ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಸುದ್ದಿಗಳು News

Posted by vidyamaana on 2024-06-30 16:40:20 |

Share: | | | | |


ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81 ವ) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ

ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ

 Share: | | | | |


ಕೆಂಪೇಗೌಡ್ರ ನಾಡಿನಲ್ಲಿ ಕಂಬಳದ ಗೌಜಿ – ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಓಟದ ಗೌಜಿ-ಗಮ್ಮತ್ತು

Posted by Vidyamaana on 2023-08-07 01:47:24 |

Share: | | | | |


ಕೆಂಪೇಗೌಡ್ರ ನಾಡಿನಲ್ಲಿ ಕಂಬಳದ ಗೌಜಿ – ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಓಟದ ಗೌಜಿ-ಗಮ್ಮತ್ತು

ಬೆಂಗಳೂರು : ರಾಜ್ಯದಲ್ಲಿ ಹಲವು ಪ್ರಾದೇಶಿಕ ಸೊಗಡುಗಳನ್ನು ಹೊಂದಿದ ಕರಾವಳಿ ತೀರದ ಯಕ್ಷಗಾನ ಬೆಂಗಳೂರಿಗೆ ಕಾಲಿಟ್ಟು ದಶಕಗಳೇ ಕಳೆದಿವೆ. ಈಗ ಕಾಂತಾರ ಸಿನಿಮಾದ ಮೂಲಕ ಜಗತ್ತಿಗೆ ಅತಿಹೆಚ್ಚು ಚಿರಪರಿಚಿತವಾದ ಕೆಸರಿನ ಗದ್ದೆಯಲ್ಲಿ ಶರವೇಗದಲ್ಲಿ ಓಡುವ ಕೋಣಗಳ ಕಂಬಳವನ್ನು ಈಗ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ.ಇದಕ್ಕೆ ದಿನಗಣನೆ ಆರಂಭವಾಗಿದ್ದು, ತುಳು ಕೂಟದಿಂದ ಭರ್ಜರಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. 


ಇನ್ನು ರಾಜ್ಯದಲ್ಲಿ ನಮಗೆ ಕಂಬಳ ಎಂದಾಕ್ಷಣ ಕರಾವಳಿಯ ಪ್ರದೇಶಗಳು ನೆನಪಿಗೆ ಬರುತ್ತವೆ. ಅದರಲ್ಲೂ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡ "ಕಾಂತಾರ" ಸಿನಿಮಾ ಬಂದ ಮೇಲಂತೂ ಕಂಬಳ ಪ್ರಸಿದ್ಧಿಯೂ ಮತ್ತಷ್ಟು ಹೆಚ್ಚಾಗಿತ್ತು. ಇನ್ನು ಕಂಬಳ ಎಂದಾಕ್ಷಣ ಕಾಂತಾರ ಸಿನಿಮಾದ ನೆನಪು ಬರುವಷ್ಟರ ಮಟ್ಟಿಗೆ ಜನಜನಿತವಾಯಿತು. ಕರಾವಳಿಯಲ್ಲಷ್ಟೇ ನಡೆಯುವ ಹಾಗೂ ಅಲ್ಲಿ ಮಾತ್ರ ನಡೆಸಬಹುದಾದ ಕಂಬಳ ಕ್ರೀಡೆಯನ್ನು ಅಥವಾ ಪ್ರಾದೇಶಿಕ ಸೊಗಡನನ್ನು ರಾಜಧಾನಿ ಬೆಂಗಳೂರಿನಲ್ಲಿ ನಡೆಸಲು ಮುಂದಾಗಿದ್ದಾರೆಅದಕ್ಕೆ ಭರದ ಸಿದ್ಧತೆಯೀ ನಡೆಸಲಾಗಿದೆ 

ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು ತುಳು ಕೂಟದ 50ನೇ ವರ್ಷಾಚರಣೆ: ಕರಾವಳಿಗೆ ಸೀಮಿತವಾಗಿರುವ ಕಂಬಳ ಬೆಂಗಳೂರಿನಲ್ಲಿ ನಡೆದರೆ ಹೇಗೆ? ಎಂಬ ಯೋಚನೆ ಕಳೆದ ಕೆಲವು ವರ್ಷದಿಂದ ಕರಾವಳಿಗರ ಅನೇಕರ ಮನಸ್ಸಲ್ಲಿದೆ. ಇದೀಗ ಅದಕ್ಕೂ ಕಾಲ ಕೂಡಿ ಬಂದಿದೆ. ಬೆಂಗಳೂರಿನಲ್ಲೇ ಕಂಬಳವನ್ನು ನಡೆಸಲು ಒಂದು ತಂಡವೇ ಸಿದ್ಧವಾಗಿದೆ. ಇದಕ್ಕಾಗಿ ಸೂಕ್ತ ಸ್ಥಳವನ್ನು ಸ್ಥಳವನ್ನು ಪರಿಶೀಲನೆ ಕೂಡ ನಡೆಸಲಾಗಿದೆ. ಅದನ್ನು ಆಯೋಜನೆ ಮಾಡುವುದಕ್ಕೂ ಈಗ ಸೂಕ್ತ ಮತ್ತು ಸಕಾಲವೂ ಒದಗಿಬಂದಿದೆ. ಅದೇನೆಂದರೆಮ ಬೆಂಗಳೂರಿನ ತುಳು ಕೂಟದ 50ನೇ ವರ್ಷದ ಸಂಭ್ರಮಾಚರಣೆ ಸಲುವಾಗಿ ಬೆಂಗಳೂರಿನಲ್ಲೇ ಕಂಬಳ ನಡೆಸಲು ನಿರ್ಧರಿಸಲಾಗಿದೆ. ಅದರಲ್ಲೂ ಬೆಂಗಳೂರಿನ ಅರಮನೆ ಮೈದಾನದಲ್ಲೇ ಈ ಕಂಬಳ ನಡೆಯಲಿದೆ ಎನ್ನುವುದು ಅತ್ಯಂತ ಸಂತಸದಾಯಕ ವಿಚಾರವಾಗಿದೆ. 


ಕಂಬಳ ನಡೆಸಲು ಸ್ಥಳ ಪರಿಶೀಲನೆಯೂ ಮುಕ್ತಾಯ:

ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಕುರಿತು ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳಕ್ಕಾಗಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ ಕಂಬಳ ಯಾವತ್ತು ನಡೆಯಲಿದೆ ಎನ್ನುವ ಕುರಿತು ಇನ್ನೂ ದಿನಾಂಕವನ್ನು ಮಾತ್ರ ನಿಗದಿ ಮಾಡಿಲ್ಲ. ಜೊತೆಗೆ, ಯಾವ ಕೋಣಗಳನ್ನು ಇಲ್ಲಿನ ಕಂಬಳಕ್ಕೆ ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ಬೆಂಗಳೂರಿಗೆ ಹೇಗೆ ತರಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಶಾಸಕ ಅಶೋಕ್‌ ಕುಮಾರ್‌ ರೈ ಅವರೊಂದಿಗೆ ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಕೆ., ತುಳುಕೂಟದ ಗೌರವಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಕೆ.ವಿ., ಮಾಜಿ ಅಧ್ಯಕ್ಷ ದಿನೇಶ್ ಹೆಗ್ಡೆ ಬಿ., ಜಯರಾಮ್ ಸೂಡ, ಚಂದ್ರಹಾಸ ರೈ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಪತ್ ಕುಮಾರ್, ಅಕ್ಷಯ್ ರೈ ದಂಬೆಕಾನ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಕೂಡ ಕಂಬಳ ನಡೆಯುವ ಅರಮನೆ ಮೈದಾನದ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ.

ಬಂಟ್ವಾಳ ; ಹಗಲು ವೇಳೆ ಮನೆಗೆ ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಎಸ್ಕೇಪ್ ಮಾಡಿದ ಕಳ್ಳರಿಬ್ಬರ ಸೆರೆ, 15 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ

Posted by Vidyamaana on 2023-09-19 06:13:51 |

Share: | | | | |


ಬಂಟ್ವಾಳ ; ಹಗಲು ವೇಳೆ ಮನೆಗೆ ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಎಸ್ಕೇಪ್ ಮಾಡಿದ ಕಳ್ಳರಿಬ್ಬರ ಸೆರೆ, 15 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ‌ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್  (34) ಬಂಧಿತ ಆರೋಪಿಗಳು.


ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು‌.

ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್‌ಮೇಲ್..!

Posted by Vidyamaana on 2024-05-17 08:12:31 |

Share: | | | | |


ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್‌ಮೇಲ್..!

ರಾಮನಗರ(ಮೇ.17): ಖಾಸಗಿ ಫೋಟೋ - ವಿಡಿಯೋಗಳನ್ನು ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ವೈದ್ಯನ ವಿರುದ್ಧ ಮಹಿಳೆಯೊಬ್ಬರು ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ವಿನಾಯಕನಗರ ಬಡಾವಣೆ ನಿವಾಸಿ ಪರಸಪ್ಪ ಖಾಸಗಿ ಫೋಟೋ - ವಿಡಿಯೋಗಳನ್ನು ಇಟ್ಟುಕೊಂಡು ತನ್ನನ್ನು ತೇಜೋವಧೆ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, ಆತನ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಮಹಿಳೆ ಕೋರಿದ್ದಾರೆ.

ಬೆಳ್ತಂಗಡಿ: ನವ ವಿವಾಹಿತ ರಾಝಿಕ್ ದುಬೈನಲ್ಲಿ ಮೃತ್ಯು

Posted by Vidyamaana on 2023-07-06 06:06:47 |

Share: | | | | |


ಬೆಳ್ತಂಗಡಿ: ನವ ವಿವಾಹಿತ ರಾಝಿಕ್ ದುಬೈನಲ್ಲಿ ಮೃತ್ಯು

ದುಬೈ: ನವ ವಿವಾಹಿತ ಯುವಕ ದುಬೈಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ನಿವಾಸಿ ರಾಝಿಕ್ ಕುಪ್ಪೆಟ್ಟಿ ಎಂದು ಗುರುತಿಸಲಾಗಿದೆ.

ನವ ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದರು. ಇವರಿಗೆ ಪುಟ್ಟ ಮಗು ಕೂಡ ಇದೆ ಎಂದು ತಿಳಿದು ಬಂದಿದೆ.

ರಾಝಿಕ್ ನಿಧನಕ್ಕೆ ನಿಖರ ಕಾರಣ ತಿಳಿದು ಬರಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

Posted by Vidyamaana on 2024-01-29 07:59:38 |

Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.  ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.


ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 


ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.

ಹತ್ಯೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷರು ಹೊಣೆ: ಸತ್ಯಜಿತ್ ಸುರತ್ಕಲ್

Posted by Vidyamaana on 2023-04-21 10:59:35 |

Share: | | | | |


ಹತ್ಯೆಯಾದರೆ   ಬಿಜೆಪಿ ರಾಜ್ಯಾಧ್ಯಕ್ಷರು ಹೊಣೆ: ಸತ್ಯಜಿತ್ ಸುರತ್ಕಲ್

ಮಂಗಳೂರು: ಚುನಾವಣೆ ನೆಪದಲ್ಲಿ ಸರಕಾರ ನನ್ನ ಭದ್ರತಾ ಸಿಬಂದಿಯನ್ನು ವಾಪಸ್ ಕರೆಯಿಸಿಕೊಂಡಿದೆ. ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆಯಾಗುತ್ತಾರೆ ಎಂದು ಹಿಂದೂ ಸಂಘಟನೆಯ ಪ್ರಮುಖ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ಹತ್ಯೆಗೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಕಾರ್ಯಗಳಿಂದಾಗಿ ಬೆದರಿಕೆ ಬಂದಿತ್ತೆ ಹೊರತು ನನ್ನ ವೈಯಕ್ತಿಕ ವಿಷಯಕ್ಕಾಗಿ ಅಲ್ಲ ಎಂದರು.ನಾನು ಯಾವುದಕ್ಕೂ ಭಯ ಪಡುವವನಲ್ಲ, ವ್ಯವಸ್ಥೆ ವಿರುದ್ದ ಮಾತನಾಡುವ ನನ್ನ ಬಾಯಿ ಮುಚ್ಚಿಸುವ ಪ್ರಯತ್ನವಾಗಿ ಹೀಗೆ ಮಾಡಲಾಗುತ್ತಿದೆ. ಆದರೆ ನಾನು ಹೋರಾಟ ಮುಂದುವರೆಸುತ್ತೇನೆ. ರಾಜಕೀಯ ಅಪೇಕ್ಷೆ ಇಲ್ಲ. ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಹೇಳಿದರು



Leave a Comment: