ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ಯುರೋಪ್‌ನಲ್ಲಿ ಚಾಲಕ ಹುದ್ದೆ: ಅರ್ಜಿ ಆಹ್ವಾನ

Posted by Vidyamaana on 2023-06-05 10:32:59 |

Share: | | | | |


ಯುರೋಪ್‌ನಲ್ಲಿ ಚಾಲಕ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು, ಜೂ.3: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್‌ ದೇಶದಲ್ಲಿ ಡ್ರೈವರ್‌ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವ‌ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಭಾರೀ ಟ್ರಕ್‌ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಜೂ.11ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬಹುದು.


ಜೂ.20 ಹಾಗೂ 21ರಂದು ನೇರ ಸಂದರ್ಶನ ನಡೆಯಲಿದೆ. ಮೂಲವೇತನ ಪ್ರತಿ ತಿಂಗಳಿಗೆ 1,07,000 ರೂ.ಗಳಿಂದ 1,34,000 ರೂ. (1200-1500 ಯುರೋಗಳು) ನೀಡಲಾಗುವುದು. ವಸತಿ, ವಿಮೆ ಇತ್ಯಾದಿ ಸವಲತ್ತಿನೊಂದಿಗೆ ಅಭ್ಯರ್ಥಿಗಳಿಗೆ ಸಮಾನ ಅವಕಾಶ ನೀಡಲಾಗುವುದು. ಇಂಗ್ಲಿಷ್ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಲಹೆಗಾರ ಮೊ.ಸಂ: 91102 4845/9141584259ನು ಸಂರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ಹಬ್ಬಕ್ಕೆ ಚಾಲನೆ

Posted by Vidyamaana on 2023-10-16 21:51:33 |

Share: | | | | |


ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ಹಬ್ಬಕ್ಕೆ ಚಾಲನೆ

ಪುತ್ತೂರು: ಪರಂಪರೆಯ ಆಭರಣಗಳಿಗೆ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನವರಾತ್ರಿ ಪ್ರಯುಕ್ತ ಸ್ವರ್ಣ ಹಬ್ಬವನ್ನು ಗ್ರಾಹಕರ ಮುಂದಿಟ್ಟಿದೆ.

ಅಕ್ಟೋಬರ್ 15ರಿಂದ 24ರವರೆಗೆ ಪುತ್ತೂರಿನ ಮುಖ್ಯರಸ್ತೆಯ ಆಚಾರ್ಯ ಕಾಂಪ್ಲೆಕ್ಸ್‌ನಲ್ಲಿರುವ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ನಡೆಯಲಿರುವ ಸ್ವರ್ಣ ಹಬ್ಬದಲ್ಲಿ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಲಾಗಿದೆ.

ಕಳೆದ 66 ವರ್ಷಗಳಿಂದ ಸ್ವರ್ಣೋದ್ಯಮದಲ್ಲಿ ಹೊಸ ಛಾಪು ಮೂಡಿಸಿರುವ ಜಿ.ಎಲ್. ಜ್ಯುವೆಲ್ಲರ್ಸ್, ಚಿನ್ನಾಭರಣ ಪ್ರಿಯರ ಮನೆಮಾತಾಗಿದೆ. ಇದೀಗ ಸ್ವರ್ಣ ಹಬ್ಬದ ಮೂಲಕ ಮತ್ತೆ ಗ್ರಾಹಕರಿಗೆ ಹೊಸ ಉಡುಗೊರೆಗಳನ್ನು ನೀಡಲು ಮುಂದಾಗಿದೆ.

ಬಂಗಾರದ ಚೈನ್ ಖರೀದಿಗೆ VA 6%ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ ಖರೀದಿಗೆ VA 15% ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ ಆರಂಭ. ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ ಋತುವಿನಲ್ಲಿ ಚಿನ್ನಭರಣಗಳನ್ನು ಖರೀದಿಸಿ 9 ಚಿನ್ನದ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶ ನೀಡಲಾಗಿದೆ. ಇದರೊಂದಿಗೆ ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪಡೆಯುವ ಅವಕಾಶವಿದೆ.

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ಧವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡ ಲಭ್ಯವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಹಾಗೂ ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Posted by Vidyamaana on 2024-04-22 10:48:39 |

Share: | | | | |


ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ

ಜಾಗದ ತಕರಾರು - ಹೆತ್ತವರ ಮೇಲೆಯೇ ಕೆತ್ತಿ ಬೀಸಿದ ಕುಡುಕ ಮಗ

Posted by Vidyamaana on 2023-11-21 08:33:43 |

Share: | | | | |


ಜಾಗದ ತಕರಾರು - ಹೆತ್ತವರ ಮೇಲೆಯೇ ಕೆತ್ತಿ ಬೀಸಿದ ಕುಡುಕ ಮಗ

ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.


ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ.


ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲಗುಡ್ಡೆ ಕೊಡಿಯಾಲ ಎಂಬಲ್ಲಿ ಮಂಜುನಾಥ್ ಮತ್ತು ಪತ್ನಿಗೆ ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದು ಕೊಲೆಯತ್ನ ಮಾಡಿದ್ದು, ಕಂಠಪೂರ್ತಿ ಕುಡಿದ ಪುತ್ರ ಜಮೀನು ವಿಚಾರವಾಗಿ ತಂದೆ, ತಾಯಿ ಮೇಲೆ ಹಲ್ಲೆ ನಡೆಸಿದ್ದಾನ್ನೆಲಾಗಿದೆ.


ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಆರೋಪಿಯನ್ನು  ಪೊಲೀಸರು  ಬಂಧಿಸಿದ್ದಾರೆ .

ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

Posted by Vidyamaana on 2024-05-01 15:56:14 |

Share: | | | | |


ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

ಪುತ್ತೂರು :ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭಗೊಂಡಿದೆ.

ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಡಿಪ್ಲೋಮಾ ಇನ್ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಡಿಪ್ಲೋಮಾ ಇನ್ ಆಪ್ತಲ್ಮಿಕ್ ಟೆಕ್ನಾಲಜಿ ಹಾಗೂ ಬಿ ಎಸ್ಸಿ  ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಬಿ ಎಸ್ಸಿ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಬಿಎಸ್ಸಿ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ, ಬಿಎಸ್ಸಿ ಎಮರ್ಜೆನ್ಸಿ ಅಂಡ್ ಟ್ರಾಮಾ ಕೇರ್ ಕೋರ್ಸ್ ಗಳಿಗೆ 2024 -25 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ.

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

Posted by Vidyamaana on 2023-06-20 10:36:15 |

Share: | | | | |


15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ.ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.

ಬೆಂಗಳೂರಿನವರಾದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ.



Leave a Comment: