ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

Posted by Vidyamaana on 2024-02-17 21:49:20 |

Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

Posted by Vidyamaana on 2023-09-24 07:43:09 |

Share: | | | | |


ಮಂಗಳೂರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳಿಂದ ಒಟ್ಟು 55 ಗ್ರಾಂ ತೂಕದ 2 ಲಕ್ಷ 75 ಸಾವಿರ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಇದೇ ವೇಳೆ ಸ್ಕೂಟರ್, ಮೊಬೈಲ್ ಫೋನ್ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕೂಡಾ ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ.


ಅಬ್ದುಲ್ ಅಜೀಜ್, ಅಕ್ಷಿತ್ ಕುಮಾರ್, ಜಾಕೀರ್ ಮತ್ತು ಕಾರ್ತಿಕ್ ಸುವರ್ಣ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಅಬ್ದುಲ್ ಅಜೀಜ್ 15 ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆ, ಉಳ್ಳಾಲಬೈಲ್ ಪರಿಸರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಕಲ್ಲಡ್ಕ: ರೈಲಿನಡಿಗೆ ಬಿದ್ದು ಮಾಣಿ ಮಜಲು ನಿವಾಸಿ ಅರ್ಜುನ್ ಮೃತ್ಯು

Posted by Vidyamaana on 2023-03-17 04:42:27 |

Share: | | | | |


ಕಲ್ಲಡ್ಕ: ರೈಲಿನಡಿಗೆ ಬಿದ್ದು ಮಾಣಿ ಮಜಲು ನಿವಾಸಿ ಅರ್ಜುನ್ ಮೃತ್ಯು

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಮಾ 17 ರಂದು  ಬೆಳಗ್ಗೆ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.

ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

ಕ್ರಿಕೆಟ್​ ಆಡಿ ಬಂದು ತಕ್ಷಣ ನೀರು ಕುಡಿದ ಬಾಲಕ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಸಾವು

Posted by Vidyamaana on 2023-12-31 16:02:08 |

Share: | | | | |


ಕ್ರಿಕೆಟ್​ ಆಡಿ ಬಂದು ತಕ್ಷಣ ನೀರು ಕುಡಿದ ಬಾಲಕ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಸಾವು

ಲಕ್ನೋ: ಕ್ರಿಕೆಟ್‌ ಆಡಿ ನೀರು ಕುಡಿದ ಬಳಿಕ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ.ಶನಿವಾರ(ಡಿ.30 ರಂದು) ನಡೆದಿದ್ದು, ಹಸನ್‌ಪುರದ ಕಾಯಸ್ತಾನ್‌ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.ಬಾಲಕ ಸೈನಿ ಕ್ರಿಕೆಟ್‌ ಆಡಿದ ಬಳಿಕ ನೀರು ಕುಡಿಯಲು ಬಂದಿದ್ದಾನೆ. ಕೋಲ್ಡ್‌ ನೀರು ಕುಡಿದಿದ್ದಾನೆ. ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ.


ಪ್ರಿನ್ಸ್‌ ಅವರ ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು,ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಆದಾಗಲೇ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಪೋಷಕರು ದೂರು ದಾಖಲಿಸಿಲ್ಲ ಎಂದು ವರದಿ ತಿಳಿಸಿದೆ.

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

Posted by Vidyamaana on 2023-10-07 18:04:41 |

Share: | | | | |


ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ  ರಾಜ್ಯ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.  


ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರು ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕು ನಾಯಕರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು. ಆ ಮೂಲಕ ಸುಮಾರು ಏಳು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ  ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಿದರು. 


ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ಆಂತರಿಕ ಅಘೋಷಿತ ಶೀತಲ ಸಮರ ಇದೆ. ಅದೇ ಕಾರಣದಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ  ಎಂದು ಮೂಲಗಳು ಹೇಳುತ್ತವೆ.  ಆದಾಗ್ಯೂ, ಬಿಎಸ್ ವೈ ಹೊರಗೆ ಹೋಗಿ ಪ್ರಚಾರ ಮಾಡಿದರೆ ಮಾತ್ರ ಬಿಜೆಪಿ ಉಳಿದು ಹೆಚ್ಚಿನ ಸ್ಥಾನಗಳನ್ನು ಮರುಪಡೆಯುತ್ತದೆ. ವಿಶೇಷವಾಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷ ಅನುಮತಿ ನೀಡದಿದ್ದರೆ ಏನು ಮಾಡಲು ಸಾಧ್ಯ ಎಂದು ಅವರ ಆಪ್ತರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 


ಸತತ ಮೂರನೇ ವರ್ಷ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಆದರೆ ಪಕ್ಷವು ಅವರನ್ನು ಕಾಯುವಂತೆ ಕೇಳಿದೆ. ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪಕ್ಷವು ಹಲವು ಕೆಲಸಗಳಲ್ಲಿ ನಿರತವಾಗಿದೆ, ಯಡಿಯೂರಪ್ಪ ಅವರು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಅದಾದ ನಂತರ ಯಡಿಯೂರಪ್ಪ  ತಮ್ಮ ಪ್ರವಾಸವನ್ನು ಪ್ರಾರಂಭಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಕೆಲವು ಭ್ರಷ್ಟ ವ್ಯಕ್ತಿಗಳೊಂದಿಗೆ ವಿಜಯೇಂದ್ರ ಅವರ ಸಂಪರ್ಕದ ವಿಷಯವನ್ನು ಎತ್ತುತ್ತಿರುವ ಯಡಿಯೂರಪ್ಪ ಅವರನ್ನು ವಿರೋಧಿಸುವ ಗುಂಪು ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎನ್ನಲಾಗುತ್ತಿದೆ.


ಯಡಿಯೂರಪ್ಪ ಅವರ ಸಹಾಯಕರಲ್ಲಿ ಒಬ್ಬರಾಗಿದ್ದ ಉಮೇಶ್ ಮೇಲೆ ಇಡಿ ದಾಳಿ ನಡೆಸಿದಾಗ ಇದು ಬಹಿರಂಗವಾಗಿದೆ. ಯಡಿಯೂರಪ್ಪನವರ ವಿರೋಧಿ ಗುಂಪು ಕೂಡ ಅವರ ಮತ್ತೊಬ್ಬ ಪುತ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಲು ಪ್ರಯತ್ನಿಸುತ್ತಿದೆ. ಆದರೆ, ವಿಜಯೇಂದ್ರಗೆ ಉನ್ನತ ಹುದ್ದೆ ಸಿಕ್ಕರೆ ಸಂತಸ ತರಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಒಮ್ಮೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ 2019 ರಲ್ಲಿ ಮಾಡಿದಂತೆ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಕೈಗೊಳ್ಳುವುದು ಯಡಿಯೂರಪ್ಪ ಅವರ ಕರ್ತವ್ಯ ಎಂದು ಪಕ್ಷದ ಮೂಲಗಳು ಸೂಚಿಸಿವೆ.

ಅಶ್ಲೀಲ ವಿಡಿಯೋ ಪ್ರಕರಣ :ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ!!!

Posted by Vidyamaana on 2024-05-05 10:27:50 |

Share: | | | | |


ಅಶ್ಲೀಲ ವಿಡಿಯೋ ಪ್ರಕರಣ :ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ!!!

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ದುಬೈನ ಅಪಾರ್ಟ್ ಮೆಂಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ.ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.



Leave a Comment: