ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

ಸುದ್ದಿಗಳು News

Posted by vidyamaana on 2024-06-28 23:59:46 |

Share: | | | | |

  ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ.

ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.

ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.

ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.

ಘಟನಾ ಸ್ಥಳಕ್ಕೆ ಕೊಡಗು ಡಿಸಿ ವೆಂಕಟ್ ರಾಜ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಗ್ಲಾಸ್ ಬ್ರಿಡ್ಜ್ ಲಾಕ್ ಮಾಡಿದ್ದು, ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದು ಅಧಿಕೃತ ಗಾಜಿನ ಸೇತುವೆಯಲ್ಲ. ಏಕೆಂದರೆ ಸಂಬಂಧಪಟ್ಟವರು ಯಾವುದೇ ಅಗತ್ಯ ಅನುಮತಿಯನ್ನು ಪಡೆದಿಲ್ಲ. ಈ ಸೇತುವೆಗೆ ಅರಣ್ಯ ಅನುಮತಿ ಇಲ್ಲ. ಸೇತುವೆಯನ್ನು ನಿರ್ಮಿಸುವ ಮುನ್ನ ಮಣ್ಣು ಪರೀಕ್ಷೆ ಸೇರಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಗ್ರಾಮ ಪಂಚಾಯಿತಿಯ ಏಕಮಾತ್ರ ನಿರ್ಣಯದ ಮೇರೆಗೆ ಸೇತುವೆಯನ್ನು ನಿರ್ಮಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಂದ್ ಮಾಡಲಾಗುತ್ತಿದೆ ಎಂದು ಡಿಸಿ ವೆಂಕಟ್ ರಾಜ ಅವರು ತಿಳಿಸಿದ್ದಾರೆ.

ಇದೇ ವೇಳೆ ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಪಂಚಾಯಿತಿಯೇ ಈ ಗ್ಲಾಸ್ ಬ್ರಿಡ್ಜ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದೆ. ಈ ಪ್ರದೇಶದಲ್ಲಿ 5 ಇಂಚುಗಳಷ್ಟು ಮಳೆಯಾಗಿದೆ ಮತ್ತು ಗಾಜಿನ ಸೇತುವೆಯ ಪಿಲ್ಲರ್‌ಗಳನ್ನು ಹಾಕಲಾದ ಸ್ಥಳದಲ್ಲಿ ಮಣ್ಣು ಕೆಳಕ್ಕೆ ಜಾರಿದೆ. ಹೀಗಾಗಿ, ಸಾರ್ವಜನಿಕರವೀಕ್ಷಣೆಗೆ ನಾವು ಸೇತೆವೆಯನ್ನು ಬಂದ್ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.ಗೇಟ್ ಲಾಕ್ ಮಾಡಿರುವುದು

ಅನುಮತಿ ಕುರಿತು ಪ್ರಶ್ನಿಸಿದಾಗ, ಖಾಸಗಿಯವರು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಪಂಚಾಯಿತಿ ಅನುಮತಿ ನೀಡಿದೆ.

ಸರ್ವೆ ಸಂಖ್ಯೆ 62 ಮತ್ತು 51/1 ಇಬ್ಬರು ನಿವಾಸಿಗಳ ಒಡೆತನದಲ್ಲಿದೆ ಮತ್ತು ಗಾಜಿನ ಸೇತುವೆಯ ಮಾಲೀಕರು ಸೇತುವೆಯನ್ನು ನಿರ್ಮಿಸಲು ಭೂ ಮಾಲೀಕರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಸುಮಾರು ಎಂಟು ತಿಂಗಳ ಹಿಂದೆ ಸೇತುವೆಗೆ ಪಂಚಾಯಿತಿ ಅನುಮತಿ ನೀಡಿತ್ತು. ಆದರೆ, ಭೂ ಪರಿವರ್ತನೆಯ ದಾಖಲೆ ಸಲ್ಲಿಸಿಲ್ಲ ಮತ್ತು ಸುಮಾರು ಮೂರು ವರ್ಷಗಳಿಂದ ಯಾವುದೇ ಭೂ ಪರಿವರ್ತನೆ ಅರ್ಜಿಗಳಿಗೆ ಅನುಮತಿ ನೀಡಿಲ್ಲ ಎಂದು ಅವರು ವಿವರಿಸಿದರು.

 Share: | | | | |

ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

Posted by Vidyamaana on 2023-05-29 17:34:44 |

Share: | | | | |

ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ಮಾನಕ ಜ್ಯುವೆಲ್ಸಿನ ನೂತನ ಶೋರೂಂನ 2ನೇ ಮಳಿಗೆ ನ್ಯೂ ಮಾನಕ ಜ್ಯುವೆಲ್ಸ್ ಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಇದೇ ಸಂದರ್ಭ ಸಂಸ್ಥೆಯ ಮಾಲಕರಾದ ಸಿದ್ಧನಾಥ್ ಅವರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹೊದಿಸಿ, ಶ್ರೀ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಫೊಟೋ ನೀಡಿ ಗೌರವಿಸಿದರು.

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂಡಬಿದರೆ; ಅಪಘಾತಕ್ಕೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಬಲಿ

Posted by Vidyamaana on 2023-06-06 03:24:21 |

Share: | | | | |

ಮೂಡಬಿದರೆ; ಅಪಘಾತಕ್ಕೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಬಲಿ

ಮೂಡಬಿದಿರೆ: ಅಪಘಾತಕ್ಕೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಬಲಿಯಾಗಿರುವ ಘಟನೆ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಹಂಡೇಲು ಎಂಬಲ್ಲಿ ನಡೆದಿದೆ. ಖಾಸಗಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ಸ್‌ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ (19) ಮೃತ ದುರ್ದೈವಿ.

ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಮೂಡಬಿದಿರೆ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

Posted by Vidyamaana on 2024-05-31 07:59:03 |

Share: | | | | |

ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

ಉಡುಪಿ, ಮೇ 30: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

Posted by Vidyamaana on 2024-06-28 23:59:46 |

Share: | | | | |

  ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ.

ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.

ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.

ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.

ಚೂರಿ ಇರಿತ ಪ್ರಕರಣ: ಆರೋಪಿ ರವಿ ನಾವೂರು ಪೊಲೀಸ್ ವಶಕ್ಕೆ

Posted by Vidyamaana on 2024-04-18 13:21:16 |

Share: | | | | |

ಚೂರಿ ಇರಿತ ಪ್ರಕರಣ: ಆರೋಪಿ ರವಿ ನಾವೂರು ಪೊಲೀಸ್ ವಶಕ್ಕೆ

ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆ ಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ರವಿ ನಾವೂರು ಬಂಧಿತ ಆರೋಪಿ. ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್‌ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ.

Leave a Comment: