ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

Posted by Vidyamaana on 2024-06-24 14:11:13 |

Share: | | | | |


ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು : ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಪ್ರಮಾಣ ವಚನ (MLC Oath Ceremony) ಬೋಧಿಸಿದರು

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.

ಕಡಬ : ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ

Posted by Vidyamaana on 2023-06-22 08:27:57 |

Share: | | | | |


ಕಡಬ : ಖಾತೆ ಬದಲಾವಣೆಗೆ  ಲಂಚಕ್ಕೆ ಬೇಡಿಕೆ

ಕಡಬ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 


ಜೂನ್ 22 ರಂದು(ಇಂದು) ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸೈಮನ್ , ಡಿವೈಎಸ್ಪಿ ಚೆಲುವರಾಜ್ , ಡಿವೈಎಸ್ಪಿ ಕಲಾವತಿ , ಇನ್ಸ್‌ಪೆಕ್ಟರ್ ಅಮಾನುಲ್ಲಾ ,ಇನ್ಸ್‌ಪೆಕ್ಟರ್ ವಿನಯಕ ಬಿಲ್ಲವ, ನೇತೃತ್ವದ ಸಿಬ್ಬಂದಿಗಳು ಕಾರ್ಯಾಚರಣೆ ಭಾಗವಹಿಸಿದ್ದರು.

ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

Posted by Vidyamaana on 2023-06-09 09:37:41 |

Share: | | | | |


ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

ಪುತ್ತೂರು: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣಕ್ಕೆ ಸಂಬಂಧಿಸಿದಂತೆ  ಮಹಿಳಾ ಕಾರ್ಯಕರ್ತರ ಜೊತೆ ಶಾಸಕ ಅಶೋಕ್ ರೈ ಅವರು ಜೂನ್ 9ರಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ಹುಬ್ಬಳ್ಳಿ-ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶಾಶ್ವತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ರೈಲ್ವೇ ಇಲಾಖೆ

Posted by Vidyamaana on 2023-07-08 02:58:18 |

Share: | | | | |


ಹುಬ್ಬಳ್ಳಿ-ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶಾಶ್ವತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ರೈಲ್ವೇ ಇಲಾಖೆ

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ.

ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ (SWR) ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ

ನರಿಮೊಗರಿನಲ್ಲಿ ಬದುಕಿನ ಆಧಾರ ಸ್ತಂಭಕ್ಕೇ ಢಿಕ್ಕಿ ಹೊಡೆದ ಯಮರೂಪಿ ಜಿಪು!

Posted by Vidyamaana on 2024-04-21 12:56:21 |

Share: | | | | |


ನರಿಮೊಗರಿನಲ್ಲಿ ಬದುಕಿನ ಆಧಾರ ಸ್ತಂಭಕ್ಕೇ ಢಿಕ್ಕಿ ಹೊಡೆದ ಯಮರೂಪಿ ಜಿಪು!

ಆತ್ಮೀಯ ಸಮಾಜ ಭಾಂಧವರೇ....

ನಿನ್ನೆ ದಿನಾಂಕ 17/ 4/2024 ರಂದು ರಾತ್ರಿ ನರಿಮೊಗರಿನಲ್ಲಿ ಬೈಕ್ ಗೆ  ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಭಕ್ತಕೋಡಿಯ ಕಡ್ಯ ನಿವಾಸಿ ಲೋಕೇಶ್ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರ  ಜೊತೆಯಲ್ಲಿದ್ದ ಮಕ್ಕಳಾದ ದೀಪ್ತಿ (8 ವ), ಗಗನ್ (6ವ) ಜೀವನ್ಮರಣ ಹೋರಾಟದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರಾದ ಲೋಕೇಶ್ ರು ತನ್ನ ವೃದ್ಧ ತಾಯಿಗೆ ಔಷಧಿ ತೆಗೆದುಕೊಳ್ಳಲು ಹೊರಟಾಗ ನಮ್ಮನ್ನು ಜಾತ್ರೆಗೆ ಕರೆದುಕೊಂಡು ಹೋಗಿ  ಅಪ್ಪ ... ಎಂದು ಮಕ್ಕಳಿಬ್ಬರೂ ಹಠ ಮಾಡಿದ್ದಕ್ಕೆ ಜೊತೆಯಲ್ಲಿ ಕರೆದುಕೊಂಡು ಜಾತ್ರೆಯಲ್ಲಿ ಸುತ್ತಾಡಿಸಿ ಮನೆಗೆ

ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

Posted by Vidyamaana on 2024-04-06 13:10:16 |

Share: | | | | |


ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.

ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ ಕಳೆದಿದ್ದಾರೆ. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಸಾಮಗ್ರಿ ಪಡೆದಿರುವ ಮಾಡಿರುವ ಮಾಹಿತಿ ದೊರೆತಿದೆ.



Leave a Comment: