ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ನೇಣಿಗೆ ಶರಣು

Posted by Vidyamaana on 2024-05-26 14:44:09 |

Share: | | | | |


ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ನೇಣಿಗೆ ಶರಣು

ಶಿವಮೊಗ್ಗ,(ಮೇ 26) : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ.

30 ವರ್ಷದ ಅಕ್ಷತಾ ಆತ್ಮಹತ್ಯೆ,ಗೆ ಶರಣಾದ ಗೃಹಿಣಿ. ಇಂದು(ಮೇ 26) ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

Posted by Vidyamaana on 2023-12-31 16:45:19 |

Share: | | | | |


ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

ನವದೆಹಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಸಂಬಂಧ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ಹೇಳಿದೆ.ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ಹೆಸರಿನಲ್ಲಿ ಜನರನ್ನು ಮೋಸ ಮಾಡಲು ಪ್ರಯತ್ನಿಸಲಾಗುತ್ತಿದೆ. ಅವರ ಬಲೆಗೆ ಬೀಳದಂತೆ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಜನರನ್ನು ಎಚ್ಚರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶ ಪೊಲೀಸರಿಗೆ ನೀಡಿದ ದೂರಿನ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರ ಪ್ರತಿಯನ್ನು ಸಿಎಂ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್‌ ಮಾಡಿದ್ದಾರೆ.ಎಚ್ಚರ! ಕೆಲವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬನ್ಸಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.


ಈ ಬಗ್ಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ, ಲಖನೌ ವಲಯ ಐಜಿಗೆ ಔಪಚಾರಿಕ ದೂರು ನೀಡಿದ್ದೇವೆ ಎಂದು ಬನ್ಸಾಲ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.


ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯುವ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹಣವನ್ನು ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಇತ್ತೀಚೆಗೆ ಹೇಳಿತ್ತು.


ಶ್ರೀರಾಮ ದೇಗುಲದಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ನಿಧಿ ಸಂಗ್ರಹಿಸಲು, ಪ್ರತ್ಯೇಕ ಸಮಿತಿ ರಚಿಸಲು ಮತ್ತು ರಶೀದಿಗಳನ್ನು ಮುದ್ರಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.

ಆಂಬುಲೆನ್ಸ್ ನಲ್ಲಿ ಜಾಲಿ ಡ್ರೈವ್

Posted by Vidyamaana on 2023-11-12 04:39:00 |

Share: | | | | |


ಆಂಬುಲೆನ್ಸ್ ನಲ್ಲಿ ಜಾಲಿ ಡ್ರೈವ್

ಬೆಳ್ತಂಗಡಿ,:  ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.


ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.


ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.

ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Posted by Vidyamaana on 2023-07-27 16:32:20 |

Share: | | | | |


ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಗುರುವಾರ ಜು 27 ರಂದು ಅರಮನೆ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆವಹಿಸಿ ಮಾತನಡಿದ ಅವರು, ಸರಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಜತೆಗೆ, ಶಾಸಕರಲ್ಲಿ ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಸಲಹೆ ನೀಡಿದರು.


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪತ್ರವನ್ನು ತಮ್ಮದಲ್ಲ ಎಂದು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿಹರಡಿದ್ದಾರೆ ಎಂದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡೀ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಸಿದರುಬಿಜೆಪಿ ಸುಳ್ಳಿನ ಕಾರ್ಖಾನೆ: ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದ ಅವರು, ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕೆಂದು ಅವರು ಹೇಳಿದರು.


ಹೊಸ ಸರಕಾರ ಬಂದ ಬಳಿಕ ನಮ್ಮಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು. ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು ಎಂದರು.

ಪುತ್ತೂರು ರೋಟರಿ ಕ್ಲಬ್‌ ಸೆಂಟ್ರಲ್ ನಿಂದ ಅರಿವು ಕಾರ್ಯಕ್ರಮ

Posted by Vidyamaana on 2023-08-04 01:38:25 |

Share: | | | | |


ಪುತ್ತೂರು ರೋಟರಿ ಕ್ಲಬ್‌ ಸೆಂಟ್ರಲ್ ನಿಂದ ಅರಿವು ಕಾರ್ಯಕ್ರಮ

ಪುತ್ತೂರು: ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್‌ ಇವರ ವತಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಅರಿವು ಕಾರ್ಯಾಗಾರ ಜು. 28ರಂದು ನಡೆಯಿತು.

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಅಧ್ಯಕ್ಷ ಡಾ.ರಾಜೇಶ್ ಬೆಜ್ಜಂಗಳ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉನ್ನತವಾದ ಗುರಿ ಇರಬೇಕು, ಜೀವನದಲ್ಲಿ ನೈತಿಕ ಮೌಲ್ಯಗಳಿಗೆ ಪ್ರಾಧಾನ್ಯತೆ ನೀಡಬೇಕು, ಜ್ಞಾನದಾಹ ಇದ್ದರೆ ಆತ ಸಮಾಜದಲ್ಲಿ ಸುಸಂಸ್ಕೃತ ಪ್ರಜೆ ಆಗಬಲ್ಲ ಅದಕ್ಕಾಗಿ ಇಂದಿನ ಅರಿವು ಕಾರ್ಯಕ್ರಮ ಎಂದು ಹೇಳಿದರು. 

ಶಾಲಾ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜ್ಞಾನವನ್ನು ಪಡೆದುಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ, ಇಂತಹ ಅರಿವು ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಜ್ಞಾನದಾಹ ಹೆಚ್ಚುತ್ತದೆ ಎಂದು ಹೇಳಿದರು ಅಲ್ಲದೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಚಂದ್ರಹಾಸ ರೈ ಮತ್ತು ರಾಕೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಪಿ.ಎಂ.ಅಶ್ರಫ್ ಮುಕ್ವೆ ಉಪಸ್ಥಿತರಿದ್ದರು. ಶಾಲಾ ಆಡಳಿತ ಸಮಿತಿಯ ಕೋಶಾಧಿಕಾರಿ ದಿವಾಕರ ರೈ ಕೆರೆಮೂಲೆ ಪ್ರಾಸ್ತಾವಿಕವಾಗಿ ಮಾತುಗಳೊಂದಿಗೆ ಸ್ವಾಗತಿಸಿದರು. ಮುಖ್ಯಗುರು ಕೃಷ್ಣವೇಣಿ ವಂದಿಸಿದರು. ಆಡಳಿತ ಸಮಿತಿಯ ಗೌರವ ಸಲಹೆಗಾರ ಗಣೇಶ್ ಭಟ್ ಮಾಪಲಮಜಲು, ಸದಸ್ಯರಾದ ಮುರಳೀಕೃಷ್ಣ ಸಿದ್ಧಮೂಲೆ, ಪದಾಧಿಕಾರಿಗಳಾದ ಗಣಪತಿ ಭಟ್ ಎಕ್ಕಡ್ಕ, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪುತ್ತೂರು: ಪ್ರಿಂಟಿಂಗ್ ಪ್ರೆಸ್ ಮಾಲೀಕ ಪದ್ಮಯ್ಯ ಗೌಡ ಆತ್ಮಹತ್ಯೆ

Posted by Vidyamaana on 2023-08-18 03:25:27 |

Share: | | | | |


ಪುತ್ತೂರು: ಪ್ರಿಂಟಿಂಗ್ ಪ್ರೆಸ್ ಮಾಲೀಕ ಪದ್ಮಯ್ಯ ಗೌಡ ಆತ್ಮಹತ್ಯೆ

ಪುತ್ತೂರು: ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ಪುತ್ತೂರು ತಾಲ್ಲೂಕಿನ ಕಬಕ ಗ್ರಾಮದ ಪೋಳ್ಯ ನಿವಾಸಿ ಪದ್ಮಯ್ಯ ಗೌಡ (50) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಪುತ್ತೂರಿನ ಕೆನರಾ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಪದ್ಮಯ್ಯ ಗೌಡ ಅವರು ಕೆಲ ವರ್ಷದ ಹಿಂದೆ ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಆರಂಭಿಸಿ, ಅಲ್ಲೇ ಬಾಡಿಗೆ ಮನೆಯೊಂದರಲ್ಲಿ ವಾಸ್ಯವ್ಯವಿದ್ದುಕೊಂಡು ವಾರಕ್ಕೊಮ್ಮೆ ಪೋಳ್ಯದಲ್ಲಿರುವ ಮನೆಗೆ ಹೋಗುತ್ತಿದ್ದರು.ಸೋಮವಾರ ಪದ್ಮಯ್ಯ ಗೌಡ ಅವರ ಸ್ಕೂಟರ್ ಪೋಳ್ಯ ಮನೆಗೆ ಹೋಗುವ ರಸ್ತೆ ಬದಿಯಲ್ಲಿ ಕಂಡು ಬಂದಿತ್ತು. ಅವರ ಮೊಬೈಲಿಗೆ ಕರೆ ಮಾಡಿದಾಗ ಪೋನ್ ರಿಂಗಣಿಸುತ್ತಿತ್ತು. ಇದರ ಜಾಡು ಹಿಡಿದು ಹುಡುಕಾಡಿದಾಗ ಮನೆ ಸಮೀಪದ ತೋಟದ ಬಾವಿಯ ಬಳಿ ಪದ್ಮನಾಭ ಗೌಡ ಅವರ ಬಟ್ಟೆ ಪತ್ತೆಯಾಗಿತ್ತು. ಬಾವಿಯಲ್ಲಿ ಹುಡುಕಾಡಿದಾಗ ಶವ ಪತ್ತೆಯಾಗಿದೆ.


ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: