ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಸುದ್ದಿಗಳು News

Posted by vidyamaana on 2024-07-08 15:11:53 |

Share: | | | | |


ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 Share: | | | | |


ಕೆರೆಯಲ್ಲಿ ಮಹಿಳೆ ಶವ ಪತ್ತೆ

Posted by Vidyamaana on 2023-05-19 23:23:40 |

Share: | | | | |


ಕೆರೆಯಲ್ಲಿ ಮಹಿಳೆ ಶವ ಪತ್ತೆ

ತೀರ್ಥಹಳ್ಳಿ : ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರ ದಡಿಗೆ ಬಂಡೆ ಕೆರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು,ಆಕೆಯ ನಾಲ್ಕು ಅವಳಿ ಜವಳಿ ಮಕ್ಕಳು ಅನಾಥವಾಗಿವೆ.ಮೃತ ಮಹಿಳೆ ಶೃತಿ(30) ಎಂದು ತಿಳಿದು ಬಂದಿದೆ.ಆಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ಪತಿಯನ್ನು ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ ವಿಶ್ವಾಸಾರ್ಹ ನಡೆಯ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಆದರೆ ಈಗ ದುರಂತ ಅಂತ್ಯ ಕಂಡಿದ್ದಾರೆ.

ಜೂನ್ 22ರ ಕರ್ನಾಟಕ ಬಂದ್ ಗೊಂದಲ

Posted by Vidyamaana on 2023-06-21 01:33:22 |

Share: | | | | |


ಜೂನ್ 22ರ ಕರ್ನಾಟಕ ಬಂದ್ ಗೊಂದಲ

ಪುತ್ತೂರು: ವಿದ್ಯುತ್ ದರ ಏರಿಕೆ ಸಂಬಂಧ ನಡೆಯಲಿದೆ ಎಂದು ಸುದ್ದಿಯಾಗಿದ್ದ ಬಂದ್ ಇದೀಗ ಗೊಂದಲಕ್ಕೆ ಎಡೆ ನೀಡಿದೆ.

ಜೂನ್ 22ರಂದು ಬಂದ್ ನಡೆಯಲಿದ್ದು, ಎಫ್.ಕೆ.ಸಿ.ಸಿ.ಐ. ಕರೆ ನೀಡಿದೆ ಎಂದು ಮೊದಲಿಗೆ ಸುದ್ದಿಯಾಗಿತ್ತು. ಈ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಬೆಂಬಲವನ್ನು ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಈ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಎಲ್ಲಾ ಗೊಂದಲಗಳ ನಡುವೆ ಎಚ್ಚೆತ್ತುಕೊಂಡ ಎಫ್.ಕೆ.ಸಿ.ಸಿ.ಐ. ರಾಜ್ಯಾಧ್ಯಕ್ಷರು ಬಿ.ವಿ. ಗೋಪಾಲ್ ರೆಡ್ಡಿ ಅವರು ತಾವು ಬಂದ್ಗೆ ಕರೆಯನ್ನೇ ಕೊಟ್ಟಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.

ಹಾಗಾದರೆ ಬಂದ್ಗೆ ಕರೆ ನೀಡಿದವರು ಯಾರು? ಈ ಗೊಂದಲ ಸಾರ್ವಜನಿಕ ವಲಯದಲ್ಲಿ‌ ಹರಿದಾಡುತ್ತಿದೆ.


ಬಿಜೆಪಿ ರಾಜ್ಯಾಧ್ಯಕ್ಷರು ಏನಂದರು?

ವಿದ್ಯುತ್ ದರ ಎರಿಕೆ ಖಂಡಿಸಿ ಎಫ್​ಕೆಸಿಸಿಐ ಕರೆ ನೀಡಿರುವ ರಾಜ್ಯ ಬಂದ್​​ಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ. ರಾಜ್ಯ ಸರ್ಕಾರದ ಹಠಮಾರಿ ಧೋರಣೆ ಕೈಬಿಡಬೇಕು, ಉದ್ಯಮಶೀಲರಿಗೆ ಅವಕಾಶ ಕೊಡಬೇಕು. ವಿದ್ಯುತ್ ದರದ ಬಗ್ಗೆ ಉದ್ಯಮಿಗಳ ಸಮಸ್ಯೆ ಆಲಿಸಿ, ನ್ಯಾಯ ಕೊಡಿಸುವ ಹಾಗೂ ಉದ್ಯಮಶೀಲತೆಗೆ ಅವಕಾಶ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.


ವರ್ತಕ ಸಂಘ 

ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ. 22ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ. ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ ಮಂಗಳೂರು ಛೇಂಬರ್ಸ್ ಆಫ್ ಕಾಮರ್ಸ್‍ & ಇಂಸ್ಟ್ರೀಸ್ ಸಲಹೆಯಂತೆ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹಾ, ಉಪಾಧ್ಯಕ್ಷ ಪಿ. ವಾಮನ್ ಪೈ, ನಿರ್ದೆಶಕ ಶ್ರೀಕಾಂತ್ ಕೊಳತ್ತಾಯ, ಪ್ರ.ಕಾರ್ಯದರ್ಶಿ ಉಲ್ಲಾಸ್ ಪೈ, ಮಾಜಿ ಅಧ್ಯಕ್ಷ ಕೇಶವ ಪೈ ತಿಳಿಸಿದ್ದಾರೆ.


ಎಫ್.ಕೆ.ಸಿ.ಸಿ.ಐ. ಸ್ಪಷ್ಟನೆ ಏನು?

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ತಿಳಿಸಿರುವ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.

ಮಡಿಕೇರಿ: ಕಾಮಗಾರಿ ನಡೆಯುತ್ತಿದ್ದ ವೇಳೆ ಬರೆ ಕುಸಿತ

Posted by Vidyamaana on 2023-10-31 20:08:42 |

Share: | | | | |


ಮಡಿಕೇರಿ: ಕಾಮಗಾರಿ ನಡೆಯುತ್ತಿದ್ದ ವೇಳೆ ಬರೆ ಕುಸಿತ

ಮಡಿಕೇರಿ: ಸ್ಟೀವರ್ಟ್ ಹಿಲ್ ಬಳಿ ಕಟ್ಟಡ ಕಾಮಗಾರಿಗೆ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ವರದಿಯಾಗಿದೆ.



ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸವ, ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದೆ.


ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ವಿರೋಧ ಪಕ್ಷದ ನಾಯಕಿ ಯಾರಮ್ಮಾ ಉಡುಪಿಯ ಸರ್ಕಾರಿ ಹಾಸ್ಟೆಲ್ ನಲ್ಲಿ ಸಿಎಂ ಹಾಸ್ಯ ಚಟಾಕಿ

Posted by Vidyamaana on 2023-08-01 12:47:27 |

Share: | | | | |


ವಿರೋಧ ಪಕ್ಷದ ನಾಯಕಿ ಯಾರಮ್ಮಾ ಉಡುಪಿಯ ಸರ್ಕಾರಿ ಹಾಸ್ಟೆಲ್ ನಲ್ಲಿ ಸಿಎಂ ಹಾಸ್ಯ ಚಟಾಕಿ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉಡುಪಿಗೆ ಭೇಟಿ ನೀಡಿದ ವೇಳೆ ಎರಡು ಸರಕಾರಿ ಹಾಸ್ಟೆಲ್‌ಗ‌ಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಚ್ಚರಿ ಮೂಡಿಸಿದರು.


ಹಾಸ್ಟೆಲ್‌ನ ಬೋರ್ಡ್‌ನಲ್ಲಿ ವಿದ್ಯಾರ್ಥಿ ನಾಯಕಿಯರ ಸಮಿತಿಯ ಪ್ರಧಾನ ಮಂತ್ರಿ, ಆರೋಗ್ಯ ಮಂತ್ರಿ ಪಟ್ಟಿಯನ್ನು ನೋಡಿದ ಸಿಎಂ ಅವರು ವಿರೋಧ ಪಕ್ಷದ ನಾಯಕಿ ಯಾರಮ್ಮ? ಎಲ್ಲಿದ್ದಿಯಮ್ಮ ಎಂದು ಪ್ರಶ್ನಿಸಿ ನಗೆ ಚಟಾಕಿ ಹಾರಿಸಿದರು. ವಿದ್ಯಾರ್ಥಿಗಳು ಸಿಎಂ ಅವರಿಗೆ ತಮ್ಮ ಹೆಸರು ಪರಿಚಯ ಹೇಳಿಕೊಂಡು ಗ್ರೂಪ್‌ ಫೋಟೊ ತೆಗೆಸಿಕೊಂಡರು.


ಬನ್ನಂಜೆ ಸರಕಾರಿ ನಿಲಯದ ಸಮೀಪದಲ್ಲಿರುವ ಹಿಂದುಳಿದ ವರ್ಗಗಳ ದೇವರಾಜ ಅರಸು ಮೆಟ್ರಿಕ್‌ ನಂತರದ ಹಾಸ್ಟೆಲ್‌ಗೆ ಮೊದಲು ಭೇಟಿ ನೀಡಿದರು. ಸರಕಾರಿ ಸಭೆ, ಸಂಘ, ಸಂಸ್ಥೆ, ಪಕ್ಷದ ಕಾರ್ಯಕರ್ತರ ಭೇಟಿ, ಮನವಿಗಳ ಒತ್ತಡದ ನಡುವೆಯೂ ನಾಡದೊರೆ ವಿದ್ಯಾರ್ಥಿನಿಯರ ಯೋಗಕ್ಷೇಮ ವಿಚಾರಿಸಿ ಗಮನ ಸೆಳೆದರು. ಸಿಎಂ ಅವರನ್ನು ನೇರವಾಗಿ ಕಂಡ ವಿದ್ಯಾರ್ಥಿನಿಯರು ಅಚ್ಚರಿ, ಸಂತಸ ವ್ಯಕ್ತಪಡಿಸಿದರು. ಹಾಸ್ಟೆಲ್‌ನ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿನಿಯರು ಮಲಗುವ ಬೆಡ್‌ಗಳ ವ್ಯವಸ್ಥೆಯನ್ನು ಪರಿಶೀಲಿಸಿದರು. ಅನಂತರ ಹಾಸ್ಟೆಲ್‌ ವಿದ್ಯಾರ್ಥಿನಿಯರ ಜತೆಗೆ ಸಿಎಂ ಮಾತುಕತೆ ನಡೆಸಿದರು.


ಊಟ, ತಿಂಡಿ ಸರಿಯಾಗಿ ಕೊಡುತ್ತಾರ ? ನೀರಿನ ಸಮಸ್ಯೆ ಇದೆಯಾ ? ಆರೋಗ್ಯ ಪರೀಕ್ಷೆಗೆ ಡಾಕ್ಟರ್‌ ಬರುತ್ತಾರ ? ಸೋಪು, ಪೇಸ್ಟ್‌ ಸರಿಯಾಗಿ ಕೊಡುತ್ತಾರ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದರು. ಕಷ್ಟದ ದಿನಗಳಲ್ಲಿ ಬಾಲ್ಯವನ್ನು ಕಳೆದು ಶಿಕ್ಷಣ ಪೂರೈಸಿದವನು ನಾನು. ಸರಕಾರ ಇಂದಿನ ಮಕ್ಕಳಿಗೆ ಎಲ್ಲ ಸೌಲಭ್ಯ, ಸಹಕಾರ ನೀಡುತ್ತಿದೆ. ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಇವರು ಯಾರು ಗೊತ್ತ ?

ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಯರ ಜತೆ ಚರ್ಚಿಸುವಾಗ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತೋರಿಸಿ ಇವರು ಯಾರು ಗೊತ್ತ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಂದು ವಿದ್ಯಾರ್ಥಿನಿಯರು ಉತ್ತರಿಸಿದರು. ನಿಮ್ಮ ಏನೇ ಸಮಸ್ಯೆ ಇದ್ದರೂ ಇವರ ಬಳಿ ಹೇಳಿಕೊಳ್ಳಿ. ಪರೀಕ್ಷೆಗೆ ಚೆನ್ನಾಗಿ ಓದಿ ಉತ್ತಮ ಅಂಕ ಪಡೆಯಬೇಕು ಎಂದು ಸಲಹೆ ನೀಡಿದರು.ಈಯಮ್ಮನ ನೋಡ್ಬೇಡಿ, ನನ್ನ ನೋಡ್ಕಂಡ್‌ ಹೇಳ್ರಮ್ಮ

ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್‌ ಅನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಕೆಲಕಾಲ ಸಮಯ ಕಳೆದರು. ಊಟ, ತಿಂಡಿ, ಶುಚಿತ್ವ ವ್ಯವಸ್ಥೆ ಹೇಗಿದೆ ಎಂದು ಮಾಹಿತಿ ಪಡೆದರು. ಎನಾದರೂ ಸಮಸ್ಯೆ ಇದ್ದರೆ ಹೇಳಿಕೊಳ್ಳಿ. ಈಯಮ್ಮನ ನೋಡ್ಬೇಡಿ(ನಿಲಯ ಮೇಲ್ವಿಚಾರಕಿ), ನನ್ನ ನೋಡ್ಕಂಡ್‌ ಹೇಳ್ರಮ್ಮ ಎಂದು ಸಿಎಂ ಜೋರಾಗಿ ಹೇಳಿದರು. ಊಟೋಪಚಾರ, ಸೌಲಭ್ಯಗಳು ಉತ್ತಮವಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗೆ ಮತ್ತು ಕರಾಟೆಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಸಿಎಂಗೆ ತಿಳಿಸಿದರು.



ಸರಕಾರಿ ಉಚಿತ ಯೋಜನೆಗಳ ಬಗ್ಗೆ ವಿದ್ಯಾರ್ಥಿನಿಯರ ಜತೆಗೆ ಚರ್ಚಿಸಿದರು. ನಿಮ್ಮ ಅಮ್ಮಂದಿರಿಗೆ ಹೇಳಿ ಗೃಹ ಲಕ್ಷ್ಮೀ ಯೋಜನೆ ನೋಂದಣಿ ಮಾಡಿಸಿ ಎಂದರು.


ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ವಿವಿಧ ಜನಪ್ರತಿನಿಧಿಗಳು, ಪಕ್ಷದ ನಾಯಕರು, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ. ಪಂ. ಸಿಇಒ ಪ್ರಸನ್ನ ಎಚ್‌., ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಸಹಾಯಕ ನಿರ್ದೇಶಕ ರಮೇಶ್‌, ನಿಲಯ ಮೇಲ್ವಿಚಾರಕಿ ಸುಚಿತ್ರಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಗಣೇಶ್‌ ನಾಯಕ್‌, ನಿಲಯ ಮೇಲ್ವಿಚಾರಕ ಶ್ರೀಕಾಂತ್‌ ಉಪಸ್ಥಿತರಿದ್ದರು.

ಬಂಟ್ವಾಳ: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ರಾಜ್ ಕುಮಾರ್ ಮೃತ್ಯು

Posted by Vidyamaana on 2023-09-24 16:55:47 |

Share: | | | | |


ಬಂಟ್ವಾಳ: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ರಾಜ್ ಕುಮಾರ್ ಮೃತ್ಯು

ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು (ಸೆ.24ರ ಭಾನುವಾರ) ಬೆಳಿಗ್ಗೆ ಪಾಣೆಮಂಗಳೂರಿನ ನೂತನ ಸೇತುವೆಯಲ್ಲಿ ನಡೆದಿದೆ.


ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಮೃತಪಟ್ಟವರು.


ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು.


ವಾಮದಪದವಿನ ಮನೆಯಿಂದ ಸಜೀಪದಲ್ಲಿರುವ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಢಿಕ್ಕಿಯಾಗಿದೆ.


ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

Posted by Vidyamaana on 2024-05-20 09:24:27 |

Share: | | | | |


BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ.ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ.



Leave a Comment: