ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಅಜ್ಜನ ಮರಣ ಪತ್ರಕ್ಕೆ ಲಂಚ ; ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ

Posted by Vidyamaana on 2023-11-24 15:47:57 |

Share: | | | | |


ಅಜ್ಜನ ಮರಣ ಪತ್ರಕ್ಕೆ ಲಂಚ ;  ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ

ಮಂಗಳೂರು: ಮರಣ ದೃಡೀಕರಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ.

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಯನ್ನು ಚೇಳ್ಯಾರು ಗ್ರಾಮ ಅಧಿಕಾರಿ ಶ್ರೀ ವಿಜಿತ್ ಎಂದು ಗುರುತಿಸಲಾಗಿದೆ.


ಘಟನೆ ವಿವರ: ದೂರುದಾರ ವ್ಯಕ್ತಿ ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರಿನ ಚೇಳ್ಯಾರು ಗ್ರಾಮದಲ್ಲಿ 42 ಸೆಂಟ್ಸ್ ಜಾವವಿದ್ದು ಅದರಲ್ಲಿ ಐದು ಸೆಂಟ್ಸ್ ಜಾಗವನ್ನು ನೆರೆಮನೆವರಿಗೆ ಮಾರಾಟ ಮಾಡಲು ನಿರ್ಧರಿಸಿದ್ದರು ಇದಕ್ಕೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಿಸಿದ ವೇಳೆ ಅಜ್ಜನ ಮರಣ ಪ್ರಮಾಣ ಪತ್ರ ಜೊತೆಗೆ ಸಂತತಿ ನಕ್ಷೆ ತರುವಂತೆ ಹೇಳಿದ್ದಾರೆ.


ಅದರಂತೆ ವ್ಯಕ್ತಿ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಅಜ್ಜನ ಮರಣ ಪ್ರಮಾಣ ಪಾತ್ರ ಹಾಗೂ ಸಂತತಿ ನಕ್ಷೆ ಮಾಡಲು ಚೇಳ್ಯಾರು ಗ್ರಾಮ ಕರಣಿಕರ ಕಛೇರಿಯುಗೆ ತೆರಳಿ ಅರ್ಜಿ ಸಲ್ಲಿಸಿದ್ದಾರೆ. ಆ ಬಳಿಕ ಎರಡು ಮೂರೂ ಬಾರಿ ಕಚೇರಿಗೆ ತೆರಳಿ ಅರ್ಜಿಯ ವಿಚಾರವಾಗಿ ಗ್ರಾಮ ಆಡಳಿತ ಅಧಿಕಾರಿ ಶ್ರೀ ವಿಜಿತ್ ಅವರನ್ನು ವಿಚಾರಿಸಿದಾಗ ಯಾವುದೇ ಉತ್ತರ ಸಿಗಲಿಲ್ಲ ಆ ಬಳಿಕ ನವೆಂಬರ್ 20 ರಂದು ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಅವರ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ನಿಮ್ಮ ಅಜ್ಜನ ಮರಣ ದೃಡೀಕರಣ ಪತ್ರ ರೆಡಿ ಇದೆ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಬಂದು ತೆಗೆದುಕೊಳ್ಳಿ ಹಾಗೆಯೇ ಬರುವಾಗ ಹದಿನೈದು ಸಾವಿರ ರೂಪಾಯಿಗಳನ್ನು ತರುವಂತೆ ವಿಜಿತ್ ಹೇಳಿದ್ದಾರೆ ಇದಕ್ಕೆ ಪ್ರತಿಯಾಗಿ ಅರ್ಜಿದಾರ ವ್ಯಕ್ತಿ ತನ್ನ ಬಳಿ ಅಷ್ಟೊಂದು ದುಡ್ಡು ಇಲ್ಲ ಎಂದು ಹೇಳಿದ್ದಾರೆ ಆದರೆ ಅದಕ್ಕೆ ಪ್ರತಿಕ್ರಿಯಿಸಿದ ವಿಜಿತ್ ಇವತ್ತು ಆಗದಿದ್ದರೂ ಪರವಾಗಿಲ್ಲ ನಾಳೆಯಾದರೂ ತನ್ನ ಎಂದು ಹೇಳಿದ್ದಾರೆ.ಇದಾದ ಬಳಿಕ ನವೆಂಬರ್ 22 ರಂದು ಮತ್ತೆ ಗ್ರಾಮ ಕರಣಿಕರ ಕಚೇರಿಗೆ ತೆರಳಿ ಮರಣ ಪ್ರಮಾಣ ಪತ್ರ ಪಡೆಯಲು ಹೋದಾಗ ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಮರಣ ಪ್ರಮಾಣ ಪತ್ರ ನೀಡಿ ಹಣ ಕೊಡುವಂತೆ ಕೇಳಿಕೊಂಡಿದ್ದಾರೆ ಈ ವೇಳೆ ಇಷ್ಟೊಂದು ದುಡ್ಡು ನನ್ನ ಬಳಿ ಇಲ್ಲ ಸ್ವಲ್ಪ ಕಡಿಮೆ ಮಾಡಿ ಎಂದಿದ್ದಕ್ಕೆ ಎರಡು ಸಾವಿರ ಕಡಿಮೆ ಮಾಡಿ ಹದಿಮೂರು ಸಾವಿರ ನೀಡುವಂತೆ ಕೇಳಿಕೊಂಡಿದ್ದಾರೆ.

ಈ ವಿಚಾರವನ್ನು ಲೋಕಾಯುಕ್ತ ಪೊಲೀಸರಿಗೆ ದೂರಿನ ಮೂಲಕ ನೀಡಿದ್ದು ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು ಇಂದು ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ತೆರಳಿದ್ದಾರೆ ಅದರಂತೆ ದೂರುದಾರ ವ್ಯಕ್ತಿ ಬೆಳಿಗ್ಗೆ ಕಚೇರಿಗೆ ತೆರಳಿ ಅಧಿಕಾರಿಗೆ ದುಡ್ಡು ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಲಂಚದ ನೀಡಿದ ಹಣವನ್ನು ವಶಪಡಿಸಿಕೊಂಡಿದ್ದಾರೆ.


ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಚಲುವರಾಜು ಬಿ. ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ. ಸುರೇಶ ಕುಮಾರ್ ಪಿ. ಕಾರ್ಯಾಚರಣೆಯಲ್ಲಿ ಇದ್ದರು.

ಕಾರವಾರ ; ಜ್ಯೋತಿಷಿ ಸಲಹೆ, ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

Posted by Vidyamaana on 2023-10-07 18:44:40 |

Share: | | | | |


ಕಾರವಾರ ; ಜ್ಯೋತಿಷಿ ಸಲಹೆ,  ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

ಕಾರವಾರ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.


ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್​, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.


ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.

ಇಂದು ಬೆಳ್ತಂಗಡಿಗೆ ಸಿಎಂ ಸಿದ್ದರಾಮಯ್ಯ

Posted by Vidyamaana on 2024-05-21 04:51:01 |

Share: | | | | |


ಇಂದು ಬೆಳ್ತಂಗಡಿಗೆ ಸಿಎಂ ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ.

ಸಂಪ್ಯ ಠಾಣೆ ಎಸ್.ಐ. ಉದಯರವಿ, ಟ್ರಾಫಿಕ್ ಎಸ್.ಐ. ರಾಮ ನಾಯ್ಕ್ ವರ್ಗ

Posted by Vidyamaana on 2023-01-21 03:51:45 |

Share: | | | | |


ಸಂಪ್ಯ ಠಾಣೆ ಎಸ್.ಐ. ಉದಯರವಿ, ಟ್ರಾಫಿಕ್ ಎಸ್.ಐ. ರಾಮ ನಾಯ್ಕ್ ವರ್ಗ

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಉದಯರವಿ ಅವರು ಪುತ್ತೂರು ನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ತೆರವಾದ ಸ್ಥಾನಕ್ಕೆ ಶ್ರೀನಾಥ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.

       ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಮ ನಾಯ್ಕ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. 

         ಕಳೆದ 3 ವರ್ಷಗಳಿಂದ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉದಯರವಿ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು. ಮಾತ್ರವಲ್ಲ, ಸಾರ್ವಜನಿಕರಿಂದಲೂ ಪ್ರಶಂಸೆಗೆ ಪಾತ್ರವಾಗಿದ್ದರು.

ಇದೀಗ ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಗಾವಣೆ ಪ್ರಕ್ರಿಯೆ ನಡೆದಿದೆ ಎಂದು ಹೇಳಲಾಗಿದೆ.

ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

Posted by Vidyamaana on 2024-06-02 23:35:39 |

Share: | | | | |


ನಾಳೆ (ಜೂನ್ 3)ಪುತ್ತೂರು ಕಿಲ್ಲೆ ಮೈದಾನದ ಸಂತೆಗೆ ಹಿಂಬಾಗಿಲಿನಿಂದ ಪ್ರವೇಶಿಸಿ- ತಹಸೀಲ್ದಾ‌ರ್ ಕುಂಞ ಅಹಮ್ಮದ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಸಮೀಪ ಪುತ್ತೂರು ಕಿಲ್ಲೆ ಮೈದಾನದ ಸೋಮವಾರದ ಸಂತೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು.

ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಲು ಅವಕಾಶ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಕ್ತ ಹಾಗು ನ್ಯಾಯೋಚಿತ ನಿಷ್ಪಕ್ಷವಾಗಿ ಚುನಾವಣೆಯನ್ನು ನಡೆಸುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿಲ್ಲೆ ಮೈದಾನದ ಸೋಮವಾರ ಸಂತೆಯು ಕೂಡಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

Posted by Vidyamaana on 2023-10-27 16:43:17 |

Share: | | | | |


ಮುಖ್ಯಮಂತ್ರಿ  ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು, ಅ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


"ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ" ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 


ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಮತ್ತೊಂದು ಎಫ್ಐಆರ್ ಆಗಿದೆ.‌



Leave a Comment: