ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

Posted by Vidyamaana on 2023-12-01 15:59:59 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.


ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಕಾರ್ಕಳ - ಖಾಸಗಿ ಬಸ್ ಜೀಪ್ ನಡುವೆ ಭೀಕರ ರಸ್ತೆ ಅಪಘಾತ - ಹಲವರಿಗೆ ಗಂಭೀರ ಗಾಯ

Posted by Vidyamaana on 2023-12-11 07:46:36 |

Share: | | | | |


ಕಾರ್ಕಳ - ಖಾಸಗಿ ಬಸ್ ಜೀಪ್ ನಡುವೆ ಭೀಕರ ರಸ್ತೆ ಅಪಘಾತ - ಹಲವರಿಗೆ ಗಂಭೀರ ಗಾಯ

ಕಾರ್ಕಳ  : ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ. ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ.ಓವರ್ ಟೇಕ್ ಮಾಡುವ ಸಂದರ್ಭ ಘಟನೆ ಸಂಭವಿಸಿದ್ದು, ಜೀಪಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಜೀಪಿನಲ್ಲಿದ್ದವರು ಸ್ಥಳಿಯ ದೈವದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ಸಾಗುತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್‌ ನಲ್ಲಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

Posted by Vidyamaana on 2023-05-20 07:30:03 |

Share: | | | | |


ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಆಶೀರ್ವಾದ್ ಸ್ಕೀಂ ಬಗ್ಗೆ ಸಂತೃಪ್ತ ಗ್ರಾಹಕರೊಬ್ಬರ ಆತ್ಮತೃಪ್ತಿಯ ಬರಹ

Posted by Vidyamaana on 2024-05-23 22:12:04 |

Share: | | | | |


ಆಶೀರ್ವಾದ್ ಸ್ಕೀಂ ಬಗ್ಗೆ ಸಂತೃಪ್ತ ಗ್ರಾಹಕರೊಬ್ಬರ ಆತ್ಮತೃಪ್ತಿಯ ಬರಹ

ಪುತ್ತೂರು : ಅವಿಭಜಿತ ದಕ್ಷಿಣ ಕನ್ನಡದಲ್ಲಿ ಸಾಕಷ್ಟು ಸ್ಕೀಮ್ ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ನಾನು ಮೆಚ್ಚಿಕೊಂಡಿರುವುದು ಹಾಗೂ ಒಪ್ಪಿಕೊಂಡಿರುವ ಏಕೈಕ ಸ್ಕೀಮ್ ವ್ಯವಸ್ಥೆ ಎಂದರೆ ಅದು ಆಶೀರ್ವಾದ್.

ದರ್ಬೆಯ ಮೊಯಿದ್ದೀನ್  ವಾಣಿಜ್ಯ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶೀರ್ವಾದ್ ಇಂದು ನನ್ನಂತಹ ನೂರಾರು, ಸಾವಿರಾರು ಗ್ರಾಹಕರಲ್ಲಿ ಯಶಸ್ವಿಯಾಗಿ ಭರವಸೆ ಮೂಡಿಸಿದೆ. ಇದಕ್ಕೆ ಕಾರಣ ಆಶೀರ್ವಾದ್ ಸಂಸ್ಥೆಯ ಕಾರ್ಯವೈಖರಿ. ಕೆಲವೇ ದಿನಗಳಲ್ಲಿ ನಮ್ಮೊಳಗೆ ಆಶೀರ್ವಾದ್ ಬಗೆಗಿನ ಭರವಸೆ ಭದ್ರವಾಗಿದೆ.

ನನ್ನನು ಸಿ ಎಸ್ ಕೆ ತಂಡಕ್ಕೆ ಸೇರಿಸಿಕೊಳ್ಳಿ; ಯೋಗಿ ಬಾಬು ಮಾತಿಗೆ ಧೋನಿ ಕೊಟ್ಟ ರಿಪ್ಲೈ ಸಖತ್ ವೈರಲ್‌

Posted by Vidyamaana on 2023-07-11 06:20:15 |

Share: | | | | |


ನನ್ನನು ಸಿ ಎಸ್ ಕೆ ತಂಡಕ್ಕೆ ಸೇರಿಸಿಕೊಳ್ಳಿ; ಯೋಗಿ ಬಾಬು ಮಾತಿಗೆ ಧೋನಿ ಕೊಟ್ಟ ರಿಪ್ಲೈ ಸಖತ್ ವೈರಲ್‌

ಚೆನ್ನೈ: ಮಹೇಂದ್ರ ಸಿಂಗ್‌ ಈಗ ಕ್ರಿಕೆಟಿಗ ಮಾತ್ರವಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದಾರೆ. ಧೋನಿ ಎಂಟರ್ಟೈನ್ಮೆಂಟ್ ಬ್ಯಾನರ್‌ ಅಡಿಯಲ್ಲಿ ಸಿನಿಮಾ ರೆಡಿ ಆಗಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.ಟೀಮ್‌ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್‌ ಕಿಂಗ್ಸ್‌ ಕಪ್ತಾನ ಮಹೇಂದ್ರ ಧೋನಿ “ಧೋನಿ ಎಂಟರ್ಟೈನ್ಮೆಂಟ್” ಬ್ಯಾನರ್‌ ಅಡಿಯಲ್ಲಿ “ಎಲ್‌ ಜಿಎಂ” ( ಲೆಟ್ಸ್‌ ಗೆಟ್‌ ಮ್ಯಾರೇಡ್)‌  ಸಿನಿಮಾದ ಟ್ರೇಲರ್‌ ಹಾಗೂ ಆಡಿಯೋ ಲಾಂಚ್‌ ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಧೋನಿ ದಂಪತಿ ಹಾಗೂ ಕಲಾವಿದರು ಭಾಗಿಯಾಗಿದ್ದರು.ಚೆನ್ನೈನ ಲೀಲಾ ಪ್ಯಾಲೇಸ್‌ನಲ್ಲಿ ‘ಎಲ್‌ಜಿಎಂ’ ಚಿತ್ರದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.


ಈ ವೇಳೆ ಸಿನಿಮಾದಲ್ಲಿ ನಟಿಸಿರುವ ಕಾಲಿವುಡ್‌ ನ ಖ್ಯಾತ ಹಾಸ್ಯನಟ ಯೋಗಿ ಬಾಬು ಅವರು ಧೋನಿ ಅವರ ಬಳಿ ಕೇಳಿರುವ ಒಂದು ಮಾತಿಗೆ ಧೋನಿ ಕೊಟ್ಟ ಉತ್ತರ ವೈರಲ್‌ ಆಗಿದೆ.ಧೋನಿ ಅವರೇ ನನ್ನನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ನೇಮಿಸಿಕೊಳ್ಳಿ” ಎಂದಿದ್ದಾರೆ.


“ಅಂಬಾಟಿ ರಾಯುಡು ನಿವೃತ್ತರಾಗಿದ್ದಾರೆ. ಆದ್ದರಿಂದ ನಿಮಗೆ ಸಿಎಸ್‌ಕೆಯಲ್ಲಿ ಸ್ಥಾನವಿದೆ. ನಾನು ಮ್ಯಾನೇಜ್‌ಮೆಂಟ್‌ನೊಂದಿಗೆ ಮಾತನಾಡುತ್ತೇನೆ. ಆದರೆ, ನೀವು ಚಲನಚಿತ್ರಗಳಲ್ಲಿ ತುಂಬಾ ಬ್ಯುಸಿಯಾಗಿದ್ದೀರಿ. ನೀವು ನಿರಂತರವಾಗಿ ಆಡಬೇಕು. ಅವರು ತುಂಬಾ ವೇಗವಾಗಿ ಬೌಲ್ ಮಾಡುತ್ತಾರೆ ಮತ್ತು ಅವರು ನಿಮ್ಮನ್ನು ಗಾಯಗೊಳಿಸಲು ಬೌಲ್ ಮಾಡುತ್ತಾರೆ.” ಎಂದು ತಮಾಷೆಯಾಗಿ ಉತ್ತರ ನೀಡಿದ್ದಾರೆ.


‘ಲೆಟ್ಸ್ ಗೆಟ್ ಮ್ಯಾರೀಡ್’ (‘ಎಲ್‌ಜಿಎಂ’) ಫ್ಯಾಮಿಲಿ ಎಂಟರ್‌ಟೈನರ್ ಆಗಿದ್ದು, ಹರೀಶ್ ಕಲ್ಯಾಣ್ ಮತ್ತು ಇವಾನಾ ,ನದಿಯಾ ತಾಯಿಯ ಯೋಗಿ ಬಾಬು ಮತ್ತು ಮಿರ್ಚಿ ವಿಜಯ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾವನ್ನು ರಮೇಶ್ ತಮಿಳ್ಮನಿ ನಿರ್ದೇಶನ  ಮಾಡಿದ್ದಾರೆ.


ಟ್ರೇಲರ್‌ ಗಮನ ಸೆಳೆಯುತ್ತಿದ್ದು ವರ್ಷದ ಕೊನೆಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

ಬೆಂಗಳೂರು ಕಂಬಳ: ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದ ಸ್ಪೀಕರ್ ಯು ಟಿ ಖಾದರ್

Posted by Vidyamaana on 2023-11-16 07:54:35 |

Share: | | | | |


ಬೆಂಗಳೂರು ಕಂಬಳ: ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದ ಸ್ಪೀಕರ್ ಯು ಟಿ ಖಾದರ್

ಪುತ್ತೂರು: ನವೆಂಬರ್ ೨೪ ರಿಂದ ೨೬ ತನಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರು ವಿವಿಧ ಇಲಾಖಾ ಅಧಿಕಾರಿಗಳ ಸಭೆಯನ್ನು ನಡೆಸಿದರು.


ಬೆಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಕಂಬಳಾಭಿಮಾನಿಗಳು ಆಗಮಿಸಲಿದ್ದು, ಮುಖ್ಯಮಂತ್ರಿ ಮತ್ತು ಸಚಿವರು, ಬಾಲಿವುಡ್ ನಟರು, ಕನ್ನಡ ಚಿತ್ರ ರಂಗದ ಪ್ರಮುಖರು, ತಮಿಳು , ತೆಳುಗು ಸೇರಿದಂತೆ ವಿವಿಧ ಭಾಷಾ ಚಲನಚಿತ್ರ ನಟರು , ವಿವಿಐಪಿಗಳು ಭಾಗವಹಿಸುವ ಕಾರಣ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.


ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕಂಬಳ ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ಎಂಬಂತೆ ರಾಜಧಾನಿಯಲ್ಲಿ ಆಹೋರಾತ್ರಿ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಾಂತರ ಮಂದಿ ಭಾಗವಹಿಸುವ ಕಾರಣಕ್ಕೆ ಟ್ರಾಫಿಕ್ ಸಮಸ್ಯೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಬಿಬಿಎಂಪಿ ಅರಣ್ಯ ಇಲಾಖೆ ಸೇರಿದಂತೆ ಕಂಬಳ ಕಾರ್ಯಕ್ರಮಕ್ಕೆ ಸಂಬಂದಿಸಿದಂತೆ ಅಧಿಕಾರಿಗಳ ಸಭೆಯನ್ನು ಕರೆದು ಅವರ ಜೊತೆ ಚರ್ಚೆ ನಡೆಸಿದರು. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲಖಾ ಅಧಿಕಾರಿಗಳಿಗೆ ಸ್ಪೀಕರ್ ರವರು ಮಾಹಿತಿ ಮತ್ತು ಸೂಚನೆಯನ್ನು ನೀಡಿದರು. ಸಭೆಯಲ್ಲಿ ಕಂಬಳ ಸಮಿತಿಯ ಪ್ರಮುಖರಾದ ಬಂಜಾರಾ ಪ್ರಕಾಶ್ ಶೆಟ್ಟಿ, ಗುಣರಂಜನ್ ಶೆಟ್ಟಿ, ಗುರುಕಿರಣ್ ಸೇರಿದಂತೆ ಪ್ರಮುಖರು ಉಪಸ್ತಿತರಿದ್ದರು.


 


ಬೆಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಭಾಗವಹಿಸುವ ಕಾರಣ ಕೈಗೊಳ್ಳಬೇಕಾದ ಇಲಾಖಾವಾರು ವ್ಯವಸ್ಥೆಗಳ ಬಗ್ಗೆ ತಿಳಿಸಲು ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಪ್ರಮುಖ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಖ್ಯಾತರು ಭಾಗವಹಿಸಲಿದ್ದಾರೆ. ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆಯೂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇದೇ ಮೊದಲ ಬಾರಿಗೆ ಆಹೋರಾತ್ರಿ ಕಾರ್ಯಕ್ರಮ ನಡೆಯುತ್ತಿದ್ದು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು.


ಅಶೋಕ್ ರೈ ಅಧ್ಯಕ್ಷರು ಕಂಬಳ ಸಮಿತಿ, ಶಾಸಕರು ಪುತ್ತೂರು.



Leave a Comment: