ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಆದಂ ಮರೀಲು ಹೃದಯಾಘಾತದಿಂದ ನಿಧನ

Posted by Vidyamaana on 2024-04-07 11:28:55 |

Share: | | | | |


ಆದಂ ಮರೀಲು ಹೃದಯಾಘಾತದಿಂದ ನಿಧನ

ಪುತ್ತೂರು: ಪುರುಷರಕಟ್ಟೆ ನಿವಾಸಿ ದಿl ಮೂಸಾ ಹಾಜಿಯವರ ಪುತ್ರ, ಆದಂ ಮರೀಲು (65 ವ.) ಎ. 5 ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ವೀಕ್ಷಕರ ನೇಮಕ

Posted by Vidyamaana on 2024-01-03 16:51:56 |

Share: | | | | |


ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ವೀಕ್ಷಕರ ನೇಮಕ

ಪುತ್ತೂರು: ಮುಂಬರುವ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ, ಜಿ.ಪಂ.,ತಾ.ಪಂ.ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ವಿವಿಧ ಕ್ಷೇತ್ರಗಳಿಗೆ ವೀಕ್ಷಕರ ನೇಮಕಾತಿ ಮಾಡುತ್ತಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ನೇಮಿಸಲಾಗಿದೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ನ್ಯಾಯವಾದಿ, ನೋಟರಿಯೂ ಆಗಿರುವ ಭಾಸ್ಕರ ಕೋಡಿಂಬಾಳ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಉಮಾನಾಥ ಶೆಟ್ಟಿ ಪೆರ್ನೆ ಅವರನ್ನು ನೇಮಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಈ ನೇಮಕ ಮಾಡಿದ್ದಾರೆ.


ಜಿಲ್ಲಾ ಯುವಕಾಂಗ್ರೆಸ್‌ನ ಮಾಜಿ ವಕ್ತಾರರಾಗಿ, ಜಿಲ್ಲಾ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ, ವಿಧಾನಸಭಾ ಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕು ವಿಭಾಗದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಕುಂಬ್ರ ದುರ್ಗಾಪ್ರಸಾದ್ ರೈಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಖಾಯಂ ಆಹ್ವಾನಿತರು.ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಭಾಸ್ಕರ ಕೋಡಿಂಬಾಳ ಅವರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಮಾನಾಥ ಶೆಟ್ಟಿಯವರು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ,ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾಕೆ

ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

Posted by Vidyamaana on 2023-12-27 11:22:30 |

Share: | | | | |


ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023; ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿಸಿಎಂ‌ ಡಿ.ಕೆ. ಶಿವಕುಮಾರ್, ವಿಶೇಷ ಪ್ರಶಸ್ತಿಗೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಯ್ಕೆ

ಬೆಂಗಳೂರು: 2023ನೇ ಸಾಲಿನ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಪ್ರಶಸ್ತಿ ಪ್ರಕಟವಾಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಅಲ್ಲದೆ, 29 ಮಂದಿ ಮಾದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.


ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸಾರಥ್ಯವಹಿಸಿ ಪಕ್ಷ ಅಧಿಕಾರ ಸೂತ್ರ ಹಿಡಿಯಲು ಕಾರಣರಾದ ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ ಕ್ಲಬ್‌ ಸದಸ್ಯರು ಆಯ್ಕೆ ಮಾಡಿದ್ದಾರೆ. ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್‌ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ ಎಂದಿದ್ದಾರೆ.ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೆಟ್ ಬಾಲ್ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ ಕ್ಲಬ್‌ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಮಾಧ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಮಂದಿ ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 31 ರಂದು ಬೆಳಗ್ಗೆ 11:30ಕ್ಕೆ ಪ್ರೆಸ್‌ಕ್ಲಬ್‌ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.


ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2023-04-30 06:05:43 |

Share: | | | | |


 ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ರವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು. ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-02-13 02:54:01 |

Share: | | | | |


ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು.  ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Putthila) ನೂತನ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೇರಳ ನೊಂದಾಣಿಯ ವಾಹನದಲ್ಲಿ ದನ ಹಾಗೂ ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.

ಕಾರ್ಯಕರ್ತರು ಈ ಬಗ್ಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅರುಣ್ ಕುಮಾರ್ ಪುತ್ತಿಲ ರವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಿದ್ದು, ಮುಂದೆ ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.ದನ ಸಾಗಾಟದ ಬಗ್ಗೆ ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನೀಡಲಾದ ಒಪ್ಪಿಗೆ ಪತ್ರವೊಂದಿದ್ದು ಜಾನುವಾರುಗಳನ್ನು ಸಾಕಲು ತೆಗೆದುಕೊಂಡು ಹೋಗುವುದಾದರೆ ಪಶು ವೈದ್ಯರ ಸಹಿ ಆಗಬೇಕಿತ್ತು. ಆದರೇ ಅಕ್ರಮ ಗೋ ಸಾಗಾಟಕ್ಕೆ ಕುಮ್ಮಕ್ಕು ನೀಡಲು ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೃಷ್ಣರಾಜ್ ಎಂಬವರು ಪರ್ಮಿಷನ್ ಕೊಟ್ಟು ಅಧಿಕಾರದ ದುರುಪಯೋಗ ಮಾಡಿರುವುದಾಗಿ ಹಾಗೂ ಗೋ ಹತ್ಯೆಗೆ ಪ್ರಚೋದನೆ ಕೊಟ್ಟದಕ್ಕಾಗಿ ಅವರ ಮೇಲೆ ಎಫ್.ಐ.ಆರ್ ಮಾಡಬೇಕು ಎಂದು ಸಾರ್ವಜನಿಕರು ಮತ್ತು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲು: ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್‌ ಲೇಲ್ಯಾಂಡ್‌ ಮಿನಿ ಗೂಡ್ಸ್‌ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾಗ ಪುತ್ತೂರು ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ ರೆಡ್ಡಿ ನೇತೃತ್ವದ ತಂಡ ಪರಿಶೀಲಿಸಲಾಗಿ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ಪಶು ವೈದ್ಯಾಧಿಕಾರಿಯವರ ಪ್ರಮಾಣಪತ್ರ ಇಲ್ಲದೇ ಒಂದು ಹಸು ಮತ್ತು ಒಂದು ಗಂಡು ಕರುವನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಕೃತ್ಯದಲ್ಲಿ ತೊಡಗಿದ್ದ ವಿಲ್ಲಿ ಲೂಯಿಸ್ ಡಿ ಸೋಜಾ, ಸಂತೋಷ್ ಡಿ ಸೋಜಾ, ಸಿಲ್ವೆಸ್ಟರ್ ಡಿ ಸೋಜಾ ಎಂಬವರುಗಳನ್ನು ದಸ್ತಗಿರಿ ಮಾಡಿ, ಸದ್ರಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 013-2023 ಕಲಂ:- 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ಯಂತೆ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಕೆಳಗೆ ಬಿದ್ದ ಮೆಷಿನ್

Posted by Vidyamaana on 2023-12-20 17:11:58 |

Share: | | | | |


ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಕೆಳಗೆ ಬಿದ್ದ ಮೆಷಿನ್

ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಮೆಷಿನ್ ಅಯತಪ್ಪಿ ಕೆಳಗೆ ಬುದ್ದಿದ್ದು.ಚಾಲನ ಸ್ಥಿತಿಯಲ್ಲಿದ್ದ ಮೆಷಿನಿನ ಗರಗಸ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ.



ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ಎಂಬಲ್ಲಿ ತನ್ನ ಮನೆಯ ಬಳಿ ಡಿ.19 ರಂದು ಬೆಳಗ್ಗೆ 11:30 ರ ಸಮಯಕ್ಕೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಪೂಜಾರಿ ಮತ್ತು ಸಹೋದರ ಪ್ರಮೋದ್ ಜೊತೆ ಮರ ಕಡಿಯುವ ಕಟ್ಟಿಂಗ್ ಮಿಷಿನ್ ಮೂಲಕ ಮರ ಕಡಿಯುವ ಸಮಯದಲ್ಲಿ ಪ್ರಶಾಂತ್ ಪೂಜಾರಿ ಕಟ್ಟಿಂಗ್ ಮಿಷಿನ್ ಜೊತೆಗೆ ಹಿಡಿತ ತಪ್ಪಿ ನೆಲಕ್ಕೆ ಬಿದ್ದಾಗ ಚಾಲನಾ ಸ್ಥಿತಿಯಲ್ಲಿದ್ದ ಕಟ್ಟಿಂಗ್ ಮೆಷಿನಿನ ಗರಗಸ ಆಕಸ್ಮಿಕವಾಗಿ ಕುತ್ತಿಗೆಯ ಬಳಿ ತಾಗಿ, ತೀವ್ರ ರಕ್ತ ಗಾಯಗಳಾಗಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ತಕ್ಷಣ ಮೂಡಬಿದ್ರೆ ಆಳ್ವಾಸ್  ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದಾಗ ಚಿಕಿತ್ಸೆ ಫಲಿಸದೆ ಪ್ರಶಾಂತ್ ಪೂಜಾರಿ (36) ಎಂಬವರು ಡಿ.20ರಂದು(ಇಂದು) ಬೆಳಗ್ಗಿನ ಜಾವ ಸುಮಾರು 2 ಗಂಟೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಶಾಂತ್ ಸಹೋದರ ಪ್ರಮೋದ್ (33) ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.



Leave a Comment: