ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ

Posted by Vidyamaana on 2024-06-05 14:36:54 |

Share: | | | | |


ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ

ನವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಮೋದಿ ಸಲ್ಲಿಸಿದ್ದಾರೆ.

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

Posted by Vidyamaana on 2023-04-15 07:02:55 |

Share: | | | | |


ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

 ಬಿಪುತ್ತೂರು :  ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ ತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರು ತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲ ರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲ ರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

ಐವನ್‌ ಡಿಸೋಜರ ಭಾಷಣದಲ್ಲಿ ತಪ್ಪೇನಿದೆ...? ಬಿಜೆಪಿಗೆ ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಪ್ರಶ್ನೆ

Posted by Vidyamaana on 2024-08-27 07:37:50 |

Share: | | | | |


ಐವನ್‌ ಡಿಸೋಜರ ಭಾಷಣದಲ್ಲಿ ತಪ್ಪೇನಿದೆ...? ಬಿಜೆಪಿಗೆ ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಪ್ರಶ್ನೆ

ಪುತ್ತೂರು: ಆ.19ಕ್ಕೆ ಮಂಗಳೂರಿನಲ್ಲಿ ಕೆಪಿಸಿಸಿಯ ನಿರ್ದೇಶನದಂತೆ ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಪ್ರತಿಭಟನೆಯಲ್ಲಿ, ಸಂವಿಧಾನ ವಿರೋಧಿಯಾಗಿ ನಡೆದುಕೊಂಡ ಕರ್ನಾಟಕದ ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕರೆಸಿಕೊಳ್ಳದಿದ್ದರೆ ಬಾಂಗ್ಲದೇಶದ ಅಧ್ಯಕ್ಷರು ರಾತ್ರೋರಾತ್ರಿ ಓಡಿ ಹೋದ ಪರಿಸ್ಥಿತಿ ಗವರ್ನರ್ ಆಫಿಸಿಗೆ ಬರುತ್ತದೆ... ಎಂದು ಅವರು ಭಾಷಣದಲ್ಲಿ ಹೇಳಿರುವುದರಲ್ಲಿ ತಪ್ಪೇನಿದೆ? ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಅಧ್ಯಕ್ಷ ಮೌರಿಸ್ ಮಸ್ಕರೇನಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಹೇಳಿಕೆಯನ್ನು ತಿರುಚಿ ಅವರ ಮಾನಹಾನಿಗೆ ಪ್ರಯತ್ನಿಸಿದ ಅವರ ಅನುಪಸ್ಥಿತಿಯಲ್ಲಿ ಅವರ ಮನೆಗೆ ರಾತ್ರಿ ಕಲ್ಲುತೂರಾಟ ಮಾಡಿ ರಾಜಕೀಯ ಹಿಂಸಾರಕ್ಕೆ ಯತ್ನಿಸಿದ ದ.ಕ.ಜಿಲ್ಲಾ ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕ್ರಿಶ್ಚಿಯನ್ ಯೂನಿಯನ್ ಪುತ್ತೂರು ತೀವ್ರವಾಗಿ ಖಂಡಿಸುತ್ತದೆ ಎಂದ ಅವರು, ಐವನ್ ಡಿಸೋಜ ಅವರು ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಏಕೈಕ ವಿಧಾನಪರಿಷತ್‌ ಸದಸ್ಯರಾಗಿ ಜ್ಯಾತೀತತೆಯೊಂದಿಗೆ ಸಮುದಾಯದ ಧ್ವನಿಯನ್ನು ವಿಧಾನಪರಿಷತ್‌ನಲ್ಲಿ ಎತ್ತುತ್ತಿದ್ದಾರೆ. ಇಂತಹ ಜನಪ್ರತಿನಿಧಿಯನ್ನು ವಿನಾ ಕಾರಣ ನಿಂಧಿಸಿ ರಾತ್ರಿ ಹೊತ್ತು ಕಲ್ಲುತೂರಾಟ ನಡೆಸಿರುವುದು ಭಯೋತ್ಪಾದನೆಗೆ ಸಮಾನವಾದ ಕೃತ್ಯವಾಗಿದೆ ಎಂದರು.


ಕಾರ್ಗಿಲ್ ವಿಜಯೋತ್ಸವದ 25ನೇಯ ವರ್ಷಾಚರಣೆ : ಪರಮವೀರ ಚಕ್ರ ಪುರಸ್ಕೃತ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಹಾಗೂ ಸೇನಾಪದಕ ಪುರಸ್ಕೃತ ಕ್ಯಾಪ್ಟನ್ ನವೀನ್ ನಾಗಪ್ಪರಿಗೆ ಗೌರವಾರ್ಪಣೆ

Posted by Vidyamaana on 2024-07-20 06:41:05 |

Share: | | | | |


ಕಾರ್ಗಿಲ್ ವಿಜಯೋತ್ಸವದ 25ನೇಯ ವರ್ಷಾಚರಣೆ : ಪರಮವೀರ ಚಕ್ರ ಪುರಸ್ಕೃತ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಹಾಗೂ ಸೇನಾಪದಕ ಪುರಸ್ಕೃತ ಕ್ಯಾಪ್ಟನ್ ನವೀನ್ ನಾಗಪ್ಪರಿಗೆ ಗೌರವಾರ್ಪಣೆ

ಪುತ್ತೂರು: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ಅಮ‌ರ್ ಜವಾನ್‌ ಜ್ಯೋತಿ ಸಂರಕ್ಷಣಾ ಸಮಿತಿಗಳು ಅನ್ಯಾನ್ಯ ಸಂಘಟನೆಗಳ ಸಹಕಾರದೊಂದಿಗೆ ಜು.19ರ ಶುಕ್ರವಾರದಂದು ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು.

ಪಾಕಿಸ್ಥಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ ಕಾಲುಗಳು ಛಿದ್ರವಾದವು. ಆದರೂ ತುಟಿಪಿಟಕ್ಕೆನ್ನದೆ ಸಾವನ್ನು ಹತ್ತಿರದಿಂದ ಕಂಡು ಮನಸ್ಸು ಗಟ್ಟಿ ಮಾಡಿ ಕೈಯಲ್ಲಿದ್ದ ಗ್ರೆನೇಡ್ ಎಸೆದು ಪಾಕಿಸ್ಥಾನದ ಸೈನಿಕರನ್ನು ಸುಟ್ಟುಹಾಕಿದೆ. ಇದ್ದಕ್ಕಿದ್ದಂತೆ ದಾಳಿಯಾದದ್ದನ್ನು ಕಂಡ ಪಾಕಿಸ್ಥಾನಿ ಸೈನಿಕರು ಭಾರತದ ಮತ್ತೊಂದು ಸೇನಾ ತುಕಡಿ ತಮ್ಮನ್ನು ಆಕ್ರಮಿಸುತ್ತಿದೆ ಎಂದು ಭಾವಿಸಿ ಓಡತೊಡಗಿದರು.

ದೇಶಕ್ಕಾಗಿ ಈ ದೇಹ ಸಮರ್ಪಣೆಯಾಗಬೇಕೆಂಬ ಒಂದೇ ಕನಸಿನೊಂದಿಗೆ ಸೇನೆಗೆ ಸೇರಿ ಸೇವೆ ಸಲ್ಲಿಸುವುದಕ್ಕೆ ಸಾಧ್ಯವಾಯಿತು. ಅಕ್ಷರಶಃ ತೆವಳಿಕೊಂಡು ಕಡಿದಾದ ಬೆಟ್ಟವನ್ನೇರುತ್ತಾ ವಿರೋಧಿಗಳೊಂದಿಗೆ ಹೋರಾಡಬೇಕಿತ್ತು.

ಆದರೆ ರಾಷ್ಟ್ರ ಎಂಬ ಭಾವನೆ ಬಂದಾಗ ಎಲ್ಲವೂ ಸಾಧ್ಯವಾಗುತ್ತದೆ. ದೇಶದ ಒಳಗಿನ ವ್ಯವಸ್ಥೆ ಸದೃಢವಾಗಿ ಬೆಳೆಯಬೇಕಾದರೆ ಸೈನ್ಯ ಗಡಿ ಭಾಗದಲ್ಲಿ ಸದಾ ಸನ್ನದ್ಧವಾಗಿರಬೇಕು ಎಂದು ನುಡಿದರು. ಇಂದು ನಾವು ಸಿನೆಮಾ ನಟರನ್ನು, ಕ್ರಿಕೆಟಿಗರನ್ನು ಹೀರೋಗಳಾಗಿ ಕಾಣುತ್ತಿದ್ದೇವೆ. ಆದರೆ ನಮಗಾಗಿ ಪ್ರಾಣತೆತ್ತ ಯೋಧರನ್ನು ನಿರ್ಲಕ್ಷಿಸುತ್ತಿದ್ದೇವೆ. ನಮ್ಮನ್ನು ಕಾಪಾಡುವ ಹಾದಿಯಲ್ಲಿ ಜೀವ ಅರ್ಪಿಸಿದ ಯೋಧರನ್ನು ನಮ್ಮ ಆದರ್ಶವಾಗಿ ಸ್ವೀಕರಿಸಬೇಕು. ಸ್ಪಷ್ಟ ಗುರಿಯೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದರಲ್ಲದೆ ಜೀವನ ತುಚ್ಚವಾದದ್ದಲ್ಲ, ಅದು ಅಮೂಲ್ಯವಾದದ್ದು. ಈ ಬದುಕನ್ನು ರೀಲ್ಸ್ ಮಾಡುತ್ತಾ, ರಾತ್ರಿ ನಿದ್ದೆಗೆಡುತ್ತಾ ಹಾಳುಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.

ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ವೈರಲ್

Posted by Vidyamaana on 2024-09-07 12:22:29 |

Share: | | | | |


ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ವೈರಲ್

ಮಧ್ಯಪ್ರದೇಶ: ಬೈಕ್‌ನಲ್ಲಿ ಬಂದ ಮೂವರು ಮುಸುಕುಧಾರಿ ವ್ಯಕ್ತಿಗಳು ವ್ಯಾಪಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ನಗದು ಹೊಂದಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಪರಾಗ್ ಆಯಿಲ್ ಮಿಲ್ ಬಳಿ ನಿನ್ನೆ(ಸೆ.07) ನಡೆದಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾಹಿತಿ ಪ್ರಕಾರ, ಸಂತ್ರಸ್ತ ರಾಜೇಂದ್ರ ಪ್ರಸಾದ್ ಗುಪ್ತಾ ತಂಬಾಕು ವ್ಯಾಪಾರಿಯಾಗಿದ್ದು, ಸಂಗ್ರಹಿಸಿದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದರೋಡೆಕೋರರು ಆತನ ವಾಹನಕ್ಕೆ ಡಿಕ್ಕಿ ಹೊಡೆದು ಆತನ್ನನ್ನು ಚರಂಡಿಗೆ ಬೀಳಿಸಿದ್ದಾರೆ. ನಂತರ ನಗದು ತುಂಬಿದ್ದ ಬ್ಯಾಗನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.

ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

Posted by Vidyamaana on 2023-04-20 21:02:46 |

Share: | | | | |


ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಬ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಗುರುವಾರ ನಾಮಪತ್ರ ಸಲ್ಲಿಸಿದರು.

ಬುಧವಾರ ತನ್ನ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸುವ ಪ್ರಕಟಣೆ ನೀಡಿದ್ದರು. ಯಾವುದೋ ಕಾರಣಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ.  ಗುರುವಾರ ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಐ.ಸಿ.ಕೈಲಾಸ್, ಮಹಿಳಾ ಪದಾಧಿಕಾರಿಗಳಾದ ಝೊಹರಾ ನಿಸಾರ್, ಪದ್ಮಾಮಣಿ ಉಪಸ್ಥಿತರಿದ್ದರು.



Leave a Comment: