ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಈ ಘಟನೆ ದುಬೈನಲ್ಲಿ ಆಗ್ತಿದ್ರೆ ಕಥೆನೇ ಬೇರೆ ಇತ್ತು – ಕೊಲೆಗಾರನಿಗೆ ಮರಣ ದಂಡನೆಯಾಗ್ಬೇಕು

Posted by Vidyamaana on 2023-08-27 01:52:31 |

Share: | | | | |


ಈ ಘಟನೆ ದುಬೈನಲ್ಲಿ ಆಗ್ತಿದ್ರೆ ಕಥೆನೇ ಬೇರೆ ಇತ್ತು – ಕೊಲೆಗಾರನಿಗೆ ಮರಣ ದಂಡನೆಯಾಗ್ಬೇಕು

ಪುತ್ತೂರು: ದೇಶದಲ್ಲಿ ಕಾನೂನು ಕಠಿಣವಾಗಬೇಕಾದ ಅವಶ್ಯಕತೆಯಿದ್ದು ದುಬೈ ಮಾದರಿಯ ಕಾನೂನು ಇಲ್ಲಿ ಜಾರಿಗೆ ಬರಬೇಕಾದ ಅನಿವಾರ್ಯತೆಯಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎರಡು ದಿನಗಳ ಹಿಂದೆ ಪುತ್ತೂರಿನಲ್ಲಿ ಪದ್ಮರಾಜ ಎಂಬಾತನಿಂದ ಕೊಲೆಯಾದ ವಿಟ್ಲ ಕುದ್ದುಪದವು ಸಮೀಪದ ಗೌರಿ ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರುನಮ್ಮಲ್ಲಿ ನಡೆದಂತಹ ಘಟನೆ ದುಬೈಯಲ್ಲಿ

ನಡೆಯುತ್ತಿದ್ದರೆ ಒಂದು ವಾರದಲ್ಲಿ ಇಲ್ಲವೇ ಹತ್ತು

ವಿಧಿಸುತ್ತಿದ್ದರು. ಕೊಲೆಗಾರರಿಗೆ,

ದಿನದೊಳಗೆ ಅವರಿಗೆ ಮರಣ ದಂಡನೆ ಶಿಕ್ಷೆ ಅತ್ಯಾಚಾರಿಗಳಿಗೆ ಅದೇ ರೀತಿಯ ಶಿಕ್ಷೆ ಇಲ್ಲೂ ಜಾರಿಯಾಗಬೇಕು. ಅಂತಹ ಶಿಕ್ಷೆ ಜಾರಿಯಾದಾಗಲೇ ಇಂತಹ ದುಷ್ಟ ಕೃತ್ಯಗಳನ್ನು, ಸಮಾಜ ವಿದ್ರೋಹಿ ಕೆಲಸಗಳನ್ನು ಮಟ್ಟ ಹಾಕಲು ಸಾಧ್ಯ ಎಂದು ಅವರು ಹೇಳಿದರುಕಾನೂನಿನ ಭಯ ಇಲ್ಲದೆ ಇರುವುದೇ ಎಂದು ಅನೇಕ ಕೆಟ್ಟ ಚಟುವಟಿಕೆಗಳಿಗೆ ಕಾರಣವಾಗುತ್ತಿದೆ. ಕೊಲೆ ಮಾಡಿ ಜೈಲಿಗೆ ಹೋದವರು ವಾಪಸ್ ಬಂದು ರಾಜಾರೋಷವಾಗಿ ತಿರುಗಾಡುತ್ತಾರೆ. ಅವರಿಗೆ ಸಮಾಜದಲ್ಲಿ ವಿಶೇಷ ಗೌರವ ಸಿಗುವ ಕಾರ್ಯಗಳು ಕೆಲವು ನಡೆಯುತ್ತಿದೆ. ಹಾಗಾಗಿ ಇಂತಹ ಕೃತ್ಯ ಎಸಗಿದವರಿಗೆ ಮರಣ ದಂಡನೆ ಶಿಕ್ಷೆ ಆಗಬೇಕು ಎಂದು ಅಶೋಕ್ ರೈ ಹೇಳಿದರು.


ಆರೋಪಿಗೆ ಹೇಗಾದರೂ ಶಿಕ್ಷೆ ಕೊಡಿಸಲೇಬೇಕು, ಆತನನ್ನು ಬಿಟ್ರೆ ಇನ್ನೂ ಹೀಗೆಯೇ ಮಾಡುತ್ತಾನೆ. ಇಷ್ಟು ಸಣ್ಣ ಹುಡುಗಿ ಸತ್ತ ಮೇಲೆ ಆತನೂ ಹೋಗಬೇಕು ಎಂದು ಶಾಸಕರಿಗೆ ಮೃತ ಗೌರಿಯವರತಾಯಿ ಸೀತಾ ಅವರು ಮನವಿ ಸಲ್ಲಿಸಿದರು. ಈ ವೇಳೆ ಅವರಿಗೆ ಉತ್ತರಿಸಿದ ಶಾಸಕರು, ನಮಲ್ಲಿರುವುದು ಹಳೆಯ ಕಾನೂನು. ಕೊಲೆ ಮಾಡಿದವರು 6 ತಿಂಗಳಲ್ಲಿ ಹೊರಗೆ ಬರುತ್ತಾರೆ.ಹಾಗೆ ಬರುವಾಗ ಪದ್ಮರಾಜೆ ಎಂದಿರುವವನು ಪದ್ಮಣ್ಣೆ ಆಗುತ್ತಾನೆ. ಇದು ನಮ್ಮ ಜನರ ಪರಿಸ್ಥಿತಿ. ಇದು ಕಡಿಮೆಯಾಗಬೇಕು. ಒಂದೆರಡು ಜನರಿಗೆ ಮರಣದಂಡನೆ ಶಿಕ್ಷೆಯಾದರೆ ಇದೆಲ್ಲವೂ ನಿಲ್ಲುತ್ತದೆ. ಕೆಲವೊಂದು ಬೇರೆ ಕೇಸ್‌ಗಳಲ್ಲಿ ಶಿಕ್ಷೆ ಆಗಲು 15 ವರ್ಷ ಬೇಕಾಗುತ್ತದೆ. ಆದರೆ ಇಂತಹ ಕೇಸ್‌ಗಳಲ್ಲಿ 1 ವರ್ಷದ ಒಳಗೆ ಶಿಕ್ಷೆ  ನೀಡಿದರೆ ಕಾನೂನಿನ 

ಬಗ್ಗೆ ಭಯ ಬರುತ್ತದೆ. ಕಾನೂನು ಮಾಡುವುದು ನಾವೇ ಜನಪ್ರತಿನಿಧಿಗಳು, ಕಾನೂನು ಬದಲಾವಣೆ ಮಾಡುವ ಅವಶ್ಯ ಕತೆ ಇದೆ ಎಂದು ಶಾಸಕರು ಉತ್ತರಿಸಿದರು


ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಜಿ.ಪಂ. ಉಪಾಧ್ಯಕ್ಷ ಎಂ.ಎಸ್‌. ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಫಾರೂಕ್ ಪೆರ್ನೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ನಝೀರ್ ಮಠ, ಪುತ್ತೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಕಾಂಗ್ರೆಸ್‌ ಮುಖಂಡರಾದ ಪ್ರಹ್ಲಾದ್ ಬೆಳ್ಳಿಪ್ಪಾಡಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಡಿ.01 – 04 : ಕೊಂಬೆಟ್ಟು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ 17ರ ವಯೋಮಾನದವರ ಕ್ರೀಡಾಕೂಟ

Posted by Vidyamaana on 2023-11-30 17:54:30 |

Share: | | | | |


ಡಿ.01 – 04 : ಕೊಂಬೆಟ್ಟು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ 17ರ ವಯೋಮಾನದವರ ಕ್ರೀಡಾಕೂಟ

ಪುತ್ತೂರು: ಡಿ.1ರಿಂದ 4ರ ವರೆಗೆ ಪ್ರಥಮ ಬಾರಿಗೆ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 17ರ ವಯೋಮಾನದ ಕ್ರೀಡಾಕೂಟ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ರೀಡಾ ಕೂಟದ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಡಿ.1ರಂದು ಕ್ಷೇತ್ರದಾದ್ಯಂತ ಕ್ರೀಡಾ ಜ್ಯೋತಿ ಸಾಗಲಿದೆ. ಡಿ.2ರಂದು ದರ್ಬೆಯಲ್ಲಿ ಕ್ರೀಡಾ ಜ್ಯೋತಿ ಸಮಾಪನೆಗೊಳ್ಳಲಿದ್ದು, ದರ್ಬೆಯಿಂದ ಭವ್ಯ ಮೆರವಣಿಗೆ ಮೂಲಕ ಕ್ರೀಡಾ ಜ್ಯೋತಿಯನ್ನು ಕೊಂಬೆಟ್ಟು ಕ್ರೀಡಾಂಗಣಕ್ಕೆ ತರಲಾಗುವುದು. ಬಳಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಕ್ರೀಡಾಕೂಟವನ್ನು ಶಾಸಕ ಅಶೋಕ್ ರೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಡಿ.3 ಮತ್ತು 4ರಂದು ಕ್ರೀಡಾಕೂಟ ನಡೆಯಲಿದ್ದು, ಡಿ.4ರ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.



ಶಾಸಕರ ನೇತೃತ್ವದಲ್ಲೇ ಕ್ರೀಡಾ ಕೂಟ

ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕ್ರೀಡಾ ಕೂಟ ನಡೆಯಲಿದ್ದು, ಕ್ಷೇತ್ರದ ಎಲ್ಲಾ ಶಾಲೆಗಳು ,ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಿಗೂ ಕ್ರೀಡಾ ಜ್ಯೋತಿ ಸಂಚರಿಸಲಿದೆ.


ಹಸಿರುವಾಣಿ ಸಂಗ್ರಹ

ತಾಲೂಕಿನ ಹಾಗೂ ಹೊರ‌ತಾಲೂಕಿನ ಶಾಲೆಗಳಿಂದ ಹಸಿರುವಾಣಿ ಸಂಗ್ರಹ ನಡೆಯಲಿದೆ. ಕ್ರೀಡಾಪಟುಗಳಿಗೆ ಊಟೋಪಚಾರದ ವ್ಯವಸ್ಥೆಗಾಗಿ ಹಸಿರುವಾಣಿ ಯೋಜನೆ ಹಮ್ಮಿಕೊಳ್ಳಲಾಗಿದೆ.


36 ಜಿಲ್ಲೆಗಳ ವಿದ್ಯಾರ್ಥಿಗಳು ಭಾಗಿ

ರಾಜ್ಯದ 36 ಜಿಲ್ಲೆಗಳ ಕ್ರೀಡಾಳುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕ್ರೀಡಾಳುಗಳಿಗೆ ಊಟ, ವಸತಿ ಮತ್ತು ಇತರೆ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಮನಾಥ ಶೆಟ್ಟಿ‌ ತಿಳಿಸಿದ್ದಾರೆ.


ಕ್ಷೇತ್ರ ಶಿಕ್ಷಣಾಧಿಕಾರಿ ಲೇಕೋಶ್ ಎಸ್ ಆರ್ ಮಾತನಾಡಿ ಒಟ್ಟು 2500 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, ಜೊತೆಗೆ ಶಿಕ್ಷಕರೂ ಬರಲಿದ್ದಾರೆ. ಕ್ರೀಡಾಳು ವಿದ್ಯಾರ್ಥಿಗಳಿಗೆ ಸರ್ವ ವ್ಯವಸ್ಥೆಯನ್ನು ಮಾಡಲಾಗಿದೆ. ವಿವಿಧ ಜಿಲ್ಲೆಗಳ ಮಕ್ಕಳಿಗೆ ವಿವಿಧ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಶಾಸಕರ ಸಂಪೂರ್ಣ ಸಹಕಾರ ಕಾರ್ಯಕ್ರಮಕ್ಕೆ ಇರುವ ಕಾರಣ ನಾವು ಧೈರ್ಯವಾಗಿ ಈ ಕ್ರೀಡಾಕೂಟವನ್ನು ಒಪ್ಪಿಕೊಂಡಿದ್ದೇವೆ.

17 ವಿವಿಧ ಕ್ರೀಡೆಗಳು ನಡೆಯಲಿದೆ. ಆರೋಗ್ಯ ಇಲಾಖೆ, ಪೊಲೀಸ್ ಮತ್ತು ನಗರಸಭೆ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಶಿಕ್ಷಕ ಶಿಕ್ಷಕಿಯರು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.


ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಮಾತನಾಡಿ ಕ್ರೀಡಾಕೂಟಕ್ಕೆ 18 ವಿವಿಧ ಸಮಿತಿಗಳನ್ನು ಮಾಡಲಾಗಿದೆ. ಸಮಿತಿಗೆ ಮುಖ್ಯಸ್ಥರನ್ನು ನೇಮಿಸಲಾಗಿದೆ. ಕ್ರೀಡಾ ಕೂಟದ ಅಧಿಕಾರಿಗಳಿಗೂ ಮಾಹಿತಿ ಕಾರ್ಯಾಗಾರ ಮಾಡಲಾಗಿದೆ. 200ಕ್ಕೂ ಮಿಕ್ಕಿ ನಿರ್ಣಾಯಕರು ಭಾಗವಹಿಸಲಿದ್ದಾರೆ. ರಾಜ್ಯದ 36 ಜಿಲ್ಲೆಗಳ ಕ್ರೀಡಾಳುಗಳ ಪಥ ಸಂಚಲನ ನಡೆಯಲಿದೆ. ಕಾರ್ಯಕ್ರಮದಲ್ಲಿ‌ ಸಚಿವರುಗಳು‌ ಭಾಗವಹಿಸಲಿದ್ದು, 17 ಶಾಲೆಗಳ ಬ್ಯಾಂಡ್ ಸೆಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ಹೇಳಿದರು.


26 ಶಾಲಾ ಬಸ್ಸುಗಳ ಬಳಕೆ


ಕ್ರೀಡಾಳುಗಳ ಪ್ರಯಾಣಕ್ಕೆ 26 ಶಾಲಾ ಬಸ್ಸುಗಳನ್ನು ಬಳಸಲಾಗುತ್ತದೆ ಎಂದು ಸುಂದರ ಗೌಡ ತಿಳಿಸಿದರು. ಪ್ರಥಮ/ ದ್ಬಿತೀಯ ಸ್ಥಾನಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ. ತಾಲೂಕು ಕೇಂದ್ರದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಕ್ರಿಡಾಕೂಟ ನಡೆಯುತ್ತಿದೆ.‌ ಶಾಸಕ ಅಶೋಕ್ ರೈ ಮತ್ತು ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಅತ್ಯಂತ ವೈಭವದಿಂದ ಕ್ರೀಡಾಕೂಟ ನಡೆಯಲಿದೆ ಎಂದು ಸುಂದರ ಗೌಡ ತಿಳಿಸಿದರು.


ಮಣ್ಣಿನ‌ ಕ್ರೀಡಾಂಗಣದಲ್ಲಿ ಕ್ರೀಡಾಕೂಟ: ದಯಾನಂದ ರೈ ಕೊರ್ಮಂಡ

ಕೊಂಬೆಟ್ಟಿನ ಮಣ್ಣಿನ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ.‌ಈಗಾಗಲೇ ಕ್ರೀಡಾಂಗಣದಲ್ಲಿ ಸಿದ್ದತೆ ಕಾರ್ಯಗಳು ನಡೆಯುತ್ತಿದೆ. ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಈಗಾಗಲೇ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ದಯಾನಂದ ರೈ ಕೊರ್ಮಂಡ ತಿಳಿಸಿದರು.


ಆಯಾ ಜಿಲ್ಲೆಯವರಿಗೆ ಆಯಾ ಆಹಾರಗಳು

ರಾಜ್ಯದ ವಿವಿಧ ಜಿಲೆಗಳ‌ ಕ್ರೀಡಾಳುಗಳು ಭಾಗವಹಿಸುವ ಕಾರಣ ವಿವಿಧ ಬಗೆಯ ಆಹಾರದ ತಯಾರಿಕೆ ನಡೆಯಲಿದೆ. ರಾಗಿಮುದ್ದೆ,ಜೋಳದ ರೊಟ್ಟಿ ಯೂ ಆಹಾರದ ಪಟ್ಟಿಯಲ್ಲಿದೆ ಎಂದು ಕ್ರೀಡಾಕೂಟದ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು.

ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ, ಸ್ಥಿತಿ ಗಂಭೀರ

Posted by Vidyamaana on 2023-03-26 03:07:34 |

Share: | | | | |


ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ ಗೆ ಹಾವು ಕಡಿತ,  ಸ್ಥಿತಿ ಗಂಭೀರ

ಬೆಳ್ತಂಗಡಿ : ಮನೆಗೆ ಬಂದಿದ್ದ ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಳಿಯಲ್ಲಿ ಮಾ.25 ರಂದು ರಾತ್ರಿ ಸುಮಾರು 10 ಗಂಟೆ ವೇಳೆ ಮನೆಯಲ್ಲಿ ನಾಗರ ಹಾವು ಇರುವ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ರಕ್ಷಣೆ ಮಾಡಲು ಸ್ನೇಕ್ ಅಶೋಕ್ ಲಾಯಿಲ ಹಿಡಿಯುವಾಗ ಬಲ ಕಾಲಿಗೆ ನಾಗರ ಹಾವು ಕಚ್ಚಿದೆ.ಘಟನೆ ಬಳಿಕ ನೇರ ಉಜಿರೆ ಬೆನಕ ಆಸ್ಪತ್ರೆಗೆ ಬಂದಿದ್ದು ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ರವಾನಿಸಲು ಸೂಚಿಸಿದ್ದಾರೆ. ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬಂದು ಪ್ರಥಮ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಬಾ ಅಂಬುಲೆನ್ಸ್ ಚಾಲಕ ಜಲೀಲ್ ಮತ್ತು ಪತ್ರಕರ್ತ ಪ್ರತೀಕ್ ಕೋಟ್ಯಾನ್ ತಕ್ಷಣ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಕ್ ಅಶೋಕ್ ಅವರಿಗೆ ಈ ಮೊದಲು ನಾಗರ ಹಾವು ಕಚ್ಚಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಪ್ರಸಿದ್ಧ ಹಾವು ರಕ್ಷಕರಲ್ಲಿ ಸ್ನೇಕ್ ಅಶೋಕ್ ಲಾಯಿಲ ಒಬ್ಬರಾಗಿದ್ದಾರೆ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

Posted by Vidyamaana on 2023-03-27 07:30:32 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

ಪುತ್ತೂರು : ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿರುವ ವರುಣ ದೇವರವಿಗ್ರಹಕ್ಕೆಪೂಜೆಸಲ್ಲಿಸಲಾಯಿತುದೇವಸ್ಥಾನದ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿ ವರುಣ ದೇವರ ವಿಗ್ರಹವಿದ್ದು, ಕೆರೆಯಲ್ಲಿ ಸದಾ ನೀರು ತುಂಬಿರುವುದರಿಂದ ಅದು ಭಕ್ತರಿಗೆ ಕಾಣ ಸಿಗುವುದಿಲ್ಲ.

ಅಭಿವೃದ್ಧಿ ಕಾರ್ಯ ಹಿನ್ನೆಲೆ ಕೆರೆಯ ನೀರನ್ನು ಸ್ವಲ್ಪ ಮಟ್ಟಿಗೆ ತೆಗೆಯಲಾಗಿದ್ದು, ಈ ಹಿನ್ನೆಲೆ ಮಂಟಪದ ತಳಭಾಗದಲ್ಲಿರುವ ವರುಣ ದೇವರ ವಿಗ್ರಹವು ಎಲ್ಲರಿಗೂ ಕಾಣ ಸಿಗುತ್ತಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವಾಸ್ತುಶಿಲ್ಪಿ ಜಗನ್ನಿವಾಸ್ ರಾವ್, ಪ್ರಧಾನ ಅರ್ಚಕ ವಸಂತ ಕೆದಿಲಾಯ ರವರು ವಿಗ್ರಹಕ್ಕೆ ಪೂಜೆ ನೆರವೇರಿಸಿದರು.

ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ; ಆರ್. ಅಶೋಕ್

Posted by Vidyamaana on 2024-02-23 14:48:48 |

Share: | | | | |


ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ; ಆರ್. ಅಶೋಕ್

ಮಂಗಳೂರು: ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿಯ ವಿಪಕ್ಷ ನಾಯಕ ಆರ್. ಅಶೋಕ್, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದಾರೆ.


ಜ್ಞಾನವಾಪಿ ದೇವಸ್ಥಾನದ ಬಗ್ಗೆ ರಾಮನಗರದ ವಕೀಲರೊಬ್ಬರು ಅವಹೇಳನಕಾರಿ ಶಬ್ದ ಹಾಕಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ, ನಾನು ಕೂಡ ಗೃಹ ಸಚಿವನಾಗಿದ್ದೆ. ನೀವು ಮುಸ್ಲಿಮರಿಂದ ಒತ್ತಡ ಇದೆಯೆಂದು ಕ್ರಮ ಜರುಗಿಸದೇ ಇರಬಾರದು. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೂ ಗೂಂಡಾ ಕಾಯ್ದೆ ಹಾಕಿದ್ದೆ. ಒತ್ತಡ ಇದೆಯೆಂದು ಸುಮ್ಮನೆ ಬಿಡಲಿಲ್ಲ ಎಂದು ಹೇಳಿದ್ದೆ. ಇದರಿಂದ ಬಜರಂಗದಳ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ.


ನಾನು ಕೂಡ ಹತ್ತು ವರ್ಷ ಬಜರಂಗದಳ ಕಾರ್ಯಕರ್ತನಾಗಿದ್ದೆ. ಕ್ಷಮೆ ಕೇಳುವುದರಿಂದ ಯಾವುದೇ ವಿಷಾದನೂ ಇಲ್ಲ, ನೋವೂ ಇಲ್ಲ. ಬಜರಂಗದಳ ಕಾರ್ಯಕರ್ತರೂ ನಮ್ಮವರೇ. ಆದ್ದರಿಂದ ಈ ವಿಚಾರವನ್ನು ಇಲ್ಲಿಗೆ ಮುಕ್ತಾಯ ಮಾಡಿ ಎಂದು ಅಶೋಕ್ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕಿತ್ತು ಹಾಕಬೇಕೆಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಬಜರಂಗದಳ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದರು. ಅಲ್ಲದೆ, ವಿಶ್ವಹಿಂದು ಪರಿಷತ್, ಬಜರಂಗದಳ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಕ್ರಮಕ್ಕೆ ಆಗ್ರಹಿಸಿದ್ದರು.

ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

Posted by Vidyamaana on 2023-01-18 08:17:32 |

Share: | | | | |


ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ.

Recent News


Leave a Comment: