ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

Posted by Vidyamaana on 2024-02-26 16:07:51 |

Share: | | | | |


ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ. ಈಕೆ ಮೂಡುಬಿದಿರೆಯ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು.

ಈಕೆಯು ಕಾಲೇಜಿನ ಬಕ್ಸ್ ನಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್ ನಿಂದ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ ಹೋಗದೆ, ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳು.ಇದೀಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಎಂಬಂತೆ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ. ಈಕೆ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಕೇರಳಕ್ಕೆ ತೆರಳಿ ಮದುವೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ತಿಳಿದು ಬಂದಿದೆ.

BREAKING : ಮಾ.31ರ ಭಾನುವಾರವೂ ಬ್ಯಾಂಕುಗಳು ತೆರೆದಿರುತ್ವೆ : RBI ಮಹತ್ವದ ನಿರ್ಧಾರ

Posted by Vidyamaana on 2024-03-20 20:32:07 |

Share: | | | | |


BREAKING : ಮಾ.31ರ ಭಾನುವಾರವೂ ಬ್ಯಾಂಕುಗಳು ತೆರೆದಿರುತ್ವೆ : RBI ಮಹತ್ವದ ನಿರ್ಧಾರ

ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ.ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ.ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಎಲ್ಲಾ ಆದಾಯ ತೆರಿಗೆ ಕಚೇರಿಗಳು ತೆರೆದಿರುತ್ತವೆ.!

ಈ ಹಿಂದೆ, ಆದಾಯ ತೆರಿಗೆ ಇಲಾಖೆ ತನ್ನ ಎಲ್ಲಾ ಕಚೇರಿಗಳನ್ನ ತೆರೆದಿಡಲು ನಿರ್ಧರಿಸಿತ್ತು. ಗುಡ್ ಫ್ರೈಡೆ ರಜೆ ಸೇರಿದಂತೆ ಶನಿವಾರ ಮತ್ತು ಭಾನುವಾರ ರಜಾದಿನಗಳನ್ನ ಇಲಾಖೆ ರದ್ದುಗೊಳಿಸಿತ್ತು

ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

Posted by Vidyamaana on 2023-10-09 21:08:02 |

Share: | | | | |


ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಏಕಾಏಕಿ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.ಕೊನೆಗೆ ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಉಡುಪಿ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ

Posted by Vidyamaana on 2024-04-03 16:50:40 |

Share: | | | | |


ಉಡುಪಿ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು ಬಳಿಕ ನೂರಾರು ಕಾರ್ಯಕರ್ತರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

Posted by Vidyamaana on 2023-08-05 13:01:52 |

Share: | | | | |


ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ಬೆಂಗಳೂರು:ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.


ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

ರಾಮದರ್ಶನ ಪಡೆದು ಹೃದಯಾಘಾತದಿಂದ ಕೊನೆಯುಸಿರೆಳೆದ ಉಡುಪಿ ಮೂಲದ ಶಾನುಭಾಗ್‌

Posted by Vidyamaana on 2024-03-11 08:44:56 |

Share: | | | | |


ರಾಮದರ್ಶನ ಪಡೆದು ಹೃದಯಾಘಾತದಿಂದ ಕೊನೆಯುಸಿರೆಳೆದ ಉಡುಪಿ ಮೂಲದ ಶಾನುಭಾಗ್‌

ಅಯೋಧ್ಯೆ/ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್‌ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನ ಹೊಂದಿದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.ಪ್ರತಿಷ್ಠೆಯ ಮಂಡಲಪೂಜೆ ಸಮಾಪನ ಸಂದರ್ಭ ರವಿವಾರ ಬೆಳಗ್ಗೆ ರಾಮನ ದರ್ಶನ ಪಡೆದು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂಸ್ಕೃತದಲ್ಲಿಯೇ ಮಾತನಾಡಿದ್ದರು. ಅಪರಾಹ್ನ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ದ್ವಾರದ ಬಳಿ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಿಧನ ಹೊಂದಿದ್ದರು. ಮುಂದಿನ ವ್ಯವಸ್ಥೆಯನ್ನು ವಿಶ್ವ ಹಿಂದೂ ಪರಿಷತ್‌ ಪ್ರಮುಖರಾದ ಗೋಪಾಲ್‌, ಮಾಜಿ ಶಾಸಕ ಕೆ.ರಘುಪತಿ ಭಟ್‌ ಮಾಡಿದರು.

ಶಾನುಭಾಗ್‌ ಅವರು ಅಂಧರಾಗಿದ್ದರೂ ಬಾಲ್ಯದಿಂದಲೂ ಆರೆಸ್ಸೆಸ್‌ ಸಂಪರ್ಕ ಹೊಂದಿ ಜಿಲ್ಲಾ ಬೌದ್ಧಿಕ್‌ ಪ್ರಮುಖ್‌ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಶ್ರೀರಾಮ ಮಂದಿನ ನಿರ್ಮಾಣ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು. ಸಿಂಡಿಕೇಟ್‌ ಬ್ಯಾಂಕಿನ ಮಣಿಪಾಲ ಪ್ರಧಾನ ಕಚೇರಿ, ಉಡುಪಿಯ ಕೆಥೋಲಿಕ್‌ ಸೆಂಟರ್‌ ಕಚೇರಿಗಳಲ್ಲಿ ಟೆಲಿಫೋನ್‌ ಆಪರೇಟರ್‌ ಮತ್ತು ಸಿಬಂದಿ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಸಂಸ್ಕೃತ, ರಾಮಾಯಣ, ಮಹಾಭಾರತದಲ್ಲಿ ಅಪಾರವಾದ ಪಾಂಡಿತ್ಯ ಹೊಂದಿದ್ದರು. ಚಿಂತಕರೂ ಆಗಿದ್ದ ಇವರ ನಿಧನಕ್ಕೆ ಪೇಜಾವರ ಶ್ರೀ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಮುಂತಾದವರು ಸಂತಾಪ ಸೂಚಿಸಿದ್ದಾರೆ.



Leave a Comment: