ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

Posted by Vidyamaana on 2024-05-28 22:21:06 |

Share: | | | | |


ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

ಶಿವಮೊಗ್ಗ, ಮೇ.28: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸಣ್ಣ ಪ್ರಾಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಸಾವಿರಾರು ಮಂದಿಗೆ ದೃಷ್ಟಿಯಿತ್ತವರು. 

ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಡಾ.ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸ್ಥಾಪಿಸಿದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಲೆನಾಡಿನಲ್ಲಿ ಮನೆಮಾತಾಗಿದೆ. ಖಾಸಗಿ ಆಸ್ಪತ್ರೆ ಗಳೆಂದರೆ ಬಿಲ್ ನೋಡುತ್ತಲೇ ರೋಗಿಯ ಎದೆ ಝಲ್ ಎನ್ನುತ್ತದೆ. ಆದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ ಹೀರೋ ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.

ಸರಳ, ಸಜ್ಜನ, ಹಮ್ಮು ಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ಅವರ ಪುತ್ರ. ಇವರ ಎಲ್ಲ ಸಾಧನೆಯ ಹಿಂದೆ ಪತ್ನಿ, ಆಸ್ಪತ್ರೆಯ ನಿರ್ದೇಶಕರೂ ಆದ ನಮಿತಾ ಸರ್ಜಿ ಅವರ ಶ್ರಮವೂ ಇದೆ. 


ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು ಡಾ.ಧನಂಜಯ ಸರ್ಜಿ. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ ಸರ್ಜಿ ಚೈಲ್ಡ್ ಕೇರ್ ಸೆಂಟರ್ ಮೂಲಕ ಇವರ ಸೇವೆ ಆರಂಭಗೊಂಡಿತ್ತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದ್ದರು. 2014ರಲ್ಲಿ ಹೊಸ ಆಸ್ಪತ್ರೆ ಆರಂಭಿಸಿ, ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ 


ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು ಜೀವ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಧನಂಜಯ ಸರ್ಜಿ ಅವರಿಗೆ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.


ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯದ ಆಸ್ಪತ್ರೆಯನ್ನಾಗಿಸಿದ್ದಾರೆ. ಕೈಗೆಟಕುವ ದರ, ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಇವರ ಯಶಸ್ಸಿಗೆ ಕಾರಣ. ಈಗ ಅವರ ಆಸ್ಪತ್ರೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ನಿತ್ಯವೂ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ವಸಂತ ಬಂಗೇರ ಅಂತ್ಯಕ್ರಿಯೆ: ಪುತ್ರಿಯಿಂದ ಅಗ್ನಿಸ್ಪರ್ಶ

Posted by Vidyamaana on 2024-05-10 07:42:12 |

Share: | | | | |


ವಸಂತ ಬಂಗೇರ ಅಂತ್ಯಕ್ರಿಯೆ: ಪುತ್ರಿಯಿಂದ ಅಗ್ನಿಸ್ಪರ್ಶ

ಬೆಳ್ತಂಗಡಿ : ಬುಧವಾರ ನಿಧನರಾಗಿದ್ದ ಇಲ್ಲಿನ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕುವೆಟ್ಟು ಗ್ರಾಮದ ಕೇದೆ ಮನೆತನದ ಜಾಗದಲ್ಲಿ ಗುರುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ವಸಂತ ಬಂಗೇರ ಅವರ ಕಿರಿಯ ಮಗಳು ಬಿನುತಾ ಬಂಗೇರ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಕೇಪು:ಮತದಾರರ ಮನವೊಲಿಸಿ ಚುನಾವಣಾ ಬಹಿಷ್ಕಾರದ ಬ್ಯಾನರ್ ತೆರವುಗೊಳಿಸಿದ ಪುತ್ತಿಲ

Posted by Vidyamaana on 2023-04-25 01:54:53 |

Share: | | | | |


ಕೇಪು:ಮತದಾರರ ಮನವೊಲಿಸಿ ಚುನಾವಣಾ ಬಹಿಷ್ಕಾರದ ಬ್ಯಾನರ್ ತೆರವುಗೊಳಿಸಿದ ಪುತ್ತಿಲ

ಪುತ್ತೂರು:ಕೇಪು ಗ್ರಾಮದ ಕೊಲ್ಲಪದವು ಕೋಡಂದೂರು ಎಂಬಲ್ಲಿ ಸಾರ್ವಜನಿಕರು ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಲ್ಲಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ನಾಗರಿಕರೊಂದಿಗೆ  ಮಾತುಕತೆ ನಡೆಸಿ ಬ್ಯಾನರ್ ತೆರವುಗೊಳಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳನ್ನು ಮಾಡದ ಹಿನ್ನೆಲೆಯಲ್ಲಿ ಈ ಬಾರಿ ತಾವು ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಸಾರ್ವಜನಿಕರು ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದರು.ವಿಷಯ ತಿಳಿದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್ ಪುತ್ತಿಲ ಅವರು ಸ್ಥಳಕ್ಕೆ ತೆರಳಿ ಆ ಭಾಗದ ಜನರ ಮನವೊಲಿಸಿ ಬ್ಯಾನರ್ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

Posted by Vidyamaana on 2023-12-01 08:29:57 |

Share: | | | | |


ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

ಕಡಬ: ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಟ್ರ್ಯಾಪ್ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.


ಕಡಬ ತಾಲೂಕಿನ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ಅಪಹರಣ ಮಾಡಿದ್ದನು.

ನೆಲ್ಯಾಡಿ ಬಳಿ ಕಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.

ಮದುವೆಗೆ ಒಪ್ಪದ ಅತ್ತೆ ಮಗಳನ್ನು ಸಂಬಂಧಿ ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಕಿಟ್ರ್ಯಾಪ್ ಮಾಡಿದ್ದನು.

ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

Posted by Vidyamaana on 2023-07-06 03:59:05 |

Share: | | | | |


ಜೋರು ಮಳೆಗೆ ರಜೆ ನಡುವೆ ಚಿಣ್ಣರಿಗೆ ಇನ್ನೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್ https://dsert.karnataka.gov.in/ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಸರ್ವೆ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

Posted by Vidyamaana on 2024-07-21 15:10:19 |

Share: | | | | |


ಸರ್ವೆ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಪುತ್ತೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸನ್ಮಿತ್ (21) ಮೃತ ಯುವಕ.

Recent News


Leave a Comment: