ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


25ನೇ ವಯಸ್ಸಿಗೆ ಅಪ್ರತಿಮ ಸಾಧನೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ

Posted by Vidyamaana on 2024-02-24 07:21:34 |

Share: | | | | |


25ನೇ ವಯಸ್ಸಿಗೆ ಅಪ್ರತಿಮ ಸಾಧನೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ

ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.


ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.


ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು

Posted by Vidyamaana on 2023-07-28 14:57:50 |

Share: | | | | |


ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು

ಬೆಂಗಳೂರು: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ.  


ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ.  


ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?” ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹನುಮಂತರಾಯ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಜು.27ರಂದು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.ಶಕುಂತಲಾ ನಟರಾಜ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಸ್ವೇಷನ್ ಜಾಮೀನಿನ ಮೇಲೆ ಮನೆಗೆ ಕಳುಹಿಸಿದ್ದಾರೆ.

‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು. ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ಠಾಣೆಯಲ್ಲಿ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ

ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

Posted by Vidyamaana on 2024-06-23 11:03:07 |

Share: | | | | |


ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

ಅರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.

ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಮಾರಕಾಸ್ತ್ರ ಹಿಡಿದು ವಿದ್ಯಾರ್ಥಿ ಬೆದರಿಕೆ

Posted by Vidyamaana on 2023-08-25 08:59:25 |

Share: | | | | |


ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಮಾರಕಾಸ್ತ್ರ ಹಿಡಿದು ವಿದ್ಯಾರ್ಥಿ ಬೆದರಿಕೆ

ಮಂಡ್ಯ: ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಘಟನೆ ನಾಗಮಂಗಲದಲ್ಲಿ ನಡೆದಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ತಲವಾರು ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೆಡಿಕಲ್‌ಗೆ ಹೋಗುವಾಗ ಲಾಟರಿ ಖರೀದಿ; ನಾಲ್ಕೇ ಗಂಟೆಯಲ್ಲಿ 2.50 ಕೋಟಿ ಗೆದ್ದ ವೃದ್ಧ!

Posted by Vidyamaana on 2023-11-08 10:36:27 |

Share: | | | | |


ಮೆಡಿಕಲ್‌ಗೆ ಹೋಗುವಾಗ ಲಾಟರಿ ಖರೀದಿ; ನಾಲ್ಕೇ ಗಂಟೆಯಲ್ಲಿ 2.50 ಕೋಟಿ ಗೆದ್ದ ವೃದ್ಧ!

ಚಂಡಿಗಢ: ಮದ್ದು ತರಲೆಂದು ಮೆಡಿಕಲ್‌ ಶಾಪ್‌ ಗೆ ಹೋದ ವೃದ್ಧನೊಬ್ಬ ಅದೇ ದಾರಿಯಲ್ಲಿದ್ದ ಲಾಟರಿ ಟಿಕೆಟ್‌ ನ್ನು ಖರೀದಿಸಿ 2.50 ಕೋಟಿ ರೂ.ವಿನ ಬಂಪರ್‌ ಗೆದ್ದಿದ್ದಾರೆ.



ಪಂಜಾಬ್‌ನ ಹೋಶಿಯಾರ್‌ಪುರದ ಮೂಲದ ಶೀತಲ್ ಸಿಂಗ್ ಲಾಟರಿ ಗೆದ್ದಿರುವ ವೃದ್ಧ. ಮಹಿಲ್ಪುರ ನಿವಾಸಿಯಾಗಿರುವ ಶೀತಲ್ ಸಿಂಗ್ ಇತ್ತೀಚೆಗೆ ಕುಟುಂಬದ ಸದಸ್ಯರೊಬ್ಬರಿಗೆ ಮದ್ದು ತರಲು ಮೆಡಿಕಲ್‌ ಶಾಪ್‌ ಗೆ ತೆರಳಿದ್ದರು. ಇದೇ ವೇಳೆ ಮಾರ್ಗದಲ್ಲಿ ದೀಪಾವಳಿ ಬಂಪರ್‌ ಲಾಟರಿ ಟಿಕೆಟ್‌ ನ್ನು ಶೀತಲ್‌ ಖರೀದಿಸಿದ್ದಾರೆ.


ಲಾಟರಿ ಖರೀದಿಸಿ ಮನೆಗೆ ಬಂದ ಸುಮಾರು ನಾಲ್ಕು ಗಂಟೆಗಳ ನಂತರ ಲಾಟರಿ ಕುರಿತು ಕರೆ ಬಂದಿದ್ದು, ಶೀತಲ್‌ ಅವರು 2.5 ಕೋಟಿ ಗೆದ್ದಿರುವುದಾಗಿ ಲಾಟರಿ ಅವರು ಹೇಳಿದ್ದಾರೆ.ಲಾಟರಿಯಲ್ಲಿ 2.50 ಕೋಟಿ ಗೆದ್ದಿರುವ ಅವರು, ಲಾಟರಿಯಲ್ಲಿ ಗೆದ್ದ ಮೊತ್ತವನ್ನು ಹೇಗೆ ಬಳಸಬೇಕೆಂದು ಅವರು ಮತ್ತು ಅವರ ಕುಟುಂಬ ನಿರ್ಧರಿಸುತ್ತದೆ ಎಂದು ಸಿಂಗ್ ಹೇಳಿದ್ದಾರೆ.



ರೈತನಾಗಿರುವ ಶೀತಲ್‌ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಿಬ್ಬರೂ ಮದುವೆಯಾಗಿದ್ದಾರೆ.


ಲಾಟರಿ ಸ್ಟಾಲ್‌ನ ಮಾಲೀಕರು ಕಳೆದ 15 ವರ್ಷಗಳಿಂದ ಇದೇ ಉದ್ಯೋಗದಲ್ಲಿದ್ದು, ಮೂರನೇ ಬಾರಿಗೆ ಗ್ರಾಹಕರೊಬ್ಬರಿಗೆ ಕೋಟಿಗಟ್ಟಲೆ ಹಣದ ಲಾಟರಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಕಡಬ : ಬೈಕ್ ಹಾಗೂ ಬಸ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

Posted by Vidyamaana on 2024-02-19 21:09:04 |

Share: | | | | |


ಕಡಬ : ಬೈಕ್ ಹಾಗೂ ಬಸ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಸಹೋದರರನ್ನು ಅಗಲಿದ್ದಾರೆ.



Leave a Comment: