ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

Posted by Vidyamaana on 2024-04-26 11:11:36 |

Share: | | | | |


ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. 


ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.

ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

Posted by Vidyamaana on 2024-08-20 07:29:13 |

Share: | | | | |


ಬೆಂಗಳೂರು: ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ: ತಮಿಳುನಾಡು ಮೂಲದ ಕೊರಿಯೋಗ್ರಾಫರ್ ಬಂಧನ

ಬೆಂಗಳೂರು : ಲಿಫ್ಟ್ ಪಡೆದಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಎಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್(24) ಎಂದು ಗುರುತಿಸಲಾಗಿದೆ.ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯದ ಬಳಿಕ ಆಡುಗೋಡಿಯ ತನ್ನ ಮನೆಯಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಆಲಂಕಾರು ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

Posted by Vidyamaana on 2024-03-31 06:15:03 |

Share: | | | | |


ಆಲಂಕಾರು ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ.

ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

Posted by Vidyamaana on 2024-03-16 14:26:00 |

Share: | | | | |


ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

 ಬೆಂಗಳೂರು : ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಾಸರಹಳ್ಳಿ ಮರಿಯಣ್ಣಪಾಳ್ಯ ನಿವಾಸಿ ಸಂತೋಷ್‌ ಕುಮಾರ್‌(39) ಬಂಧಿತ ಆರೋಪಿ.ಮಾ .12ರಂದು ಈತ ಮಾರುತಿನಗರ ನಿವಾಸಿ ಕೃಷ್ಣಯಾದವ್‌(55) ಎಂಬಾತನನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಇರಿಸಿ ಪರಾರಿಯಾಗಿದ್ದ. ಬಟ್ಟೆ ಅಂಗಡಿಗೆ ಲಕ್ಷಾಂತರ ರೂ. ಹೂಡಿಕೆ ಮಾಡಲು ಪತ್ನಿಯನ್ನು ಒಂದು ರಾತ್ರಿ ತನ್ನೊಂದಿಗೆ ಕಳುಹಿಸುವಂತೆ ಕೇಳಿದಕ್ಕೆ ಆರೋಪಿ ಉದ್ಯಮಿಯನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.


ಆಂಧ್ರಪ್ರದೇಶ ಮೂಲದ ಕೃಷ್ಣಯಾದವ್‌ ನಗರದಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡಿದ್ದ. ಈತನ ಸ್ನೇಹಿತ ತಮಿಳುನಾಡು ಮೂಲದ ಸಂತೋಷ್‌ ಮೊಬೈಲ್‌ ಅಂಗಡಿ ಮುಂಭಾಗದ ಫ‌ುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಒಂದೆರಡು ಬಾರಿ ಆರೋಪಿಯ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದ ಕೃಷ್ಣಯಾದವ್‌, “ಉತ್ತಮ ಗುಣಮಟ್ಟದ ಬಟ್ಟೆ ಮಾರಾಟ ಮಾಡುತ್ತಿಯಾ, ಹೊಸ ಬಟ್ಟೆ ಅಂಗಡಿಗೆ ನಾನು ಹಣ ಹೂಡಿಕೆ ಮಾಡುತ್ತೇನೆ” ಎಂದು ಭರವಸೆ ನೀಡಿದ್ದ. ಆದರೆ, ನಾಲ್ಕೈದು ತಿಂಗಳಾದರೂ ಹಣ ಹೂಡಿಕೆ ಮಾಡಿರಲಿಲ್ಲ.

14 ಬಾರಿ ಇರಿತಕ್ಕೊಳಗಾದ ಉದ್ಯಮಿ: ಈ ಮಧ್ಯೆ ಉದ್ಯಮಿ ಕೃಷ್ಣಯಾದವ್‌ಗೆ ಹೆಣ್ಣಿನ ಮೇಲೆ ಹೆಚ್ಚಿನ ವ್ಯಾಮೋಹ ಇತ್ತು ಎಂದು ಹೇಳಲಾಗಿದೆ. ಮಾ.11ರಂದು ಆರೋಪಿ ಸಂತೋಷ್‌ ಜತೆ ಕಾರಿನಲ್ಲಿ ಯಲಹಂಕದ ಬಾರ್‌ನಲ್ಲಿ ಮದ್ಯ ಸೇವಿಸಿ ವಿವಿಧೆಡೆ ಸುತ್ತಾಡಿದ್ದ ಕೃಷ್ಣಯಾದವ್‌ಗೆ ಆರೋಪಿ ಸಂತೋಷ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿದ್ದ 2ನೇ ಪತ್ನಿಯ ಫೋಟೋವನ್ನು ತೋರಿಸಿದ್ದಾನೆ. ಅದರಿಂದ ವ್ಯಾಮೋಹಕ್ಕೊಳಗಾದ ಕೃಷ್ಣಯಾದವ್‌, “ಬಟ್ಟೆ ಅಂಗಡಿಗೆ ಒಂದೆರಡು ದಿನದಲ್ಲೇ ಲಕ್ಷಾಂತರ ರೂ. ಹೂಡಿಕೆ ಮಾಡುತ್ತೇನೆ. ಇಂದು ರಾತ್ರಿ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸು’ ಎಂದು ಕೇಳಿದ್ದಾನೆ. ಅದರಿಂದ ಕೋಪಗೊಂಡು ಆರೋಪಿ, ಉದ್ಯಮಿ ಕೃಷ್ಣಯಾದವ್‌ ಜತೆ ಜಗಳ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕಾರಿನಲ್ಲಿದ್ದ ಚಾಕುವಿನಿಂದ ಕೃಷ್ಣಯಾದವ್‌ನ ದೇಹದ ವಿವಿಧೆಡೆ 14 ಬಾರಿ ಇರಿದು ಪರಾರಿಯಾಗಿದ್ದ. ಇತ್ತ ಕೃಷ್ಣಯಾದವ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ.ಬಳಿಕ ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಏನಿದು ಪ್ರಕರಣ? : 


ಆರೋಪಿ ಸಂತೋಷ್‌ ಜತೆ ಉದ್ಯಮಿ ಕೃಷ್ಣಯಾದವ್‌ ಸೋಮವಾರ ಸಂಜೆ ತನ್ನ ಸ್ವಿಫ್ಟ್‌ ಕಾರಿನಲ್ಲಿ ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಕುಟುಂಬ ಸದಸ್ಯರು ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್‌ನ ಪಾದಚಾರಿ ಮಾರ್ಗದಲ್ಲಿ ಅನುಮಾನ ಸ್ಪದ ರೀತಿ ಯಲ್ಲಿ ಕಾರಿನಲ್ಲಿ ಕೃಷ್ಣ ಯಾದವ್‌ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

BREAKING :ಮಹಿಳಾ ದಿನಾಚರಣೆ ಪ್ರಯುಕ್ತ ಭರ್ಜರಿ ಗಿಫ್ಟ್ ನೀಡಿದ ಮೋದಿ : LPG ಸಿಲಿಂಡರ್ ದರದಲ್ಲಿ 100ರೂ.ಇಳಿಕೆ

Posted by Vidyamaana on 2024-03-08 10:56:24 |

Share: | | | | |


BREAKING :ಮಹಿಳಾ ದಿನಾಚರಣೆ ಪ್ರಯುಕ್ತ ಭರ್ಜರಿ ಗಿಫ್ಟ್ ನೀಡಿದ ಮೋದಿ : LPG ಸಿಲಿಂಡರ್ ದರದಲ್ಲಿ 100ರೂ.ಇಳಿಕೆ

ನವದೆಹಲಿ : ಇಂದು ಮಹಿಳಾ ದಿನಾಚಾರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು ಇದೀಗ ಎಲ್‌ಪಿಜಿ ಸಿಲಿಂಡರ್ಗಳ ದರದ ಮೇಲಿನ 100 ರೂಪಾಯಿಯನ್ನು ಕಡಿತಗೊಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಅವರು, ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ. 100. ಗೆ ಇಳಿಸಿದ್ದೇವೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ.ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕುವ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ

ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

Posted by Vidyamaana on 2023-07-20 02:17:28 |

Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

ಪುತ್ತೂರು: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಒಡೆದು ಹಾಕಿರುವ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ ಎಂದು ತಿಳಿದುಬಂದಿದೆ.

ಬಪ್ಪಳಿಗೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೊಬೈಲ್ ಕಸಿದು‌ ಹಾನಿಗೊಳಿಸಲಾಗಿದೆ ಎಂದು ನಿಶಾಂತ್ ಆರೋಪಿಸಿದ್ದರು. ಇದನ್ನು ಪತ್ರಕರ್ತರ ಸಂಘಗಳು ಖಂಡಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದವು. ಇದೀಗ ಬಂದ ಮಾಹಿತಿಯಂತೆ, ಮೊಬೈಲ್ ಒಡೆದು‌ ಹಾಕಿದವರು‌ ಹೊಸ ಮೊಬೈಲನ್ನು ನಿಶಾಂತ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು‌ ತಿಳಿದುಬಂದಿದೆ.



Leave a Comment: