ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ

Posted by Vidyamaana on 2024-03-27 14:09:19 |

Share: | | | | |


ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ ಅವರು, ಬಿಜೆಪಿಯ ತೇಜಸ್ವಿನಿಗೌಡ ರಮೇಶ್‌ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ‌ ರಾಜೀನಾಮೆ ನೀಡುತ್ತಿದ್ದೇನೆ ಎಂದು‌ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.


ತೇಜಸ್ವಿನಿ ರಮೇಶ್ ಅವಧಿ‌ ಜೂನ್‌ವರೆಗೂ ಇತ್ತ, ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.ಮೈಸೂರು ಕೊಡಗು ಕ್ಷೇತ್ರದಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಬಿಜೆಪಿಗೆ ಗುಡ್ ಬೈ ಹೇಳಲು ತೇಜಸ್ವಿನಿಗೌಡ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಿಯೇ ತಮ್ಮ ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ನಿನ್ನೆ ಪ್ರಮಾಣ ವಚನ, ಇಂದು ರಾಜೀನಾಮೆ? ಮೋದಿ ಕ್ಯಾಬಿನೆಟ್ ಬಿಡಲು ಮುಂದಾಗಿದ್ದೇಕೆ ಬಿಜೆಪಿ ಸಂಸದ?

Posted by Vidyamaana on 2024-06-10 13:37:48 |

Share: | | | | |


ನಿನ್ನೆ ಪ್ರಮಾಣ ವಚನ, ಇಂದು ರಾಜೀನಾಮೆ? ಮೋದಿ ಕ್ಯಾಬಿನೆಟ್ ಬಿಡಲು ಮುಂದಾಗಿದ್ದೇಕೆ ಬಿಜೆಪಿ ಸಂಸದ?

ನವದೆಹಲಿ(ಜೂ.10): ಮೋದಿ ಸರಕಾರ 3.0ನಲ್ಲಿ ಸಚಿವ ಸಂಪುಟ ವಿಭಜನೆಯಾಗುವ ಮುನ್ನವೇ ಸಚಿವ ಸ್ಥಾನ ಕೈಬಿಡುವ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸುರೇಶ್ ಗೋಪಿ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ತೊರೆಯಲು ಬಯಸಿದ್ದಾರೆ.

ಮೂಲಗಳನ್ನು ನಂಬುವುದಾದರೆ, ಅವರು ರಾಜೀನಾಮೆ ನೀಡಲು ಬಯಸುತ್ತಾರೆ. ಕೇಂದ್ರ ನಾಯಕತ್ವಕ್ಕೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುರೇಶ್ ಗೋಪಿ ಅವರು ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಅವರು ಸಚಿವರಾಗಿ ಉಳಿಯಲು ಬಯಸುವುದಿಲ್ಲ ಎಂದು ಹೇಳಿದರು. ಅವರನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸಬೇಕು ಎಂಬುದು ಅವರ ಅಪೇಕ್ಷೆ.

ಮನೋರಮಾ ನ್ಯೂಸ್ ಜೊತೆ ಮಾತನಾಡಿದ ಸುರೇಶ್ ಗೋಪಿ, ಸಚಿವ ಸ್ಥಾನ ತೊರೆಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಸಂಪುಟದಿಂದ ನನ್ನನ್ನು ಮುಕ್ತಗೊಳಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ನನ್ನ ಸಿನಿಮಾಗಳನ್ನು ಪೂರ್ಣಗೊಳಿಸಬೇಕು. ಕೇಂದ್ರ ನಾಯಕತ್ವ ನಿರ್ಧರಿಸಲಿ. ಸಂಸದನಾಗಿ ತ್ರಿಶೂರ್‌ನಲ್ಲಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ. ನನಗೆ ಕ್ಯಾಬಿನೆಟ್ ಹುದ್ದೆ ಬೇಡ ಎಂದು ಹೇಳಿದ್ದೆ ಎಂದಿದ್ದಾರೆ.

ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

Posted by Vidyamaana on 2023-12-29 16:22:57 |

Share: | | | | |


ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಚಿರ ನಿದ್ರೆಗೆ

ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.


ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.ಲಾರಿಯ ಕ್ಯಾಬಿನ್‍ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ಪುಂಜಾಲಕಟ್ಟೆ: ಕಾರು- ದ್ವಿಚಕ್ರ ವಾಹನ ಢಿಕ್ಕಿ, ಸಂದೀಪ್ ಲೋಬೋ ಮೃತ್ಯು

Posted by Vidyamaana on 2023-04-28 07:14:35 |

Share: | | | | |


 ಪುಂಜಾಲಕಟ್ಟೆ: ಕಾರು- ದ್ವಿಚಕ್ರ ವಾಹನ ಢಿಕ್ಕಿ, ಸಂದೀಪ್  ಲೋಬೋ ಮೃತ್ಯು

ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು  ಸವಾರನೋರ್ವ  ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28 ರಂದು ಬೆಳಗ್ಗೆ ಸಂಭವಿಸಿದೆ.ಸ್ಕೂಟಿ ಸವಾರ, ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ (35) ಮೃತಪಟ್ಟವರಾಗಿದ್ದು, ಅವರ ನೆರೆಮನೆಯ ಆಕಾಶ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅತೀವೇಗದಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Leave a Comment: