ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪ-ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು

Posted by Vidyamaana on 2023-10-07 04:47:42 |

Share: | | | | |


ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪ-ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು

ಪುತ್ತೂರು:ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭ ನಡೆದ ಕಲ್ಲುತೂರಾಟದಿಂದ ಮನೆಗಳಿಗೆ ಹಾನಿಯಾಗಿರುವ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?

ಕಲ್ಲುತೂರಾಟದಿಂದ ಮನೆಗೆ ಹಾನಿಯಾಗಿ ಸಂತ್ರಸ್ತರಾಗಿದ್ದವರ ಭೇಟಿ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 ಎ ಅಡಿಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.


ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ - ಆರೋಪಿ ಪೊಲೀಸ್ ವಶಕ್ಕೆ..?

Posted by Vidyamaana on 2024-03-31 07:29:41 |

Share: | | | | |


ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ - ಆರೋಪಿ ಪೊಲೀಸ್ ವಶಕ್ಕೆ..?

ಕಡಬ :ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಪಾಕ್ ಪಡೆಗೆ ಸೋಲುಣಿಸಿದ ಟೀಮ್ ಇಂಡಿಯಾ

Posted by Vidyamaana on 2023-10-14 21:10:49 |

Share: | | | | |


ಪಾಕ್ ಪಡೆಗೆ ಸೋಲುಣಿಸಿದ ಟೀಮ್ ಇಂಡಿಯಾ

ಅಹ್ಮದಾಬಾದ್‌: ವಿಶ್ವದ ಅತೀ ದೊಡ್ಡ ಕ್ರೀಡಾಂಗಣ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ಜಾಗತಿಕ ಕ್ರಿಕೆಟಿನ ಬದ್ಧ ಎದುರಾಳಿಗಳ ಶನಿವಾರದ ಹೋರಾಟದಲ್ಲಿ ಪರಿಪೂರ್ಣ ಮೇಲುಗೈ ಸಾಧಿಸಿದ ಭಾರತ ಅಮೋಘ ಜಯ ದಾಖಲಿಸಿ ಈ ವಿಶ್ವಕಪ್‌ನ ಹ್ಯಾಟ್ರಿಕ್‌ ಜಯವನ್ನು ಸ್ಮರಣೀಯವಾಗಿಸಿದೆ. ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೆ ಏರಿದೆ.


ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ರೋಹಿತ್ ಶರ್ಮ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

”ಟೀಮ್ ಇಂಡಿಯಾ ಎಲ್ಲಾ ರೀತಿಯಲ್ಲಿ!,ಅಹಮದಾಬಾದ್‌ನಲ್ಲಿ ಇಂದು ಅಮೋಘ ಗೆಲುವು, ಆಲ್‌ರೌಂಡ್‌ ಶ್ರೇಷ್ಠತೆ.ತಂಡಕ್ಕೆ ಅಭಿನಂದನೆಗಳು ಮತ್ತು ಮುಂದಿನ ಪಂದ್ಯಗಳಿಗೆ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಹಾಜರಿದ್ದು ಪಂದ್ಯ ವೀಕ್ಷಿಸಿದರು


ಏಕದಿನ ವಿಶ್ವಕಪ್‌ನಲ್ಲಿ ಈವರೆಗೆ ಭಾರತದ ವಿರುದ್ಧ ಪಾಕಿಸ್ಥಾನ ಗೆದ್ದದ್ದೇ ಇಲ್ಲ. 1992ರಿಂದ ಮೊದಲ್ಗೊಂಡು 2019ರ ವರೆಗಿನ ಎಲ್ಲ 8 ಪಂದ್ಯಗಳಲ್ಲೂ ಟೀಮ್‌ ಇಂಡಿಯಾ ಜಯಭೇರಿ ಮೊಳಗಿಸಿದೆ.


ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಬಿಗಿ ಬೌಲಿಂಗ್ ದಾಳಿ ಸಂಘಟಿಸಿತು. ಅತ್ಯುತ್ತಮ ನಿರ್ವಹಣೆ ತೋರಿದ ಎಲ್ಲ ಬೌಲರ್ ಗಳು ಬ್ಯಾಟಿಂಗ್ ಬಲವಿರುವ ಪಾಕಿಸ್ಥಾನವನ್ನು 42.5 ಓವರ್ ಗಳಲ್ಲಿ 191 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಗುರಿ ಬೆನ್ನಟ್ಟಿದ ಭಾರತ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.


ನಾಯಕ ರೋಹಿತ್ ಶರ್ಮ ಮತ್ತೆ ಅಬ್ಬರಿಸಿದರು. 63 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು. 6ಸಿಕ್ಸರ್ ಮತ್ತು 6 ಬೌಂಡರಿ ಗಳನ್ನು ಬಾರಿಸಿದರು. ಶುಭಮನ್ ಗಿಲ್ 16 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಕೂಡ 16 ರನ್ ಗಳಿಸಿ ಔಟಾದರು. ಉತ್ತಮ ನಿರ್ವಹಣೆ ತೋರಿದ ಶ್ರೇಯಸ್ ಅಯ್ಯರ್ ತಾಳ್ಮೆಯ ಆಟವಾಡಿ ಅರ್ಧಶತಕ ಗಳಿಸಿದರು. ಬೌಂಡರಿ ಮೂಲಕ ಗೆಲುವಿನ ಗುರಿ ತಲುಪಿದರು.62 ಎಸೆತಗಳಲ್ಲಿ ಅಜೇಯ 53 ಗಳಿಸಿದರು. ಕೆಎಲ್ ರಾಹುಲ್ 19 ರನ್ ಗಳಿಸಿ ಔಟಾಗದೆ ಉಳಿದರು.ಭಾರತದ ಪರ ಬಿಗಿ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 7 ಓವರ್ ಗಳಲ್ಲಿ1 ಮೇಡನ್ ಸಹಿತ 19 ರನ್(2.70ಎಕಾನಮಿ) ಮಾತ್ರ ಬಿಟ್ಟು ಕೊಟ್ಟು 2 ವಿಕೆಟ್ ಕಿತ್ತಿದ್ದರು.



ಪಾಕ್ ಪರ ಆರಂಭಿಕರಾದ ಅಬ್ದುಲ್ಲಾ ಶಫೀಕ್ 20 ,ಇಮಾಮ್-ಉಲ್-ಹಕ್ 36 ರನ್ ಗಳಿಸಿ ಔಟಾದರು. ಶಫೀಕ್ ಅವರನ್ನು ಸಿರಾಜ್ ಎಲ್ಬಿಡಬ್ಲ್ಯೂ ಮಾಡುವ ಮೂಲಕ ಮೊದಲ ವಿಕೆಟ್ ಕಬಳಿಸಿ ಆಘಾತ ನೀಡಿದರು.


ನಾಯಕ ಬಾಬರ್ ಆಜಮ್ ಗರಿಷ್ಠ 50 ರನ್ ಗಳಿಸಿ ಔಟಾದರೆ ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದ್ದ ವೇಳೆ ಔಟಾದರು. ,ಸೌದ್ ಶಕೀಲ್ 6, ಇಫ್ತಿಕರ್ ಅಹ್ಮದ್4 , ಶಾದಾಬ್ ಖಾನ್ 2, ಮೊಹಮ್ಮದ್ ನವಾಜ್4 , ಹಸನ್ ಅಲಿ 12 , ಹಾರಿಸ್ ರೌಫ್ 2 ರನ್ ಗಳಿಸಿ ಔಟಾದರು. ಶಾಹೀನ್ ಅಫ್ರಿದಿ (2) ಔಟಾಗದೆ ಉಳಿದರು.


ಪ್ರತಿಷ್ಠೆಯ ಪಂದ್ಯದಲ್ಲಿ ಅಮೋಘ ನಿರ್ವಹಣೆ ತೋರಿದ ಭಾರತದ ಬೌಲರ್ ಗಳು ನಿರೀಕ್ಷೆಗೂ ಮೀರಿದ ನಿರ್ವಹಣೆ ತೋರಿ ಗಮನಸೆಳೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಅವರು ತಲಾ 2 ವಿಕೆಟ್ ಪಡೆದರು.

ಭವಾನಿ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಮಾಜಿ ಸಚಿವ ಹೆಚ್ ಡಿ ರೇವಣ್ಣ

Posted by Vidyamaana on 2023-12-04 18:01:47 |

Share: | | | | |


ಭವಾನಿ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ  ಕ್ಷಮೆ ಕೇಳುತ್ತೇನೆ  ಮಾಜಿ ಸಚಿವ ಹೆಚ್ ಡಿ ರೇವಣ್ಣ

ಬೆಳಗಾವಿ, ಡಿ 04: ನನ್ ಪತ್ನಿ ಭವಾನಿ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.


ತಾವಿದ್ದ ಕಾರಿಗೆ ಗುದ್ದಿದ ಬೈಕ್ ಸವಾರನಿಗೆ ಭವಾನಿ ರೇವಣ್ಣ ಬೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಬೈಕ್ ಸವಾರನೇ ಒಂದು ಬದಿಯಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು?. ಅವರು ಏನೂ ಅಹಂಕಾರದಿಂದ ಮಾತಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಲ್ಲಿ ಮಾತನಾಡಿದ್ದಾರೆ. ನಮ್ಮ‌ ಕುಟುಂಬದವರಿಂದ ಯಾರಿಗೂ ನೋವು ಮಾಡುವ ಕೆಲಸ ಆಗಿಲ್ಲ ಎಂದು ಹೇಳಿದ್ದಾರೆ.


ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು?.


ಅಪಘಾತದ ವಿಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್ ಸವಾರನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು?. ಆದ್ದರಿಂದ ಭವಾನಿ ಅವರ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ.


ಅಪಘಾತದ ಕುರಿತು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ವಾಹನ ಅಪಘಾತ ಆದ ಮೇಲೆ ದೂರು ಕೊಡದಿದ್ದರೆ ತಪ್ಪಾಗಲ್ಲವಾ?. ಘಟನೆ ನಡೆದ ಬಳಿಕ ಠಾಣೆಗೆ ತಿಳಿಸಬೇಕಲ್ಲವಾ?. ಇನ್ಷುರೆನ್ಸ್ ಗಾಗಿ ದೂರು ನೀಡಿದ್ದಾರೆ ಅಷ್ಟೇ. ಬೈಕ್ ಸವಾರನಿಂದ ಕಾರಿನ‌ ಹಾನಿಯ ಮೊತ್ತ ಕೇಳುವುದಿಲ್ಲ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.


ಬೈಕ್ ಸವಾರ ಕುಡಿದಿದ್ದ. ಕುಡಿದು ಬಂದು ಕಾರಿಗೆ ಮುಂದಿನಿಂದ ಗುದ್ದಿದ್ದಾನೆ. ಈತನಿಂದ ಕಾರಿನಲ್ಲಿದ್ದವರ ಪ್ರಾಣಕ್ಕೆ ತೊಂದರೆ ಆಗಿದ್ದರೆ?. ಎಷ್ಟೇ ನಿಧಾನವಾಗಿ ಹೋಗಿದ್ದರೂ ಬಂದು ಮಧ್ಯದಲ್ಲಿ ಗುದ್ದಿದ್ದಾನೆ. ಅದನ್ನು ದೊಡ್ಡ ವಿಷಯ ಮಾಡುವುದು ಬೇಡ ಎಂದು ಹೇಳಿದರು.


ಯಾರನ್ನೂ ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶ ಹೊಂದಿರಲಿಲ್ಲ. ಅವರ ಹೇಳಿಕೆಯಿಂದ ನೋವಾಗಿದ್ದರೆ ರಾಜ್ಯದ ಜನತೆಯ ಕ್ಷಮೆ ಕೋರುತ್ತೇನೆ. ಬೈಕ್ ಸವಾರ ಮದ್ಯ ಕುಡಿದಿದ್ದ ಕಾರಣ ಅಪಘಾತ ಸಂಭವಿಸಿದೆ. ಆತನ ವಿರುದ್ಧ ದೂರು, ಕ್ರಮ ಕೈಗೊಳ್ಳಲ್ಲ. ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.


ಭವಾನಿ ರೇವಣ್ಣ ಇದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ :


ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಸಂಚರಿಸುತ್ತಿದ್ದ ಕಾರಿಗೆ ಬೈಕ್​ ಸವಾರನೋರ್ವ ಡಿಕ್ಕಿ ಹೊಡೆದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ರಾಂಪುರ ಜಂಕ್ಷನ್​ ಬಳಿ ಭಾನುವಾರ ನಡೆದಿತ್ತು. ಈ ವೇಳೆ ಭವಾನಿ ರೇವಣ್ಣ ಬೈಕ್​ ಸವಾರರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

RCB ಬೆನ್ನು ಬಿಡದ ಬ್ಯಾಡ್ ಲಕ್ !!!; ಕೆಕೆಆರ್ ಎದುರು 1 ರನ್ ಸೋಲು

Posted by Vidyamaana on 2024-04-22 07:29:22 |

Share: | | | | |


RCB ಬೆನ್ನು ಬಿಡದ ಬ್ಯಾಡ್ ಲಕ್ !!!; ಕೆಕೆಆರ್ ಎದುರು 1 ರನ್ ಸೋಲು

ಕೋಲ್ಕತಾ : ಈಡನ್ ಗಾರ್ಡನ್ಸ್ ನಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದೇ ಒಂದು ರನ್ ನಿಂದ ಸೋಲು ಅನುಭವಿಸಿದ್ದು ತಂಡದ ದುರಾದೃಷ್ಟಕ್ಕೆ ಸಾಕ್ಷಿಯಾಯಿತು.ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಕೆಕೆಆರ್ ಪರ ಓಪನರ್ ಫಿಲ್ ಸಾಲ್ಟ್ ಅವರ ಆಕ್ರಮಣಕಾರಿ 48 ರನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಆಘಾತ ಅನುಭವಿಸಿತು. 7 ರನ್ ಗಳಿಸಿ ನಾಯಕ ಫ್ಲೆಸಿಸ್ ಔಟಾದರೆ, ಕೊಹ್ಲಿ 18 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು. ಆ ಬಳಿಕ ಭರವಸೆಯ ನಿರ್ಣಾಯಕ ಆಟವಾಡಿದ ವಿಲ್ ಜ್ಯಾಕ್ಸ್ 55(32 ಎಸೆತ) ರನ್ ಗಳಿಸಿ ಔಟಾದರು. ಅವರಿಗೆ ಸಾಥ್ ನೀಡಿದ ರಜತ್ ಪಾಟಿದಾರ್ 52 (23 ಎಸೆತ) ರನ್ ಗಳಿಸಿ ಔಟಾದರು.

ಉಳ್ಳಾಲ: ತಡರಾತ್ರಿ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ: ಕೋಟೆಪುರ ನಿವಾಸಿ ಸಾದತ್ತುಲ್ಲಾ ಗಂಭೀರ..!!

Posted by Vidyamaana on 2023-03-04 04:48:18 |

Share: | | | | |


ಉಳ್ಳಾಲ: ತಡರಾತ್ರಿ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ: ಕೋಟೆಪುರ  ನಿವಾಸಿ ಸಾದತ್ತುಲ್ಲಾ ಗಂಭೀರ..!!

ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.

ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು.

ಗಾಯಾಳು ಗಂಭೀರ ಸ್ಥಿತಿಯಲ್ಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಹಾಗೂ ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.

ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆಯನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ



Leave a Comment: