ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

Posted by Vidyamaana on 2024-03-19 21:42:20 |

Share: | | | | |


ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ‌ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ‌ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ ಕ್ಷೇತ್ರವನ್ನು ಮರು ಸಂಪಾದಿಸಿಕೊಳ್ಳುವುದೇ ಕಾಂಗ್ರೆಸ್ ಮುಂದಿರುವ ಬಹುದೊಡ್ಡ ಸವಾಲು.

ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಬಂಡಾಯ ಕಾಂಗ್ರೆಸಿಗೆ ವರದಾನ ಎಂಬ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ಅರುಣ್ ಕುಮಾರ್ ಪುತ್ತಿಲ ಅವರು‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಇನ್ನು ಅಧಿಕೃತ ಮಾಹಿತಿ‌ ಹೊರಹಾಕಿಲ್ಲ.

ಜಾತಿ ಲೆಕ್ಕಾಚಾರ:

ಬಂಟ ಸಮುದಾಯದ ಕ್ಯಾ. ಚೌಟ ಅವರಿಗೆ ಬಿಜೆಪಿ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡನಿಗೆ ಟಿಕೇಟ್ ನೀಡಲು ಯೋಜನೆ ಸಿದ್ಧಪಡಿಸಿಕೊಂಡಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಂಟ ಸಮುದಾಯದ ನಳಿನ್ ಕುಮಾರ್ ಕಟೀಲ್ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಬಂಟ ಸಮುದಾಯದ ಮಿಥುನ್ ರೈ ಕಣಕ್ಕಿಳಿದಿದ್ದರು. ಆದರೆ ಮೋದಿ ಅಲೆಯ ಮುಂದೆ ಎಲ್ಲವೂ ಕೊಚ್ಚಿಕೊಂಡು‌ಹೋಗಿತ್ತು. ಬಂಟ ಸಮುದಾಯದ ಕಾಂಗ್ರೆಸ್ ಲೆಕ್ಕಾಚಾರ ಬುಡಮೇಲಾಗಿತ್ತು.

ಕರಾವಳಿಯಲ್ಲಿ ಬಂಟ, ಬಿಲ್ಲವ ಸಮುದಾಯದ ಸಂಖ್ಯೆ ಹೆಚ್ಚಿದೆ. ಹಾಗಾಗಿ ಬಂಟ ಸಮುದಾಯದ ಪ್ರತಿಸ್ಪರ್ಧಿಯಾಗಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಮಾಹಿತಿ.

ಜನಾರ್ದನ ಪೂಜಾರಿ‌ ಆಪ್ತ!

ಗುರು ಬೆಳದಿಂಗಳು ಕಾರ್ಯಕ್ರಮದ ಮೂಲಕ ಫೇಮಸ್ ಆಗಿರುವ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಎನ್ನುವ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಪದ್ಮರಾಜ್ ಹೆಸರನ್ನೇ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ.



ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Posted by Vidyamaana on 2023-02-17 04:39:36 |

Share: | | | | |


ಫೆ.18ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ಪೂರ್ವಶಿಷ್ಟ ಪದ್ಧತಿಯಂತೆ ಫೆ.18 ರಂದು ನಡೆಯಲಿದೆ.

ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು, ರಾತ್ರಿ ಶ್ರೀ ದೇವರ ಬಲಿ ಹೊರಟು, ತಂತ್ರ ಸುತ್ತು ಜರಗಿ ಬಳಿಕ ಹೊರಾಂಗಣದಲ್ಲಿ ಉಡಕೆ, ಚಂಡೆ, ವಾದ್ಯ, ಸರ್ವವಾದ್ಯ ಸುತ್ತುಗಳು ನಡೆಯಲಿದೆ.

ಬಳಿಕ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು, ತಡರಾತ್ರಿ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಬಲಿ ಉತ್ಸವ ನೆರವೇರಲಿದೆ. ಜತೆಗೆ ಪಲ್ಲಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದೆ ಎಂದು ಶ್ರೀ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರೀ ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

Posted by Vidyamaana on 2023-05-31 11:34:27 |

Share: | | | | |


ಭಾರೀ ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಪುತ್ತೂರು: ಕುಂಬ್ರ ಸಮೀಪದ ಶೇಖಮಲೆಯಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಮಳೆಗೆ ಬೃಹತ್‌ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಹಲವೆಡೆ ವಿದ್ಯುತ್‌ ಕಂಬಗಳು ನೆಲಕ್ಕುರಳಿದ್ದು ವಿದ್ಯುತ್‌ ವ್ಯತ್ಯಯವಾಗಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌

ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿ ತಂದೆ

Posted by Vidyamaana on 2023-11-27 04:29:57 |

Share: | | | | |


ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿ ತಂದೆ

ಮಂಗಳೂರು, ನ.26: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಪತ್ನಿ, ಮಕ್ಕಳನ್ನು ಕಳಕೊಂಡ ನೂರ್ ಮಹಮ್ಮದ್ ಮಂಗಳೂರಿನಲ್ಲಿ ಮಕ್ಕಳಾದ ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 


ಮಕ್ಕಳಿಬ್ಬರೂ ಒಂದೇ ಕೊಠಡಿಯಲ್ಲಿ ನೆಲೆಸಿದ್ದರು. ತಾವೇ ಅಡುಗೆಯನ್ನೂ ಮಾಡಿಕೊಳ್ಳುತ್ತಿದ್ದರು. ಆರಂಭದಲ್ಲಿ ಬಾಡಿಗೆ ಮನೆ ಹುಡುಕಿಕೊಡಲು ಪ್ರವೀಣ್ ಚೌಗುಲೆ ನೆರವಾಗಿದ್ದ. ಈ ಬಗ್ಗೆ ಮನೆ ಮಾಲೀಕರ ಜೊತೆಗೂ ಮಾತನಾಡಿದ್ದು, ಮನೆ ತೋರಿಸುವುದಕ್ಕೆ ಮಾತ್ರ ಪ್ರವೀಣ್ ಇಲ್ಲಿಗೆ ಬಂದಿದ್ದ ಎಂದು ಹೇಳಿದ್ದಾರೆ. ಈ ನಡುವೆ, ಪ್ರವೀಣ ಚೌಗುಲೆ ಹೊಸತಾಗಿ ಕಾರು ಖರೀದಿಸಿದ್ದು ತನ್ನಲ್ಲಿದ್ದ ಸ್ಕೂಟರನ್ನು ಐನಾಝ್ ಗೆ ನೀಡಿದ್ದ. ಇದನ್ನು ಐನಾಝ್ ಕೂಡ ತನಗೆ ಮಾಹಿತಿ ನೀಡಿದ್ದಳು. ಸ್ಕೂಟರಿಗೆ 28 ಸಾವಿರ ರೂಪಾಯಿ ನೀಡಿದ್ದೇನೆ ಎಂದು ತಿಳಿಸಿದ್ದಳು. 


ಮನೆಯ ಹೊರಗಡೆ ಆ ಸ್ಕೂಟರ್ ಹಾಗೇ ಇದೆ. ಮನೆಯಲ್ಲಿ ಮಕ್ಕಳಿಬ್ಬರ ವಸ್ತುಗಳನ್ನು ನೋಡಿ ದುಃಖ ಉಕ್ಕಿ ಬಂದಿದೆ. ಹೆತ್ತವರು ಮುಸ್ಸಂಜೆಯಲ್ಲಿರುವಾಗ ಯೌವನಕ್ಕೆ ಬಂದ ಮಕ್ಕಳು ಈ ರೀತಿ ಕೊಲೆಯಾಗುತ್ತಾರೆಂದು ಯಾರೂ ಅಂದುಕೊಳ್ಳಲ್ಲ. ಮನೆಯಲ್ಲಿ ಐರನ್ ಬಾಕ್ಸ್, ಬಟ್ಟೆಗಳು, ಇದರ ನಡುವೆ ಖುರಾನ್ ಪುಸ್ತಕವೂ ಸಿಕ್ಕಿದೆ. ನನ್ನ ಹೆಣ್ಮಕ್ಕಳಿಬ್ಬರು ಇಸ್ಲಾಂ ಧರ್ಮದ ಚೌಕಟ್ಟಿನಲ್ಲಿ ಬದುಕುತ್ತಿದ್ದರು ಎಂದು ನೂರ್ ಮಹಮ್ಮದ್ ಹೇಳಿದ್ದಾರೆ. 


ಉದ್ಯೋಗದಲ್ಲಿ ಸೀನಿಯರ್ ಆಗಿದ್ದರಿಂದ ಪ್ರವೀಣ್ ಚೌಗುಲೆಗೆ ಮಂಗಳೂರಿನಲ್ಲಿ ಪರಿಚಯ ಇದ್ದುದರಿಂದ ಬಾಡಿಗೆ ಮನೆ ಪಡೆಯುವಾಗ ಆತನ ನೆರವು ಕೇಳಿದ್ದಳು. ಈ ಬಗ್ಗೆ ತನ್ನಲ್ಲಿಯೂ ಐನಾಝ್ ಹೇಳಿಕೊಂಡಿದ್ದಳು. ಮನೆಯನ್ನೂ ನೋಡುವುದಕ್ಕೆ ನಾನು ಈ ಹಿಂದೆ ಬಂದಿದ್ದೆ. ಮನೆಯಲ್ಲಿ ಅಡುಗೆ ಇನ್ನಿತರ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಂಡಿದ್ದರು. ಇಬ್ಬರೂ ಸೇರಿಕೊಂಡು ಮನೆ ನಡೆಸುತ್ತಿದ್ದರು. ಮನೆಯಲ್ಲಿ ಬುರ್ಖಾ, ಇನ್ನಿತರ ಎಲ್ಲ ಬಟ್ಟೆ ಬರೆಗಳೂ ಇವೆ ಎಂದು ಎಲ್ಲವನ್ನೂ ನೋಡುತ್ತಲೇ ಕಣ್ಣೀರು ಹಾಕಿದ್ದಾರೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಬಂಧಿಸಿ ಜೈಲಿಗಟ್ಟಿದ ಬಳಿಕ ಮೊದಲ ಬಾರಿಗೆ ನೂರ್ ಮಹಮ್ಮದ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

Posted by Vidyamaana on 2024-06-15 14:38:42 |

Share: | | | | |


BREAKING: ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೆಂಗಳೂರು : ಸಂಸದರಾಗಿ ಆಯ್ಕೆಯಾದ ನಂತ್ರ, ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದಂತೆ ಆಗಿದೆ.

ಇಂದು ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದಂತ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.



Leave a Comment: