ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮುಂದಿನ ಪ್ರಧಾನಿ ಆಗುವ ಅವಕಾಶ ಮಹಿಳೆಯ ಪಾಲಿಗೆ – ಕಾಲಜ್ಞಾನ ಭವಿಷ್ಯದಲ್ಲೇನಿದೆ

Posted by Vidyamaana on 2023-08-09 12:50:25 |

Share: | | | | |


ಮುಂದಿನ ಪ್ರಧಾನಿ ಆಗುವ ಅವಕಾಶ ಮಹಿಳೆಯ ಪಾಲಿಗೆ – ಕಾಲಜ್ಞಾನ ಭವಿಷ್ಯದಲ್ಲೇನಿದೆ

     ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಭವಿಷ್ಯವೊಂದು ಹೊರಬಿದ್ದಿದ್ದು ದೇಶದ ಮುಂದಿನ ಪ್ರಧಾನಿ ಆಗುವ ಯೋಗ ಒಬ್ಬ ಮಹಿಳೆಯ ಪಾಲಾಗಿದೆಯಂತೆ. ಹೌದು, ನೊಣವಿನಕೆರೆಯಲ್ಲಿ ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ಅವರು ಈ ಸ್ಪೋಟಕ ಭವಿಷ್ಯ ನುಡಿದಿದ್ದು, ಮುಂದಿನ ಬಾರಿ ಒಂದು ‘ಸ್ತ್ರೀ ಶಕ್ತಿ’ ಅಂದರೆ ಮಹಿಳೆಯೊಬ್ಬರಿಗೆ ದೇಶದ ಪ್ರಧಾನಿ ಆಗುವ ಯೋಗ ಒದಗಿ ಬರಲಿದೆಯಂತೆ.


ಈ ಭವಿಷ್ಯ ನಿಜವೇ ಆದಲ್ಲಿ ರಾಷ್ಟ್ರರಾಜಕಾರಣದಲ್ಲಿ ಇಂದಿರಾ ಗಾಂಧಿ ಬಳಿಕ ಸದ್ಯದಲ್ಲೇ ಮತ್ತೊಬ್ಬ ಮಹಿಳೆಗೆ ಪ್ರಧಾನಿ ಹುದ್ದೆಗೇರುವ ಆಗುವ ಯೋಗ ಒದಗಿಬರಲಿದೆ.


ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ನುಡಿದಿರುವ ಭವಿಷ್ಯದ ಪ್ರಕಾರ, ಮುಂದಿನ ಮಹಾಶಿವರಾತ್ರಿ ಬಳಿಕ ಒಬ್ಬಾಕೆ ಮಹಿಳೆ ಈ ದೇಶವನ್ನು ಆಳ್ತಾರೆ. ಮಹಾಶಿವರಾತ್ರಿ ಬಳಿಕ ರಾಷ್ಟ್ರರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆ ನಿಶ್ಚಿತ ಎನ್ನಲಾಗಿದೆ.


ಕಾಲಜ್ಞಾನ ಭವಿಷ್ಯದ ಪ್ರಕಾರ ಮುಂದಿನ ಬಾರಿ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರಕ್ಕೇರಲು ಸಾಧ್ಯವಿಲ್ಲವಂತೆ. ಆದರೆ ಮಹಾಶಿವರಾತ್ರಿ ಒಳಗೆ ಲೋಕಸಭೆ ಚುನಾವಣೆ ನಡೆದಲ್ಲಿ ಪ್ರಧಾನಿ ಮೋದಿಗೆ ಮತ್ತೆ ಅಧಿಕಾರಕ್ಕೇರುವ ಯೋಗ ಇದೆ ಎಂದು ಇದೇ ಸಂದರ್ಭದಲ್ಲಿ ಗುರೂಜಿ ತಿಳಿಸಿದ್ದಾರೆ.


ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿದೆ ಎಂದು ಈ ಹಿಂದೆ ಡಾ. ಯಶ್ವಂತ ಗುರೂಜಿ ನುಡಿದಿದ್ದ ಭವಿಷ್ಯ ನಿಜವಾಗಿತ್ತು.


ಪ್ರಧಾನಿ ಹುದ್ದೆಗೇರಲಿರುವ ಆ ಮಹಿಳೆ ಯಾರು ಮತ್ತು ಅವರು ಯಾವ ಪಕ್ಷಕ್ಕೆ ಸೇರಿದವರು ಎಂಬ ಗುಟ್ಟನ್ನು ಮಕರ ಸಂಕ್ರಮಣದ ಪರ್ವಕಾಲದಲ್ಲಿ ಹೇಳಲಾಗುತ್ತದೆ ಎಂದು ಗುರೂಜಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

Posted by Vidyamaana on 2023-08-01 16:52:39 |

Share: | | | | |


ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ಮೂಡಬಿದರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓರನ್ನು ಅಮಾನತು ಮಾಡಲಾಗಿದೆ.


ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.


ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಳ್ಯ : ಬೈಕ್ - ಕಾರು ಭೀಕರ ಅಪಘಾತ

Posted by Vidyamaana on 2023-05-22 15:57:01 |

Share: | | | | |


ಸುಳ್ಯ : ಬೈಕ್ - ಕಾರು ಭೀಕರ ಅಪಘಾತ

ಸುಳ್ಯ:  ಇಲ್ಲಿನ ಪಾಲಡ್ಕ ಬಳಿ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಮೇ 22 ರಂದು ವರದಿಯಾಗಿದೆ.

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಎಂಬವರು ಸ್ಥಳದಲ್ಲೇ ಮೃತಪಟ್ಟರು.

ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು

Posted by Vidyamaana on 2023-06-11 01:09:46 |

Share: | | | | |


ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ  ಬಿದ್ದ ಕಾರು

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50) ಎಂದು ಗುರುತಿಸಲಾಗಿದ್ದು, ಗೋಪಿ (48) ಎಂಬವರು ಗಾಯಗೊಂಡವರು.


ಗಾಯಾಳುವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಾತೀಯತೆ, ಪ್ರಾದೇಶಿಕತೆಯನ್ನು ಬೇರು ಸಮೇತ ಕೀಳಬೇಕು: ದಸರಾ ಆಚರಣೆಯ ವೇಳೆ ಪ್ರಧಾನಿ ಮೋದಿ ಕರೆ

Posted by Vidyamaana on 2023-10-25 15:43:20 |

Share: | | | | |


ಜಾತೀಯತೆ, ಪ್ರಾದೇಶಿಕತೆಯನ್ನು ಬೇರು ಸಮೇತ ಕೀಳಬೇಕು: ದಸರಾ ಆಚರಣೆಯ ವೇಳೆ ಪ್ರಧಾನಿ ಮೋದಿ ಕರೆ

ನವದೆಹಲಿ : ದೇಶಕ್ಕೆ ಹಾನಿ ಮಾಡುತ್ತಿರುವ ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ಬೇರು ಸಮೇತ ಕೀಳಬೇಕು. ಸ್ವಹಿತಾಸಕ್ತಿಗಳ ದಹನಕ್ಕೆ ದಸರೆಯು ನಾಂದಿ ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದ್ದಾರೆ ಹಾಗೂ ಇದೇ ವೇಳೆ 10 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.ಇಲ್ಲಿನ ದ್ವಾರಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾವಣ ದಹನ ಎಂಬುದು ಕೇವಲ ಪ್ರತಿಕೃತಿಯ ದಹನವಲ್ಲ. ಭಾರತ ಮಾತೆಯನ್ನು ಧರ್ಮ ಮತ್ತು ಪ್ರಾದೇಶಿಕತೆಯ ಹೆಸರಲ್ಲಿ ಭಾಗ ಮಾಡುತ್ತಿರುವುದರ ನಾಶವೂ ಸಹ ಆಗಿದೆ. ದೇಶಕ್ಕೆ ಹಾನಿ ತಂದೊಡ್ಡುತ್ತಿರುವ ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ಬೇರು ಸಮೇತ ಕಿತ್ತುಹಾಕಬೇಕು. ದಸರಾ ಹಬ್ಬ ಎನ್ನುವುದು ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಸಾಧಿಸುವ ದಿನ. ಈ ವೇಳೆ ಸ್ವಹಿತಾಸಕ್ತಿಯ ದಹನವೂ ಆಗಬೇಕು ಎಂದು ವಿಪಕ್ಷಗಳ ಹೆಸರೆತ್ತದೆ ಪರೋಕ್ಷವಾಗಿ ಕುಟುಕಿದರು.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವೆಲ್ಲರೂ ಸಾಕ್ಷಿಯಾಗುತ್ತಿದ್ದೇವೆ. ಶತಮಾನಗಳ ಕಾಲ ಕಾದ ಬಳಿಕ ಇದು ನೆರವೇರುತ್ತಿದೆ. ಇನ್ನು ಕೆಲವು ದಿನಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡು ಜನರ ತಾಳ್ಮೆಗೆ ಜಯ ತಂದುಕೊಡಲಿದೆ ಎಂದು ಹೇಳಿದರು.


10 ಸಂಕಲ್ಪ ಮಾಡಿ:

ಇನ್ನು ಇದೇ ವೇಳೆ, ನೀರಿನ ಸಂರಕ್ಷಣೆ, ಡಿಜಿಟಲ್‌ ವಹಿವಾಟಿಗೆ ಪ್ರೋತ್ಸಾಹ, ಸ್ವಚ್ಛತೆ, ವೋಕಲ್‌ ಫಾರ್‌ ಲೋಕಲ್‌: ಭಾರತದಲ್ಲಿ ತಯಾರಿಸಿದ ವಸ್ತುಗಳ ಖರೀದಿ, ಶ್ರೇಷ್ಠ ಕೆಲಸಗಳನ್ನು ಮಾಡುವುದು, ವಿದೇಶ ಪ್ರವಾಸಕ್ಕೂ ಮುನ್ನ ಭಾರತದಲ್ಲಿ ಪ್ರವಾಸ ಕೈಗೊಳ್ಳುವುದು, ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದು, ದೈನಂದಿನ ಊಟದಲ್ಲಿ ಸಿರಿಧಾನ್ಯಗಳ ಬಳಕೆ ಮಾಡುವುದು, ಯೋಗ ಮತ್ತು ಆಟಗಳ ಮೂಲಕ ಫಿಟ್‌ನೆಸ್‌ ಜೀವನದ ಭಾಗ ಮಾಡಿಕೊಳ್ಳುವುದು ಮತ್ತು ಬಡ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಜೀವನಕ್ಕೆ ನೆರವು ನೀಡುವ 10 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.ಸಮಾರಂಭದಲ್ಲಿ ಮೋದಿ ಅವರಿಗೆ ಶಾಲು ಹೊದೆಸಿ, ದಂಡವನ್ನು ನೀಡಿ ಸಾಂಪ್ರದಾಯಿಕವಾಗಿ ವೇದಿಕೆಗೆ ಸ್ವಾಗತಿಸಲಾಯಿತು. ವೇದಿಕೆಯ ಮೇಲಿದ್ದ ರಾಮ ಪಾತ್ರಧಾರಿಗೆ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಬಳಿಕ ಸೀತಾ ರಾಮಚಂದ್ರನಿಗೆ ಜಯವಾಗಲಿ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಅವರು ದೇಶದ ಜನರಿಗೆ ನವರಾತ್ರಿಯ ಶುಭಾಶಯ ತಿಳಿಸಿದರು.

ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.



Leave a Comment: