ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

Posted by Vidyamaana on 2024-06-30 16:12:44 |

Share: | | | | |


ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು ,ಜೂ.30- ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

Posted by Vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

Posted by Vidyamaana on 2024-02-03 22:26:23 |

Share: | | | | |


ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

ಕಾಞಂಗಾಡ್ : ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಾಞಂಗಾಡ್ ನಲ್ಲಿ ಸಂಭವಿಸಿದೆ.ಇಲ್ಲಿನ ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ (36) ಮೃತ ದುರ್ದೈವಿಯಾಗಿದ್ದಾರೆ .ಸೇನಾ ಅಧಿಕಾರಿ ಕೋಝಿಕ್ಕೋಡ್ ಶರೀದ್ ಅವರ ಪತ್ನಿಯಾಗಿರುವ ಶುಹೈರಾ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಬಾತ್ ರೂಂ ಗೆ ಸ್ನಾನಕ್ಕೆಂದು ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ತಳಿಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಶುಹೈರಾ ಆದಾಗಲೇ ಇಹಲೋಕ ತ್ಯಜಿಸಿದ್ದರು ಎನ್ನಲಾಗಿದ್ದು. ಹೃದಯಾಘಾತದಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

Posted by Vidyamaana on 2023-04-15 23:28:53 |

Share: | | | | |


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೆ ನಿಗದಿಪಡಿಸಿದ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್‍ ಮಾಡಬೇಕಾದ್ದು ಕಡ್ಡಾಯವಾಗಿದೆ.

ಏ.16 ರಂದು ಕಿರುವಾಳು ಆಗಮನ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಸಂದರ್ಭದಲ್ಲಿ ಸಂಪ್ಯ ಕಡೆಯಿಂದ ಕಬಕ, ಮಂಗಳೂರು ಕಡೆಗೆ ಹೋಗುವ ವಾಹನಗಳು ದರ್ಬೆ ಅಶ್ವಿನಿ ವೃತ್ತ, ಬೆದ್ರಾಳ, ಸಾಲ್ಮರ, ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು, ವಿಟ್ಲ ಕಬಕ ಕಡೆಗಳಿಂದ ಬರುವ ವಾಹನಗಳು ಲಿನೆಟ್ ವೃತ್ತ, ಬೊಳುವಾರು ವೃತ್ತ, ಪಡೀಲ್, ಕೊಟೇಚಾ ಹಾಲ್ ಕ್ರಾಸ್, ಸಾಲ್ಮರ, ಎಪಿಎಂಸಿ ರಸ್ತೆಯಾಗಿ ದರ್ಬೆ‍ ಅಶ್ವಿನಿ ವೃತ್ತವಾಗಿ ಸಂಚರಿಸುವುದು.

ಏ.16 ಹಾಗೂ 17 ರಂದು ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಜೆ 4 ರ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ ಗಳು ಎಂಟಿ ರಸ್ತೆ ಮೂಲಕ ತೆರಳಿ, ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಮಂಗಳೂರು ಕಡೆಯಿಂದ ಬರುವ ಎಲ್ಲಾ ಬಸ್‍ ಗಳು ಬೊಳುವಾರು-ಪಡೀಲ್-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸುವುದು. ಉಪ್ಪಿನಂಗಡಿ ಕಡೆಯಿಂದ ಬರುವ ಬಸ್‍ ಗಳು ಪಡೀಲ್-ಕೊಟೇಚಾ ಹಾಲ್-ಸಾಲ್ಮರ ಕ್ರಾಸ್, ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರುವುದು. ಸುಳ್ಯ, ಮಡಿಕೇರಿ ಕಡೆಯಿಂದ ಬರುವ ಬಸ್ ಗಳು ಮುಖ್ಯರಸ್ತೆಯಿಂದ ಸಾಗಿ ಅರುಣಾ ಚಿತ್ರ ಮಂದಿರದ ಮೂಲಕ ಸಾಗಿ ಬಸ್ ನಿಲ್ದಾಣಕ್ಕೆ ಸಂಚರಿಸುವುದು.

ನೆಹರೂನಗರ, ಬೊಳುವಾರು ಕಡೆಗಳಿಂದ ಬರುವ ಆಟೋ ರಿಕ್ಷಾಗಳು ಮಯೂರ ಇನ್‍ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಾಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋ ರಿ್ಕ್ಷಾಗಳು ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸ್ ಸಂಚರಿಸುವುದು. ಪರ್ಲಡ್ಕ ಕಡೆಯಿಂದ ಬರುವ ರಿ್ಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ಸಂಚರಿಸುವುದು.

ವಾಹನ ಪಾರ್ಕಿಂಗ್ :

ಉಪ್ಪಿನಂಗಡಿ, ಬನ್ನೂರು ಕಡೆಯಿಂದ ಬರುವ ಭಕ್ತರ ವಾಹನಗಳಿಗೆ ಎಪಿಎಂಸಿ ಆವರಣ, ಕೊಂಬೆಟ್ಟು ಸರಕಾರಿ ಪ್ರೌಢಶಾಲಾ ಮೈದಾನ, ಕೊಂಬೆಟ್ಟು ಬಂಟರಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕ್‍ ಮಾಡುವುದು, ಸಂಪ್ಯ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ ಪುರುಷರಕಟ್ಟೆಯಿಂದ ಬರುವ ವಾಹನಗಳಿಗೆ ತೆಂಕಿಲ ಗೌಡ ಸಮುದಾಯ ಭವನ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕಿಲ್ಲೆ ಮೈದಾನದಲ್ಲಿ ಪಾರ್ಕ್ ಮಾಡುವುದು. ವಿಟ್ಲ, ಕಬಕ, ನೆಹರುನಗರದಿಂದ ಬರುವ ವಾಹನಗಳು ಜೈನಭವನದ ಬಳಿ, ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್‍ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ ಆತ್ಮಹತ್ಯೆ

Posted by Vidyamaana on 2023-04-29 23:17:39 |

Share: | | | | |


ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್  ಆತ್ಮಹತ್ಯೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Posted by Vidyamaana on 2024-06-26 19:19:30 |

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.



Leave a Comment: