ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ತೆಂಗಿನ ಮರದಿಂದ ಬಿದ್ದು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

Posted by Vidyamaana on 2024-01-22 21:17:53 |

Share: | | | | |


ತೆಂಗಿನ ಮರದಿಂದ ಬಿದ್ದು  ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

ಉಳ್ಳಾಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯಿಷತ್ ರಸ್ಮಾ – ಮೊಹಮ್ಮದ್ ಸಿನಾನ್ ನಾಪತ್ತೆ ಪ್ರಕರಣ ಸುಖಾಂತ್ಯ

Posted by Vidyamaana on 2023-11-30 20:15:44 |

Share: | | | | |


ಆಯಿಷತ್ ರಸ್ಮಾ – ಮೊಹಮ್ಮದ್ ಸಿನಾನ್ ನಾಪತ್ತೆ ಪ್ರಕರಣ ಸುಖಾಂತ್ಯ

ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.


ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

Posted by Vidyamaana on 2023-09-15 17:18:43 |

Share: | | | | |


ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

ಪುತ್ತೂರು: ಶಾಸಕ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ ೨ ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ಮನವಿ ಮಾಡಿದ್ದಾರೆ.


ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.೧೫ ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ. ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಅಲ್ಲಿಂದ ತೆರವುಗೊಳಿಸಿ ತಮ್ಮ ಶಾಸಕರ ಕೊಠಡಿಯನ್ನಾಗಿ ತಮ್ಮ ಮೂಲಕ ಪರಿವರ್ತಿಸಿರುತ್ತಾರೆ, ಅಲ್ಲದೆ ಸದ್ರಿ ಕಚೇರಿಯ ನವೀಕರಣಕ್ಕೆ, ಸುಮಾರು 31 ಲಕ್ಷ ರೂಪಾಯಿಗಳನ್ನು ಸಾರ್ವಜನಿಕರ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ನೀಡುವಂತೆ ತಮ್ಮ ಮೂಲಕ ಆದೇಶ ನೀಡಲಾಗಿದೆ. ಈ ರೀತಿ ನಾಗರಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ಶಾಸಕರ ಐಷಾರಾಮಿ ಕಚೇರಿಯ ಅಭಿವೃದ್ಧಿಗೆ ನೀಡಲು ಚುನಾಯಿತ ಸದಸ್ಯರುಗಳಾದ ನಮ್ಮ ಆಕ್ಷೇಪವಿರುತ್ತದೆ. ಅದಲ್ಲದೇ ಈ ಹಿಂದಿನ ಅವಧಿಯಲ್ಲಿ ಮಂಜೂರಾದ ಅಮೃತ ನಗರೋತ್ಥಾನದ ಕಾಮಗಾರಿಗಳು ಆರಂಭವಾಗಿರುವುದಿಲ್ಲ. ನಗರಸಭೆಯ ಎರಡನೆಯ  ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ತೊಡಕು ಇನ್ನೂ ನಿವಾರಣೆಯಾಗಿರುವುದಿಲ್ಲ. ಆದ್ದರಿಂದ ತಾವು ಈ ಎಲ್ಲಾ ವಿಚಾರಗಳ ಬಗ್ಗೆ ವರಿಶೀಲಿಸಿ ಚುನಾಯಿತ ಸದಸ್ಯರಾದ ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಪಿ ಜಿ ಜಗನ್ನಿವಾಸ ರಾವ್, ಭಾಮಿ ಅಶೋಕ್ ಶೆಣೈ, ಮನೋಹರ್ ಕಲ್ಲಾರೆ, ನವೀನ್ ಪೆರಿತ್ತೋಡಿ, ಪ್ರೇಮ್, ಸಂತೋಷ್ ಬೊಳುವಾರು, ಸುಂದರ ಪೂಜಾರಿ ಬಡಾವು, ಶೀನಪ್ಪ ನಾಯ್ಕ್, ಪದ್ಮನಾಭ ಪಡೀಲ್ , ವಸಂತ ಕಾರೆಕ್ಕಾಡು, ಬಾಲಚಂದ್ರ, ಶಶಿಕಲಾ ಸಿ.ಎಸ್, ಪ್ರೇಮಲತಾ ನಂದಿಲ, ಮೋಹಿನಿ ವಿಶ್ವನಾಥ್, ಮಮತಾ ರಂಜನ್, ಯಶೋದಾ ಹರೀಶ್, ಗೌರಿ ಬನ್ನೂರು, ಲೀಲಾವತಿ, ದೀಕ್ಷಾ ಪೈ, ಇಂದಿರಾ, ರೋಹಿಣಿ ಈ ಸಂದರ್ಭ ಉಪಸ್ಥಿತರಿದ್ದರು.

ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

Posted by Vidyamaana on 2024-05-13 15:11:55 |

Share: | | | | |


ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

ಉಪ್ಪಳ: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.

ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ತಲಪಾಡಿ ಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು.

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ; ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

Posted by Vidyamaana on 2024-04-07 07:58:32 |

Share: | | | | |


ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ; ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ (17) ಮೃತಪಟ್ಟ ಬಾಲಕ.


ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ

ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

Posted by Vidyamaana on 2023-08-30 06:28:04 |

Share: | | | | |


ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

ಮಂಗಳೂರು: ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ. 


ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.



Leave a Comment: