ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

Posted by Vidyamaana on 2024-04-29 20:10:54 |

Share: | | | | |


BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.

BREAKING NEWS: ರಾಹುಲ್ ಗಾಂಧಿ ಬಿಟ್ಟುಕೊಟ್ಟ ಲೋಕಸಭಾ ಕ್ಷೇತ್ರ ಯಾವುದು ಗೊತ್ತಾ!!

Posted by Vidyamaana on 2024-06-17 20:02:28 |

Share: | | | | |


BREAKING NEWS: ರಾಹುಲ್ ಗಾಂಧಿ ಬಿಟ್ಟುಕೊಟ್ಟ ಲೋಕಸಭಾ ಕ್ಷೇತ್ರ ಯಾವುದು ಗೊತ್ತಾ!!

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು  ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟುಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿ ಕೊಳ್ಳಲಿದ್ದಾರೆ  ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ.

ರಂಚಿತಾ ಆತ್ಮಹತ್ಯೆ

Posted by Vidyamaana on 2024-03-20 19:44:20 |

Share: | | | | |


ರಂಚಿತಾ ಆತ್ಮಹತ್ಯೆ

ಹೊಳಲ್ಕೆರೆ: ಬೆಟ್ಟಿಂಗ್ ದಂಧೆ ಮೋಸಕ್ಕೆ ಸಿಲುಕಿದ್ದ ಗಂಡನಿಗೆ ಸಾಲಗಾರರು ನೀಡುತ್ತಿದ್ದ ಹಿಂಸೆಗೆ ಬೇಸತ್ತು ಪತ್ನಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.ಪಟ್ಟಣದಲ್ಲಿ ಶಿವಮೊಗ್ಗ ರಸ್ತೆಯ ಬಸವ ಲೇಔಟ್ ನಿವಾಸಿ ರಂಚಿತಾ (23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಬೆಟ್ಟಿಂಗ್ ದಂಧೆಗೆ ಪ್ರೇರಣೆ ನೀಡಿ ಸಾಲ ಕೊಟ್ಟವರ ಕಾಟ ದಿನದಿಂದ ದಿನಕ್ಕೆ ಹೆಚ್ಚಾದ ಹಿನ್ನಲೆಯಲ್ಲಿ ತೀವ್ರ ಮನನೊಂದ ಮಗಳು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ರಂಚಿತಾ ತಂದೆ ವೆಂಕಟೇಶ್ ಅವರು ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಂಚಿತಾ ಐದು ವರ್ಷಗಳ ಹಿಂದೆ ಪಟ್ಟಣದ ಮುಖಂಡ ಬಾಲು ಪ್ರಕಾಶ ಹಾಗೂ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಚಂದ್ರಕಲಾ ದಂಪತಿಯ ಪುತ್ರನಾದ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ದರ್ಶನ್ ಬಾಲು ನನ್ನು ವಿವಾಹವಾಗಿದ್ದು, ನಾಲ್ಕು ವರ್ಷ ಗಂಡು ಮಗುವಿದೆ.

ಹೊಳಲ್ಕೆರೆ ಪಟ್ಟಣದ ನಿವಾಸಿಗಳಾದ ಗಿರೀಶ್, ರಾಘು, ಚಿತ್ರದುರ್ಗ ಸುದೀಪ್, ತಿಪ್ಪೇಸ್ವಾಮಿ, ವೆಂಕಟೇಶ್, ಗುರು, ವಾಗೀಶ್, ರಾಕೇಶ್, ಪಾವಗಡದ ಪೊತರೆಡ್ಡಿ, ಅಜ್ಜಂಪುರ ಕಂಟ್ರಾಕ್ಟರ್ ಹೊನ್ನಪ್ಪ, ಹಿರಿಯೂರು  ಮಹಾಂತೇಶ್, ಕಂಟ್ರಾಕ್ಟರ್ ಜಗನ್ನಾಥಶಿರಾ ಮತ್ತಿತರರು ಆಳಿಯ ದರ್ಶನ್ ಇವರಿಗೆ ಐಪಿಎಲ್ ಬೆಟ್ಟಿಂಗ್ ನಿಂದ ಕೋಟಿ ಕೋಟಿ ಸಂಪಾದಿಸಬಹುದು ಎಂದು ಪುಸಲಾಯಿಸಿದ್ದು, ಹಣವಿಲ್ಲ ಎಂದು ಹೇಳಿದರೂ ಖಾಲಿ ಚೆಕ್ ಪಡೆದು ಬೆಟ್ಟಿಂಗ್ ಗೆ ಹಣ ಕಟ್ಟಿಸಿದ್ದಾರೆ. ದಂಧೆಯಲ್ಲಿ ಸೊಲಾದ ಬಳಿಕ ಹಣಕೊಡದಿದ್ದರೆ ಚೆಕ್ ಗಳನ್ನು ಕೋರ್ಟಿಗೆ ಹಾಕಿ ಜೈಲಿಗೆ ಕಳುಸಿವುದಾಗಿ ಬೇದರಿಸಿದ್ದಾರೆ. ಹಣವನ್ನು ದರ್ಶನ್ ತಂದೆ ಪ್ರಕಾಶ್ ಅವರು ತೀರಿಸುವ ಭರವಸೆ ನೀಡಿದ್ದರೂ, ಪದೆಪದೆ ಮನೆಗೆ ಪೋನ್ ಮಾಡಿ, ಬೆದರಿಕೆ ಹಾಕಿ, ಮಾನಸಿಕ ಕಿರಿಕುಳ, ಹಿಂಸೆ ನೀಡಿದ್ದು, ಇದನ್ನು ಸಹಿಸಿಕೊಳ್ಳದೆ ಮಗಳು ರಂಚಿತಾ ಸೋಮವಾರ ಸಂಜೆ ಮನೆಯಲ್ಲಿ ನೇಣುಹಾಕಿಕೊಂಡಿದ್ದಾಳೆ. ನಾವು ತತ್ ಕ್ಷಣವೇ ನೋಡಿ ಅಸ್ಪತ್ಸೆಗೆ ಕರೆದುಕೊಂಡು ಹೋದರೂ ಫಲಕಾರಿಯಾಗಿಲ್ಲ. ನಮ್ಮ ಮಗಳ ಸಾವಿಗೆ ಬೆಟ್ಟಿಂಗ್ ದಂಧೆದಾರರೆ ಕಾರಣವಾಗಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಂಚಿತಾ ತಂದೆ ವೆಂಕಟೇಶ್ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಶಿವ ಮತ್ತು ಗಿರೀಶ್ ಎಂಬವರನ್ನು ಬಂಧಿಸಲಾಗಿದೆ ಎಂದು ಪಿಎಸ್‌ಐ ಸುರೇಶ್ ತಿಳಿಸಿದ್ದಾರೆ.

ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-28 20:22:05 |

Share: | | | | |


ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್

ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು.


ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿದ್ದಾರೆ. ಇದರಲ್ಲಿ ಬಂದರು, ಏರ್ ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್. ಹೀಗೆ ಅನೇಕ ಯೋಜನೆಗಳು ಜಿಲ್ಲೆಗೆ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ನಾಯಕರು ಕಾರಣ. ನಂತರದ ಮೂವತ್ತ ಮೂರು ವರ್ಷದಲ್ಲಿ ಬಿಜೆಪಿ ನಾಯಕರು ಏನು ಮಾಡಿದ್ದಾರೆ ಎನ್ನುವುದು ನಿಮಗೆ ತಿಳಿದಿದೆ.



ಭಕ್ತ ಸಾಗರದ ನಡುವೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಚಂಪಾ ಷಷ್ಠಿಯ ಮಹಾರಥೋತ್ಸವ ಸಂಪನ್ನ

Posted by Vidyamaana on 2023-12-19 09:11:21 |

Share: | | | | |


ಭಕ್ತ ಸಾಗರದ ನಡುವೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಚಂಪಾ ಷಷ್ಠಿಯ ಮಹಾರಥೋತ್ಸವ ಸಂಪನ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನಗೊಂಡಿದೆ. ಮುಂಜಾನೆ 7.33 ರ ಧನುರ್ ಲಗ್ನದ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು.ನಾಗಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವದ ಸಂಭ್ರಮದಲ್ಲಿ ಭಕ್ತಿಯ ಪರಾಕಾಷ್ಟೆ ಮುಗಿಲು ಮುಟ್ಟಿತ್ತು, ಎಲ್ಲರ ಬಾಯಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಜೈಕಾರ ಮೊಳಗುತ್ತಿತ್ತು. ಭಕ್ತರ ಸಾಗರವೇ ಕುಕ್ಕೆ ಸುಬ್ರಹ್ಮಣ್ಯನ ಆರಾಧನೆಯಲ್ಲಿ ಮುಳುಗಿರುವ ದೃಶ್ಯಗಳು ಕಂಡುಬಂದಿದೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವ ಸಂಪನ್ನಗೊಂಡಿದೆ. ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ.ಚೌತಿ, ಪಂಚಮಿ ಹಾಗೂ ಷಷ್ಠಿಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ. ಇಲ್ಲಿ ನಡೆಯುವ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ವಿಶಿಷ್ಟ ಮಹತ್ವವೂ ಇದೆ. ರಾಜ್ಯದ ಅತ್ಯಂತ ದೊಡ್ಡ ರಥಗಳಲ್ಲಿ ಸುಬ್ರಹ್ಮಣ್ಯ ರಥವೂ ಒಂದಾಗಿದೆ.ಚಂಪಾ ಷಷ್ಠಿಯ ದಿನದಂದು ಈ ರಥೋತ್ಸವ ನಡೆಯುತ್ತಿದ್ದು, ಈ ಬಾರಿ ಧನುರ್ ಲಗ್ನದ 7.33 ರ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ದೇವಸ್ಥಾನದ ಪ್ರಾಂಗಣದಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಬಳಿಕ ಮೊದಲಿಗೆ ಪಂಚಮಿ ರಥದಲ್ಲಿ ಉ.ಮಾಮಹೇಶ್ವರ ದೇವರ ರಥೋತ್ಸವ ನಡೆದರೆ, ಬಳಿಕ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತದೆ. ರಥೋತ್ಸವ ನಡೆಯುವ ಸಂದರ್ಭದಲ್ಲಿ ಭಕ್ತಾಧಿಗಳು ರಥದ ಮೇಲೆ ಹೆಸರು ಕಾಳು, ಸಾಸಿವೆ ಕಾಳು ಮೊದಲಾದ ಪದಾರ್ಥಗಳನ್ನು ಎಸೆಯುವ ಮೂಲಕ ತಮ್ಮ ಹರಕೆಯನ್ನು ತೀರಿಸುವ ಸಂಪ್ರದಾಯವೂ ಇಲ್ಲಿದೆ.ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುವ ಈ ಜಾತ್ರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ದೇಶ ಹಾಗೂ ವಿದೇಶಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ. ಮೊದಲ ಬಾರಿಗೆ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ ನೋಡಿದ ಭಕ್ತಾಧಿಗಳಿಗೆ ಜೀವನದಲ್ಲಿ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದ ಅನುಭವನ್ನು ಪಡೆಯುತ್ತಾರೆ. ಸುಬ್ರಹ್ಮಣ್ಯ ಸ್ವಾಮಿಯ ವಿವಾಹದ ದ್ಯೂತಕವಾಗಿ ಸ್ವಾಮಿಗೆ ಈ ರಥೋತ್ಸವನ್ನು ನಡೆಸಲಾಗುತ್ತದೆ.ರಥವನ್ನು ಇಲ್ಲಿ ಹಗ್ಗದ ಬದಲು ಬಿದಿರಿನಿಂದಲೇ ಎಳೆಯಲಾಗುತ್ತದೆ. ಹೀಗೆ ಎಳೆದ ಬಿದಿರನ್ನು ರಥೋತ್ಸವದ ಬಳಿಕ ಭಕ್ತಾಧಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತದೆ. ಈ ಬಿದಿರನ್ನು ಮನೆಯಲ್ಲಿ ಇರಿಸಿದಲ್ಲಿ ನಾಗದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ. ಈ ಬಾರಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ.

ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

Posted by Vidyamaana on 2023-04-27 16:59:09 |

Share: | | | | |


ಫೀಲ್ಡಿಗಿಳಿದ ಅಶೋಕ್ ರೈ ಪತ್ನಿ

ಪುತ್ತೂರು: ತಳಮಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಚಾರ ಕಾರ್ಯ ನಡೆಸುತ್ತಿರುವ ನಡುವೆ, ಅವರ ಪತ್ನಿ ಸುಮಾ ಅಶೋಕ್ ಕುಮಾರ್ ರೈ ಅವರೂ ಫೀಲ್ಡಿಗೆ ಇಳಿದಿದ್ದಾರೆ.



Leave a Comment: