ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಮಂಗಳೂರು: ನಮಗೂ ಪರಿಹಾರ ನೀಡಿ ಹತ್ಯೆಗೀಡಾದ ಶರತ್‌ ಮಡಿವಾಳ ತಂದೆ ತನಿಯಪ್ಪ ಆಗ್ರಹ

Posted by Vidyamaana on 2023-06-17 11:15:24 |

Share: | | | | |


ಮಂಗಳೂರು: ನಮಗೂ ಪರಿಹಾರ ನೀಡಿ ಹತ್ಯೆಗೀಡಾದ ಶರತ್‌ ಮಡಿವಾಳ ತಂದೆ ತನಿಯಪ್ಪ ಆಗ್ರಹ

ಮಂಗಳೂರು : ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ 4 ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ. ಆದರೆ ನಮ್ಮ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಹೇಳಿದ್ದು, ನಮ್ಮ ಕುಟುಂಬಕ್ಕೂ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತನಿಯಪ್ಪ ಮಡಿವಾಳ ಪರಿಹಾರ ನೀಡುವಲ್ಲಿಯೂ ರಾಜ್ಯ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಹೇಳಿದ್ದಾರೆ.


2017 ರ ಜುಲೈ 7 ರಂದು ಶರತ್ ಮಡಿವಾಳ ಹತ್ಯೆ ನಡೆದಿತ್ತು. ಬಂಟ್ವಾಳ ದ ಬಿ.ಸಿ ರೋಡ್‌ನಲ್ಲಿ ಶರತ್‌ ಮಡಿವಾಳ ಉದಯ ಲಾಂಡ್ರಿ ಹೆಸರಿನ ಅಂಗಡಿ ಹೊಂದಿದ್ದರು. 2017 ರ ಜುಲೈ 7 ರಂದು ಲಾಂಡ್ರಿಯಲ್ಲಿ ಕೆಲಸ ಮುಗಿಸಿ ಅಂಗಡಿ ಬಾಗಿಲು ಹಾಕುವ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಮಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜುಲೈ ,7 ರಂದು ಶರತ್‌ ಕೊನೆಯುಸಿರೆಳಿದಿದ್ದರು.


ಇಂದಿಗೂ ಮಗನ ಸಾವಿಗೆ ನ್ಯಾಯ ದೊರೆತಿಲ್ಲ ಎಂದು ಶರತ್‌ ತಂದೆ ತನಿಯಪ್ಪ ಮಡಿವಾಳ ಕೊರಗುತ್ತಿದ್ದಾರೆ. ಇಂದಿಗೂ ಅದೇ ಲಾಂಡ್ರಿಯಲ್ಲಿ 74 ವರ್ಷದ ತನಿಯಪ್ಪದುಡಿಮೆ ಮಾಡುತ್ತಿದ್ದು ತಮಗೆ ಇದುವರೆಗೆ ಬಿಜೆಪಿ ಅಥವಾ ಕಾಂಗ್ರೆಸ್ ಸರಕಾರ ವಾಗಲಿ ಇದುವರೆಗೆ ಒಂದು ರೂಪಾಯಿ ಪರಿಹಾರ ನೀಡಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಸರ್ಕಾರದ‌ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಮ್ಮ ಸಮಸ್ಯೆಗಳಿಗೆ ಕಷ್ಟಕ್ಕೆ ಯಾವ‌ ಸರ್ಕಾರವೂ ಸ್ಪಂದಿಸಿಲ್ಲ. ನನ್ನ ಮಗನ ಪ್ರಕರಣ ದಲ್ಲಿ ಸರಿಯಾಗಿ ತನಿಖೆ ಆಗಿಲ್ಲ . ಈ ಪ್ರಕರಣದ ತನಿಖೆಯನ್ನು ಎನ್ ಐ ಎ ಗೆ ಅಥವಾ ಸಿ ಬಿ ಐ ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಕುಟುಂಬಕ್ಕೆ ಈ ಕೂಡಲೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ HSRP ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು

Posted by Vidyamaana on 2024-06-11 14:40:36 |

Share: | | | | |


ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ HSRP ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ಅವಧಿ ವಿಸ್ತರಣೆ ಮಾಡಿ ಜೂನ್.‌ 12ಕ್ಕೆ ಗಡುವು ವಿಸ್ತರಿಸಿದೆ

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ರಾಜ್ಯ ಸಾರಿಗೆ ಇಲಾಖೆ ಜೂನ್‌ 12 ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂನ್.‌13 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ರಾಮಚಂದ್ರಮನ ನಾಡಿನಿಂದ ಮಹಾಲಿಂಗೇಶ್ವರನ ಸನ್ನಿಧಿಗೆ ಬಂತು ಪವಿತ್ರ ಅಕ್ಷತೆ

Posted by Vidyamaana on 2023-11-27 16:39:47 |

Share: | | | | |


ಶ್ರೀ ರಾಮಚಂದ್ರಮನ ನಾಡಿನಿಂದ ಮಹಾಲಿಂಗೇಶ್ವರನ ಸನ್ನಿಧಿಗೆ ಬಂತು ಪವಿತ್ರ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು.

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ. ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು.ಬಳಿಕ ಅಕ್ಷತೆ ತುಂಬಿದ ಕಲಶವನ್ನು ಮೆರವಣಿಗೆ ಮೂಲಕ ದೇವಸ್ಥಾನದ ಹೊರಾಂಗಣದಲ್ಲಿ ಸುತ್ತು ಬಂದು ದೇವಸ್ಥಾನದ ಒಳಾಂಗಣಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಗರ್ಭಗುಡಿಯಲ್ಲಿ ಅಕ್ಷತೆಯನ್ನಿರಿಸಿ ಪ್ರಾರ್ಥನೆ ಮೂಲಕ ಪೂಜೆ ನೆರವೇರಿಸಲಾಯಿತು. ಬಳಿಕ ಅಕ್ಷತೆಯನ್ನು ಪಾವಿತ್ರ್ಯತೆಯೊಂದಿಗೆ ಇರಿಸಲಾಯಿತು. ಅಕ್ಷತೆಯನ್ನು ಪ್ರತೀ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ಜ. 1 ರಿಂದ 15 ರ ತನಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಹಿಂದುವಿನ ಮನೆಗೆ ಈ ಅಕ್ಷತೆಯನ್ನು ಸಂಪರ್ಕ ಅಭಿಯಾನದ ಮೂಲಕ ತಲುಪಿಸಲಾಗುವುದು. ಜ. 7 ರಂದು ಸಂಪರ್ಕ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಮಹಾಸಂಪರ್ಕ ಅಭಿಯಾನ ನಡೆಯಲಿದೆ.ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಯೋಜಕ್ ರವೀಂದ್ರ ಪಿ., ಸಂಚಾಲಕ ಡಾ. ಕೃಷ್ಣ ಪ್ರಸನ್ನ ಸೇರಿದಂತೆ ಮತ್ತಿತರ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ ಆಶೀರ್ವಾದದ ರೂಪದಲ್ಲಿ

Posted by Vidyamaana on 2023-11-30 14:59:40 |

Share: | | | | |


ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ ಆಶೀರ್ವಾದದ ರೂಪದಲ್ಲಿ

ಪುತ್ತೂರು: ಹೊಸ ಮನೆ ನಿರ್ಮಿಸಬೇಕು ಎನ್ನುವದು ಎಲ್ಲರ ಕನಸು. ಆ ಕನಸು ನಿಮಗೆ ಅದೃಷ್ಟವಾಗಿ ಒಲಿದು ಬಂದರೆ ಹೇಗಿರಬಹುದು.

ಹೌದು, ಇಂತಹದ್ದೊಂದು ಅವಕಾಶ ನಿಮ್ಮ ಮುಂದಿದೆ. ಆಶೀರ್ವಾದ ಎಂಟರ್ಪ್ರೈಸಸ್ ಇಂತಹ ಹೊಸ ಅವಕಾಶವೊಂದನ್ನು ನಿಮ್ಮ ಮುಂದಿಟ್ಟಿದೆ. ಅದು ಮಾತ್ರ ಅಲ್ಲದೆ ಪ್ರತಿ ತಿಂಗಳು ಕಾರು, ಬೈಕ್, ಚಿನ್ನ, ನಗದು ಜೊತೆಗೆ ಹತ್ತು ಹಲವಾರು ಅದೃಷ್ಟಕರ ಬಹುಮಾನವನ್ನು ಆಶೀರ್ವಾದ ಲಕ್ಕಿ ಸ್ಕೀಮ್ ಮೂಲಕ ನೀವು ಪಡೆದುಕೊಳ್ಳಬಹುದು.



ಪ್ರತಿ ತಿಂಗಳು ೫೦ ಆಕರ್ಷಕ ಬಹುಮಾನವನ್ನು ಸಹ ನೀವು ಪಡೆದುಕೊಳ್ಳಬಹುದು. ತಿಂಗಳ ಉಳಿತಾಯದಲ್ಲಿ ೧೦೦೦ ರೂ.ಗಳಂತೆ ೨೦ ತಿಂಗಳು ಪಾವತಿಸಿದರೆ ಆ ಅದೃಷ್ಟಶಾಲಿಗಳು ನೀವಾಗಬಹುದು.

ಹಣ ಪಾವತಿ ಮಾಡಿದ ಪ್ರತಿ ಸದಸ್ಯರಿಗೂ ಅವರು ಕಟ್ಟಿರುವ ಮೊತ್ತಕ್ಕೆ ಬಹುಮಾನವಾಗಿ ಫ್ರಿಡ್ಜ್, ವಾಷಿಂಗ್ ಮೆಷಿನ್, ಟಿವಿ, ಇನ್ವರ್ಟರ್, ಸೋಫಾ, ಹೋಮ್ ಥಿಯೇಟರ್, ಎ/ಸಿ ಹಾಗೂ ಇತರೆ ಬಹುಮಾನಗಳನ್ನು ಪಡೆದುಕೊಳ್ಳಬಹುದು.



ಈಗಾಗಲೇ ಪುತ್ತೂರು, ಸುಳ್ಯ, ಮಡಿಕೇರಿ, ಕಾರವಾರ, ಮುಂಬೈ, ಉಡುಪಿ, ಮೈಸೂರು, ಕಾಸರಗೋಡು ಮುಂತಾದ ಸ್ಥಳಗಳಲ್ಲಿ ಆಶೀರ್ವಾದ ಎಂಟರ್ಪ್ರೈಸಸ್ ಈ ಯೋಜನೆ ಮೂಲಕ ಅದೃಷ್ಟಾಶಾಲಿಗಳನ್ನು ತಲುಪುತ್ತಿದೆ.

ಈ ಎಲ್ಲಾ ಡ್ರಾಗಳು ಆಶೀರ್ವಾದ್ ಎಂಟರ್ ಪ್ರೈಸಸ್ ಕಚೇರಿಯ ಮುಂಬಾಗದಲ್ಲೇ ನಡೆಯಲಿದೆ‌. ಅಲ್ಲದೇ ಸಂಸ್ಥೆಯ ಯೂಟ್ಯೂಬ್ ಮೂಲಕ ನೇರ ಪ್ರಸಾರ ಮಾಡಲಿದೆ. ಡ್ರಾ ಫಲತಾಂಶವನ್ನೂ ವ್ಹಾಟ್ಸ್ ಆ್ಯಪ್ ಮೂಲಕ ಎಲ್ಲಾ ಗ್ರಾಹಕರಿಗೆ ತಲುಪಿಸಲಾಗುವುದು. ಪತ್ರಿಕೆ ಹಾಗೂ ವೆಬ್ ನ್ಯೂಸ್ ಗಳಲ್ಲಿಯೂ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


1st FLOOR MOIDEEN COMOLEX  OPP SHUBHA STORE DARBE PUTTUR

+9170226 46143 - +91 70226 45143

ಆಶೀರ್ವಾದ   ಲಕ್ಕಿ ಸ್ಕೀಮ್

 ಸೇರಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಾಟ್ಸಪ್ ಲಿಂಕ್ ಬಳಸಿ

https://chat.whatsapp.com/E3SL2vBIhRd0TewMCNekql

ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

Posted by Vidyamaana on 2024-01-06 08:05:45 |

Share: | | | | |


ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

ಪುತ್ತೂರು: ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆ ಮಂಗಳೂರು ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆ ಪುತ್ತೂರು ಇವರ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ 14, 17 ಮತ್ತು 19 ವರ್ಷ ವಯೋಮಾನದ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಜ.6ರಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಈ ಹಿಂದಿನ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ್ದು ಜಿಲ್ಲೆಯ 47 ತಂಡಗಳು ಭಾಗವಹಿಸಿತ್ತು. ಈ ಭಾರಿ 24 ತಂಡಗಳು ಈಗಾಗಲೇ ನೋಂದಾವಣೆ ಮಾಡಿಕೊಂಡಿವೆ. ಇನ್ನೂ ನೋಂದಾವಣೆಗೆ ಅವಕಾಶವಿದೆ ಎಂದು ಹೇಳಿದರು. ಜ.6ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದ‌ರ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧ‌ರ್ ಜೈನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನ್ಯಾಕ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ನ ಅಧ್ಯಕ್ಷ ಜಗದೀಶ್ ಶೆಟ್ಟಿ, ಡಿಎಫ್‌ಒ ಶ್ರೀಧರ್ ಅವರು ಭಾಗವಹಿಸಲಿದ್ದಾರೆ.


ಸಂಜೆ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ನ್ಯಾಯವಾದಿ ಜಯಪ್ರಕಾಶ್ ರೈ ಸುಳ್ಯ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿ, ಉದ್ಯಮಿ ಸಹಜ್ ರೈ, ಸುದಾನ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಪುತ್ತೂರು ಯುವ ಸಬಲೀಕರಣ ಮತ್ತು ಯುವಜನ ಸೇವಾ ಕ್ರೀಡಾಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು, ಬಿ.ಎಸ್.ಎನ್.ಎಲ್‌ನ ಗಣೇಶ್ ರೈ, ದ.ಕ. ಜಿಲ್ಲಾ ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.


ಪಂದ್ಯಾಟದಲ್ಲಿ ಆಯ್ಕೆಗಳು ನಡೆಯಲಿದೆ: ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ಆಯ್ಕೆ ಮಾಡಿ ಅವರಿಗೆ ವಿಶೇಷ ತರಬೇತಿ ನೀಡಲಿದ್ದೇವೆ. ದಕ್ಷಿಣ ಕನ್ನಡದ ವಾಲಿಬಾಲ್ ಆಟಗಾರರಿಗೆ ಉತ್ತಮ ಹೆಸರಿದೆ. ಇದರ ಜೊತೆಗೆ ತೀರ್ಪುಗಾರರಿಗೂ ತರಬೇತಿ ನೀಡುತ್ತೇವೆ. ಈ ಎಲ್ಲಾ ಚಟುವಟಿಕೆಗಳು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ಹೆಚ್ಚಿಸಲಿದೆ. ಮುಂದಿನ ದಿನ ಮಕ್ಕಳಲ್ಲಿ ಎಲ್ಲಾ ರೀತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ವಾಲಿಬಾಲ್ ಸಂಸ್ಥೆಯ ಗೌರವಾಧ್ಯಕ್ಷರಾಗಿರುವ ಸುದಾನ ವಸತಿಯುತ ಶಾಲೆಯ ಸಂಚಾಲಕರಾದ ರೇ. ವಿಜಯ ಹಾರ್ವಿನ್ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ತಾಲೂಕು ಸಂಸ್ಥೆಯ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಕಾರ್ಯದರ್ಶಿ ಬಾಬು ಮಾಸ್ತರ್ ಉಪಸ್ಥಿತರಿದ್ದರು.

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ಆಗಿ ನೇಮಕ

Posted by Vidyamaana on 2023-02-12 10:44:47 |

Share: | | | | |


ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ಆಗಿ ನೇಮಕ

ನವದೆಹಲಿ; ಮೂಡಬಿದರೆ ಮೂಲದ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಆಂಧ್ರಪ್ರದೇಶ ಗವರ್ನರ್ ಆಗಿ ನೇಮಕವಾಗಿದ್ದಾರೆ. ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.ನೇಮಕಾತಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರಾಗಿದ್ದು, ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದ ಎಸ್.ಅಬ್ದುಲ್ ನಜೀರ್ ಅವರು ಜನವರಿ 14ರಂದು ನಿವೃತ್ತರಾಗಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಲಯ ಸಂಕೀರ್ಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಜಸ್ಟಿಸ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದರು. ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದ ಅವರು 2003ರ ಮೇ 12 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.



Leave a Comment: