ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

Posted by Vidyamaana on 2023-02-23 03:42:33 |

Share: | | | | |


ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

ಮಂಗಳೂರು:ಫೆ 23  ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್‌ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

Posted by Vidyamaana on 2024-04-11 13:08:15 |

Share: | | | | |


ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

ಮಂಗಳೂರು : ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.


ಮೂರು ಮಂದಿಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ


ಅಸ್ವಸ್ಥರಾದ ಮೂರು ಮಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಹಿಳೆಯರು ಮತ್ತು 12 ವರ್ಷದ ಮಗು ಸೇರಿದೆ. ಅವರ ಮೋಷನ್ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸುಮಾರು 13 ಮಂದಿ ಈಗಾಗಲೇ ಹೊರ ರೋಗಿಗಳಾಗಿ‌ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ಸೇಡಿಯಾಪು: ಅಪಘಾತದಿಂದ ಮೃತಪಟ್ಟ ಕುಟುಂಬಕ್ಕೆ ಶಾಸಕರಿಂದ ಸಹಾಯಧನ

Posted by Vidyamaana on 2023-08-08 01:29:06 |

Share: | | | | |


ಸೇಡಿಯಾಪು: ಅಪಘಾತದಿಂದ ಮೃತಪಟ್ಟ ಕುಟುಂಬಕ್ಕೆ ಶಾಸಕರಿಂದ ಸಹಾಯಧನ

ಪುತ್ತೂರು;  ಕೆಲವು ದಿನಗಳ ಹಿಂದೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಮೃತಪಟ್ಟಿದ್ದ ಸೇಡಿಯಾಪು ನಿವಾಸಿ ಚೈತ್ರೇಶ್ ರವರ ಕುಟುಂಬಕ್ಕೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸಹಾಯಧನವನ್ನು ವಿತರಿಸಿದರು.

ಅಪಘಾತದಿಂದ ಮೃತಪಟ್ಟ ಚೈತ್ರೇಶ್ ರವರ ತಾಯಿ ಮಂಜುಳಾ ಅವರಿಗೆ ಶಾಸಕರು ರೂ. ೨೫ ಸಾವಿರ ಮೊತ್ತವನ್ನು ವ್ಯಯುಕ್ತಿಕ ನೆಲೆಯಲ್ಲಿ ವಿತರಿಸಿದರು. ಚೈತ್ರೇಶ್ ಮನೆಗೆ ಭೇಟಿ ನೀಡಿದ್ದ ಶಾಸಕರು ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ಕಂಡು ತನ್ನ ವ್ಯಯುಕ್ತಿಕ ನೆಲೆಯಲ್ಲಿ ಸಹಾಯ ಮಾಡುವುದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಸಹಿತ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಸುಳ್ಯ ಮದುವೆಗೆ ಯುವತಿ ಮನೆಯವರ ವಿರೋಧ.ಮನೆ ಬಿಟ್ಟು ಹೋಗಿ ಮದುವೆಯಾದ ಗ್ರಾ.ಪಂ. ಸದಸ್ಯ ಜಗದೀಶ್.

Posted by Vidyamaana on 2023-03-31 23:23:12 |

Share: | | | | |


ಸುಳ್ಯ ಮದುವೆಗೆ ಯುವತಿ ಮನೆಯವರ ವಿರೋಧ.ಮನೆ ಬಿಟ್ಟು ಹೋಗಿ ಮದುವೆಯಾದ ಗ್ರಾ.ಪಂ. ಸದಸ್ಯ ಜಗದೀಶ್.

ಸುಳ್ಯ, ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಯುವತಿ ಮನೆಯವರ ವಿರೋಧವಿದ್ದ ಕಾರಣ ಯುವತಿಯೊಂದಿಗೆ ಮನೆ ಬಿಟ್ಟು ಹೋಗಿ ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿವಾಹವಾದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.

ಗುತ್ತಿಗಾರಿನ ಬಾಕಿಲದ ಆನಂದ ಎಂಬರ ಪುತ್ರ ಜಗದೀಶ್ ಮತ್ತು ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ಜನಾರ್ದನ ಅವರ ಪುತ್ರಿ ಪ್ರತಿಮಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತಿದ್ದರೆನ್ನಲಾಗಿದೆ. ಆದರೆ ಮದುವೆಗೆ ಯುವತಿ ಮನೆಯವರ ವಿರೋಧವಿತ್ತೆನ್ನಲಾಗಿದೆ. ಆದ್ದರಿಂದ ಮನೆ ಬಿಟ್ಟು ತೆರಳಿದ ವಧು ಮತ್ತು ವರ ಮಂಗಳೂರಿನಲ್ಲಿ ಮದುವೆಯಾಗಿದ್ದಾರೆ.ಇನ್ನು ಇತ್ತ ಯುವತಿಯ ತಾಯಿ ಸುಬ್ರಹ್ಮಣ್ಯ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ದೂರು ದಾಖಲಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸಿರುವ ವಧೂವರರು ತಾವು ಮದುವೆ ಆಗಿರುವ ಮಾಹಿತಿ ನೀಡಿದ್ದಾರೆ.

ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಉತ್ತಪ್ಪ ಆತ್ಮಹತ್ಯೆ

Posted by Vidyamaana on 2024-01-04 12:08:49 |

Share: | | | | |


ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಉತ್ತಪ್ಪ ಆತ್ಮಹತ್ಯೆ

ಬೆಂಗಳೂರು, ಜ.4: ಎದೆಗೆ ಗುಂಡು ಹಾರಿಸಿಕೊಂಡು ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭವಾನಿ ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಕೊಡಗು ಮೂಲದ ತಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ(19) ಆತ್ಮಹತ್ಯೆ ಮಾಡಿಕೊಂಡ .  ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.


ಖಾಸಗಿ ಕಂಪೆನಿಯೊಂದರಲ್ಲಿ ಭದ್ರತಾ 3 ಸಿಬ್ಬಂದಿಯಾಗಿರುವ ತಂದೆಯ ಗನ್ನಿಂದ ಎದೆಭಾಗಕ್ಕೆ ಗುಂಡು ಹಾರಿಸಿಕೊಂಡು ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಶು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.


ತಮ್ಮಯ್ಯರ ಕುಟುಂಬ ಕಳೆದ 15 ವರ್ಷಗಳಿಂದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭವಾನಿ ನಗರದಲ್ಲಿ ವಾಸವಿದೆ.


ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

Posted by Vidyamaana on 2024-03-04 11:14:41 |

Share: | | | | |


ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ  ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿಅಬೀನ್ ನನ್ನು ಪೊಲೀಸ್ ವಶಕ್ಕೆ ಪಡೆದಿದ್ದರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ

ಪೊಲೀಸ್ ಪ್ರಕಟಣೆ

ದಿನಾಂಕ 04.03.2024  ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು





Leave a Comment: