ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

Posted by Vidyamaana on 2024-01-05 07:15:35 |

Share: | | | | |


ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದರು. ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದು, ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಅರುಣ್ ಪುತ್ತಿಲ ಭಾಗಿ - ಸ್ಥಳಕ್ಕೆ ಎಸ್ಪಿ ಭೇಟಿ

Posted by Vidyamaana on 2024-03-31 08:00:09 |

Share: | | | | |


ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಅರುಣ್ ಪುತ್ತಿಲ ಭಾಗಿ - ಸ್ಥಳಕ್ಕೆ ಎಸ್ಪಿ ಭೇಟಿ

ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಎಸ್ಪಿ ಬರುವಂತೆ ಪಟ್ಟು ಹಿಡಿದ ಘಟನೆ ತಡರಾತ್ರಿ ಕಡಬದಲ್ಲಿ ನಡೆದಿದೆ.ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ

ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದರು.ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದರು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿಕೊಂಡಿದ್ದರು.

ಪೈಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು ; ಪೂರ್ತಿ ತಲೆಯೇ ಕಟ್

Posted by Vidyamaana on 2023-11-09 16:38:12 |

Share: | | | | |


ಪೈಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು ; ಪೂರ್ತಿ ತಲೆಯೇ ಕಟ್

ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ. 


ಇದೊಂದು ಪೈಂಟ್‌ ಮಿಕ್ಸಿಂಗ್‌ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್‌ನಲ್ಲಿ ಪೌಡರ್‌ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್‌ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.


ಗ್ರೈಂಡರ್‌ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್‌ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್‌ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್‌ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.


ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಪ್ರೀತಿ, ಸೆಕ್ಸ್‌ - ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನ ವಿರುದ್ಧ ಎಫ್‌ಐಆರ್ ದಾಖಲು

Posted by Vidyamaana on 2023-11-17 19:51:50 |

Share: | | | | |


ಮದುವೆಯಾಗುವುದಾಗಿ ನಂಬಿಸಿ ಪ್ರೀತಿ, ಸೆಕ್ಸ್‌ - ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು : ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನ ವಿರುದ್ಧ ಯುವತಿಯೊಬ್ಬಳು ವಂಚನ ಆರೋಪಿ ಹೊರಿಸಿದ್ದಾಳೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಗಂಭೀರ ಆರೋಪ‌ಕೇಳಿ ಬಂದಿದ್ದು, ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಮೈಸೂರಿನ‌ ಮಹರಾಜ ಕಾಲೆಜಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಒಂದೂವರೆ ವರ್ಷದ ಹಿಂದೆ ಸಂತ್ರಸ್ಥೆಗೆ ಪರಿಚಯವಾಗಿದ್ರಂತೆ.ದೂರುದಾರೆಗೆ ಸ್ನೇಹಿತರ ಮೂಲಕ ಲೆಕ್ಟರರ್ ರಂಗನಾಥ್‌ರ ಪರಿಚಯವಾಗಿದ್ದು ನಂತರ ಪರಿಚತ ಪ್ರೇಮಕ್ಕೆ ತಿರುಗಿದೆ. 42 ವರ್ಷದ ರಂಗನಾಥ್ ಗೆ 24 ವರ್ಷದ ಯುವತಿಗೆ ಜೊತೆ ಲವ್ ಶುರುವಾಗಿದ್ದು ಕಳೆದ ಜನವರಿಯಲ್ಲಿ ಮೈಸೂರಿನ ಹೋಟೇಲ್ ನಲ್ಲಿ ಲೈಂಗಿಕ ಸಂಪರ್ಕ ಬೆಳಸಿದ್ರಂತೆ. ನಂತರ ಕೆಲ ಕಾಲ ಚೆನ್ನಾಗಿ ಇದ್ದಾಗ ಮದ್ವೆ ಆಗುವಂತೆ ದೂರುದಾರೆ ಕೇಳಿದ್ಳಂತೆ. ಈ ವೇಳೆ ರಂಗನಾಥ ಸಂತ್ರಸ್ಥೆಯನ್ನು ಅವೈಡ್ ಮಾಡೋಕೆ ಶುರುಮಾಡಿದ್ದು, ಮದ್ವೆ ಆಗಲ್ಲ ಏನ್ ಮಾಡ್ಕೋತ್ಯೋ ಮಾಡ್ಕೋ ಎಂದು ಧಮ್ಕಿ ಹಾಕಿದ್ರಂತೆ.


ನಂತರ ರಂಗನಾಥ್ ವಿಚಾರವನ್ನು ಎಂಪಿ ದೇವೆಂದ್ರಪ್ಪ ಗಮನಕ್ಕೆ ಯುವತಿ ತಂದಿದ್ದಾಳೆ. ಈ ವೇಳೆ ಯುವತಿ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದು, ಬೇರೆ ದಾರಿ ಕಾಣದೇ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತಾ ಮೃತ್ಯು

Posted by Vidyamaana on 2023-06-19 15:41:03 |

Share: | | | | |


ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತಾ ಮೃತ್ಯು

ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಬೆನ್ನಲ್ಲೇ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ.

ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ನಿರ್ಮಿತಾ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ .ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿತ್ತು.

ಇನ್ನು ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ನಲ್ಲಿ ಭಾನುವಾರ ಬೆಳಗ್ಗೆ ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.

ಈದ್-ಮಿಲಾದ್ ಸಂಭ್ರಮ: ಕೋಮು ಸಾಮರಸ್ಯಕ್ಕೆ ಮಾದರಿಯಾದ ದೇವಿ ಪ್ರಸಾದ್ ಪೂಂಜ

Posted by Vidyamaana on 2023-09-28 13:09:39 |

Share: | | | | |


ಈದ್-ಮಿಲಾದ್ ಸಂಭ್ರಮ: ಕೋಮು ಸಾಮರಸ್ಯಕ್ಕೆ ಮಾದರಿಯಾದ ದೇವಿ ಪ್ರಸಾದ್ ಪೂಂಜ

ಬಂಟ್ವಾಳ: ಇಂದು ನಾಡಿನೆಲ್ಲೆಡೆ ಈದ್-ಮಿಲಾದ್ ಸಂಭ್ರಮ ಮನೆಮಾಡಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.

ಈ ನಡುವೆ, ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಬೇಂಕ್ಯದಲ್ಲಿ ಈದ್ ಮಿಲಾದ್ ಸಂಭ್ರಮದ ಮೆರವಣಿಗೆ ಸಾಗಿ ಬಂದ ಸಂದರ್ಭದಲ್ಲಿ ಸಜೀಪ ಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿರುವ ದೇವಿ ಪ್ರಸಾದ್ ಪೂಂಜ (ಶೋಭಿತ್ ಪೂಂಜ) ಅವರು ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ತಿಳಿಸುತ್ತಾ ಸಿಹಿ ವಿತರಿಸಿ ಗಮನಸೆಳೆದಿದ್ದಾರೆ ಮತ್ತು ಈ ಮೂಲಕ ಕೋಮು ಸಾಮರಸ್ಯಕ್ಕೊಂದು ಹೊಸ ಭಾಷ್ಯ ಬರೆದಿದ್ದಾರೆ.

ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸಿದ್ದಿಕ್, ಚೆನ್ನಪ್ಪ ಪೂಜಾರಿ ಯೋಗಿಶ್ ಸಾಲ್ಯಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ದೇವಿ ಪ್ರಸಾದ್ ಪೂಂಜ ಅವರು ಪ್ರತೀ ವರ್ಷವೂ ಈದ್ ಮಿಲಾದ್ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿ ಹಂಚುವ ಮೂಲಕ ಈ ಭಾಗದಲ್ಲಿ ಹಿಂದು-ಮುಸ್ಲಿಂ ಸೌಹಾರ್ದಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಮಾದರಿ ಜನಪ್ರತಿನಿಧಿ ಎಣಿಸಿಕೊಂಡಿದ್ದಾರೆ.



Leave a Comment: