ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

ಸುದ್ದಿಗಳು News

Posted by vidyamaana on 2024-06-28 23:59:46 |

Share: | | | | |


  ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ.

ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.

ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.

ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.

ಘಟನಾ ಸ್ಥಳಕ್ಕೆ ಕೊಡಗು ಡಿಸಿ ವೆಂಕಟ್ ರಾಜ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಗ್ಲಾಸ್ ಬ್ರಿಡ್ಜ್ ಲಾಕ್ ಮಾಡಿದ್ದು, ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದು ಅಧಿಕೃತ ಗಾಜಿನ ಸೇತುವೆಯಲ್ಲ. ಏಕೆಂದರೆ ಸಂಬಂಧಪಟ್ಟವರು ಯಾವುದೇ ಅಗತ್ಯ ಅನುಮತಿಯನ್ನು ಪಡೆದಿಲ್ಲ. ಈ ಸೇತುವೆಗೆ ಅರಣ್ಯ ಅನುಮತಿ ಇಲ್ಲ. ಸೇತುವೆಯನ್ನು ನಿರ್ಮಿಸುವ ಮುನ್ನ ಮಣ್ಣು ಪರೀಕ್ಷೆ ಸೇರಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಗ್ರಾಮ ಪಂಚಾಯಿತಿಯ ಏಕಮಾತ್ರ ನಿರ್ಣಯದ ಮೇರೆಗೆ ಸೇತುವೆಯನ್ನು ನಿರ್ಮಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಂದ್ ಮಾಡಲಾಗುತ್ತಿದೆ ಎಂದು ಡಿಸಿ ವೆಂಕಟ್ ರಾಜ ಅವರು ತಿಳಿಸಿದ್ದಾರೆ.

ಇದೇ ವೇಳೆ ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಪಂಚಾಯಿತಿಯೇ ಈ ಗ್ಲಾಸ್ ಬ್ರಿಡ್ಜ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದೆ. ಈ ಪ್ರದೇಶದಲ್ಲಿ 5 ಇಂಚುಗಳಷ್ಟು ಮಳೆಯಾಗಿದೆ ಮತ್ತು ಗಾಜಿನ ಸೇತುವೆಯ ಪಿಲ್ಲರ್‌ಗಳನ್ನು ಹಾಕಲಾದ ಸ್ಥಳದಲ್ಲಿ ಮಣ್ಣು ಕೆಳಕ್ಕೆ ಜಾರಿದೆ. ಹೀಗಾಗಿ, ಸಾರ್ವಜನಿಕರವೀಕ್ಷಣೆಗೆ ನಾವು ಸೇತೆವೆಯನ್ನು ಬಂದ್ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.ಗೇಟ್ ಲಾಕ್ ಮಾಡಿರುವುದು

ಅನುಮತಿ ಕುರಿತು ಪ್ರಶ್ನಿಸಿದಾಗ, ಖಾಸಗಿಯವರು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಪಂಚಾಯಿತಿ ಅನುಮತಿ ನೀಡಿದೆ.

ಸರ್ವೆ ಸಂಖ್ಯೆ 62 ಮತ್ತು 51/1 ಇಬ್ಬರು ನಿವಾಸಿಗಳ ಒಡೆತನದಲ್ಲಿದೆ ಮತ್ತು ಗಾಜಿನ ಸೇತುವೆಯ ಮಾಲೀಕರು ಸೇತುವೆಯನ್ನು ನಿರ್ಮಿಸಲು ಭೂ ಮಾಲೀಕರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಸುಮಾರು ಎಂಟು ತಿಂಗಳ ಹಿಂದೆ ಸೇತುವೆಗೆ ಪಂಚಾಯಿತಿ ಅನುಮತಿ ನೀಡಿತ್ತು. ಆದರೆ, ಭೂ ಪರಿವರ್ತನೆಯ ದಾಖಲೆ ಸಲ್ಲಿಸಿಲ್ಲ ಮತ್ತು ಸುಮಾರು ಮೂರು ವರ್ಷಗಳಿಂದ ಯಾವುದೇ ಭೂ ಪರಿವರ್ತನೆ ಅರ್ಜಿಗಳಿಗೆ ಅನುಮತಿ ನೀಡಿಲ್ಲ ಎಂದು ಅವರು ವಿವರಿಸಿದರು.

 Share: | | | | |


ಧರ್ಮಸ್ಥಳ : ಹಕ್ಕೊತ್ತಾಯ ಸಭೆ

Posted by Vidyamaana on 2023-08-04 16:01:55 |

Share: | | | | |


ಧರ್ಮಸ್ಥಳ : ಹಕ್ಕೊತ್ತಾಯ ಸಭೆ

ಧರ್ಮಸ್ಥಳ : ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರದ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಮುಂಭಾಗ ಸಮಾವೇಶ ನಡೆದಿದ್ದು, ಈ ವೇಳೆ ಆಗಮಿಸಿದ ಸೌಜನ್ಯ ತಾಯಿಯನ್ನು ತಡೆದು ಕುಟುಂಬದವರಿಗೆ ಬೆದರಿಸಿದ ವ್ಯಕ್ತಿಯ ವಿರುದ್ಧ ಸೌಜನ್ಯ ತಾಯಿ ಕುಸುಮಾವತಿ ದೂರು ನೀಡಿದ್ದಾರೆ.ಸೌಜನ್ಯ ಸುಮಾರು 11 ವರುಷದ ಹಿಂದೆ ಅತ್ಯಾಚಾರಕ್ಕೊಳಗಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲು ವರ್ಷದಿಂದ ಹೋರಾಟ ನಡೆಸುತ್ತಿದ್ದೇವೆ.


ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು

ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಆಗ್ರಹಿಸಿ ಸದ್ರಿ ಸಭೆಗೆ ತನ್ನ ಕುಟುಂಬದೊಂದಿಗೆ ಬಂದಿದ್ದು ಆಗ ಸಮಯ ವ್ಯಕ್ತಿಯೊಬ್ಬನು ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ತಾನು ಧರಿಸಿದ ಚೂಡಿದಾರ

ಹಿಡಿದೆಳೆದು ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಲ್ಲದೆ, ತನ್ನ ಮಗನ ಮೇಲೆಯೂ ಹಲ್ಲೆಗೆ ಯತ್ನಿಸಿದ್ದು ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

IPL ಸಿರಾಜ್ ಬಿಗು ದಾಳಿ; ಪಂಜಾಬ್ ವಿರುದ್ಧ ಜಯದ ನಗೆ ಬೀರಿದ RCB

Posted by Vidyamaana on 2023-04-20 16:31:01 |

Share: | | | | |


IPL ಸಿರಾಜ್ ಬಿಗು ದಾಳಿ; ಪಂಜಾಬ್ ವಿರುದ್ಧ ಜಯದ ನಗೆ ಬೀರಿದ RCB

ಮೊಹಾಲಿ : ಪಂಜಾಬ್ ಕ್ರಿಕೆಟ್ ಸಂಸ್ಥೆಯ ಐ ಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಗಳ ಅಮೋಘ ಜಯ ಸಾಧಿಸಿದೆ.ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು . ಆರ್ ಸಿಬಿ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆ ಹಾಕಿತು. ನಾಯಕ ವಿರಾಟ್ ಕೊಹ್ಲಿ 59 ರನ್ ಗಳಿಸಿ ಔಟಾದರು. ಅಮೋಘ ಆಟವಾಡಿದ ಡು ಫ್ಲೆಸಿಸ್ 84 ರನ್ ಗಳಿಸಿದರು.ಗುರಿ ಬೆನ್ನಟ್ಟಿದ ಪಂಜಾಬ್ 18.2 ಓವರ್ ಗಳಲ್ಲಿ 150 ರನ್ ಗಳಿಗೆ ಆಲೌಟಾಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರೂ ಉಳಿದ ಆಟಗಾರರು ನೆಲಕಚ್ಚಿ ಆಡಲು ವಿಫಲರಾದರು. ಆರ್ ಸಿಬಿ ಪರ ಬಿಗಿ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್ 21 ರನ್ ನೀಡಿ 4 ವಿಕೆಟ್ ಕಬಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಸಿರಾಜ್ ಎರಡು ಎಲ್ಬಿಡಬ್ಲ್ಯೂ ಮತ್ತು ಎರಡು ಕ್ಲೀನ್ ಬೌಲ್ಡ್ ಮಾಡಿ ಪಂದ್ಯದ ಚಿತ್ರಣ ಬದಲಿಸಿದರು. ಅವರ ಎಕಾನಮಿ ರೇಟ್ 5.20 ಆಗಿತ್ತು.  ವನಿಂದು ಹಸರಂಗ 2 ವಿಕೆಟ್, ಪಾರ್ನೆಲ್ ಮತ್ತು ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದರು.n

ಕೊಹ್ಲಿ ಅವರು ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರು. ಕಳೆದ ಪಂದ್ಯದಲ್ಲಿ ನೋವಿಗೆ ಗುರಿಯಾಗಿದ್ದ ಫ್ಲೆಸಿಸ್ ಫೀಲ್ಡಿಂಗ್ ಗೆ ಇಳಿಯದೆ ಬ್ಯಾಟಿಂಗ್ ಮಾತ್ರ ಮಾಡಿದರು.ಆಡಿದ 6 ಪಂದ್ಯಗಳಲ್ಲಿ3 ಪಂದ್ಯಗಳಲ್ಲಿ ಗೆದ್ದಿರುವ ಆರ್ ಸಿಬಿ 6 ಅಂಕಗಳೊಂದಿಗೆ(-0.068 ರನ್ ರೇಟ್) ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

Posted by Vidyamaana on 2023-07-21 23:20:36 |

Share: | | | | |


ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.

ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.

ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ತೆಂಗಿನ ಮರದಿಂದ ಬಿದ್ದು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

Posted by Vidyamaana on 2024-01-22 21:17:53 |

Share: | | | | |


ತೆಂಗಿನ ಮರದಿಂದ ಬಿದ್ದು  ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

ಉಳ್ಳಾಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ. 1ರಂದು ವಿಶ್ವ ಜನಸಂಖ್ಯಾ ದಿನಾಚರಣೆ

Posted by Vidyamaana on 2023-07-28 08:19:47 |

Share: | | | | |


ಆ. 1ರಂದು ವಿಶ್ವ ಜನಸಂಖ್ಯಾ ದಿನಾಚರಣೆ

ಪುತ್ತೂರು: ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು, ಹೆಚ್.ಪಿ.ಆರ್. ಪ್ಯಾರಾ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ಆ. 1ರಂದು ಬೆಳಿಗ್ಗೆ 10ಕ್ಕೆ ಪುತ್ತೂರು ಪುರಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ 2023 ನಡೆಯಲಿದೆ.

ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸುವರು. ಡಿ.ಎಚ್.ಓ. ಡಾ. ಕಿಶೋರ್ ಕುಮಾರ್ ಎಂ. ಅಧ್ಯಕ್ಷತೆ ವಹಿಸುವರು. ಎಸಿ ಗಿರೀಶ್ ನಂದನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು, ತಹಸೀಲ್ದಾರ್ ಶಿವಶಂಕರ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, ಹೆ.ಪಿ.ಆರ್. ಪ್ಯಾರಾ ಮೆಡಿಕಲ್ ಕಾಲೇಜಿನ ಇಮ್ನೀಸ್ ಮುಖ್ಯ ಅತಿಥಿಯಾಗಿರುವರು.

ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಸಂಪನ್ಮೂಲ ವ್ಯಕ್ತಿಯಾಗಿರುವರು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದರುದ್ದೀನ್ ಎಂ.ಎಸ್., ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌



Leave a Comment: