ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


BREAKING:ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

Posted by Vidyamaana on 2024-07-06 17:15:13 |

Share: | | | | |


BREAKING:ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ಉಲ್ಲೇಖಿತ ಅಧಿಸೂಚನೆ ದಿನಾಂಕ:11.12.2023 ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಮುಂದುವರೆದು, ಕೆಲವು ಜಿಲ್ಲೆಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿ ನಮೂದಿಸಿರುವಂತೆ ಮಾರ್ಪಡು ಮಾಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.

ಮಸೀದಿ ಆವರಣದಲ್ಲಿ ಘೋಷಣೆ ಕೂಗಿದ್ದಾಗಿ ಮಸೀದಿ ಆಡಳಿತ ಮಂಡಳಿಯಿಂದ ಕಡಬ ಠಾಣೆಗೆ ದೂರು

Posted by Vidyamaana on 2023-09-25 17:22:20 |

Share: | | | | |


ಮಸೀದಿ ಆವರಣದಲ್ಲಿ  ಘೋಷಣೆ ಕೂಗಿದ್ದಾಗಿ ಮಸೀದಿ ಆಡಳಿತ ಮಂಡಳಿಯಿಂದ ಕಡಬ ಠಾಣೆಗೆ ದೂರು

ಪುತ್ತೂರು: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ.


ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಕಡಬ ಠಾಣೆ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಘಟನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮಸೀದಿ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ನೋಡಿ ತಕ್ಷಣ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿ‌ನಲ್ಲಿ ತಿಳಿಸಲಾಗಿದೆ.


ಸ್ಥಳಕ್ಕಾಗಮಿಸಿದ ಕಡಬ ಠಾಣೆ ಎಸ್ಐ ಹಾಗೂ ಉಪ್ಪಿನಂಗಡಿ ಠಾಣೆ ಎಸ್ಐ ಮತ್ತು ಸಿಬಂದಿ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹೆಚ್ಚಿನ ಇನ್ಸೆಂಟಿವ್‌ ಆಸೆಗೆ ಬಿದ್ದು ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್‌ ಹರಿದ ಕಂಡೆಕ್ಟರ್

Posted by Vidyamaana on 2023-10-16 13:08:26 |

Share: | | | | |


ಹೆಚ್ಚಿನ ಇನ್ಸೆಂಟಿವ್‌ ಆಸೆಗೆ  ಬಿದ್ದು ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್‌ ಹರಿದ ಕಂಡೆಕ್ಟರ್

ಬೆಂಗಳೂರು : ಹೆಚ್ಚಿನ ಇನ್ಸೆಂಟಿವ್​ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್​ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್​ನಿಂದ - ತಾವರಕೆರೆಗೆ ಹೋಗುವ ಬಿಬಿಎಂಟಿಸಿ ಬಸ್​​ನ ಕಂಡೆಕ್ಟರ್ ಕಳೆದ ದಿನ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದರು.ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು "ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.ಈ ಮೂಲಕ ಕಂಡೆಕ್ಟರ್ ವಿಭಾಗಕ್ಕೆ ಹೆಚ್ಚಿನ ಪ್ರಯಾಣಿಕರ ಲೆಕ್ಕವನ್ನು ತೋರಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಫ್ರೀ ಟಿಕೆಟ್​ ​ಹರಿದರೇ ತನಗೆ ಹೆಚ್ಚು ಇನ್ಷೆಂಟಿವ್​ ಸಿಗುತ್ತದೆ ಎಂಬ ಆಸೆಯಿಂದ ಫ್ರೀ ಟಿಕೆಟ್​ ಹರಿದಿದ್ದಾರೆ ಎಂದು ಪ್ರಯಾಣಿಕರು ಹೇಳಿದ್ದಾರೆ.


ರಾಜ್ಯ ಸರ್ಕಾರವು ಶಕ್ತಿ ಯೋಜನೆ ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಇದರ ನಡುವೆ ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 13

Posted by Vidyamaana on 2023-08-13 00:43:48 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 13

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 13 ರಂದು

ಬೆಳ್ಳಗ್ಗೆ  10:00 ಆಟಿಡೊಂಜಿ ದಿನ ಕರ್ನಾಟಕ ರಾಜ್ಯ ದೇವಾಡಿಗರ ಸಂಘ,ಮಣ್ಣ ಗುಡ್ಡ ಮಂಗಳೂರು 

ಬೆಳ್ಳಗ್ಗೆ  11

ಆಟಿದ ಕೂಟ ಬಂಟರ ಭವನ  ಸುರತ್ಕಲ್ 

ಮದ್ಯಾಹ್ನ  1:00 ಆಟಿದ ಕೂಟ  ಬಂಟರ ಭವನ  ಪುತ್ತೂರು 

ಮದ್ಯಾಹ್ನ  2:00 ವಿಟ್ಲ ವಲಯ ಬಂಟರ ಸಂಘದ ಆಟಿದ ಕೂಟ ಪುಣಚ ಬೈಲು ಗುತ್ತು 


ಮದ್ಯಾಹ್ನ 2:30 ಕೆಸರು ಗದ್ದೆ ವಿಟ್ಲ 


ಮದ್ಯಾಹ್ನ  3:30 ಕೆಸರು ಗದ್ದೆ  ಬಿಳಿಯೂರು 


ಮದ್ಯಾಹ್ನ  4:00 ಕೆಸರು ಗದ್ದೆ  ಪುಳಿತ್ತಡಿ ಉಪ್ಪಿನಂಗಡಿ 


ಸಂಜೆ 5:30 ಕೆಸರು ಗದ್ದೆ ಕೈಕಾರ

ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ

ಚಾರ್ಮಾಡಿ ಘಾಟಿಯಲ್ಲಿ ಬ್ಲಾಕ್ ನಲ್ಲಿ ಸಿಲುಕಿ ಗರ್ಭಿಣಿ ಪರದಾಟ

Posted by Vidyamaana on 2023-07-08 13:47:02 |

Share: | | | | |


ಚಾರ್ಮಾಡಿ ಘಾಟಿಯಲ್ಲಿ ಬ್ಲಾಕ್ ನಲ್ಲಿ ಸಿಲುಕಿ ಗರ್ಭಿಣಿ ಪರದಾಟ

   ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ  ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ  ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ  ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್ ಅವರು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು ದಾಖಲು ಮಾಡಿದರು.ಇದರಿಂದ ಗರ್ಭಿಣಿ ಮಹಿಳೆಯನ್ನು ತುರ್ತು ಸಮಯದಲ್ಲಿ ಪ್ರಾಣ ಉಳಿಸಿದಂತಾಯಿತು ಎಂದು ಕುಟುಂಬದವರು ಆರೀಫ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಬೆಳ್ತಂಗಡಿ: ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ 9 ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು

Posted by Vidyamaana on 2023-04-28 11:35:40 |

Share: | | | | |


ಬೆಳ್ತಂಗಡಿ: ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ 9 ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಇಲ್ಲಿನ ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15) ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ಚಿತ್ರದುರ್ಗ ಜಿಲ್ಲೆಯ ಹಿರುಯೂರು ತಾಲೂಕು ಹೊಸ ಎಲೆನಾಡು ಗ್ರಾಮದ ನಿವಾಸಿ ರಮೇಶ್ ಮತ್ತು ಭಾಗ್ಯಮ್ಮ ದಂಪತಿಗಳ ಮೂವರು ಮಕ್ಕಳಲ್ಲಿ ಎರಡನೇ ಮಗನಾದ ಶಿವಪ್ರಸಾದ್ (15) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಶಿವಪ್ರಸಾದ್ ಚಿತ್ರದುರ್ಗದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ರಜೆ ಇರುವುದರಿಂದ ದೊಡ್ಡಮ್ಮ ಮಂಜುಳಾ ಅವರ ಬೆಳ್ತಂಗಡಿ ವಸತಿಗೃಹಕ್ಕೆ ಬಂದಿದ್ದು ಘಟನೆ ವೇಳೆ ಮಂಜುಳಾ ಕೆಲಸಕ್ಕೆ ಹೋಗಿದ್ದು ,ಮಗಳು ಅಮೃತ ಕಾಲೇಜಿಗೆ ಹೋಗಿದ್ದಳು, ಮಗ ವಿರೇಂದ್ರ ಕೂಡ ಕೆಲಸಕ್ಕೆ ಹೋಗಿದ್ದರು.ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಮನೆಯವರು ಬರುವಿಕೆಗಾಗಿ ಪೊಲೀಸರು ಬಾಲಕ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯನ್ನು ಭದ್ರವಾಗಿ ಬೀಗಹಾಕಿ ಇಟ್ಟಿದ್ದಾರೆ.

Recent News


Leave a Comment: