ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಡಿವಿ ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ

Posted by Vidyamaana on 2023-05-15 09:36:04 |

Share: | | | | |


ಡಿವಿ ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ‌ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು.

ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ ಅಶಾಂತಿಯ ವಾತಾವರಣಕ್ಕೆ ಇತಿಶ್ರೀ ಹಾಕಿದವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಶಾಂತಿಯ ವಾತಾವರಣಕ್ಕೆ ಕಡಿವಾಣ ಹಾಕಿದವರು. 

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಮುಖರಾದ ಆಶಾ ತಿಮ್ಮಪ್ಪ, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ವಿದ್ಯಾ ಆರ್. ಗೌರಿ, ಲೊಕೇಶ್ ಹೆಗ್ಡೆ, ಉಷಾ ಮುಳಿಯ ಉಪಸ್ಥಿತರಿದ್ದರು.

ಅಧಿಕಾರದಲ್ಲಿದ್ದಾಗಲೂ ಪ್ರತಿಭಟನೆ, ಈಗಲೂ ಪ್ರತಿಭಟನೆ ಬಿಜೆಪಿ ಕಾಯಕ : ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಇದನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಇಂಥಹ ನೀಚ‌ಕೃತ್ಯಕ್ಕೆ ಕೈ ಹಾಕುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ಅಶೋಕ್ ರೈ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದರು.


ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದನೆ

Posted by Vidyamaana on 2023-12-20 16:48:10 |

Share: | | | | |


ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದನೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.


ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್ ಪಡ್ನರು ಮತ್ತಿತರರು ಉಪಸ್ಥಿತರಿದ್ದರು.

ಮೂಡುಬಿದಿರೆ: ಅಕ್ಕನ ಗಂಡನಿಂದಲೇ ಕೊಲೆ

Posted by Vidyamaana on 2023-05-11 08:23:14 |

Share: | | | | |


ಮೂಡುಬಿದಿರೆ: ಅಕ್ಕನ ಗಂಡನಿಂದಲೇ ಕೊಲೆ

ಮೂಡುಬಿದಿರೆ: ಅಕ್ಕನ ಗಂಡನೇ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಮೇ. 11 ರ ಗುರುವಾರ ಬೆಳಗ್ಗೆ ಪುರಸಭಾ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ಸಂಭವಿಸಿದೆ.ಗಂಟಾಲ್ಕಟ್ಟೆ ನಿವಾಸಿ ಮಹಮ್ಮದ್ ಜಮಾಲ್ (40) ಮೃತಪಟ್ಟ ವ್ಯಕ್ತಿಯಾಗಿದ್ದು, ಕೊಲೆ ಮಾಡಿದ ಆರೋಪಿ ಸುಹೈಬ್ ನನ್ನು ಬಂಧಿಸಲಾಗಿದೆ.

ಮಹಮ್ಮದ್ ಜಮಾಲ್ ಅವರ ಅಕ್ಕನ ಗಂಡ ಮಹಮ್ಮದ್ ಸುಹೈಬ್ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಕಾರಣ ತಿಳಿದು ಬಂದಿಲ್ಲ.

ಮೂಲತ: ಚಿಕ್ಕಮಗಳೂರಿನವನಾದ ಸುಹೈಬ್ ಗಂಟಾಲ್ಕಟ್ಟೆಯಲ್ಲಿ ಜಮಾಲ್ ಮನೆಯ ಹತ್ತಿರವೇ ವಾಸವಾಗಿದ್ದು ಕ್ಷುಲ್ಲಕ ಕಾರಣದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.ಮೂಡುಬಿದಿರೆ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆದಿದೆ.

ಬೆಳ್ತಂಗಡಿಯಲ್ಲಿ ಭಾರೀ ಮಳೆ: ಇಂದು ಬೆಳ್ತಂಗಡಿ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ

Posted by Vidyamaana on 2024-07-04 07:33:08 |

Share: | | | | |


ಬೆಳ್ತಂಗಡಿಯಲ್ಲಿ ಭಾರೀ ಮಳೆ: ಇಂದು ಬೆಳ್ತಂಗಡಿ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4 ರ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

Posted by Vidyamaana on 2023-09-29 20:51:37 |

Share: | | | | |


ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

ಉಳ್ಳಾಲ: ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. 


ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಬರ್, ಅಶೋಕ್,  ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮಾಲ್​ನಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಅಶ್ವಥ್ ನಾರಾಯಣ್ ಪೊಲೀಸ್ ವಶಕ್ಕೆ

Posted by Vidyamaana on 2023-11-01 13:18:22 |

Share: | | | | |


ಮಾಲ್​ನಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಅಶ್ವಥ್ ನಾರಾಯಣ್ ಪೊಲೀಸ್ ವಶಕ್ಕೆ

ಬೆಂಗಳೂರು : ನಗರದ ಮಾಲ್​ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮಿ ವ್ಯಕ್ತಿಯ ಬಂಧನವಾಗಿದೆ. ಬಂಧಿತ ನಿವೃತ್ತ ಶಿಕ್ಷಕ ಎಂದು ತಿಳಿದು ಬಂದಿದೆ. ವ್ಯಕ್ತಿಯನ್ನು ಬಸವೇಶ್ವರ ನಗರದ ಅಶ್ವಥ್ ನಾರಾಯಣ್ ಎಂದು ಗುರುತಿಸಲಾಗಿದೆ. ಆರೋಪಿ ಅಶ್ವಥ್ ನಾರಾಯಣ್ ವಾಸವಿದ್ದ ಮನೆಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದನು.ಇದೀಗ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಪ್ರತಿಷ್ಠಿತ ಮಾಲ್​ ನಲ್ಲಿ ಲೈಂಗಿಕ ಕಿರುಕುಳ (Sexual harassment) ನೀಡಿರುವ ವಿಡಿಯೋ ವೈರಲ್ (Viral Video) ಆಗಿತ್ತು. ಯಶವಂತ್ ಎಂಬ ಯುವಕ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ರು. 


ಅಕ್ಟೋಬರ್ 29ರ ಭಾನುವಾರ ಸಂಜೆ ಸುಮಾರು 6.30ರ ವೇಳೆಗೆ ಬೆಂಗಳೂರಿನ ಲೂಲು ಮಾಲ್​ನಲ್ಲಿ ಈ ಘಟನೆ ನಡೆದಿತ್ತು.



Leave a Comment: