ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಕೈ ಹಿಡಿತಾರಾ ಡಿವಿಎಸ್? ಮಾ.19ರಂದು ಮಹತ್ವದ ಸುದ್ದಿಗೋಷ್ಠಿ

Posted by Vidyamaana on 2024-03-18 12:12:08 |

Share: | | | | |


ಕೈ ಹಿಡಿತಾರಾ ಡಿವಿಎಸ್? ಮಾ.19ರಂದು ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು :ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರು ನಾಳೆ ಮಹತ್ವದ ಸುದ್ದಿಗೋಷ್ಠಿಯೊಂದನ್ನು ಕರೆದಿದ್ದು, ಬಹಳ ಕುತೂಹಲವನ್ನು ಉಂಟುಮಾಡಿದ್ದಾರೆ.ಲೋಕಸಭೆ ಚುನಾವಣೆ ಸಮಯಲ್ಲಿ ಡಿವಿ ಸದಾನಂದ ಗೌಡ ಅವರು ಸುದ್ದಿಗೋಷ್ಠಿಯನ್ನು ಕರೆದಿದ್ದು, ಇವರ ಮುಂದಿನ ನಡೆ ಏನು? ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆಯಲಾಗಿದೆ ಎಂಬ ಕುತೂಹಲ ಮೂಡಿದೆ. ನಾಳೆ ಬೆಳಗ್ಗೆ 10.30 ಕ್ಕೆ ಡಿವಿಎಸ್‌ ಸುದ್ದಿಗೋಷ್ಠಿ ಕರೆದಿದ್ದಾರೆ.ಬಿಜೆಪಿ ಹೈಕಮಾಂಡ್‌ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟನ್ನು ಶೋಭಾ ಕರಂದ್ಲಾಜೆ ಅವರಿಗೆ ನೀಡಿದ್ದು, ಇತ್ತೀಚೆಗೆ ಶೋಭಾ ಅವರು ಡಿವಿಎಸ್‌ ಅವರ ಆಶೀರ್ವಾದ ಕೂಡಾ ಪಡೆದುಕೊಂಡಿದ್ದರು. ಅನಂತರ ಡಿವಿಎಸ್‌ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದವರಿಗೆ ಪೋಸ್ಟ್‌ವೊಂದನ್ನು ಮಾಡಿ, ಧನ್ಯವಾದ ಹೇಳಿಕೊಂಡಿದ್ದರು.


ಲೋಕಸಭಾ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ನಿನ್ನೆ ಬಂದು ಭೇಟಿ ಮಾಡಿದ್ದಾರೆ. ಚರ್ಚೆ ಮಾಡಿ ಆಫರ್‌ ಕೂಡಾ ನೀಡಿದ್ದಾರೆ. ಈ ಕುರಿತು ನನ್ನ ಮನೆಯವರೊಂದಿಗೆ ಮಾತನಾಡುವೆ. ನಂತರ ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.


ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ,ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ.. ತಿಳಿದೂ ಹೀಗೆ ಮಾಡಿರೋದು ಬೇಜಾರು ತಂದಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸದಾನಂದಗೌಡ ಸೋಮವಾರ (ಇಂದು) ಮಾಧ್ಯಮಗಳೊಂದಿಗೆ ಬೆಂಗಳೂರಿನಲ್ಲಿ ಹೇಳಿದರು

ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

Posted by Vidyamaana on 2023-10-24 06:41:54 |

Share: | | | | |


ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ   ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.


ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.


ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.


ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.


ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 


ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿದಿಯಲ್ಲಿ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಪತ್ರ ಬಿಡುಗಡೆ

Posted by Vidyamaana on 2023-12-21 11:15:59 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿದಿಯಲ್ಲಿ ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಡಿ.27 ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಡಿ.20 ರಂದು ನಡೆಯಿತು.ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯುವ ಅಯ್ಯಪ್ಪ ದೀಪೋತ್ಸವ ಆಮಂತ್ರಣ ಪತ್ರವನ್ನು ಶ್ರೀ ಮಹಾಲಿಂಗೇಶ್ವರ ದೇವರ ಸತ್ಯ ಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.



ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರವೀಂದ್ರನಾಥ್ ರೈ ಬಳ್ಳಮಜಲು, ಡಾ. ಸುಧಾ ಎಸ್. ರಾವ್, ರಾಮದಾಸ್ ಗೌಡ, ಶೇಖರ್ ನಾರಾವಿ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಅಯ್ಯಪ್ಪ ಭಕ್ತವೃಂದ ದೇವಾನಂದ ಸಹಿತ ಹಲವರು ಉಪಸ್ಥಿತರಿದ್ದರು

ಮಂಗಳೂರು :ಚುನಾವಣಾ ಸಿಬಂದಿ ಆತ್ಮಹತ್ಯೆ ಯತ್ನ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Posted by Vidyamaana on 2024-04-02 20:06:48 |

Share: | | | | |


ಮಂಗಳೂರು :ಚುನಾವಣಾ ಸಿಬಂದಿ ಆತ್ಮಹತ್ಯೆ ಯತ್ನ  ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಮಂಗಳೂರು ಏ.2: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದೆ. ಕೂಡಲೇ ಅವರನ್ನು ನಗರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.


ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ  ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ನಲ್ಲೂ ಗ್ಯಾರಂಟಿ ಹವಾ

Posted by Vidyamaana on 2024-05-22 15:54:19 |

Share: | | | | |


ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ನಲ್ಲೂ ಗ್ಯಾರಂಟಿ ಹವಾ

ಬೆಂಗಳೂರು : ಸಿಟಿ ರೌಂಡ್ಸ್ ಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಗಳೂರು ನಗರವಾಸಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿ ಬಗ್ಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದರು.ಸಮಸ್ಯೆಗಳನ್ನು ಆಲಿಸುತ್ತ ಸಿಎಂ ಗೆ ಸಾರ್ವಜನಿಕರು ಮುಗಿಬಿದ್ದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬಗಳಿಗೆ ಆಗಿರುವ ಅನುಕೂಲಗಳನ್ನು ವಿವರಿಸಿ ಅಭಿನಂದಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ ಮೇಲೆ ದಾಳಿ ಮಾಡಿದ ಬೀದಿ ನಾಯಿ

Posted by Vidyamaana on 2024-02-17 02:30:49 |

Share: | | | | |


ಮಾಜಿ ಶಾಸಕ ಮೊಯ್ದಿನ್ ಬಾವಾ ಮೇಲೆ ದಾಳಿ ಮಾಡಿದ ಬೀದಿ ನಾಯಿ

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಘಟನೆ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಮೊಯಿದಿನ್ ಬಾವಾ ಅವರು ಕದ್ರಿ ಪಾರ್ಕಿಗೆ ವಾಕಿಂಗ್ ಬಂದಿದ್ದಾಗ ಬೀದಿ ನಾಯಿ ದಾಳಿ ಮಾಡಿದೆ. ಪರಿಣಾಮ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಅಲ್ಲದೇ ಬೀದಿ ನಾಯಿ ದಾಳಿಯಿಂದ ಕಾಲಿಗೆ ಬಲವಾದ ಏಟು ಬಿದ್ದಿದ್ದರಿಂದ ಗಾಲಿ ಕುರ್ಚಿ ಆಶ್ರಯಿಸಬೇಕಾಗಿದೆ.


ಘಟನೆ ನಡೆದ ಕೂಡಲೇ ಸ್ಥಳದಿಂದ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರಿಗೆ ಬಾವಾ ಅವರು ಫೋನ್ ಮಾಡಿ ವಿಷಯ ತಿಳಿಸಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕದ್ರಿ ಪಾರ್ಕಿನಲ್ಲಿ ಸಾಕು ನಾಯಿಗಳು ತರಲು ನಿಷೇಧ ವಿದ್ದರೂ ಬೀದಿ ನಾಯಿಗಳು ಇಲ್ಲಿ ಭಾರಿ ಸಂಖ್ಯೆಯಲ್ಲಿದ್ದು ಬೆಳಗ್ಗಿನ ಸಮಯ, ಹಾಗೂ ಸಂಜೆ ಹೊತ್ತು ವಾಕಿಂಗ್ ಬರುವವರಿಗೆ ಈ ಬೀದಿ ನಾಯಿಗಳು ಭಯ ಹುಟ್ಟಿಸುತ್ತಿವೆ. ಅದರಲ್ಲೂ ವೃದ್ಧರು, ಮಹಿಳೆಯರು ಮಕ್ಕಳು ಪಾರ್ಕಿಗೆ ಹೆಚ್ಚಾಗಿ ಬರುತ್ತಿದ್ದು ಬೀದಿ ನಾಯಿಗಳು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆಗಳಿಗೆ ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಮೊಯಿದಿನ್ ಬಾವಾ ಅವರು ಜಿಲ್ಲಾಡಳಿವನ್ನು ಆಗ್ರಹಿಸಿದ್ದಾರೆ

Recent News


Leave a Comment: