ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಉಡುಪಿ ಹತ್ಯಾಕಾಂಡ: ದಾರಿ ಮಧ್ಯೆ ರಕ್ತಸಿಕ್ತ ಬಟ್ಟೆ ಸುಟ್ಟು ಹಾಕಿದ ನರಹಂತಕ ಪ್ರವೀಣ್ ಚೌಗುಲೆ!

Posted by Vidyamaana on 2023-11-20 15:24:56 |

Share: | | | | |


ಉಡುಪಿ ಹತ್ಯಾಕಾಂಡ: ದಾರಿ ಮಧ್ಯೆ ರಕ್ತಸಿಕ್ತ ಬಟ್ಟೆ ಸುಟ್ಟು ಹಾಕಿದ ನರಹಂತಕ ಪ್ರವೀಣ್ ಚೌಗುಲೆ!

ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರವೀಣ್ ಅರುಣ್ ಚೌಗುಲೆ ಕೃತ್ಯ ನಡೆಸಿ ರಕ್ತಸಿಕ್ತ ಬಟ್ಟೆಯಲ್ಲೇ ಸ್ಥಳದಿಂದ ಪರಾರಿಯಾಗಿದ್ದು, ಆ ಬಟ್ಟೆಯನ್ನು ಮಂಗಳೂರು ತೆರಳುವ ಮಾರ್ಗ ಮಧ್ಯೆ ಸುಟ್ಟು ಹಾಕಿ ಸಾಕ್ಷ್ಯನಾಶ ನಡೆಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.



ಆದರೆ ಅದರ ಕುರುಹು ಇನ್ನೂ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.



ಕೊಲೆ ಮಾಡುವ ಮೊದಲು ಹೆಜಮಾಡಿ ಟೋಲ್ ನಿಂದ ಆಚೆಗೆ ಕಾರು ನಿಲ್ಲಿಸಿದ್ದ ಆರೋಪಿ ಪ್ರವೀಣ್, ನಂತರ ನೇಜಾರುವಿನಿಂದ ಪರಾರಿಯಾಗಿದ್ದು, ಸಾಕ್ಷ್ಯನಾಶ ಪಡಿಸಲು ಮಂಗಳೂರಿಗೆ ತೆರಳುವ ಮುನ್ನವೇ ಸುರಕ್ಷಿತ ಜಾಗ ನೋಡಿ ಕೃತ್ಯದ ವೇಳೆ ರಕ್ತಸಿಕ್ತವಾದ ಬಟ್ಟೆಯನ್ನು ಬಿಚ್ಚಿ ಸುಟ್ಟು ಹಾಕಿದ್ದ ಕುರಿತು ಪೊಲೀಸರಲ್ಲಿ ಹೇಳಿದ್ದಾನೆ ಎಂದು ಬಾಯ್ಬಿಟ್ಟಿದ್ದಾನೆ.

ಜೋಗ್ ಫಾಲ್ಸ್ ಸಮೀಪ ದುರಂತ ; ಕೃಷಿ ಇಲಾಖೆ ಅಧಿಕಾರಿ ಬ್ಯಾಂಕ್ ಉದ್ಯೋಗಿ ದೇವಿಗುಂಡಿ ಫಾಲ್ಸ್ ನಲ್ಲಿ ನೀರುಪಾಲು

Posted by Vidyamaana on 2023-09-24 21:39:28 |

Share: | | | | |


ಜೋಗ್ ಫಾಲ್ಸ್  ಸಮೀಪ ದುರಂತ ; ಕೃಷಿ ಇಲಾಖೆ ಅಧಿಕಾರಿ ಬ್ಯಾಂಕ್ ಉದ್ಯೋಗಿ ದೇವಿಗುಂಡಿ ಫಾಲ್ಸ್ ನಲ್ಲಿ ನೀರುಪಾಲು

ಸಾಗರ: ರಜಾದಿನವಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತ ತಾಲೂಕಿನ ಜೋಗ್ ಫಾಲ್ಸ್ ಪ್ರವಾಸಕ್ಕೆ ಭಾನುವಾರ ತೆರಳಿದ್ದ ಸಾಗರದ ಇಬ್ಬರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.


ಮೃತರನ್ನು ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಎಂದು ಗುರುತಿಸಲಾಗಿದೆ.


ಕಾರ್ಗಲ್ ಸಬ್ ಇನ್ಸ್‌ಪೆಕ್ಟರ್ ಹೊಳೆಬಸಪ್ಪ ಮತ್ತು ಸಿಬಂದಿ ಘಟನೆಯ ಸ್ಥಳಕ್ಕೆ ತೆರಳಿ ಶವಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗರದ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ

Posted by Vidyamaana on 2023-12-07 20:38:11 |

Share: | | | | |


ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ


ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.


ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.

 ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ.

-ಮುಳಿಯ ಜ್ಯುವೆಲ್ಸ್  ಸಂಸ್ಥೆಯ  ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.


ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

ಉಡುಪಿ ವೀಡಿಯೋ ಪ್ರಕರಣ:

Posted by Vidyamaana on 2023-07-28 09:10:24 |

Share: | | | | |


ಉಡುಪಿ ವೀಡಿಯೋ ಪ್ರಕರಣ:

ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.


ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.


ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

Posted by Vidyamaana on 2024-03-17 13:57:09 |

Share: | | | | |


ಅಮಿತ್‌ ಶಾ ಭೇಟಿಯಾದ ಹೆಚ್‌ಡಿಕೆ, ಮಂಜುನಾಥ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ (CN Manjunath) ಭೇಟಿಯಾಗಿ ಮಾತುಕತೆ ನಡೆಸಿದರು.ಲೋಕ ಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಕೆಲಕಾಲ ಮಾತುಕತೆ ನಡೆಸಿದರು.


ಈ ವೇಳೆ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಅನಸೂಯ ಮಂಜುನಾಥ್ ಇದ್ದರು.

ಇಂದು ಅಂತಾರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ವಿದ್ವಾಂಸ ಎ.ಎಂ.ನೌಶಾದ್ ಬಾಖವಿ ಮುಕ್ವೆಗೆ

Posted by Vidyamaana on 2023-12-31 12:00:21 |

Share: | | | | |


ಇಂದು ಅಂತಾರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ವಿದ್ವಾಂಸ ಎ.ಎಂ.ನೌಶಾದ್ ಬಾಖವಿ ಮುಕ್ವೆಗೆ

ಪುತ್ತೂರು: ರಹ್ಮಾನಿಯಾ ಜುಮಾ ಮಸ್ಜಿದ್    ಮುಕ್ವೆ ಇಲ್ಲಿ ನೂತನ ಮದ್ರಸ ಕಟ್ಟಡ ನಿರ್ಮಾಣದ ಅಂಗವಾಗಿ 3 ದಿವಸಗಳ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮದ ಸಮಾರೋಪ ದಿನವಾದ ಡಿ.31ರಂದು ಅಂತರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಎ.ಎಂ ನೌಶಾದ್ ಬಾಖವಿ ತಿರುವನಂತಪುರಂ, ಕೇರಳರವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಸ್ವಾಗತ ಸಮಿತಿ ಅಧ್ಯಕ್ಷ ಅಶ್ರಫ್ ಗ್ಯಾಲಕ್ಸಿ ಚಿಕ್ಕಾಲ ಅವರು ಅಧ್ಯಕ್ಷತೆ ವಹಿಸಲಿದ್ದು ಮುಕ್ವೆ  ಖತೀಬ್ ಅನ್ವರ್ ಅಲಿ ದಾರಿಮಿ ಅಜ್ಜಾವರ ದುವಾ ನೆರವೇರಿಸಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದಾರೆ  ಎಂದು ಸಂಘಟಕರು ತಿಳಿಸಿದ್ದಾರೆ



Leave a Comment: