ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Posted by Vidyamaana on 2024-04-02 15:13:55 |

Share: | | | | |


ಅಕಾಲಿಕವಾಗಿ ನಿಧನರಾದ ಪದ್ಮನಾಭ್ ಸಾಮಂತ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಅವರ ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಪದ್ಮನಾಭ ಸಾಮಂತ್ ಅವರ ತಾಯಿ, ತನ್ನ ಮಗನ ದಾರುಣ ಸ್ಥಿತಿಯನ್ನು ಪದ್ಮರಾಜ್ ಅವರಿಗೆ ತಿಳಿಸಿ ಕಣ್ಣೀರಾದರು. 

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

Posted by Vidyamaana on 2023-08-01 16:52:39 |

Share: | | | | |


ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ಮೂಡಬಿದರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓರನ್ನು ಅಮಾನತು ಮಾಡಲಾಗಿದೆ.


ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.


ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

Posted by Vidyamaana on 2023-09-07 16:05:24 |

Share: | | | | |


ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.

ನೂತನ ಆಯುಕ್ತ ಅಗರ್ವಾಲ್ ರಾಜಸ್ಥಾನದ ಜೋಧ್ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ, ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಕಾರ್ಯಕ್ರಮಕ್ಕೆ ಗೈರು ಅನಂತ್ ನಾಗ್ ಬಿಜೆಪಿ ಸೇರ್ಪಡೆ ಮುಂದೂಡಿಕೆ

Posted by Vidyamaana on 2023-02-22 16:50:25 |

Share: | | | | |


ಕಾರ್ಯಕ್ರಮಕ್ಕೆ ಗೈರು ಅನಂತ್ ನಾಗ್ ಬಿಜೆಪಿ ಸೇರ್ಪಡೆ  ಮುಂದೂಡಿಕೆ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಅವು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ . ಆದರೆ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ ಎನ್ನಲಾಗಿದೆ. ಕೊನೇ ಕ್ಷಣದಲ್ಲಿ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

Posted by Vidyamaana on 2024-04-03 16:49:20 |

Share: | | | | |


ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

Posted by Vidyamaana on 2024-01-02 11:22:43 |

Share: | | | | |


ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

ಚಿಕ್ಕಮಗಳೂರು: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ. 


ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. 


ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.‌

Recent News


Leave a Comment: