ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಇಂದು ಅಬುಧಾಬಿಯಲ್ಲಿ ದೇವಸ್ಥಾನ ಉದ್ಘಾಟಿಸಲಿರುವ ಮೋದಿ

Posted by Vidyamaana on 2024-02-14 09:52:14 |

Share: | | | | |


ಇಂದು ಅಬುಧಾಬಿಯಲ್ಲಿ ದೇವಸ್ಥಾನ ಉದ್ಘಾಟಿಸಲಿರುವ ಮೋದಿ

ಯುಎಇ: ಅರಬ್ ಎಮಿರೇಟ್ಸ್‍ನಲ್ಲಿ ನಿರ್ಮಿಸಿರುವ ಮೊಟ್ಟಮೊದಲ ಹಿಂದೂ ದೇವಾಲಯವನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.ಈ ದೇವಸ್ಥಾನವು 27 ಎಕರೆ ಭೂಮಿಯಲ್ಲಿ ಹರಡಿಕೊಂಡಿದೆ ಎನ್ನಲಾಗಿದ್ದು, ಅಬುಧಾಬಿಯ ಅಬು ಮುರೇಖಾ ಜಿಲ್ಲೆಯಲ್ಲಿದೆಎರಡು ದಿನಗಳ ಯುಎಇ ಮತ್ತು ಖತರ್ ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ‌ ಮೋದಿ ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಜೊತೆಗೆ ನಿನ್ನೆ ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವದ ಕುರಿತು ವ್ಯಾಪಕ ಮಾತುಕತೆ ನಡೆಸಿದ್ದಾರೆ. ಬಳಿಕ ಉಭಯ ಮುಖಂಡರಿಂದ ಹಲವು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ಈ ಎರಡು ದಿನಗಳ ಭೇಟಿಯು 2015 ರಿಂದ ಯುಎಇಗೆ ಪ್ರಧಾನಿ ನರೇಂದ್ರ ಮೋದಿಯವರ ಏಳನೇ ಭೇಟಿ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ.

ಕೋಟ್ಯಾಧೀಶೆ ಆಗಲು ಹೊರಟ ಚೈತ್ರ ಕುಂದಾಪುರ; ಬಡತನದಿಂದ ಇಲ್ಲಿಯವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

Posted by Vidyamaana on 2023-09-14 12:10:51 |

Share: | | | | |


ಕೋಟ್ಯಾಧೀಶೆ ಆಗಲು ಹೊರಟ ಚೈತ್ರ ಕುಂದಾಪುರ; ಬಡತನದಿಂದ ಇಲ್ಲಿಯವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವ ಭರವಸೆ ನೀಡಿ ಕೋಟಿ ಕೋಟಿ ದೋಚಿದ ಆರೋಪದ ಮೇಲೆ ಚೈತ್ರ ಕುಂದಾಪುರ ಬಂಧನವಾಗಿದೆ. ಚೈತ್ರ ಕುಂದಾಪುರ ಬಂಧನದ ಬಳಿಕ ಆಕೆಯ ಕ್ರಿಮಿನಲ್ ಪ್ಲಾನ್ ಜೊತೆ ಆಕೆಯ ಪೂರ್ವಪರ ಬೆಳಕಿಗೆ ಬರುತ್ತಿದೆ. ಸದ್ಯ ಚೈತ್ರ ಕುಂದಾಪುರ (Chaitra Kundapura), ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ. ಅತ್ಯಂತ ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಈಕೆ ಏಕಾಏಕಿ ಕೋಟ್ಯಾಧೀಶೆ ಆಗುವ ಕನಸು ಕಂಡ ಕಥೆ ಮಾತ್ರ ರೋಚಕ. ಮುಂದೆ ಓದಿ.ಚೈತ್ರ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವಳು. ಬಡ ಕುಟುಂಬದಲ್ಲಿ ಹುಟ್ಟಿದ ಇವಳ ತಂದೆ ತಾಯಿ ಹೈನುಗಾರಿಕೆ ಮಾಡಿಕೊಂಡಿದ್ದಾರೆ. ಚೈತ್ರ ಕುಂದಾಪುರ ತನ್ನ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಕುಂದಾಪುರದಲ್ಲಿಯೇ ಮುಗಿಸಿ, ಬಳಿಕ ಪದವಿ ಮತ್ತು ಸ್ನಾತಕೊತ್ತರ ಪದವಿಯನ್ನು ಪತ್ರಿಕೋದ್ಯಮ ವಿಭಾಗದಲ್ಲಿ ಮಂಗಳೂರಿನ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮುಗಿಸುತ್ತಾಳೆ.


ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿ


ಆರಂಭದಲ್ಲಿಯೇ ಎಬಿವಿಪಿ ಹುಡಗರ ಜೊತೆ ಗುರುತಿಸಿಕೊಂಡಿದ್ದ ಇವಳು ಪದವಿ ಶಿಕ್ಷಣ ಪಡೆಯುವ ಸಮಯದಲ್ಲಿ ಪೂರ್ಣ ಪ್ರಮಾಣದಲ್ಲಿ ಎಬಿವಿಪಿಯಲ್ಲಿತೊಡಗಿಕೊಳ್ಳುತ್ತಾಳೆ. ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಾಳೆ. ಎಬಿವಿಪಿಯಲ್ಲಿ ವಿವಿಧ ಜವಾಬ್ದಾರಿಯನ್ನು ಕೂಡ ನಿರ್ವಹಿಸಿದ್ದಾಳೆ.


ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ


ಕಾಲೇಜು ಮುಗಿದ ಬಳಿಕ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡಿಕೊಂಡಿದ್ದ ಚೈತ್ರ ಕುಂದಾಪುರ, ಎಬಿವಿಪಿಯಿಂದ ಹಿಂದೆ ಸರಿಯುತ್ತಾಳೆ. ನಾಲ್ಕೈದು ವರ್ಷಗಳ ಕಾಲ ಸ್ಥಳೀಯ ಖಾಸಗಿ ವಾಹಿನಿಗಳಲ್ಲಿ ಕೆಲಸ ಮಾಡಿದ ಬಳಿಕ, ಮತ್ತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುತ್ತಾಳೆ.ನಂತರ ಈ ಚೈತ್ರ ಹಿಂದೂ ಸಂಘಟನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳುತ್ತಾಳೆ. ರಾಷ್ಟ್ರೀಯತೆ, ಹಿಂದೂ ಧರ್ಮ ಹೆಸರಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಭಾಷಣಕಾರ್ತಿಯಾಗಿ ತೊಡಗಿಕೊಂಡಿದ್ದಳು. ಬಳಿಕ ಮಾಡಿದ್ದೆ‌ ಕೋಟಿ ಕೋಟಿ ಲೂಟಿಯ ಪ್ಲ್ಯಾನ್​.


ತನ್ನ ಉಗ್ರ ಭಾಷಣದಿಂದ ಸಾಕಷ್ಟು ಜನರ ವಿರೋಧಕ್ಕೆ ಗುರಿಯಾಗಿದ್ದ ಚೈತ್ರ ಕುಂದಾಪುರ, ಕೋಟಿ ಕೋಟಿ ದೋಚುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾಳೆ. ಪ್ರತಿ ಭಾರಿ ಇಂತಹ ವಿವಾದಗಳು ಪ್ರಕರಣಗಳು ನಡೆದಾಗ ತಪ್ಪಿಸಿಕೊಳ್ಳಲು ಏನೇನೋ ಕಾರಣ ಹೇಳುತ್ತಿದ್ದ ಚೈತ್ರ ಕುಂದಾಪುರ, ಈ ಬಾರಿ ಸಾಕ್ಷಿ ಸಮೇತ ಪೊಲೀಸರಿಗೆ ಲಾಕ್ ಆಗಿದ್ದಾಳೆ.

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

Posted by Vidyamaana on 2023-11-21 21:02:55 |

Share: | | | | |


ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇರಾನ್ ಅಧ್ಯಕ್ಷರ ನಿಧನಕ್ಕೆ ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

Posted by Vidyamaana on 2024-05-21 07:06:05 |

Share: | | | | |


ಇರಾನ್ ಅಧ್ಯಕ್ಷರ ನಿಧನಕ್ಕೆ ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.

ಗೃಹ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು,ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ,

ಬೆಂಗಳೂರು ಕಂಬಳ ಕರೆ ಉದ್ಘಾಟನೆ

Posted by Vidyamaana on 2023-11-25 12:24:25 |

Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.


ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.


ಬೆಂಗಳೂರು ಕಂಬಳದ ವಿಶೇಷತೆ

6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗವಹಿಸುವ ಸಾಧ್ಯತೆ ಇದೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರಾಕ್‌ (ಕರೆ)ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಆಯೋಜಿಸಲಾಗಿದೆ.ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ. 228 ಜೋಡಿ ಕೋಣಗಳ ರಿಜಿಸ್ಟ್ರೇಷನ್ ಆಗಿದ್ದು, 200 ಜೋಡಿ‌ ಫೈನಲ್‌ ಆಗಿವೆ. ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ.


ಕೋಣಗಳ ಆರೈಕೆ

ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ ವಹಿಸಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ನೀರನ್ನು ಕೂಡ ಊರಿನಿಂದಲೇ ತರಲಾಗಿದೆ. ನೀರು ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ. ಹೀಗಾಗಿ ಊರಿನಿಂದಲೇ ಟ್ಯಾಂಕರ್ ಮೂಲಕ ನೀರು ತರಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದುದ್ದಾರೆ.


ಗೆದ್ದ ಕೋಣಗಳಿಗೆ ಬಹುಮಾನ

ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು


ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು


ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ತೀರ್ಥಲತಾ ನಾಪತ್ತೆ

Posted by Vidyamaana on 2023-08-02 10:49:33 |

Share: | | | | |


ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ   ತೀರ್ಥಲತಾ ನಾಪತ್ತೆ

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.


ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.



Leave a Comment: