ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಕೊಡಗು ಹತ್ಯೆ ಕೇಸ್; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ ಬೆಚ್ಚಿ ಬಿದ್ದ ಪೊಲೀಸರು

Posted by Vidyamaana on 2024-05-11 16:27:56 |

Share: | | | | |


ಕೊಡಗು ಹತ್ಯೆ ಕೇಸ್; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ  ಬೆಚ್ಚಿ ಬಿದ್ದ ಪೊಲೀಸರು

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ.ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

Posted by Vidyamaana on 2023-11-23 12:27:22 |

Share: | | | | |


ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

ಮಂಗಳೂರು, ನ.23: ಹಿದಾಯ ಫೌಂಡೇಶನ್‌ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏ‌ರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.


ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏ‌ರ್ ಇಂಡಿಯ ಎಕ್ಸ್‌ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು" ಎಂದರು.


ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟ‌ರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್‌ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

Posted by Vidyamaana on 2024-05-23 09:53:42 |

Share: | | | | |


ನಿವೃತ್ತ ಶಿಕ್ಷಕ  ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು

ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

Posted by Vidyamaana on 2023-05-10 04:19:46 |

Share: | | | | |


ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉಮೇಶ್‌ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ ನಕಾರ

Posted by Vidyamaana on 2024-02-27 12:40:36 |

Share: | | | | |


ಉಮೇಶ್‌ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್‌ ರೆಡ್ಡಿಗೆ ಪೆರೋಲ್‌ ನೀಡಲು ಹೈಕೋರ್ಟ್‌ ನಿರಾಕರಿಸಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್‌ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್‌ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದೆ.


ಆಸ್ಪಾಕ್ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಆದ್ದರಿಂದ ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂಕೋರ್ಟ್ ಅರ್ಜಿದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


1998 ರ ಫೆ. 28 ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿಉಮೇಶ್‌ ರೆಡ್ಡಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಸುಪ್ರೀಂಕೋರ್ಟ್‌ ಮಾರ್ಪಾಡು ಮಾಡಿ ಆದೇಶಿಸಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಪೆರೋಲ್‌ ಸೇರಿದಂತೆ ಯಾವುದೇ ರೀತಿಯ ಅರ್ಜಿ ಸಲ್ಲಿಸಬೇಕು ಎಂದಾದರೆ ಕನಿಷ್ಟ 30 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿತ್ತು.

ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ, ಇಲ್ಲಿಗೆ ಬಂದಿದ್ದಾರೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

Posted by Vidyamaana on 2023-07-27 07:47:37 |

Share: | | | | |


ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ, ಇಲ್ಲಿಗೆ ಬಂದಿದ್ದಾರೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.



ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ.


ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ, ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶಿಸಲ್ಲ, ಅವರೇ ದೂರು ದಾಖಲಿಸುತ್ತಾರೆ. ಈಗಾಗಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಬರಲಿದೆ ಎಂದಿದ್ದಾರೆ.



Leave a Comment: