ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಕೊಪ್ಪಳ : ಅಂಧ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

Posted by Vidyamaana on 2023-12-06 16:40:37 |

Share: | | | | |


ಕೊಪ್ಪಳ : ಅಂಧ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿ ಇತ್ತೀಚೆಗೆ ರಾತ್ರಿ ಅಂಧ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್ಪಿ ಯಧೋಧಾ ವಂಟಗೋಡಿ ತಿಳಿಸಿದರು.ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಗಂಗಾವತಿಯಲ್ಲಿ ನ.25 ರಂದು ಬೆಳಗಿನ ಜಾವ ತನ್ನ ಮೇಲೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವೃದ್ದ ಮುಸ್ಲಿಂ ವ್ಯಕ್ತಿ ದೂರು ನೀಡಿದ್ದರು. ಇದೊಂದು ಸೂಕ್ಷ್ಮ ವಿಷಯವಾದ ಹಿನ್ನೆಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ವೇಳೆ ಸಾಗರ್ ಹಾಗೂ ನರಸಪ್ಪ ಎನ್ನುವ ಇಬ್ಬರು ವ್ಯಕ್ತಿಗಳು ವೃದ್ದನ ಮೇಲೆ ಹಲ್ಲೆ ಮಾಡಿದ್ದು ತಿಳಿದು ಬಂದಿದೆ ಎಂದು ಹೇಳಿದರು.ವೃದ್ದ ಹೊಸಪೇಟೆಯಿಂದ ಗಂಗಾವತಿ ನಗರಕ್ಕೆ ಬೆಳಗಿನ ಜಾವ ಆಗಮಿಸಿ ಆರೋಪಿತರ ಬಳಿ ಡ್ರಾಪ್ ಕೇಳಿದ್ದಾನೆ. ಡ್ರಾಪ್ ಮಾಡುವ ವೇಳೆ ಓರ್ವ ಆರೋಪಿ ನರಸಪ್ಪ ವೃದ್ದನ ಟೋಪಿ ಮುಟ್ಟಿದ್ದಾನೆ. ಈ ವೇಳೆ ವೃದ್ದನೂ ಅವರಿಗೆ ಬಿರುಸಾಗಿ ಮಾತನಾಡಿದ್ದಾನೆ. ಇಬ್ಬರು ಆರೋಪಿಗಳು ಆ ವೇಳೆ ಮದ್ಯ ಸೇವನೆ ಮಾಡಿದ್ದರಿಂದ ಕುಪಿತಗೊಂಡು ಸಿದ್ದಿಕೇರಿ ಸಮೀಪದ ರೈಲ್ವೆ ಸೇತುವೆ ಕೆಳಗೆ ವೃದ್ದನಿಗೆ ಹಲ್ಲೆ ಮಾಡಿ ಅಲ್ಲೆ ಬಿಟ್ಟು ಹೋಗಿದ್ದಾರೆ. ವೃದ್ದ ನರಳುತ್ತಾ ಬಿದ್ದಿದ್ದಾನೆ. ಆ ವೇಳೆ ಸ್ಥಳೀಯವಾಗಿ ಕುರಿ ಕಾಯುವ ಜ‌ನರು ವೃದ್ದನನ್ನು ರಕ್ಷಣೆ ಮಾಡಿದ್ದಾರೆ ಎಂದರು.


ಈ ಪ್ರಕರಣ ಪತ್ತೆಗೆ ನಮಗೆ ಸವಾಲಿನ ವಿಷಯವಾಗಿತ್ತು. ಸಾಗರ್ ಎನ್ನುವ ಓರ್ವ ವ್ಯಕ್ತಿ ಇಂಜಿನಿಯರಿಂಗ್‌ ಮುಗಿದಿದ್ದು ಸದ್ಯ ಗಂಗಾವತಿಯಲ್ಲಿದ್ದನು. ಪ್ರಕರಣದಲ್ಲಿ ಯಾವುದೇ ಕೋಮು ವಿಷಯವಿಲ್ಲ. ವೃದ್ದನ ಗಡ್ಡಕ್ಕೆ ಬೆಂಕಿ ಹಚ್ಚಿದ ಯಾವುದೇ ದಾಖಲೆ ಇಲ್ಲ‌. ಗಂಗಾವತಿಯಲ್ಲಿ ಎರಡೂ ಕಡೆ ಜನತೆ ನಮಗೆ ತನಿಖೆಯ ವೇಳೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ವಿದೇಶಕ್ಕೆ ಹೋದರಾ ಸಂಸದ

Posted by Vidyamaana on 2024-04-28 05:58:23 |

Share: | | | | |


ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ,  ವಿದೇಶಕ್ಕೆ ಹೋದರಾ ಸಂಸದ

ಬೆಂಗಳೂರು : ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (special investigation team) ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ (state government) ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ (SIT) ತನಿಖೆ ನಡೆಸುವಂತೆ ಮಹಿಳಾ ಆಯೋಗದ (Womens Commission) ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಟ್ವೀಟ್ ಮಾಡಿ, ಮಾಹಿತಿ ನೀಡಿದ್ದಾರೆ.

ಪುತ್ತೂರು : ವಿಶ್ವಕರ್ಮ ಮಹೋತ್ಸವ ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

Posted by Vidyamaana on 2023-09-17 18:44:13 |

Share: | | | | |


ಪುತ್ತೂರು : ವಿಶ್ವಕರ್ಮ ಮಹೋತ್ಸವ ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

ಪುತ್ತೂರು: ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ಮುಖ್ಯರಸ್ತೆಯಿಂದಾಗಿ ಸಾಗಿದ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಸಾಗಿತು.


ಇಂದು ಮಹತ್ವಾಕಾಂಕ್ಷಿ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ; ಏನಿದು ಸ್ಕೀಮ್.? ಯಾರಿಗೆ ಲಾಭ.? ಡಿಟೈಲ್ಸ್ ಇಲ್ಲಿದೆ

https://vidyamaana.com/news/prime-Minister-modi-launched-ambitious-Vishwakarma-project-today

ಮೆರವಣಿಗೆಯಲ್ಲಿ ಚೆಂಡೆ, ಕುಣಿತ ಭಜನೆ, ವಿಶ್ವಕರ್ಮ ದೇವರ ಸ್ತಬ್ದಚಿತ್ರ ಗಮನ ಸೆಳೆಯಿತು. ಇದನ್ನನುಸರಿಸಿ ವಿಶ್ವಕರ್ಮ ಸಮುದಾಯದವರು ಮೆರವಣಿಗೆಯಲ್ಲಿ ಸಾಗಿಬಂದರು.ವಿಶ್ವಕರ್ಮ ಸಮಾಜದ ವಿವಿಧ ಸಂಘಟನೆಗಳಾದ ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ,


ವಿಶ್ವಕರ್ಮ ಯುವ ಸಮಾಜ, ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು, ಪುತ್ತೂರು ವಿಧಾನಸಭಾ ಕ್ಷೇತ್ರದ ಶ್ರೀ ಆನೆಗೊಂದಿ ಗುರು ಸೇವಾ ಪರಿಷತ್ತಿನ ಪುತ್ತೂರು ವಲಯ, ಪುತ್ತೂರು ವಿಶ್ವಕರ್ಮ ಯುವ ಮಿಲನ್, ಪಂಚಮುಖಿ ಗೆಳೆಯರ ಬಳಗ ಕೋರ್ಟ್‌ ರಸ್ತೆ ಪುತ್ತೂರು, ವಿಶ್ವಕರ್ಮ ಮಹಿಳಾ ಮಂಡಳಿ, ಬೀರಮಲೆ ವಿಶ್ವಕರ್ಮ ಸೇವಾ ಸಂಘ, ಬೀರಮಲೆ ಗಾಯತ್ರಿ ಮಹಿಳಾ ಮಂಡಳಿ, ಉಪ್ಪಿನಂಗಡಿ ವಿಶ್ವಕರ್ಮ ಸೇವಾ ಸಂಘ, ಬೊಳುವಾರು ಭಾವನಾ ಕಲಾ ಆರ್ಟ್ಸ್, ಬೀರಮಲೆ ವಿಶ್ವಕರ್ಮ ಯುವಕ ಸಂಘ, ಉಪ್ಪಿನಂಗಡಿ ಕಾಳಿಕಾಂಬಾ ಮಹಿಳಾ ಸಂಘ, ದ.ಕ. ಜಿಲ್ಲಾ ಕಬ್ಬಿಣ ಕೆಲಸಗಾರರ ಸಂಘ ಸಹಕರಿಸಿತು.

ಪತ್ನಿ ಬೆಳ್ಳಗಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತಿ

Posted by Vidyamaana on 2023-12-22 20:07:40 |

Share: | | | | |


ಪತ್ನಿ ಬೆಳ್ಳಗಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತಿ

ಬಿಲಾಸ್ ಪುರ: ಛತ್ತೀಸ್ ಗಢ ಹೈಕೋರ್ಟ್ (Chattisgath hight court) ಮಹತ್ವದ ತೀರ್ಪು ನೀಡಿದ್ದು, ಬಣ್ಣದ ಆಧಾರದ ಮೇಲೆ ವಿವಾಹಿತ ಸಂಗಾತಿಯನ್ನು ಬಿಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ ಎಂದು ಆದೇಶಿಸಿದೆ.ಪತಿ-ಪತ್ನಿಯರ ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಛತ್ತೀಸ್ ಗಢ ಹೈಕೋರ್ಟ್‌ ಈ ತೀರ್ಪು ನೀಡಿದ್ದು, ಪತಿಗೆ ಖಡಕ್ ಎಚ್ಚರಿಕೆ ನೀಡಿತಲ್ಲದೆ, ಫೇರ್‌ನೆಸ್ ಕ್ರೀಮ್ ಉದ್ಯಮದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದೆ.ನ್ಯಾಯಮೂರ್ತಿ ಗೌತಮ್ ಭಾದುರಿ (Goutam B

non

huri) ಮತ್ತು ನ್ಯಾಯಮೂರ್ತಿ ದೀಪಕ್ ಕುಮಾರ್ ತಿವಾರಿ (Deepak Kumar tiwari) ಅವರಿದ್ದ ಪೀಠವು ವಿಚಾರಣೆ ವೇಳೆ, ಯಾವುದೇ ಕಾರಣಕ್ಕೆ ಪತಿ-ಪತ್ನಿಯರ ಬಣ್ಣದ ಆಧಾರದ ಮೇಲೆ ವಿಚ್ಛೇದನ ನೀಡಲು ಸಾಧ್ಯ ಇಲ್ಲ ಎಂದು ಹೇಳಿದೆ.


ವ್ಯಕ್ತಿಯೊಬ್ಬರು ತನ್ನ ಪತ್ನಿಯಿಂದ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನ್ನ ಹೆಂಡತಿ ತನ್ನನ್ನು ತೊರೆದಿದ್ದಾರೆ ಮತ್ತು ಎಷ್ಟು ಪ್ರಯತ್ನ ಮಾಡಿದರೂ ಅವರು ಮನೆಗೆ ಮರಳಲು ನಿರಾಕರಿಸುತ್ತಿದ್ದರು ಎಂದು ಪತಿ ಹೇಳಿಕೊಂಡಿದ್ದಾರೆ. ಆದರೆ, ಪತಿ ತನ್ನೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂಬುದು ಪತ್ನಿಯ ವಾದವಾಗಿತ್ತು. ತನ್ನ ಚರ್ಮದ ಬಣ್ಣವನ್ನು ಗೇಲಿ ಮಾಡುವ ಮೂಲಕ ನಿಂದನೆ ಮತ್ತು ನಿಂದನೀಯ ಪದಗಳನ್ನು ಪತಿ ಬಳಸುತ್ತಿದ್ದರು. ಗರ್ಭಾವಸ್ಥೆಯಲ್ಲಿ ಪತಿ ತನಗೆ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಪತ್ನಿ ಆರೋಪಿಸಿದ್ದರು. ತನ್ನ ಕಪ್ಪನೆಯ ಚರ್ಮದಿಂದಾಗಿ ಬೇರೆ ಮಹಿಳೆಯನ್ನು ಮದುವೆಯಾಗುವುದಾಗಿ ಪದೇ ಪದೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪತ್ನಿ ತನ್ನ ಪತಿ ವಿರುದ್ಧ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಎರಡೂ ಕಕ್ಷಿದಾರರ ವಾದ ಆಲಿಸಿದ ಛತ್ತೀಸ್ ಗಢ ಹೈಕೋರ್ಟ್, ಪತ್ನಿಯ ಆರೋಪಗಳನ್ನು ಹೆಚ್ಚು ದೃಢವಾಗಿ ಪರಿಗಣಿಸಿ, ಪತಿಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತು. 


ಅಲ್ಲದೇ, ಕೇವಲ ಚರ್ಮದ ಬಣ್ಣದ ಆಧಾರದ ಮೇಲೆ ವಿವಾಹಿತ ಸಂಗಾತಿಯನ್ನು ಬಿಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿತು. ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯ ತೊಡೆದುಹಾಕಲು ಸಾಮಾಜಿಕ ಬದಲಾವಣೆಯ ಅಗತ್ಯವನ್ನು ನ್ಯಾಯಾಲಯ ಒತ್ತಿ ಹೇಳಿದೆ. ಕಾಸ್ಕೆಟಿಕ್ಸ್ ಉದ್ಯಮವು ಚರ್ಮವನ್ನು ಹೊಳಪುಗೊಳಿಸುವ ಉತ್ಪನ್ನಗಳೊಂದಿಗೆ ಕಪ್ಪು ತ್ವಚೆಯ ಜನರನ್ನು ಗುರಿಯಾಗಿರಿಸಿಕೊಳ್ಳುತ್ತದೆ ಎಂದು ಹೈಕೋರ್ಟ್ಅಸಮಾಧಾನ ವ್ಯಕ್ತಪಡಿಸಿತು. 


ಜಾಹೀರಾತುಗಳಲ್ಲಿ ಅವರನ್ನು ಕಡಿಮೆ ಆತ್ಮವಿಶ್ವಾಸ ಮತ್ತು ಅಸುರಕ್ಷಿತ ಎಂದು ತೋರಿಸಲಾಗುತ್ತಿದೆ. ಅದು ತಪ್ಪು. ಈ ತಾರತಮ್ಯ ಹೋಗಲಾಡಿಸುವಲ್ಲಿ ಸಾಮಾಜಿಕ ಬದಲಾವಣೆಯ ಅಗತ್ಯವಿದೆ ಎಂದು ನ್ಯಾಯಾಲಯ ಇದೇ ವೇಳೆ ಅಭಿಪ್ರಾಯಪಟ್ಟಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

Posted by Vidyamaana on 2024-03-23 06:09:56 |

Share: | | | | |


ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.ಘಟನೆ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

BREAKING: ಭಾರತದಾದ್ಯಂತ 7 ಹಂತಗಳಲ್ಲಿ ಲೋಕಸಭೆ ಗೆ ಮತದಾನಜೂನ್ 4 ರಂದು ಫಲಿತಾಂಶ ಪ್ರಕಟ

Posted by Vidyamaana on 2024-03-16 16:07:52 |

Share: | | | | |


BREAKING: ಭಾರತದಾದ್ಯಂತ 7 ಹಂತಗಳಲ್ಲಿ ಲೋಕಸಭೆ ಗೆ ಮತದಾನಜೂನ್ 4 ರಂದು ಫಲಿತಾಂಶ ಪ್ರಕಟ

ನವದೆಹಲಿ: ದೇಶಾದ್ಯಂತ ಏಪ್ರಿಲ್ 19ರಿಂದ ಮೇ ರವರೆಗೆ ಲೋಕಸಭಾ ಚುನಾವಣೆ ಆರಂಭಗೊಳ್ಳಲಿದೆ. 7 ಹಂತಗಳಲ್ಲಿ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಲಾಯಿತು.


ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.


97 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇದರಲ್ಲಿ 49.72 ಕೋಟಿ ಪುರುಷರಿದ್ದಾರೆ. 47.15 ಕೋಟಿ ಮಹಿಳೆಯರು. 1.90 ಕೋಟಿ 80 ವರ್ಷ ದಾಟಿದ ಮತದಾರರಿದ್ದಾರೆ. 2.18 ಲಕ್ಷ ಮಂದಿ ಶತಾಯುಷಿ ಮತದಾರರಿದ್ದಾರೆ. 88.4 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ತೃತೀಯ ಲಿಂಗಿ ಮಯದಾರರ ಸಂಖ್ಯೆ 48 ಸಾವಿರ. 1.8 ಕೋಟಿ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ದೇಶದಲ್ಲಿ 10 ಲಕ್ಷದ 500 ಸಾವಿರ ಮತಗಟ್ಟೆಗಳಿವೆ. 55 ಲಕ್ಷ ಇವಿಎಂ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಜೂನ್ 16ಕ್ಕೆ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ ಅವರು, ಆ ಹೊತ್ತಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಇಂತಹ ಸರ್ಕಾರವನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗ ಸನ್ನದ್ಧವಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.



Leave a Comment: