ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


SSLC ರಿಸಲ್ಟ್ : ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಪ್ರೋತ್ಸಾಹ ಧನವಾಗಿ ಡಿ ಕೆ ಶಿವಕುಮಾ‌ರ್ ಕೊಟ್ಟ ಹಣವೆಷ್ಟು?

Posted by Vidyamaana on 2024-05-14 17:09:13 |

Share: | | | | |


SSLC ರಿಸಲ್ಟ್ : ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಪ್ರೋತ್ಸಾಹ ಧನವಾಗಿ ಡಿ ಕೆ ಶಿವಕುಮಾ‌ರ್ ಕೊಟ್ಟ ಹಣವೆಷ್ಟು?

ಬೆಂಗಳೂರು , ಮೇ 14: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3 ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು. ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಪುತ್ತೂರು: ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ನೇಣು ಬಿಗಿದು ಆತ್ಮಹತ್ಯೆ..!!!

Posted by Vidyamaana on 2023-03-16 09:37:38 |

Share: | | | | |


ಪುತ್ತೂರು: ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು; ನಗರಸಭಾ ಸದಸ್ಯ ಶಿವರಾಮ ಸಪಲ್ಯ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದೆ. ನಗರಸಭೆಯ ಒಂದನೇ ವಾರ್ಡ್ ಸದಸ್ಯರಾಗಿದ್ದ ಅವರು ಸಾಲ್ಮರ ಸಮೀಪದ ಉರಮಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಪತಿಯು ಫೋನ್ ಕರೆ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಹತ್ತಿರದ ಮನೆಯವರ  ಬಳಿ ತೆರಳುವಂತೆ ತಿಳಿಸಿದ್ದು, ಈ ವೇಳೆ ಅವರು ಮನೆ ಬಳಿ ತೆರಳಿ ನೋಡಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ

ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಘೋಷಿಸಿದ ಯೆಮನ್ ಮಿಸೈಲ್ ದಾಳಿ ಆರಂಭ

Posted by Vidyamaana on 2023-11-01 07:28:09 |

Share: | | | | |


ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಘೋಷಿಸಿದ ಯೆಮನ್ ಮಿಸೈಲ್ ದಾಳಿ ಆರಂಭ

ಯೆಮನ್: ಹಮಾಸ್ ದಾಳಿಯ ನೆಪದಲ್ಲಿ ಇಸ್ರೇಲ್ ಪ್ಯಾಲೆಸ್ತೀನ್ ನಾಗರಿಕರನ್ನು ಬೇಟೆಯಾಡುತ್ತಿದ್ದು, ಅಂತಾರಾಷ್ಟ್ರೀಯ ಕಾನೂನನ್ನು, ವಿಶ್ವಸಂಸ್ಥೆಯ ಸಲಹೆಗಳನ್ನು ಎಲ್ಲ ಮೀರುತ್ತಿದೆ. ದಾಳಿ ಮುಂದುವರೆಸುವ ಹೇಳಿಕೆಗಳನ್ನೂ ನೀಡುತ್ತಿದೆ. ಪ್ಯಾಲೆಸ್ತಿನಿಯನ್ ನಾಗರಿಕರ ಸಾವು ನೋವಿನ ಬಗ್ಗೆ, ಮಿಲಿಯಾಂತರ ಜನರ ನಿರಾಶ್ರಿತರಾಗಿರುವುದರ ಬಗ್ಗೆ ಕೆಲವು ಮುಸ್ಲಿಂ ರಾಷ್ಟ್ರಗಳು ಕೆರಳಿ ಕೆಂಡಾಮಂಡಲವಾಗಿದೆ. ದಾಳಿ ನಿಲ್ಲಿಸುವ ಎಚ್ಚರಿಕೆ ಮೀರಿದ ಇಸ್ರೇಲ್ ವಿರುದ್ಧ ಇದೀಗ ಯೆಮೆನ್ ಅಧಿಕೃತವಾಗಿ ಯುದ್ಧ ಘೋಷಿಸಿದೆ.

ಯೆಮೆನ್ ಭದ್ರತಾ ಪಡೆ ಮುಖ್ಯಸ್ಥ ಯುದ್ಧ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್ ಮೇಲೆ ಮಿಸೈಲ್‌ಗಳು ತೂರಿ ಬಂದಿದೆ.

ಯೆಮನ್ ಯುದ್ಧ ಘೋಷಣೆ ಕುರಿತು ಭದ್ರತಾ ಪಡೆ ವಕ್ತಾರ ಯಹ್ಯಾ ಸೆರಿ ವಿಡಿಯೋ ಮೂಲಕ ಘೋಷಣೆ ಮಾಡಿದ್ದಾರೆ. ಯುದ್ಧ ಘೋಷಣೆ ಬೆನ್ನಲ್ಲೇ ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ಆರಂಭಗೊಂಡಿದೆ.

ಪ್ಯಾಲೆಸ್ತಿನ್ ಸಹೋದರ,ಸಹೋದರಿಯರಿಗೆ ನಾವು ಹೋರಾಟ ಆರಂಭಿಸಿದ್ದೇವೆ ಎಂದು ಯೆಮೆನ್ ಹೇಳಿದೆ. ಇಸ್ರೇಲ್ ದಾಳಿ ನಿಲ್ಲಿಸುವವರೆಗೆ ಯೆಮೆನ್ ಶಸಸ್ತ್ರ ಪಡೆಗಳು ಭೀಕರ ದಾಳಿ ನಡೆಸಲಿದೆ ಎಂದೂ ಹೇಳಿದೆ. ಇಸ್ರೇಲ್ ಘೋರ ಪರಿಣಾಮ ಎದುರಿಸಬೇಕಾಗಲಿದೆ ಎಂದು ಕೂಡ ಯೆಮೆನ್ ಎಚ್ಚರಿಸಿದೆ.

ಮುರ : ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಬ್ಬರು ಗಂಭೀರ

Posted by Vidyamaana on 2024-02-22 15:59:18 |

Share: | | | | |


ಮುರ : ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಬ್ಬರು ಗಂಭೀರ

ಪುತ್ತೂರು:  ಮುರ ಸಮೀಪ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಎ 21 ಡಬ್ಲೂ 0247 ನಂಬರಿನ ಸ್ಕೂಟರ್ ಪುತ್ತೂರಿನಿಂದ ಕಬಕ ಕಡೆಗೆ ವೇಗವಾಗಿ ಹೋಗುತ್ತಿದ್ದ ವೇಳೆ ಕಬಕದಿಂದ ಪುತ್ತೂರ ಕಡೆ ಬರುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ 

ಕುಂಬ್ರ: ಬದ್ರಿಯಾನಗರ ಬದ್ರಿಯಾ ಜಮಾತ್ ಕಮಿಟಿ ಮಹಾಸಭೆ

Posted by Vidyamaana on 2023-06-25 11:17:14 |

Share: | | | | |


ಕುಂಬ್ರ: ಬದ್ರಿಯಾನಗರ ಬದ್ರಿಯಾ ಜಮಾತ್ ಕಮಿಟಿ ಮಹಾಸಭೆ

ಪುತ್ತೂರು: ಕುಂಬ ಬದ್ರಿಯಾನಗರ ಬದ್ರಿಯಾ ಜಮಾತ್‌ ಕಮಿಟಿ ಇದರ ಮಹಾಸಭೆಯು ಜೂ.23 ರಂದು ಮಸೀದಿಯ ಸಭಾಂಗಣದಲ್ಲಿ ನಡೆಯಿತು.

ಗೌರವಾಧ್ಯಕ್ಷರಾದ ಕೆ.ಪಿ ಅಹ್ಮದ್‌ ಹಾಜಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಮಗಿರೆ ವರದಿ ವಾಚಿಸಿದರು . ಖತೀಬ್‌ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು. ಸಭೆಯಲ್ಲಿ ಜಮಾತ್‌ ಅಭಿವೃದ್ಧಿಯ ಬಗ್ಗೆ ಸದಸ್ಯರೊಳಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಅಧ್ಯಕ್ಷರಾದ ಉಸ್ಮಾನ್ ಮುಸ್ಲಿಯಾರ್, ಮಾಜಿ ಅಧ್ಯಕ್ಷರುಗಳಾದ ಯೂಸುಫ್ ಕಡ್ತಿಮಾರ್, ಹಮೀದ್ ದರ್ಬಾರ್, ಮೂಸಾ ಮುಸ್ಲಿಯಾರ್, ಮಾಜಿ ಕಾರ್ಯದರ್ಶಿ ಅರಬಿಕುಂಞಿ ಮಗಿರೆ,ಇಸ್ಮಾಯಿಲ್ ಕೋಳಿಗದ್ದೆ, ಮಹಮ್ಮದ್ ಮಗಿರೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2023-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೆ ಪಿ ಅಹ್ಮದ್‌ ಹಾಜಿ ಆಕರ್ಷಣ್, ಅಧ್ಯಕ್ಷರಾಗಿ ಉಸ್ಮಾನ್ ಮುಸ್ಲಿಯಾರ್ ಶಾಂತಿನಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಕುಂಬ್ರ, ಕಾರ್ಯದರ್ಶಿಯಾಗಿ ಅಬ್ದುಲ್‌ರಹಿಮಾನ್ ಕೊಯಿಲ, ಉಪಾಧ್ಯಕ್ಷರಾಗಿ ಅಬ್ಬಾಸ್ ಬ್ರೆಂಚ್ ,ಹಾಗೂ ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಬದ್ರಿಯಾನಗರರನ್ನು ನೇಮಿಸಲಾಯಿತು.

ಕಾರ್ಯಕಾರಿ ಸಮಿತಿಗೆ ಸದಸ್ಯರುಗಳಾಗಿ ಯೂಸುಫ್ ಕಡ್ತಿಮಾರ್, ಅರಬಿಕುಂಞ ಮಗಿರೆ ಇಸುಬುಕೊಯಿಲ, ಹಮೀದ್ ಕೊಯಿಲ, ಇಸ್ಮಾಯಿಲ್ ಕೋಳಿಗದ್ದೆ, ಬಶೀರ್ ಕಡ್ತಿಮಾರ್, ಇಬ್ರಾಹಿಂ ಝಹುರಿ ಶಾಂತಿನಡಿ, ಆದಂ ಕುಂಞಿ ಅಡಿಲ್, ಮಹಮ್ಮದ್‌ ಮಗಿರೆ, ಸವಾದ್ ಬದ್ರಿಯಾನಗರ, ಪಳ್ಳಿಚ್ಚ ಕಡ್ತಿಮಾರ್, ಹಾಗೂ ಮೂಸಾ ಮುಸ್ಲಿಯಾರ್ ಶಾಂತಿನಡಿಯವರನ್ನು ಆಯ್ಕೆ ಮಾಡಲಾಯಿತು.

ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-29 15:04:31 |

Share: | | | | |


ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರಿನ ಜನತೆಯ ಆಶೀರ್ವಾದದಿಂದ ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾದಲ್ಲಿ ಶಾಸಕನಾದವನಿಗೆ ಸಿಗುವ ಸರಕರಿ ವೇತನ ಹಾಗೂ ಎಲ್ಲಾ ಭತ್ಯೆಯನ್ನು ತಾನು ಸಮಾಜ ಸೇವೆಗೆ ಬಳಸುತ್ತೇನೆ, ಜನರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದರಿಂದ ನನಗೆ ಸಿಗುವ ಆ ಮೊತ್ತವನ್ನು ಜನರಿಗೆ ಬಳಸುತ್ತೇನೆ, ಬಡವರಿಗಾಗಿಯೇ ಖರ್ಚು ಮಾಡುತ್ತೇನೆ ಅದರಲ್ಲಿ ಒಂದು ರುಪಾಯಿಯನ್ನೂ ತನ್ನ ಸ್ವಂತ ಬಳಕೆಗೆ ಬಳಸುವುದೇ ಇಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.



Leave a Comment: