ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

Posted by Vidyamaana on 2023-10-20 18:37:44 |

Share: | | | | |


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ ನೇಣಿಗೆ ಶರಣು

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.


ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.


ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.


ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು ಎಂದು ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.


ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು,ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.


ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದಾಖಲಿಸಿಕೊಂಡಿದ್ದಾರೆ.

ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 12:26:40 |

Share: | | | | |


ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಸತ್ಯ,‌ನ್ಯಾಯಕ್ಕೆ ಎಂದೆಂದೂ ಸಾವಿಲ್ಲ, ಯಾರೇ ಆಗಲಿ ಅನ್ಯಾಯ ಮಾಡಿದರೆ ಅದರ ಶಾಪ ತಟ್ಟಿಯೇ ತಟ್ಟುತ್ತದೆ ಎಂಬುದಕ್ಕೆ ಪುತ್ತೂರಿನ ಬಿಜೆಪಿಯೇ ಸಾಕ್ಷಿಯಾಗಿದೆ, ಪುತ್ತೂರು ಬಿಜೆಪಿಗೆ ಬಡವನ ಶಾಪ ತಟ್ಟಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಪುಣಚಾದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. 

ಗೋರಕ್ಷಣೆ ಹೆಸರಿನಲ್ಲಿ ಅಮಾಯಕರ ಮೇಲೆ ನಡೆದ ಹಲ್ಲೆ, ಅವಮಾನ ಅದು ಶಾಪವಾಗಿ ತಟ್ಟಿದೆ. ಸಾಕಲು ಕೊಂಡೊಯ್ಯುವ ದನವನ್ನು ತಡೆದು ಹಲ್ಲೆ ನಡೆಸಿ ಅವರ ಕುಟುಂಬದ ಕಣ್ಣೀರು ಸುರಿಸಿದ್ದ ಬಿಜೆಪಿ ಇಂದು ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಹಿಂದುತ್ವ ಹೆಸರಿನಲ್ಲಿ ಅದೆಷ್ಟು‌ಮಂದಿಗೆ ಇವರು ಹಲ್ಲೆ ನಡೆಸಿದ್ದಾರೆ ಎಂಬುದನ್ನು ಮೆಲುಕು ಹಾಕಲಿ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಪುತ್ತೂರು ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸಿ ಕಾಂಗ್ರೆಸ್  ಪ್ರಣಾಳಿಕೆಯನ್ನು ಬಿಡುಗಡೆ‌ಮಾಡಿದೆ. ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್ ಮೃತ್ಯು

Posted by Vidyamaana on 2023-10-11 14:18:27 |

Share: | | | | |


ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್  ಮೃತ್ಯು

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.



ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್ ನಲ್ಲಿ ನಿವಾಸಿ ಅಝ್ವೀನ್ (21)ಎಂದು ಗುರುತಿಸಲಾಗಿದೆ.


ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ

ರಾಜ್ಯ ರಾಜಕೀಯದಲ್ಲೊಂದು ಅಚ್ಚರಿಯ ಬೆಳವಣಿಗೆ

Posted by Vidyamaana on 2023-06-01 15:32:42 |

Share: | | | | |


ರಾಜ್ಯ ರಾಜಕೀಯದಲ್ಲೊಂದು ಅಚ್ಚರಿಯ ಬೆಳವಣಿಗೆ

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿ ಕುತೂಹಲ ಸೃಷ್ಟಿಸಿದ್ದಾರೆ.

ಗುರುವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ತಮ್ಮ ನಿವಾಸಕ್ಕೆ ಆಗಮಿಸಿದ ಶಿವಕುಮಾರ್ ಅವರನ್ನು ಗೇಟ್ ಬಳಿ ಬಂದು ಹೂಗುಚ್ಛ ನೀಡಿದ ಬಿ.ಎಸ್.ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಎಸ್‍ವೈ ಅವರಿಗೆ ಹೂಗುಚ್ಛ ನೀಡಿ ಗೌರವ ಸಲ್ಲಿಸಿದರು.

ಆ ಬಳಿಕ ಬಿಎಸ್‍ವೈ ಅವರ ನಿವಾಸದ ಒಳಗೆ ತೆರಳಿದ ಉಭಯ ನಾಯಕರು ಕೆಲಕಾಲ ಸಮಾಲೋಚನೆ ನಡೆಸಿದ್ದು, ಇಂದೊಂದು ಸೌರ್ಜನ್ಯ ಭೇಟಿ ಎಂದು ಹೇಳಲಾಗಿದೆ.

ಮಾ 28: ಮುಸ್ಲಿಂ ಸಮುದಾಯದ ಮೀಸಲಾತಿ ರದ್ಧತಿಯ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ

Posted by Vidyamaana on 2023-03-27 11:28:49 |

Share: | | | | |


ಮಾ 28: ಮುಸ್ಲಿಂ ಸಮುದಾಯದ ಮೀಸಲಾತಿ ರದ್ಧತಿಯ ವಿರುದ್ಧ  ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರು,-ಮುಸ್ಲಿಂ ಸಮುದಾಯದ  2ಬಿ ಮೀಸಲಾತಿಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ  ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ 28 ರಂದು ಮಿನಿ ವಿಧಾನಸೌದ ಬಳಿ  ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ.ಮುಖ್ಯ ಅತಿಥಿಯಾಗಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಖಾನ್ ಭಾಗವಹಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

Posted by Vidyamaana on 2023-05-13 17:05:46 |

Share: | | | | |


ಸೋಲಿನ ಹೊಣೆ ಹೊತ್ತ ಮುಖ್ಯಮಂತ್ರಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.



Leave a Comment: