ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

Posted by Vidyamaana on 2023-06-16 09:01:27 |

Share: | | | | |


ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.

ಪುತ್ತೂರು : ಎ.ಸಿ.ಗಿರೀಶ್ ನಂದನ್ ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ

Posted by Vidyamaana on 2023-07-14 11:39:40 |

Share: | | | | |


ಪುತ್ತೂರು : ಎ.ಸಿ.ಗಿರೀಶ್ ನಂದನ್ ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ

ಪುತ್ತೂರು : ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್‌ ನಂದನ್‌ ಅವರ ವರ್ಗಾವಣೆ ಆದೇಶಕ್ಕೆ ಕರ್ನಾಟಕ ಅಡ್ಮಿನಿಸ್ಟ್ರೇಟಿವ್‌ ಟ್ರಿಬ್ಯೂನಲ್‌ ತಡೆಯಾಜ್ಞೆ ನೀಡಿದೆ.


ಅವಧಿಪೂರ್ವ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಮತ್ತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಿರೀಶ್‌ ನಂದನ್‌ ಕೆಎಟಿ ಗೆ ದೂರು ದಾಖಲಿಸಿದ್ದರು.


ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ.


ಈ ಹಿಂದೆ ಗಿರೀಶ್‌ ನಂದನ್‌ ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸರಕಾರ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ನೋಟೀಸ್‌ ಜಾರಿಗೊಳಿಸಿ ತನಿಖಾಧಿಕಾರಿಯನ್ನು ನೇಮಿಸಿತ್ತು.


ಈ ನಡುವೆ ವಿಚಾರಣೆ ಪೂರ್ಣಗೊಳ್ಳುವುದಕ್ಕೆ ಮೊದಲು ಅವರನ್ನು ಹಾಸನ ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ವರ್ಗಾವಣೆಗೊಳಿಸಿತ್ತು.


ತದನಂತರ 2-2-2022ರಲ್ಲಿ ಪುತ್ತೂರು ಉಪವಿಭಾಗಧಿಕಾರಿಯಾಗಿ ವರ್ಗಾವಣೆಗೊಳಿಸಿತ್ತು.


ತನ್ನ ವಿರುದ್ಧದ ತನಿಖೆ ಪೂರ್ಣಗೊಳ್ಳುವುದಕ್ಕೆ ಮೊದಲು ಮತ್ತೆ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಅವಧಿ ಪೂರ್ವ ವರ್ಗಾವಣೆ ಮಾಡಿರುವ ಬಗ್ಗೆ ಗಿರೀಶ್‌ ನಂದನ್‌ ಕೆಎಟಿ ಗೆ ದೂರು ದಾಖಲಿಸಿದ್ದರು.


ದೂರು ದಾಖಲಿಸಿದ ಕೆಎಟಿ ಮುಂದಿನ ಆದೇಶದವರೆಗೆ ಸರಕಾರದ ವರ್ಗಾವಣೆ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.22ರಂದು ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು

Posted by Vidyamaana on 2023-09-23 13:10:28 |

Share: | | | | |


ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.22ರಂದು ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು

ಪುತ್ತೂರು : ವಿಜಯ ಸಾಮ್ರಾಟ್  ಪುತ್ತೂರು ಇದರ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಪುತ್ತೂರುದ ಪಿಲಿಗೊಬ್ಬು  ಕಾರ್ಯಕ್ರಮ  ಅ.22 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ಪಿಲಿಗೊಬ್ಬು ಸ್ಪರ್ಧೆಯು ನಡೆಯಲಿದ್ದು, ಈ ಸ್ಪರ್ಧೆಯ ಯಶಸ್ವಿಗೆ ದರ್ಬೆ ಶ್ರೀರಾಮ ಸೌಧದಲ್ಲಿ ಸಮಿತಿಯನ್ನು ರಚಿಸಲಾಯಿತು.

ಶ್ರೀರಾಮ ಸೌಧದ ಮಾಲಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಸಂಚಾಲಕರಾಗಿ ನಾಗರಾಜ್ ನಡುವಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷರುಗಳಾಗಿ ಸಂದೀಪ್ ರೈ ನಂಜೆ ಹಾಗೂ ದೇವಿಪ್ರಕಾಶ್ ಭಂಡಾರಿ, ಕಾರ್ಯದರ್ಶಿಗಳಾಗಿ ಸುರೇಶ್ ಪಿದಪಟ್ಲ ಹಾಗೂ ಶರತ್ ಕುಮಾರ್ ಮಾಡಾವು, ಜೊತೆ ಕಾರ್ಯದರ್ಶಿಯಾಗಿ ಶಂಕರ್ ಭಟ್, ಈಶಾನ್ಯ, ಕೋಶಾಧಿಕಾರಿಯಾಗಿ ರಾಜೇಶ್ ಕೆ. ಗೌಡ ಹಾಗೂ ಅಶೋಕ್ ಅಡೂರು, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ರೈ ಹಾಗೂ ಉದಯ್ ಪಾಟಾಳಿ ಬೆಳ್ಳಾರೆ.


ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಯಾನಂದ ಶೆಟ್ಟಿ ಉಜೈಮಾರ್, ಪ್ರೀತಂಶೆಟ್ಟಿ ಪೆರ್ನೆ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಪ್ರಮೀತ್ ರಾಜ್ ಕಟ್ಟತ್ತಾರು, ವಿನಯ ರೈ ಕೋರಿಕ್ಕಾರು, ಆನಂದ ತೆಂಕಿಲ, ದಿನೇಶ್ ವಾಸುಕಿ, ಚಂದ್ರಶೇಖರ ರೈ ಸಣಂಗಲ, ಸತೀಶ್ ರೈ ದೇವಿನಗರ, ಕಿಶೋರ್ ಕೊಳಿಗೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ಸಚಿನ್ ಶೆಟ್ಟಿ ನರಿಮೊಗರು, ಸಾಯಿರಾಂ ಬಾಳಿಲ, ಸುಬ್ಬು ಸಂಟ್ಯಾರ್, ವಸಂತ ಕುಮಾರ್ ಪುತ್ತೂರು, ಸತೀಶ್ ಬಲಮುರಿ, ಪ್ರದೀಪ್ ರೈ ಕರ್ನೂರ್, ಪ್ರಶಾಂತ್ ಸವಣೂರು, ಯಶು ಸಂಪ್ಯ, ಯತೀಶ್ ಕುರಿಯ, ಪುನೀತ್ ಕೆಯ್ಯರು, ಹರ್ಷಕುಮಾರ್ ಪುತ್ತೂರು, ಚರಣ್ ರೈ ಮಠ, ಸಚಿನ್ ಸವಣೂರು, ಪವನ್ ಶೆಟ್ಟಿ, ಪ್ರಗತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

Posted by Vidyamaana on 2023-12-07 04:27:34 |

Share: | | | | |


ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

ವಿಟ್ಲ: ಸಾಲೆತ್ತೂರಿನ ತೋಟವೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.


ಗುಲಾಬಿ(48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.


ಇವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದಿದ್ದು, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಮಹಿಳೆಯನ್ನು ಕೂಡಲೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ; ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

Posted by Vidyamaana on 2023-05-11 07:58:58 |

Share: | | | | |


ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ; ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

ಉಳ್ಳಾಲ: ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಮೇ.10ರ ರಾತ್ರಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮಹತ್ಯೆಗೈದ ಯುವಕ.ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಸಿಟ್ ಔಟ್ ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮೇ.10ರ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು (ಮೇ.11) ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೆ ಮನೆಮಂದಿ ನೇಣು ಕುಣಿಕೆ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



Leave a Comment: