ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾಗಾರರ ಸಭೆ ನಡೆಸಿದ ಅಶೋಕ್ ಕುಮಾರ್ ರೈ

Posted by Vidyamaana on 2023-04-21 22:44:15 |

Share: | | | | |


ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾಗಾರರ ಸಭೆ ನಡೆಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಕಾಂಗ್ರೆಸ್ ಪಕ್ಷದ  ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಸಮರ್ಥವಾಗಿ ಬಳಸಿಕೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರ ಸಭೆ ಏ 21 ರಂದು ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆಯಿತು.

ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಾಮಾಜಿಕ ಜಾಲತಾಣ ನಿರ್ವಹಣಾಗಾರರಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಸುಮಾರು 50ಕ್ಕೂ ಅಧಿಕ ಸಾಮಾಜಿಕ ಜಾಲತಾಣ ನಿರ್ವಹಣಾಗಾರರು ಸಭೆಯಲ್ಲಿ ಭಾಗವಹಿಸಿದ್ದರು.

ಅಶೋಕ್ ರೈ ಅವರ ಪರ ಹಾಗೂ ವಿರೋಧವಾಗಿ ಪ್ರಕಟವಾಗುವ ಸಂದೇಶ, ವರದಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಅಪಪ್ರಚಾರ ನಡೆಸುವ ಸಂದೇಶಗಳನ್ನು ಯಾವ ರೀತಿ ನಿರ್ವಹಿಸಬೇಕು ಎನ್ನುವುದರ ಬಗ್ಗೆ ಅವರಿಗೆ ತಿಳಿಸಲಾಯಿತು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

Posted by Vidyamaana on 2023-11-28 17:00:51 |

Share: | | | | |


ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.


ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯದ ಬಗ್ಗೆ ಡಿಕೆಶಿ ವಿಚಾರಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ.


ಇಂದು (ನವೆಂಬರ್​ 28) ಅದರ ಉದ್ಘಾಟನೆ ಮಾಡುವ ಸಲುವಾಗಿ ಆಗಮಿಸಿರುವ ಡಿ.ಕೆ. ಶಿವಕುಮಾರ್​ ಅವರು ಹಿರಿಯ ಕಲಾವಿದೆಯ ಮನೆಗೆ ಭೇಡಿ ಕೊಟ್ಟಿದ್ದಾರೆ.

ಪತಿಯೂ ಬೇಕು ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

Posted by Vidyamaana on 2024-04-04 21:52:51 |

Share: | | | | |


ಪತಿಯೂ ಬೇಕು  ಪ್ರೇಮಿಯೂ ಬೇಕೆಂದು ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ

ಲಕ್ನೋ: 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ.ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು.ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು.


ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದ್ದು, ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದಳು

ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

Posted by Vidyamaana on 2024-05-05 17:20:58 |

Share: | | | | |


ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

Posted by Vidyamaana on 2024-03-13 17:14:47 |

Share: | | | | |


ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

ಸಾಮಾನ್ಯವಾಗಿ, ಅನೇಕ ಜನರು ಅನಾರೋಗ್ಯಕ್ಕೆ ಒಳಗಾದಾಗ, ಅವರು ವೈದ್ಯರ ಬಳಿಗೆ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಔಷಧಿಯನ್ನು ವೈದ್ಯರಿಗೆ ತೋರಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ.ನೀವು ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ನಿಮ್ಮ ಸಮಸ್ಯೆಯನ್ನು ಗುಣಪಡಿಸುವ ಔಷಧಿಯನ್ನು ಪಡೆದರೂ, ಕೆಲವೊಮ್ಮೆ ನೀವು ಗಂಭೀರ ಅಡ್ಡಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ನೋವು ನಿವಾರಕಗಳು, ಆಯಂಟಿಬಯೋಟಿಕ್‌ಗಳು ಮುಂತಾದ ತಕ್ಷಣದ ನೋವು ನಿವಾರಕ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ಗೆರೆಗಳನ್ನು ನೀವು ಗಮನಿಸಿರಬಹುದು. ಆದರೆ ಈ ಕೆಂಪು ರೇಖೆ ಏಕೆ ಇರುತ್ತದೆ ಎಂದು ನೀವೂ ಎಂದಾದರೂ ಯೋಚಿಸಿದ್ದೀರಾ..? ಹಾಗಾದರೆ ಇಲ್ಲಿ ತಿಳಿಯಿರಿ..


ಮಾತ್ರೆ ಪ್ಯಾಕೆಟ್‌ನಲ್ಲಿರುವ ಕೆಂಪು ರೇಖೆಯ ಅರ್ಥವೇನು?

ವಾಸ್ತವವಾಗಿ, ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ರೇಖೆ ಎಂದರೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರೆ ಮಾರಾಟ ಮಾಡಬೇಡಿ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಬೇಡಿ. ಆದ್ದರಿಂದ, ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ರೇಖೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.ಔಷಧಿಗಳು, ವಿಶೇಷವಾಗಿ ಪ್ಯಾಕೇಜಿಂಗ್‌ನಲ್ಲಿ ಕೆಂಪು ಲಂಬ ರೇಖೆಯನ್ನು ಹೊಂದಿರುವ ಪ್ರತಿಜೀವಕಗಳನ್ನು ಅರ್ಹ ವೈದ್ಯರನ್ನು ಸಂಪರ್ಕಿಸದೆ ಎಂದಿಗೂ ಸೇವಿಸಬಾರದು. ಜಾಗೃತರಾಗಿರಿ, ಸುರಕ್ಷಿತವಾಗಿರಿಕೆಂಪು ರೇಖೆಯ ಹೊರತಾಗಿ, ಔಷಧದ ಮೇಲೆ ಅನೇಕ ಉಪಯುಕ್ತ ವಿಷಯಗಳನ್ನು ಬರೆಯಲಾಗಿದೆ. ಅವರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ Rx ಎಂದು ಬರೆಯಲಾಗಿದೆ. ಅಂದರೆ ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ XRx ಎಂದು ಬರೆಯಲಾಗಿದೆ. ಇದರರ್ಥ ಔಷಧಿಯನ್ನು ವೈದ್ಯರು ಮಾತ್ರ ಸೂಚಿಸಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ, ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

Posted by Vidyamaana on 2023-09-22 21:34:50 |

Share: | | | | |


ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿವೆ. 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆಗೆ ಇಳಿದಿದ್ದ.

ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಕೈಗೊಂಡಿದ್ದಾರೆ



Leave a Comment: