ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ರಿಗೊಲಿದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಪಟ್ಟ

Posted by Vidyamaana on 2023-12-21 21:19:04 |

Share: | | | | |


ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ರಿಗೊಲಿದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಪಟ್ಟ

ನವದೆಹಲಿ :ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ  ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. 


ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ  ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.


*ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ*


ಅಧ್ಯಕ್ಷರು  ಸಂಜಯ್‌ ಕುಮಾರ್‌ ಸಿಂಗ್‌, ಹಿರಿಯ ಉಪಾಧ್ಯಕ್ಷರು  ದೇವೇಂದರ್‌,    ಉಪಾಧ್ಯಕ್ಷರು ಅಸಿತ್‌ ಕುಮಾರ್‌ ಸಹ, ಜಯಪ್ರಕಾಶ್‌, ಕಾರ್‍ತರ್‌ ಸಿಂಗ್‌, ಎನ್‌.ಫೋನಿ


ಪ್ರಧಾನ ಕಾರ್ಯದರ್ಶಿ ಪ್ರೇಮ್‌ ಚಂದ್‌ ಲೊಚಬ್‌, ಕೋಶಾಧಿಕಾರಿ ಸತ್ಯಪಾಲ್‌ ಸಿಂಗ್‌ ದೇಶ್‌ವಾಲ್‌,  ಜಂಟಿ ಕಾರ್ಯದರ್ಶಿ ಬೆಳ್ಳಿಪ್ಪಾಡಿ ಗುಣರಂಜನ್‌ ಶೆಟ್ಟಿ, ಆರ್‌.ಕೆ.ಪುರುಶೋತ್ತಮ್‌, ಕಾರ್ಯಕಾರಿ  ಸಮಿತಿಯ ಸದಸ್ಯರು ಎಮ್‌.ಲೋಗನಾಥನ್‌, ನೈವಿಕೌಲಿ ಖಾತ್ಸು, ಪ್ರಶಾಂತ್‌ ರೈ, ರಜನೀಶ್‌ ಕುಮಾರ್‌, ಉಮ್ಮೆದ್‌ ಸಿಂಗ್.


*ಪುತ್ತೂರಿನ ಕಣ್ಮಣಿ ಕರ್ನಾಟಕದ ಜನರ ಪ್ರೀತಿಪಾತ್ರರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ*


ದಕ್ಷಿಣಕನ್ನಡ ಜಿಲ್ಲೆಯ ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಸುಪುತ್ರ ಹಾಗೂ ಡಾ.ಸಾಯಿ ರಮೇಶ್‌ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಯವರ ಸಹೋದರ ಬಿ.ಗುಣರಂಜನ್ ಶೆಟ್ಟಿ  ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದಲ್ಲಿ ಜನಿಸಿ,  ಉರಮಾಲು ಗುತ್ತು ನಿವಾಸಿಯಾಗಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುತ್ತಾರೆ. ತಮ್ಮ ವಿದ್ಯಾಭ್ಯಾಸವನ್ನು ಬೆಂಗಳೂರಿನಲ್ಲಿ ಮಾಡಿರುವ ಬಿ. ಗುಣರಂಜನ್‌ ಶೆಟ್ಟಿಯವರು  ಬೆಂಗಳೂರಿನಲ್ಲಿ ಉದ್ಯಮಿಯಾಗಿರುತ್ತಾರೆ.


ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ ಬೆಂಗಳೂರು, ಐ ಕ್ಯಾರ್‌ ಬ್ರಿಗೇಡ್‌,  ಐ ಕ್ಯಾರ್‌ ಫೌಂಡೇಶನ್‌, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು ಹಾಗೂ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರೂ ಆಗಿರುತ್ತಾರೆ. ಪರಿಸರವಾದಿಗಳು ಆಗಿರುವ ಇವರು ಬೆಂಗಳೂರು ಮತ್ತು ರಾಜ್ಯದಲ್ಲಿ ಅನೇಕ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಬೆಂಗಳೂರಿನಲ್ಲಿ ಮರಗಳಿಂದ ಕಬ್ಬಿಣದ ರಾಡ್‌ ಮತ್ತು ಮೊಳೆ  ತೆಗೆಯುವ  ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪರಿಸರ ಪ್ರೇಮಿಗಳಿಗೆ ಹತ್ತಿರವಾಗಿದ್ದರು.

ಇತ್ತೀಚೆಗೆ ನಡೆದ ದೇಶದಲ್ಲೇ ಪ್ರಖ್ಯಾತಿ ಪಡೆದ ಬೆಂಗಳೂರು  ಕಂಬಳದ ಆಯೋಜನೆಯ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮತ್ತು ಕರಾವಳಿ ಹಾಗೂ ಬೆಂಗಳೂರಿನ ಜನರ ಪ್ರಶಂಸೆಗೆ ಒಳಗಾಗಿದ್ದಾರೆ.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪರಮ ಭಕ್ತರಾಗಿರುವ ಇವರು ಬೆಂಗಳೂರಿನ ತಿಪ್ಪಸಂದ್ರದಲ್ಲಿ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮವನ್ನು ಬಹಳ ವಿಜ್ರಂಭಣೆಯಿಂದ ಮತ್ತು ಸಾವಿರಾರು ಭಕ್ತರಿಗೆ ಅನ್ನದಾನ ಕಾರ್ಯಕ್ರಮದ ನೇತೃತ್ವವನ್ನು ವಹಿಸಿಕೊಂಡು ಬಂದಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಗುಣರಂಜನ್‌ ಶೆಟ್ಟಿಯವರನ್ನು  ಅಭಿಮಾನದಿಂದ ಪ್ರೀತಿಯ ಗುಣಣ್ಣ ಎಂದು ಕರೆಯುತ್ತಾರೆ.

ಪ್ರಸ್ತುತ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಆಗಿರುವ ಗುಣರಂಜನ್‌ ಶೆಟ್ಟಿಯವರು ಇದೀಗ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವುದು ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆಯಾಗಿರುವುದು ಕರ್ನಾಟಕದ ಜನತೆ ಹೆಮ್ಮೆಪಡುವಂತಾಗಿದೆ. 


ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಇವರ ಅವಧಿಯಲ್ಲಿ ಅನೇಕ ಟೂರ್ನಮೆಂಟ್‌ಗಳು ನಡೆದಿದ್ದು, ಅನೇಕ ಕುಸ್ತಿಪಟುಗಳು ಬಹುಮಾನಗಳನ್ನು ಪಡೆದಿರುತ್ತಾರೆ. ಇವರು ಬಂದ ನಂತರ ಕರ್ನಾಟಕ ಕುಸ್ತಿ ಪಟುಗಳಿಗೆ ಆನೆ ಬಲ ಬಂದಂತಾಗಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಅತ್ಯಾಚಾರ ಯತ್ನ ಆರೋಪ – ಬಂಧಿತ ಯುವಕನಿಗೆ ಸಿಕ್ತು ಜಾಮೀನು

Posted by Vidyamaana on 2024-04-28 14:14:12 |

Share: | | | | |


ಅತ್ಯಾಚಾರ ಯತ್ನ ಆರೋಪ – ಬಂಧಿತ ಯುವಕನಿಗೆ ಸಿಕ್ತು ಜಾಮೀನು

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಹರ್ಷಿತ್ ಎಂಬ ಇನ್ನೋರ್ವ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಕಳೆದ ಮಾ.13ರಂದು ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವಾಮಂಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕವಿದ್ದು,ಆಕೆಯ ಕೋರಿಕೆಯಂತೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗಕ್ಕಾಗಿ ತನ್ನ ಸ್ನೇಹಿತರಿಗೆ ತಿಳಿಸಿದ್ದ.ಯುವಕನ ಸ್ನೇಹಿತರಿಬ್ಬರು ಇದನ್ನು ದುರುಪಯೋಗಪಡಿಸಿಕೊಂಡು ವಾಮಂಜೂರಿನ ಆತನ ಸ್ನೇಹಿತೆಯ ನಂಬ‌ರ್ ಪಡೆದು ಆಕೆಗೆ ಉದ್ಯೋಗ ಕೊಡಿಸುವುದಾಗಿ ಪುತ್ತೂರಿಗೆ ಕರೆಸಿದ್ದರು.ಯುವತಿಯು ತನ್ನ ಸ್ನೇಹಿತೆಯ ಜೊತೆಗೆ ಮಾ.13ರಂದು ಪುತ್ತೂರಿಗೆ ಬಂದಾಗ ಆಪಾದಿತ ಯುವಕರಿಬ್ಬರು ಆಕೆಗೆ ಪ್ರೊಫೈಲ್ ಬರೆಯಲೆಂದು ಹೇಳಿ ಆಕೆಯನ್ನು ಬನ್ನೂರು ಗ್ರಾಮದ ಬನ್ನೂರು ಬೈಲು ಬಾಲಏಸು ಮಂದಿರ ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದೊಯ್ದರು.

ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

Posted by Vidyamaana on 2023-05-25 04:25:36 |

Share: | | | | |


ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

ಬೆಂಗಳೂರು :ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆ ಫಲಾನುಭವಿ ಗಳಾಗಬೇಕೆಂಬ ಆಸೆಗಣ್ಣಿನಿಂದ ಕಾಯುತ್ತಿರುವ ಜನರಿಗೆ ಸಿಗುತ್ತಿಲ್ಲ ಹೊಸ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ.

ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್​ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.

2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಾಗಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್​ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್​ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಬಂದ್ ಆಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಬೇಡಿಕೆ: ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾಗಾರರ ಸಭೆ ನಡೆಸಿದ ಅಶೋಕ್ ಕುಮಾರ್ ರೈ

Posted by Vidyamaana on 2023-04-21 22:44:15 |

Share: | | | | |


ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾಗಾರರ ಸಭೆ ನಡೆಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಕಾಂಗ್ರೆಸ್ ಪಕ್ಷದ  ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಸಮರ್ಥವಾಗಿ ಬಳಸಿಕೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರ ಸಭೆ ಏ 21 ರಂದು ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆಯಿತು.

ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಾಮಾಜಿಕ ಜಾಲತಾಣ ನಿರ್ವಹಣಾಗಾರರಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಸುಮಾರು 50ಕ್ಕೂ ಅಧಿಕ ಸಾಮಾಜಿಕ ಜಾಲತಾಣ ನಿರ್ವಹಣಾಗಾರರು ಸಭೆಯಲ್ಲಿ ಭಾಗವಹಿಸಿದ್ದರು.

ಅಶೋಕ್ ರೈ ಅವರ ಪರ ಹಾಗೂ ವಿರೋಧವಾಗಿ ಪ್ರಕಟವಾಗುವ ಸಂದೇಶ, ವರದಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಅಪಪ್ರಚಾರ ನಡೆಸುವ ಸಂದೇಶಗಳನ್ನು ಯಾವ ರೀತಿ ನಿರ್ವಹಿಸಬೇಕು ಎನ್ನುವುದರ ಬಗ್ಗೆ ಅವರಿಗೆ ತಿಳಿಸಲಾಯಿತು.

ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

Posted by Vidyamaana on 2023-08-19 13:18:46 |

Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

ಪುತ್ತೂರು: ರಿಫಾಯಿಯ್ಯ ದಫ್ ಕಮೀಟಿ ಅಜ್ಜಿಕಟ್ಟೆ ಇದರ ಸಭೆ ಜೂ.30ರಂದು ನಡೆಯಿತು. ಜಮಾತಿನ ಗೌರವ್ಯಾಧ್ಯಕ್ಷ ಇಬ್ರಾಹಿಂ ಮುಲಾರ್, ಅಧ್ಯಕ್ಷ ಅಬೂಬಕ್ಕರ್ ಮುಲಾರ್ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ವೇದಿಕೆಯಲ್ಲಿ ದಫ್ ಕಮಿಟಿಯ ಅಧ್ಯಕ್ಷ ಸುಲೈಮಾನ್ ಮುಲಾರ್,ಪ್ರಮುಖ ಕಾರ್ಯದರ್ಶಿ ಆಶ್ರಫ್ ಕುರಿಯ ಹಾಗೂ SKSSF ಅಧ್ಯಕ್ಷ ಉಸ್ಮಾನ್ ಅಜ್ಜಿಕಟ್ಟೆ ಉಪಸ್ಥಿತಿಯಲ್ಲಿ 2023..24 ನೇ ಸಾಲಿನ ನೂತನ ಕಮಿಟಿಯನ್ನು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಹಸೈನಾರ್ ಅಜ್ಜಿಕಟ್ಟೆ, ಉಪಾಧ್ಯಕ್ಷರಾಗಿ ಮುಸ್ತಾಫ ಮುಲಾರ್ ಮತ್ತು ಆಶ್ರಫ್ ಕುರಿಯ, ಪ್ರ. ಕಾರ್ಯದರ್ಶಿಯಾಗಿ ನಿಝರ್ ಅಜ್ಜಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಆಸಿಫ್ ಕುರಿಯ ಎ ಆರ್ ಮತ್ತು ಫವಾಜ್ ಕುರಿಯ,ಕೋಶಾಧಿಕಾರಿಯಾಗಿ ರಝಕ್ ಮುಲಾರ್ ಆಯ್ಕೆಯಾದರು. ಸದಸ್ಯರಾಗಿ ಸುಲೈಮಾನ್ ಮುಲಾರ್,ಅಬ್ದುಲ್ ಕುಂಞ ಕುರಿಯ,ಜಬ್ಬಾರ್ ಕುರಿಯ,ಹುಸೈನಾರ್ ಅಜ್ಜಿಕಟ್ಟೆ,ಮಹಮ್ಮದ್ (ಮಮ್ಮು) ಅಜ್ಜಿಕಟ್ಟೆ,ಇಬ್ರಾಹಿಂ ವೆಲ್ಡಿಂಗ್,ಝಾಯಿದ್ ಬೊಲ್ಲಗುಡ್ಡೆ,ಮಜೀದ್ ಕೋಡಿಜಾಲ್ ಆಯ್ಕೆಯಾದರು

ಇಂದು ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋ

Posted by Vidyamaana on 2024-04-23 08:34:43 |

Share: | | | | |


ಇಂದು ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಬಿಜೆಪಿ ಅಭ್ಯರ್ಥಿ ಕ್ಯಾ|ಬ್ರಿಜೇಶ್ ಚೌಟ ಅವರ ಪರವಾಗಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಏ.23ಕ್ಕೆ ಪುತ್ತೂರಿನಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಣ್ಣಾಮಲೈ ಅವರು ಬೆಳಿಗ್ಗೆ ಗಂಟೆ 8.30ಕ್ಕೆ ಆಗಮಿಸಿ ಬೆಳಿಗ್ಗೆ 10.30ಕ್ಕೆ ಪುತ್ತೂರು ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ತನಕ ರೋಡ್ ಶೋ ನಡೆಸಲಿದ್ದಾರೆ. ಪುತ್ತೂರು ಬಸ್‌ನಿಲ್ದಾಣದ ಬಳಿ ಅವರು ಚುನಾವಣಾ ಮತಯಾಚನೆ ಮತ್ತು ಭಾಷಣ ಮಾಡಲಿದ್ದಾರೆ. ಪುತ್ತೂರಿನ ಎಲ್ಲಾ 221 ಬೂತ್‌ ಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಮಧ್ಯಾಹ್ನ ಗಂಟೆ 12.30ರ ತನಕ ಈ ಕಾರ್ಯಕ್ರಮ ನಡೆಯಲಿದೆ.

Recent News


Leave a Comment: