ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ: ಶೆಟ್ಟರ್ ಕ್ಷೇತ್ರಕ್ಕೆ ಹೊಸ ಮುಖ ; ರಾಮದಾಸ್ ಗೆ ಕೊಕ್

Posted by Vidyamaana on 2023-04-17 13:51:21 |

Share: | | | | |


ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ: ಶೆಟ್ಟರ್ ಕ್ಷೇತ್ರಕ್ಕೆ ಹೊಸ ಮುಖ ; ರಾಮದಾಸ್ ಗೆ ಕೊಕ್

ಬೆಂಗಳೂರು : ಬಹುನಿರೀಕ್ಷಿತ ಬಿಜೆಪಿಯ 10 ಅಭ್ಯರ್ಥಿಗಳ ಮೂರನೇ ಪಟ್ಟಿ ಸೋಮವಾರ ಸಂಜೆ ಬಿಡುಗಡೆಯಾಗಿದ್ದು , 224 ಕ್ಷೇತ್ರಗಳ ಪೈಕಿ ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.ಜಗದೀಶ್ ಶೆಟ್ಟರ್ ಅವರು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಅಲ್ಲಿ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ.ಅರವಿಂದ್ ಲಿಂಬಾವಳಿ ಅವರು ಪ್ರತಿನಿಧಿಸುತ್ತಿದ್ದ ಮಹದೇವಪುರ ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಅವರ ಪತ್ನಿ ಮಂಜುಳಾ ಅವರಿಗೆ ನೀಡಲಾಗಿದೆ.

ವಿ.ಸೋಮಣ್ಣ ಅವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜ ನಗರ ಕ್ಷೇತ್ರಕ್ಕೆ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ನಾಗಠಾಣ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಸಂಜೀವ ಐಹೊಳೆ, ಸೇಡಂಗೆ ರಾಜ್ ಕುಮಾರ್ ಪಾಟೀಲ್ , ಕೊಪ್ಪಳ ಕ್ಷೇತ್ರಕ್ಕೆ ಮಂಜುಳಾ ಅಮರೇಶ್ , ರೋಣಕ್ಕೆ ಕಳಕಪ್ಪ ಬಂಡಿ , ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಬಿ.ರಾಮಣ್ಣ, ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಜಗದೀಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

Posted by Vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

15 ದಿನದಲ್ಲಿ ನೂತನ ಕಚೇರಿ ಪ್ರಾರಂಭ ಸಾರ್ವಜನಿಕರ ಸೇವೆಗಾಗಿ 6 ಸಿಬಂದಿ ನೇಮಕ: ಶಾಸಕ ರೈ

Posted by Vidyamaana on 2023-06-12 12:45:41 |

Share: | | | | |


15 ದಿನದಲ್ಲಿ ನೂತನ ಕಚೇರಿ ಪ್ರಾರಂಭ ಸಾರ್ವಜನಿಕರ ಸೇವೆಗಾಗಿ 6 ಸಿಬಂದಿ ನೇಮಕ: ಶಾಸಕ ರೈ

ಪುತ್ತೂರು: ಮುಂದಿನ ೧೫ ದಿನದೊಳಗೆ ನನ್ನ ನೂತನ ಕಚೇರಿ ಪುತ್ತೂರಿನಲ್ಲಿ ಪ್ರಾರಂಭವಾಗಲಿದ್ದು ಸರಕಾರಿ ಆಸ್ಪತ್ರೆಯ ಬಳಿ ಇರುವ ಈಗಿನ ಪುಡಾ ಕಟ್ಟಡದಲ್ಲಿ ನೂತನ ಕಚೇರಿ ಕಾರ್ಯಾರಂಭಿಸಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.

ನೂತನ ಕಚೇರಿಯಲ್ಲಿ ಸಾರ್ವಜನಿಕರ ಸೇವೆಗಾಗಿ ೬ ಮಂದಿ ಸಿಬಂದಿಯನ್ನು ನೇಮಕ ಮಾಡಲಿದ್ದೇನೆ. ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲು, ಮಾಹಿತಿ ನೀಡಲು, ಜನರಿಗೆ ಸ್ಪಂದನೆ ನೀಡಲು ಮತ್ತು ನಗರಸಭಾ ವ್ಯಾಪ್ತಿಯಲ್ಲಿರುವ ಜನರಿಗೆ ಸೇವೆ ಸಲ್ಲಿಸಲು ಬೇರೆ ಬೇರೆ ಕೌಂಟರ್‌ಗಳನ್ನು ಮಾಡಿ ಕಚೇರಿಯಲ್ಲಿ ಸಿಬಂದಿಗಳು ಸೇವೆ ಸಲ್ಲಿಸಲಿದ್ದಾರೆ. ಕಚೇರಿಗೆ ಬರುವ ಮಂದಿಗೆ ಕಚೇರಿಯಲ್ಲಿ ಶಾಸಕರಿಲ್ಲದೇ ಇದ್ದರೂ ಅವರ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಬೇಕು ಮತ್ತು ಶಾಸಕರಿಲ್ಲದೇ ಇರುವ ಸಂದರ್ಭದಲ್ಲಿ ಬಂದ ಕೆಲಸ ಆಗಿಲ್ಲ ಎಂದು ಯಾರೂ ನೊಂದು ಕೊಳ್ಳುವಂತಾಗಬಾರದು. ದೂರದ ಊರುಗಳಿಂದ ಶಾಸಕರನ್ನು ಭೇಟಿಯಾಗಲು ಬರುವ ಶಾಸಕರು ತಮ್ಮ ಕೆಲಸ ಆಗದೆ ಯಾರೂ ಬರಿಗೈಯ್ಯಲ್ಲಿ ತೆರಳುವಂತಾಗಬಾರದು ಎಂಬ ಉದ್ದೇಶದಿಂದ ಕಚೇರಿಯಲ್ಲಿ ಎಲ್ಲಾ ಸೇವೆಗಳು ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

Posted by Vidyamaana on 2024-06-27 12:46:15 |

Share: | | | | |


ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ನಜ್ಜುಗುಜ್ಜಾಗಿದೆ.

ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

Posted by Vidyamaana on 2023-06-14 02:05:46 |

Share: | | | | |


ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012 ರಲ್ಲಿ ದಾಖಲಾಗಿದ್ದ ಗುರುವಾಯನಕೆರೆಯಲ್ಲಿ ಅಪಘಾತವಾಗಿ ಓರ್ವನ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ  ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ  ವಾರಂಟ್ಆರೋಪಿ ಸಯ್ಯದ್ ಅಬಸಾರ್ ಎಂಬವರ ಮಗ ಸಯ್ಯದ್ ಶಬೀರ್ (33) ಎಂಬಾತನನ್ನು ಜೂನ್ 12 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವ್ರಷಭ ಹಾಗು ಬಸವರಾಜ್ ರವರು  ಬೆಂಗಳೂರು  ಪೀಣ್ಯದಿಂದ ವಶಕ್ಕೆ ಪಡೆದು ಜೂನ್ 13 ರಂದು ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಷರತ್ತುಬದ್ದ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ 6 ಕಾಲರಾ ರೋಗ ಪ್ರಕರಣ ಪತ್ತೆ: ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್​ ಮಾಹಿತಿ; ಮಾರ್ಗಸೂಚಿ ಪ್ರಕಟ

Posted by Vidyamaana on 2024-04-05 20:47:45 |

Share: | | | | |


ರಾಜ್ಯದಲ್ಲಿ 6 ಕಾಲರಾ ರೋಗ ಪ್ರಕರಣ ಪತ್ತೆ: ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್​ ಮಾಹಿತಿ; ಮಾರ್ಗಸೂಚಿ ಪ್ರಕಟ

ಬೆಂಗಳೂರು, ಏಪ್ರಿಲ್​ 05: ಏಪ್ರಿಲ್ ಆರಂಭದಲ್ಲೇ ಬೇಸಿಗೆ ತೀವ್ರಗೊಳ್ತಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪ ಜನರನ್ನು ಹೈರಾಣಾಗಿಸಿದೆ. ಅದರಲ್ಲೂ ಕೂಲ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಕರೆಯಲ್ಪಡುವ ಬೆಂಗಳೂರು ಸದ್ಯಕ್ಕೆ ಬಿಸಿಲೂರಾಗಿ ಮಾರ್ಪಟ್ಟಿದೆ. ಬಿಸಿಲಿನ ತಾಪದಿಂದ ಏಕಾಏಕಿ ಶಂಕಿತ ಕಾಲರಾ (Cholera), ಬಿಸಿಗಾಳಿ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಹಾಗಾಗಿ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್​ ಸುದ್ದಿಗೋಷ್ಠಿ ಮಾಡಿದ್ದು, ಬಿಸಿಲಿನ ತಾಪ, ಬಿಸಿಗಾಳಿ, ಕಾಲರಾ ಬಗ್ಗೆ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದ್ದು, ಸಾಂಕ್ರಾಮಿಕ ರೋಗಿಗಳ ಡೇಟಾ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದರು.


ತಲಾ ಇಬ್ಬರು ಮೃತ


ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಮೃತಪಟ್ಟಿಲ್ಲ ಎಂಬ ಮಾಹಿತಿ ಬಂದಿದೆ. ಇತರೆ ರೋಗಗಳಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬಿಸಿಲಿ ತಾಪವೂ ಇದಕ್ಕೆ ಕಾರಣ ಅನ್ನೋ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಬಿಸಿಗಾಳಿ ಆಘಾತದ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ 5, ತಾಲೂಕು ಆಸ್ಪತ್ರೆಯಲ್ಲಿ 2 ಬೆಡ್ ಮೀಸಲಿಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದರು.



Leave a Comment: