾಗಮ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ ಬಳಿಕ ಹುಟ್ಟಿಕೊಂಡ ಪುತ್ತಿಲ ಪರಿವಾರ ಆ. 20ರಂದು ಪುತ್ತೂರಿನ ಕೋಟೆಚಾ ಹಾಲಿನಲ್ಲಿ ಸಮಾಗಮ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಾಗಾರಕ್ಕೆ ಸಮಾಗಮ ಎಂದು ಹೆಸರಿಡಲಾಗಿದೆ.

ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಕಾರ್ಯಾಗಾರ ಪ್ರಾರಂಭವಾಗಲಿದೆ. ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220  ಬೂತ್ ನ  ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್

Posted by Vidyamaana on 2023-07-27 15:31:37 |

Share: | | | | |


ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ದಾಖಲಾಗುವ ಭ್ರಷ್ಟಾಚಾರ ಆರೋಪದ ಖಾಸಗಿ ದೂರುಗಳ ಸಂಬಂಧ ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17(ಎ) ಪ್ರಕಾರ ಸಕ್ಷಮ ಪ್ರಾಧಿಕಾರದ ಅನುಮೋದನೆ ಇಲ್ಲದೆ ತನಿಖೆ ನಡೆಸುವಂತಿಲ್ಲ ಎಂದು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.ಖಾಸಗಿ ದೂರು ಪರಿಗಣಿಸಿ ತನ್ನ ವಿರುದ್ಧ ತನಿಖೆಗೆ ಆದೇಶಿಸಿರುವ ಸೆಷನ್ಸ್ ನ್ಯಾಯಾಲಯದ ಆದೇಶದ ಕಾನೂನುಬದ್ಧತೆ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಯಾಗಿದ್ದ ವಿ. ಆಶೋಕ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿದೆ.ಕೆಲವು ಸಂದರ್ಭಗಳನ್ನು ಹೊರತುಪಡಿಸಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಸರ್ಕಾರಿ ಅಧಿಕಾರಿಯ ವಿರುದ್ಧ ಪೊಲೀಸ್ ಅಧಿಕಾರಿಗಳು ವಿಚಾರಣೆ ಅಥವಾ ತನಿಖೆಯನ್ನು ನಡೆಸುವಂತಿಲ್ಲ ಎಂಬ ಷರತ್ತನ್ನು ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17(ಎ)ಕ್ಕೆ 2018ರಲ್ಲಿ ಸೇರಿಸಲಾಗಿದೆ. ಖಾಸಗಿ ದೂರುಗಳ ಆಧಾರದಲ್ಲಿ ವಿಚಾರಣಾ ನ್ಯಾಯಾಲಯ ಸರ್ಕಾರಿ ನೌಕರರ ವಿರುದ್ದ ವಿನಾಃಕಾರಣ ಕಾನುನು ಕ್ರಮಕ್ಕೆ ಮುಂದಾಗಿ ಕಿರಿಕಿರಿ ಉಂಟು ಮಾಡುವುದನ್ನು ತಪ್ಪಿಸುವುದಕ್ಕಾಗಿ ಸೆಕ್ಷನ್ 17ಎ ಅಡಿ ರಕ್ಷಣೆ ನೀಡಲಾಗಿದೆ. ಆದರೆ, ಈ ಪ್ರಕರಣದಲ್ಲಿ ಪೂರ್ವಾನುಮತಿ ಇಲ್ಲದೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿರುವ ನ್ಯಾಯಪೀಠ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.ಸೆಕ್ಷನ್ 17ಎ ಅಡಿ ಸಕಾರಿ ನೌಕರರಿಗೆ ನೀಡಿರುವ ರಕ್ಷಣೆ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿಫಲವಾದಲ್ಲಿ ಕಾನೂನು ದುರ್ಬಳಕೆ ಮಾಡಿದಂತಾಗುತ್ತದೆ. ಆದರೂ ಈ ಅವಕಾಶವನ್ನು ತಪ್ಪಿತಸ್ಥರು ರಕ್ಷಣೆಗೆಗಾಗಿ ಬಳಕೆ ಮಾಡುತ್ತಾರೆ ಎಂಬುದಾಗಿ ಪರಿಗಣಿಸಲಾಗುವುದಿಲ್ಲ. ಆದರೆ, ಮುಗ್ದರಿಗೆ ನೀಡುವ ರಕ್ಷಣೆಯಾಗಿದೆ. ಹೀಗಾಗಿ ಅದನ್ನು ಪಾಲಿಸುವುದು ಕಡ್ಡಾಯವಾಗಿರಲಿದೆ ಎಂದು ತಿಳಿಸಿದೆ.


ಅಲ್ಲದೇ, ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಸಿಆರ್‌ಪಿಸಿ ಸೆಕ್ಷನ್ 154(1)ರ ಪ್ರಕಾರ ಸರ್ಕಾರಿ ನೌಕರರ ವಿರುದ್ಧ ಮೊದಲು ಸ್ಥಳೀಯ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಬೇಕು. ದೂರು ದಾಖಲಾಗದಿದ್ದಲ್ಲಿ ಲೋಕಾಯುಕ್ತ ವರಿಷ್ಠಾಧಿಕಾರಿಗಳಿಗೆ ದೂರು ದಾಖಲಿಸಬೇಕು ಎಂಬುದಾಗಿದೆ. ಅಲ್ಲದೇ, ಸುಪ್ರೀಂಕೋರ್ಟ್ ತೀರ್ಪುಗಳ ಪ್ರಕಾರ ದೂರು ನೀಡುವವರು ತಮ್ಮ ದೂರಿಗೆ ಸಂಬಂಧಿಸಿದಂತೆ ಪ್ರಾಮಾಣಿಕೃತ ಹೇಳಿಕೆಗಳನ್ನು ದಾಖಲಿಸಬೇಕು. ಈ ಕಾರ್ಯ ಮಾಡದಿದ್ದಲ್ಲಿ ಪ್ರಕರಣನ್ಯಾಯಾಲಯಗಳು ಪುರಸ್ಕರಿಸಲಾಗುವುದಿಲ್ಲ ಎಂಬುದಾಗಿ ಹೇಳಿದೆ.


ಆದರೆ, ಈ ಪ್ರಕರಣ ಸಂಬಂಧ ದಾಖಲಿಸಿರುವ ದೂರಿನಲ್ಲಿ ಎಲ್ಲಿಯೂ ಲೊಕಾಯುಕ್ತ ಪೊಲೀಸರಿಗೆ ದೂರು ನೀಡಲು ಪ್ರಯತ್ನ ಮಾಡಲಾಗಿದೆ ಎಂಬ ಅಂಶ ಇಲ್ಲ. ಅಲ್ಲದೇ, ದೂರುದಾರರ ತಮ್ಮ ಹಾಗೂ ತಮ್ಮ ಪರ ವಕೀಲರ ಕುರಿತಂತೆ ಯಾವುದೇ ಪ್ರಮಾಣ ಪತ್ರವನ್ನೂ ಸಲ್ಲಿಸಿಲ್ಲ. ಹೀಗಾಗಿ ಪೊಲೀಸರಿಗೆ ದೂರು ಸಲ್ಲಿಸಲು ಮುಂದಾಗದೇ ನೇರವಾಗಿ ಖಾಸಗೀ ದೂರು ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್​ ಪೀಠ ತಿಳಿಸಿದೆ.


ಪ್ರಕರಣದ ಹಿನ್ನೆಲೆ: ಚಿಂತಾಮಣಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಚಿಕ್ಕಬಳ್ಳಾಪುರ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಈ ಅಂಶಗಳ ಆಧಾರದಲ್ಲಿ ಕೆಲವು ಅಧಿಕಾರಿಗಳ ಭ್ರಷ್ಟಾಚಾರ ಆರೋಪದಲ್ಲಿ ಭ್ರಷ್ಟಾಚಾರನಿಗ್ರಹ ದಳ (ಎಸಿಬಿ) ಕ್ಕೆ ದೂರು ನೀಡುವ ಬದಲು ಸೆಷನ್ಸ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ಅರ್ಜಿದಾರರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಡಗನ್ನೂರು ನಿವಾಸಿ ಪ್ರೀತಂ ಆತ್ಮಹತ್ಯೆ

Posted by Vidyamaana on 2023-12-03 20:28:31 |

Share: | | | | |


ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಡಗನ್ನೂರು ನಿವಾಸಿ ಪ್ರೀತಂ ಆತ್ಮಹತ್ಯೆ

ಪುತ್ತೂರು : ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.


ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ನಿವಾಸಿ ಪ್ರೀತಂ (26) ಆತ್ಮಹತ್ಯೆ ಮಾಡಿಕೊಂಡವರು.


ಪರಿವಾರ ಕ್ರೆ ಕೋ ಓಪರೇಟಿವ್ ಸೊಸೈಟಿಯಲ್ಲಿ ದ್ವಿ. ದರ್ಜೆ ಸಹಾಯಕರಾದ ಪ್ರೀತಮ್ ಎನ್ ರವರು ಕಳೆದ 5 ವರ್ಷಗಳಿಂದ ಕೆಲಸನಿರ್ವಹಿಸುತ್ತಿದ್ದು ಪ್ರಸಕ್ತ ಸುಳ್ಯದ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಪ್ರೀತಮ್ ಅವರು ಡಿ.2ರಂದು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಿದ್ದರು. ಮನೆಯಲ್ಲಿ ಎಲ್ಲರೂ ಊಟ ಮಾಡಿ ರಾತ್ರಿ ಮಲಗಿದ್ದರು. ತಾಯಿ ಹತ್ತಿರ ನಾಳೆ ಮೂಡಬಿದರೆಯಲ್ಲಿ ತರಬೇತಿ ಇದೆ. ಬೇಗ ಎಬ್ಬಿಸಿ ಎಂದು ತಿಳಿಸಿದ್ದರು. ಬಳಿಕ ಪ್ರೀತಮ್ ಅವರ ಕೋಣೆಯಲ್ಲಿ ಮಲಗಿದ್ದರು.


ಡಿ.3ರಂದು ತಾಯಿ ಪ್ರೀತಂ ಅವರನ್ನು ಎಬ್ಬಿಸಲು ಆತನ ಕೋಣೆಗೆ ಹೋದಾಗ ಅಲ್ಲಿ ಅವರು ಇರಲಿಲ್ಲ. ಮನೆಯ ಸುತ್ತಮುತ್ತ ಹುಡಿಕಾಡಿ ನಂತರ ಮನೆಯ ಅಂಗಳದ ಬಾವಿಗೆ ಹೋಗಿ ನೋಡಿದಾಗ ಪಕ್ಕದಲ್ಲಿ ಚಪ್ಪಲಿ ಮತ್ತು ಮೊಬೈಲ್ ಕಂಡಿತ್ತು. ಬಾವಿಯಲ್ಲಿ ನೋಡಿದಾಗ ಏನೂ ಕಂಡಿರಲಿಲ್ಲ. ನೆರೆ ಮನೆಯವರನ್ನು ಕರೆದು ಅಗ್ನಿಶಾಮಕದವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಅವರು ಬಂದು ಬಾವಿಗಿಳಿದು ನೋಡಿದ್ದು ಪ್ರೀತಂ ಮೃತದೇಹ ದೊರೆತಿದೆ. ಪ್ರೀತಂ ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ದಕ್ಷ  ಪ್ರಾಮಾಣಿಕ

ರಾಗಿದ್ದು ಸುಳ್ಯ ಶಾಖೆಯ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದಾರು.


ಪ್ರೀತಮ್ ಅವರ ತಂದೆ ಆನಂದ ಗೌಡ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮೃತರು ತಂದೆ ತಾಯಿ ತಮ್ಮನನ್ನು ಅಗಲಿದ್ದಾರೆ 



Leave a Comment: