ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸುಮಲತಾಗೆ ಹೆಚ್​​ಡಿಕೆ ಟಾಂಗ್

Posted by Vidyamaana on 2024-03-07 18:15:02 |

Share: | | | | |


500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸುಮಲತಾಗೆ ಹೆಚ್​​ಡಿಕೆ ಟಾಂಗ್

ಬೆಂಗಳೂರು : ಮಂಡ್ಯ ಲೋಕಸಭೆ ಕ್ಷೇತ್ರದ (Mandya Loksabha Constituency) ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಜೆಪಿ ನಗರದ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆ ಮಂಡ್ಯ ಜಿಲ್ಲೆಯ ಪ್ರಮುಖರು ಭಾಗಿಯಾಗಿದ್ದರು.ಸಭೆಯಲ್ಲಿ 500 ಪರ್ಸೆಂಟ್ ಟಿಕೆಟ್ ಸಿಗುತ್ತದೆ ಎಂದಿದ್ದ ಸಂಸದೆ ಸುಮಲತಾ ಅಂಬರೀಶ್ (MP Sumalatha Ambareesh) ಅವರಿಗೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಂಡ್ಯ ಕ್ಷೇತ್ರ ಸಿಗುವ ವಿಶ್ವಾಸ

ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ, ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೋ ಅವರ ಪರ ಕೆಲಸ ಮಾಡಿ. ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ನಾನು ತೀರ್ಮಾನ ಮಾಡ್ತೀವಿ. ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಯಾವುದೇ ಮಾತಿಗೆಲ್ಲ ತಲೆಕೆಡೆಸಿಕೊಳ್ಳಬೇಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಂಡ್ಯ ಕ್ಷೇತ್ರ ತಮಗೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿ


ಈ ವೇಳೆ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಯ್ಕೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಲೇಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು ಹಾಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಪಕ್ಷಕ್ಕೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕುಮಾರಸ್ವಾಮ ಸೂಚಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಧರ್ಮ ಮೀರುವುದು ಬೇಡ

ಯಾವ ಕಾರಣಕ್ಕೂ ಮೈತ್ರಿ ಧರ್ಮ ಮೀರುವುದು ಬೇಡ. ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಪಕ್ಷಕ್ಕೆ ಹಾಗೂ ಚುನಾವಣೆ ಗೆಲುವಿಗೆ ಹಾನಿ ಆಗುವಂತಹ ಯಾವುದೇ ಕೆಲಸವನ್ನು ಯಾರೂ ಮಾಡಬಾರದು. ಅಭ್ಯರ್ಥಿ ಯಾರು ಆಗುತ್ತಾರೆ ಎನ್ನುವುದು ಮುಖ್ಯವಲ್ಲ, ಗೆಲುವೇ ಮುಖ್ಯ ಎಂದು ಎಲ್ಲಾ ನಾಯಕರಿಗೆ ಕುಮಾರಸ್ವಾಮಿ ಪಾಠ ಮಾಡಿದ್ದಾರಂತೆ.


ಸುಮಲತಾ ಮಾತಿಗೆ ಪ್ರತಿಕ್ರಿಯಸದಂತೆ ಸೂಚೆನೆ

ಇದೇ ವೇಳೆ ಸುಮಲತಾ ಅಂಬರೀಶ್ ಮಾತಿಗೆಲ್ಲ ರಿಯಾಕ್ಟ್ ಮಾಡದಂತೆ ಎಚ್ಚರಿಕೆ ಕೊಟ್ಟಿರುವ ಹೆಚ್​​ಡಿಕೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಜೆಡಿಎಸ್ ನಾಯಕರು ಸುಮಲತಾರನ್ನ ಟೀಕಿಸಿದ್ದೆ ಪಕ್ಷದ ಅಭ್ಯರ್ಥಿ ನಿಖಿಲ್ ಸೋಲಿಗೆ ಕಾರಣವಾಗಿತ್ತು. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಆ ರೀತಿಯ ಮಾತುಗಳನ್ನು ಆಡದಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲದಲ್ಲಿ ಇತಿಹಾಸ ನಿರ್ಮಿಸಿದ ರೋಡ್ ಶೋ

Posted by Vidyamaana on 2023-05-04 15:23:10 |

Share: | | | | |


ವಿಟ್ಲದಲ್ಲಿ ಇತಿಹಾಸ ನಿರ್ಮಿಸಿದ ರೋಡ್ ಶೋ

ವಿಟ್ಲ: ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ವಿಟ್ಲದಲ್ಲಿ ಬೃಹತ್ ರೋಡ್ ಶೋ ನಡೆಯಿತು. 

ಜೈನಮುನಿಗಳ ಹತ್ಯೆ ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಶಾಸಕ ರೈ

Posted by Vidyamaana on 2023-07-09 14:23:20 |

Share: | | | | |


ಜೈನಮುನಿಗಳ ಹತ್ಯೆ ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಶಾಸಕ ರೈ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಸರಕಾರ ಈಗಾಗಲೇ ಈ ಕೊಲೆ ಕೃತ್ಯದ ತನಿಖೆಗೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸದಾ ಶಾಂತಿಯನ್ನೇ ಬಯಸುವ ಮತ್ತು ಸಮಾಜದಲ್ಲಿ ಸೋಧರತೆಯ , ಸೌಹಾರ್ಧತೆಯ ಪ್ರತಿಬಿಂಬವಾಗಿರುವ ಜೈನ ಮುನಿಗಳ ಹತ್ಯೆಯನ್ನು ಸಮಾಜ ಸಹಿಸುವುದಿಲ್ಲ. ಶಾಂತಿಪ್ರಿಯ ಸಮುದಾಯದ ಮುನಿಗಳ ಹತ್ಯೆ ಕೃತ್ಯ ಘೋರವಾಗಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನುಕ್ರಮಕೈಗೊಳ್ಳುವ ಮೂಲಕ ಮೃತ ಮುನಿಗಳ ಆತ್ಮಕ್ಕೆ ಶಾಂತಿ ದೊರೆಯುವಂತೆ ಮಾಡಬೇಕಿದೆ ಎಂದು ಶಾಸಕರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 18

Posted by Vidyamaana on 2023-09-18 08:23:18 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 18

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 18 ರಂದು

ಬೆಳಗ್ಗೆ 10.30 ಖಾಸಗಿ ಕಾರ್ಯಕ್ರಮ


 ಮಧ್ಯಾಹ್ನ 3 ಗಂಟೆಗೆ ಮೂಡಬಿದ್ರೆಯಲ್ಲಿ ಕಂಬಳ ಕುರಿತ ಸಭೆಭಾಗವಹಿಸಲಿದ್ದಾರೆ 

ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

Posted by Vidyamaana on 2024-03-15 19:56:14 |

Share: | | | | |


ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

ಹಾವೇರಿ: ಮಾಜಿ ಸಿಎಂ, ಶಾಸಕ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಗದ್ದಲ ಗಲಾಟೆ ನಡೆದ ಘಟನೆ ಶುಕ್ರವಾರ ನಡೆದಿದೆ.


ಕಚೇರಿಗೆ ಬೊಮ್ಮಾಯಿ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಹೈ ಡ್ರಾಮಾ ನಡೆಸಿದ್ದಾರೆ.ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರನ್ನು ಎಳೆದಾಡಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಗ್ರಾಮೀಣ ಭಾಗದ ಅಧ್ಯಕ್ಷರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ನಗರ ಕಾರ್ಯಕರ್ತರನ್ನ ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಬೊಮ್ಮಾಯಿ ಅವರು ಎಲ್ಲ ಸರಿ ಮಾಡುತ್ತೇನೆ, ಕಾರ್ಯಕರ್ತರು ಒಗಟ್ಟು ಪ್ರದರ್ಶಿಸಿ. ಚುನಾವಣೆ ಹತ್ತಿರ ಇದೆ ಗಲಾಟೆ ಸರಿಯಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿ ಕಾರ್ಯಕ್ರಮ ಮೊಟಕುಗೊಳಿಸಿ ಕಚೇರಿಯಿಂದ ಹೊರನಡೆದಿದ್ದಾರೆ.

ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

Posted by Vidyamaana on 2023-04-27 16:30:04 |

Share: | | | | |


ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾಪರಿವಾರ’ ಎ.28 ರಂದು ನಡೆಯಲಿದೆ.ಮಹಿಳಾ ಸಮಾವೇಶ ‘ಸೀತಾಪರಿವಾರ’ ಕಾರ್ಯಕ್ರಮವು ಎ.28 ಸಂಜೆ 4 ಗಂಟೆಗೆ ಮುಕ್ರಂಪಾಡಿಯ ಸುಭದ್ರ ಸಭಾಂಗಣದಲ್ಲಿ ನಡೆಯಲಿದೆ.ಹಿಂದುತ್ವದ ಅಡಿಯಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅವರ ಗೆಲುವು ರಾಜ್ಯದಲ್ಲಿ ಬಿಜೆಪಿಯ ಗೆಲವುವಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಗೆಲುವು ಆಗಲಿದೆ. ಹಾಗಾಗಿ ಮಹಿಳಾ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದು, ಮಹಿಳಾ ಕಾರ್ಯಕರ್ತರು ‘ಸೀತಾಪರಿವಾರ’ ಎಂಬ ಹೆಸರಿನಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ.

ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೀತಾ ಪರಿವಾರ ಸಮಾವೇಶದ ಪ್ರಮುಖರಾಗಿರುವ ವಸಂತ ಲಕ್ಷ್ಮೀ ರವರು ಪತ್ರಿಕಾಗೋಷ್ಠಿ ತಿಳಿಸಿದರು.

Recent News


Leave a Comment: