ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಸುದ್ದಿಗಳು News

Posted by vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.

ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

 Share: | | | | |


ಬಸ್ - ಆ್ಯಕ್ಟೀವಾ ಡಿಕ್ಕಿ: ಮಾಸ್ಟರ್ ಪ್ಲಾನರಿ ಕಾರ್ಮಿಕ ಕ್ಲಿಫರ್ಡ್ ಮೋರಸ್ ರಾಜಾ ಮೃತ್ಯು

Posted by Vidyamaana on 2024-02-25 22:08:15 |

Share: | | | | |


ಬಸ್ - ಆ್ಯಕ್ಟೀವಾ ಡಿಕ್ಕಿ: ಮಾಸ್ಟರ್ ಪ್ಲಾನರಿ ಕಾರ್ಮಿಕ ಕ್ಲಿಫರ್ಡ್ ಮೋರಸ್ ರಾಜಾ ಮೃತ್ಯು

ಪುತ್ತೂರು:ಕಬಕ ಸಮೀಪದ ಪೋಳ್ಯದಲ್ಲಿ ಎವಿಯೇಟರ್ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.25ರಂದು ನಡೆದಿದೆ.

ಮಾಸ್ಟರ್ ಪ್ಲಾನರಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್  ರಾಜ(45ವ. )ಮೃತಪಟ್ಟವರು.ಸ್ಕೂಟರ್ ಸಹಸವಾರರಾಗಿದ್ದ, ಬಿಹಾರ ಮೂಲದವರಾಗಿದ್ದು ಮುರದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯ ಹೊಂದಿರುವ ಸುರೇಂದರ್ (29ವ) ಮತ್ತು ಸನ್ನೀಫ್ (28ವ)ಗಾಯಗೊಂಡಿದ್ದಾರೆ.ಕ್ಲಿಫರ್ಡ್ ಮೊರಾಸ್  ಅವರು ಆದಿತ್ಯವಾರ ಮಾಸ್ಟರ್ ಪ್ಲಾನರಿ ಸಂಸ್ಥೆಗೆ ರಜೆಯಾದ್ದರಿಂದ, ಅಳಕೆಮಜಲಿನಲ್ಲಿ ಖಾಸಗಿ ಕೆಲಸ ನಿರ್ವಹಿಸಲೆಂದು ಬಿಹಾರ ಮೂಲದ ಕಾರ್ಮಿಕರಾದ ಸುರೇಂದರ್ ಮತ್ತು ಸನ್ನೀಫ್‌ರನ್ನು ಕರೆಸಿಕೊಂಡಿದ್ದರು. ರಾತ್ರಿ ವೇಳೆ ಅವರನ್ನು ಮುರ ರೂಮ್ ಗೆ ಬಿಡಲೆಂದು ಸ್ಕೂಟರ್‌ನಲ್ಲಿ ಪುತ್ತೂರು ಕಡೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಜ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಬಸ್ ನಡುವೆ ಪೋಳ್ಯ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಾಜ ಅವರ ತೊಡೆಯ ಮೇಲೆಯೇ ಬಸ್ ಹರಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್ ಸಹ ಸವಾರರಾಗಿದ್ದ ಸುರೇಂದರ್ ಅವರ ಎಡ ಕಾಲು ಮುರಿತಕ್ಕೊಳಗಾಗಿದ್ದು, ಸನ್ನೀಫ್ ಅವರ ಮುಖಕ್ಕೆ ಗಾಯವಾಗಿದೆ. ಗಾಯಾಳುಗಳಿಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮೃತ ರು  ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.


ಸಂಜೀವ ಮಠಂದೂರು ಘಟನಾ ಸ್ಥಳಕ್ಕೆ ಭೇಟಿ: ಮಾಜಿ ಶಾಸಕ ಸಂಜೀವ ಮಠಂದೂರು ಅನ್ಯ ಕಾರ್ಯನಿಮಿತ್ತ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ, ಅಪಘಾತ ನಡೆದ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಗಾಯಾಳುವನ್ನು ವಿಚಾರಿಸಿದ್ದಾರೆಂದು ತಿಳಿದು ಬಂದಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

Posted by Vidyamaana on 2023-10-24 06:54:25 |

Share: | | | | |


ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ಸತತ ನಾಲ್ಕನೇ ಬಾರಿಗೆ ಹೆಜ್ಜೆ ಹಾಕಲಿದ್ದಾನೆ.ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ 4.30-4.46 ರ ಶುಭ ಮೀನ ಲಗ್ನದಲ್ಲಿ ಕೋಟಿ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸದ್ದಲಿದ್ದಾರೆ.ಬಳಿಕ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.


ಅರಮನೆಯ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 1.46 ರಿಂದ 2.08 ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40 ರಿಂದ 5 ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಪೊಲೀಸರು ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ . ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬಾರಿ ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆಯುವ 40 ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಸಾಗಲಿವೆ.

ವಿಶ್ವವಿಖ್ಯಾತ ಜಂಬೂಸವಾರಿಯ ಇತಿಹಾಸ

ನಾಡಹಬ್ಬ ಮೈಸೂರು ದಸರಾ (Mysore dasara) ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿದೆ. ಪ್ರತಿ ನವರಾತ್ರಿ (Navratri Festival) ಹಾಗೂ ವಿಜಯದಶಮಿಯ (Vijay

non

ashami Festival) ಅಷ್ಟೂ ದಿನ ಮೈಸೂರು (Mysore City) ಝಗಮಗಿಸಲಿದೆ. ದಸರೆಯ ಇತಿಹಾಸವನ್ನು ನೋಡುವುದಾದರೆ 1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಆಗಿನಿಂದಲೇ ಆಗಿದೆ.


ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಶೌರ್ಯ - ಪರಾಕ್ರಮಗಳ ಪ್ರದರ್ಶನ, ಕಲೆ - ಸಾಹಿತ್ಯಗಳಿಗೆ ವೇದಿಕೆ, ಸಂಗೀತ - ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ನಡೆಸುತ್ತಾ ಬರಲಾಗಿತ್ತು. ಅವರ ತರುವಾಯ ಮೈಸೂರಿನಲ್ಲಿ ರಾಜಾ ಒಡೆಯರ್‌ ಅವರು ದಸರಾವನ್ನು ಶ್ರೀರಂಗಪಟ್ಟಣದಲ್ಲಿ ಆರಂಭಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಅಂದರೆ 1799ರಲ್ಲಿ ಒಡೆಯರು ತಮ್ಮ ಕೇಂದ್ರ ಸ್ಥಾನವನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿಕೊಂಡರು. ನಂತರದ ದಸರಾ ಆಚರಣೆಗಳು ಮೈಸೂರಿನಲ್ಲಿ ಪ್ರಾರಂಭವಾದವು.


ಜಂಬೂ ಸವಾರಿ ಆರಂಭಕ್ಕೆ ಮುನ್ನ ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮೊದಲು ಪೂಜೆ ಸಲ್ಲಿಸಲಾಗುತ್ತದೆ.ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಆಸೀನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಆ ಬಳಿಕ 24 ಕುಶಾಲ ತೋಪುಗಳ ಗೌರವವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಅರಮನೆ ಆವರಣದಲ್ಲಿ ವಿಜಯದಶಮಿಯ ಅತ್ಯಾಕರ್ಷಕ ಮೆರವಣಿಗೆಗೆ ಚಾಲನೆ ದೊರೆಯುತದೆ. ಜಂಬೂಸವಾರಿಯು ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ನಡೆಯುತ್ತದೆ.


ಅಂಬಾರಿ ಹೊತ್ತ ಬಲರಾಮನ ಜತೆಗೆ ಪೊಲೀಸ್ ಬ್ಯಾಂಡ್‌ನ ಆಕರ್ಷಕ ತಾಳ ವಾದ್ಯ ಕಳೆಗಟ್ಟಲಿದೆ. ಅಲ್ಲದೆ, ಕಂಸಾಳೆ ಕುಣಿತ, ಕಲಾತಂಡಗಳ ನೃತ್ಯ ಪ್ರದರ್ಶನಗಳ ಜತೆಗೆ ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆಯುತ್ತದೆ. ಇದರ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ.

ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

Posted by Vidyamaana on 2023-08-19 07:11:04 |

Share: | | | | |


ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

ಕೊಡಗು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಹೆಸರಿನ ಬ್ಯಾಂಕ್ ಉದ್ಯೋಗಿ ಮೃತಪಟ್ಟಿದ್ದಾರೆ.

ಮೂಲತಃ ಕೇರಳದ ತ್ರಿಶೂರ್ ಮೂಲದ ಅಮೃತ, ಅಮ್ಮತಿ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರವಾಸಿ ವೀಸಾದಲ್ಲಿ ದುಬೈ ತೆರಳಬೇಕಿದ್ದರೆ ಹೊಸ ನಿಯಮ

Posted by Vidyamaana on 2024-06-01 05:32:20 |

Share: | | | | |


ಪ್ರವಾಸಿ ವೀಸಾದಲ್ಲಿ ದುಬೈ ತೆರಳಬೇಕಿದ್ದರೆ ಹೊಸ ನಿಯಮ

ನವದೆಹಲಿ: ದುಬೈಗೆ ತೆರಳುವ ಪ್ರವಾಸಿಗರಿಗೆ ವೀಸಾ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ತರಲಾಗಿದೆ. ದುಬೈಗೆ ಪ್ರವಾಸಿ ವೀಸಾದಲ್ಲಿ ತೆರಳುವ ಮಂದಿ ಕನಿಷ್ಠ ಆರು ತಿಂಗಳ ವ್ಯಾಲಿಡಿಟಿ ಇರುವ ಪಾಸ್ ಪೋರ್ಟ್ ಹೊಂದಿರಬೇಕು. ಹಿಂತಿರುಗಿ ಬರುವ ದಿನಾಂಕದ ವಿಮಾನ ಟಿಕೆಟ್ ಮೊದಲೇ ಬುಕ್ ಮಾಡಿರಬೇಕು ಸೇರಿದಂತೆ ಹೊಸ ನಿಯಮಗಳನ್ನು ಹೇರಲಾಗಿದೆ ಎನ್ನುವ ಮಾಹಿತಿ ಟ್ರಾವೆಲ್ ಏಜನ್ಸಿಗಳಿಂದ ತಿಳಿದುಬಂದಿದೆ.

ದುಬೈನ ತಾಹಿರಾ ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಸ್ಥೆಯ ಸಿಇಓ ಮತ್ತು ಸ್ಥಾಪಕ ಫಿರೋಜ್ ಮಲಿಯಾಕ್ಕಲ್ ಹೇಳಿಕೆಯನ್ನು ಉಲ್ಲೇಖಿಸಿ ದುಬೈ ಮಾಧ್ಯಮ ಖಲೀಜ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದೆ. ದುಬೈ ತೆರಳುವ ಪ್ರವಾಸಿಗರು ಕನಿಷ್ಠ 3 ಸಾವಿರ ದಿರ್ಹಮ್ ನಗದು ಅಥವಾ ಅಷ್ಟೇ ಮೌಲ್ಯದ ಇನ್ನಾವುದೇ ಕರೆನ್ಸಿ ಹೊಂದಿರಬೇಕು, ದುಬೈನಲ್ಲಿ ಉಳಿದುಕೊಳ್ಳುವುದಕ್ಕೆ ಹೊಟೇಲ್ ಬುಕ್ ಅಥವಾ ಇನ್ನಾವುದೇ ವಿಳಾಸವನ್ನು ಮೊದಲೇ ಗೊತ್ತು ಮಾಡಿರಬೇಕು, ಕನಿಷ್ಠ ಆರು ತಿಂಗಳ ಅವಧಿ ಇರುವ ಪಾಸ್ ಪೋರ್ಟ್ ಮತ್ತು ವ್ಯಾಲಿಡ್ ವೀಸಾ ಹೊಂದಿರಬೇಕು. ಹಿಂತಿರುಗಿ ಬರುವುದಕ್ಕೆ ಮಾಡಿರುವ ವಿಮಾನ ಟಿಕೆಟನ್ನೂ ಹೊಂದಿರಬೇಕು. ಇವನ್ನೆಲ್ಲ ದುಬೈಗೆ ತೆರಳುವಾಗಲೇ ವಿಮಾನ ನಿಲ್ದಾಣದಲ್ಲಿ ಚೆಕ್ ಮಾಡಲಾಗುತ್ತದೆ ಎಂದು ಫಿರೋಜ್ ಮಲಿಯಾಕ್ಕಲ್ ತಿಳಿಸಿದ್ದಾಗಿ ಖಲೀಜ್ ಟೈಮ್ಸ್ ವರದಿ ಮಾಡಿದೆ.

ಮಾ :26 ಪುತ್ತೂರಿಗರ ದಶಕದ ಬೇಡಿಕೆಯಾದ ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ.

Posted by Vidyamaana on 2023-03-26 04:04:22 |

Share: | | | | |


ಮಾ :26 ಪುತ್ತೂರಿಗರ ದಶಕದ ಬೇಡಿಕೆಯಾದ ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ.

ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್‌ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ

     ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ರೈಲ್ವೆ ಮತ್ತು ಎಪಿಎಂಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.4 ತಿಂಗಳ ಹಿಂದೆಯಷ್ಟೇ ಕಾಮಗಾರಿ ಆರಂಭಗೊಂಡಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ತ್ವರಿತಗತಿಯಲ್ಲಿ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ.ಈ ಹಿಂದೆ ಪುತ್ತೂರು ನಗರದಿಂದ ಎಪಿಎಂಸಿ ರಸ್ತೆಯ ಮೂಲಕ ಹೋಗುವ ವಾಹನಗಳು ರೈಲ್ವೆ ಹಳಿಯವರೆಗೆ ಬಂದು ಅಲ್ಲಿಂದ ಹಳಿ ದಾಟಿ ಮುಂದೆ ಸಾಗಬೇಕಿತ್ತು. ಈ ವೇಳೆ ಹಳಿಗಳಲ್ಲಿ ರೈಲು ಸಂಚರಿಸುತ್ತಿದ್ದರೇ ಅಥಾವ ರೈಲು ಬರುವ ಸಂದರ್ಭ ಗೇಟು ಬಂದ್ ಮಾಡಿ ಸಂಪರ್ಕ ರಸ್ತೆಯನ್ನು ಮುಚ್ಚಲಾಗುತಿತ್ತು. ದಟ್ಟ ವಾಹನ ಸಂಚಾರವಿದ್ದ ರಸ್ತೆಯಲ್ಲಿ ಆಳವಡಿಸಲಾಗಿದ್ದ ಈ ವ್ಯವಸ್ಥೆಯಿಂದ ವಾಹನ ಚಾಲಕರಿಗೆ ಬಹಳಷ್ಟು ಸಮಸ್ಯೆಗಳಾಗಿತ್ತು. ಹೀಗಾಗಿ ಇಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು.ಈ ಹಿಂದೆ ಪುತ್ತೂರು ನಗರದಿಂದ ಎಪಿಎಂಸಿ ರಸ್ತೆಯ ಮೂಲಕ ಹೋಗುವ ವಾಹನಗಳು ರೈಲ್ವೆ ಹಳಿಯವರೆಗೆ ಬಂದು ಅಲ್ಲಿಂದ ಹಳಿ ದಾಟಿ ಮುಂದೆ ಸಾಗಬೇಕಿತ್ತು. ಈ ವೇಳೆ ಹಳಿಗಳಲ್ಲಿ ರೈಲು ಸಂಚರಿಸುತ್ತಿದ್ದರೇ ಅಥಾವ ರೈಲು ಬರುವ ಸಂದರ್ಭ ಗೇಟು ಬಂದ್ ಮಾಡಿ ಸಂಪರ್ಕ ರಸ್ತೆಯನ್ನು ಮುಚ್ಚಲಾಗುತಿತ್ತು. ದಟ್ಟ ವಾಹನ ಸಂಚಾರವಿದ್ದ ರಸ್ತೆಯಲ್ಲಿ ಆಳವಡಿಸಲಾಗಿದ್ದ ಈ ವ್ಯವಸ್ಥೆಯಿಂದ ವಾಹನ ಚಾಲಕರಿಗೆ ಬಹಳಷ್ಟು ಸಮಸ್ಯೆಗಳಾಗಿತ್ತು. ಹೀಗಾಗಿ ಇಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು.ಅಂಡರ್ ಪಾಸ್ ಲೋಕಾರ್ಪಣೆಯ ಬಳಿಕ ಈ ಪದ್ಧತಿಗೆ ತಿಲಾಂಜಲಿ ನೀಡಲಾಗುತ್ತಿದ್ದು ಹೊಸ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಿಸಲು ಅವಕಾಶ ಕಲ್ಪಿಸಲಾಗುತ್ತದೆ. ರೈಲು ಗೇಟುಗಳ ಪಕ್ಕದಲ್ಲಿ ತಿರುವು ರಸ್ತೆ ನಿರ್ಮಿಸಿದ್ದು ಅದರಲ್ಲಿ ಸುಮಾರು ೫೦೦ ಮೀಟರ್‌ನಷ್ಟು ದೂರ ಅಂಡರ್‌ಪಾಸ್ ಮೂಲಕ ಸಾಗಿ ಮುಖ್ಯ ರಸ್ತೆಯನ್ನು ಸೇರುವಂತೆ ಹೊಸ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ.ಎಪಿಎಂಸಿ ರಸ್ತೆಯ ನೂತನ ಅಂಡರ್‌ಪಾಸ್‌ನ ಎರಡೂ ಪಾರ್ಶ್ವಗಳಿಗೆ ವಿಶಾಲ ರಸ್ತೆ ನಿರ್ಮಿಸಲಾಗಿದೆ. ಪುತ್ತೂರು ಜಿಲ್ಲಾ ಕೇಂದ್ರವಾದರೂ ಆ ಪರಿಸ್ಥಿತಿಗೂ ಈ ರಸ್ತೆ ಸಾಕಾಗುತ್ತದೆ. ಅಂಡರ್‌ಪಾಸ್ ಕೆಳಗೆ ಒಂದು ಮೂಲೆಯಲ್ಲಿ ಒಂದಷ್ಟು ಜಾಗ ಖಾಸಗಿಯವರಿಂದ ಸಿಕ್ಕಿದಲ್ಲಿ ಅಲ್ಲಿ ಇನ್ನಷ್ಟು ಅನುಕೂಲವಾಗಲಿದೆ. ಅದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಬಗ್ಗೆ ನಗರಸಭೆ, ಸಹಾಯಕ ಆಯುಕ್ತರ ಕಚೇರಿ ಮಟ್ಟದಲ್ಲಿ ಚಿಂತನೆಗಳು ನಡೆದಿವೆ ಎಂದು ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಶಾಸಕ ಮಠಂದೂರು ಹೇಳಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Posted by Vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ



Leave a Comment: